ಜಿಲ್ಲೆಯಲ್ಲಿ ಕೋವಿಡ್ ಗೆ 9ನೇ ಬಲಿ


Team Udayavani, Jul 8, 2020, 2:56 PM IST

ಜಿಲ್ಲೆಯಲ್ಲಿ ಕೋವಿಡ್ ಗೆ 9ನೇ ಬಲಿ

ಬಾಗಲಕೋಟೆ: ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಹಾನಾಪುರ ತಾಂಡಾದಲ್ಲಿ ಮೃತಪಟ್ಟಿದ್ದ ಯುವಕನಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

ಮೃತಪಟ್ಟಿದ್ದ ಯುವಕನ ಗಂಟಲು ದ್ರವ ಮಾದರಿ ಪರೀಕ್ಷೆ ವರದಿಯಲ್ಲಿ ಕೋವಿಡ್ ಪಾಸಿಟಿವ್‌ ದೃಢವಾಗಿದ್ದು, ಕೋವಿಡ್‌ ನಿಯಮಾವಳಿಯಂತೆ ಅಂತ್ಯಕ್ರಿಯೆ ನಡೆಸಲಾಗಿದೆ. ಗುಳೇದಗುಡ್ಡ ತಾಲೂಕಿನ ಹಾನಾಪುರ ಎಲ್‌.ಟಿಯ 30 ವರ್ಷದ ಯುವಕ ಜು. 5ರಂದು ಮೃತಪಟ್ಟಿದ್ದ. ಈತ ಜು. 2ರಂದು ಗೋವಾದಿಂದ ಸ್ವಗ್ರಾಮಕ್ಕೆ ಬಂದಿದ್ದ. ಸೋಂಕಿರುವುದು ನಿರ್ಲಕ್ಷಿಸಿ, ತನಗೆ ಭೂತದ (ದೆವ್ವ) ಸಮಸ್ಯೆ ಇದೆ ಎಂದು ಇಳಕಲ್ಲ ತಾಲೂಕಿನ ಗುಡೂರ ಎಸ್‌.ಸಿ ಗ್ರಾಮಕ್ಕೆ ಹೋಗಿ ದೆವ್ವ ಬಿಡಿಸುವವರನ್ನು ಭೇಟಿ ಮಾಡಿ ಬಂದಿದ್ದ ಎನ್ನಲಾಗಿದೆ.

ಜು. 5ರಂದು ಆತ ಮೃತಪಟ್ಟಿದ್ದು, ಬಳಿಕ ಗಂಟಲು ಮಾದರಿ ಪರೀಕ್ಷೆಗೆ ಕಳುಹಿಸಿ, ಅಂತ್ಯಕ್ರಿಯೆ ಮಾಡಲಾಗಿತ್ತು. ಗ್ರಾಮದಲ್ಲಿ ಯುವಕನ ಸಂಪರ್ಕಕ್ಕೆ ಬಂದಿದ್ದ 42 ಮಂದಿಗೆ ಕ್ವಾರಂಟೈನ್‌ ಮಾಡಲಾಗಿದೆ ಜಿಲ್ಲಾಡಳಿತ ತಿಳಿಸಿದೆ. ಜಿಲ್ಲೆಯಲ್ಲಿ ಸೋಂಕಿನಿಂದ ಈ ವರೆಗೆ 9 ಜನ ಬಲಿಯಾಗಿದ್ದಾರೆ. ಕಲಾದಗಿಯ ವೈದ್ಯ ಬೆಂಗಳೂರಿನಲ್ಲಿ, ರಬಕವಿ-ಬನಹಟ್ಟಿ ತಾಲೂಕಿನ ಹಿಪ್ಪರಗಿಯ ವೃದ್ಧೆ ವಿಜಯಪುರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಈ ಎರಡು ಪ್ರಕರಣ ಸಹಿತ ಜಿಲ್ಲೆಯಲ್ಲಿ ಒಟ್ಟು 9 ಜನರು ಕೋವಿಡ್‌-19ಗೆ ಬಲಿಯಾಗಿದ್ದಾರೆ.

ಸಕ್ಕರೆ ಕಾರ್ಖಾನೆ ನಿರ್ದೇಶಕನಿಗೆ ಸೋಂಕು: ಜಿಲ್ಲೆಯಲ್ಲಿ ಕೋವಿಡ್ ರಣಕೇಕೆ ಮುಂದುವರಿದಿದ್ದು, ಬಾಗಲಕೋಟೆ ನವನಗರದ ನಿವಾಸಿ, ಸಕ್ಕರೆ ಕಾರ್ಖಾನೆಯ ನಿರ್ದೇಶಕರೊಬ್ಬರಿಗೆ ಜಿಲ್ಲಾ ಕೋವಿಡ್‌ ಲ್ಯಾಬ್‌ನಲ್ಲಿ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಮಂಗಳವಾರ 27 ಜನರಿಗೆ ಸೋಂಕು ಇರುವುದು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 289ಗೆ ಏರಿಕೆಯಾಗಿದೆ. ಈವರೆಗೆ 147 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.

ಟಾಪ್ ನ್ಯೂಸ್

Tesla’s market cap crosses $1 trillion

ಟೆಸ್ಲಾ ಮಾರುಕಟ್ಟೆ ಮೌಲ್ಯ 1ಲಕ್ಷ ಕೋಟಿ ರೂ. ದಾಟಿದೆ..!

111111111

ನವೆಂಬರ್ ನಲ್ಲಿ ತೆರೆಯ ಮೇಲೆ ಮೂಡಿ ಬರಲಿದೆ ‘ಟಾಮ್ ಅಂಡ್ ಜೆರ್ರಿ’

siddaramaiah

ಜನತಾ ನ್ಯಾಯಾಲಯದ ಮುಂದೆ ಚರ್ಚೆಗೆ ಭಯವೇಕೆ : ಸಿಎಂಗೆ ಸಿದ್ದರಾಮಯ್ಯ ಪ್ರಶ್ನೆ

WS_Jazz 4

ಕನ್ನಡದಲ್ಲೇ ಮೊದಲ ಪ್ರಯೋಗ : ವಿಂಡೋಸೀಟ್ ನಲ್ಲಿ ಮೂಡಿ ಬಂತು ಜಾಝ್ ಸಾಂಗ್

ಸದಾಶಿವ ಆಯೋಗ ವರದಿ ಜಾರಿಗೆ ಬಿಜೆಪಿ ಬದ್ದವಾಗಿದೆ : ಸಚಿವ ನಾರಾಯಣಸ್ವಾಮಿ

ಸದಾಶಿವ ಆಯೋಗ ವರದಿ ಜಾರಿಗೆ ಬಿಜೆಪಿ ಬದ್ದವಾಗಿದೆ : ಸಚಿವ ನಾರಾಯಣಸ್ವಾಮಿ ಹೇಳಿಕೆ

ತರುಣ್ ತೇಜ್ ಪಾಲ್ ಕೇಸ್: ವಿಚಾರಣಾಧೀನ ಕೋರ್ಟ್ ತೀರ್ಪು, 5ನೇ ಶತಮಾನಕ್ಕೆ ಸೂಕ್ತ: ಗೋವಾ

ತರುಣ್ ತೇಜ್ ಪಾಲ್ ಕೇಸ್: ವಿಚಾರಣಾಧೀನ ಕೋರ್ಟ್ ತೀರ್ಪು, 5ನೇ ಶತಮಾನಕ್ಕೆ ಸೂಕ್ತ: ಗೋವಾ

mugilpete

ಸಂಬಂಧಗಳ ಸುತ್ತ ಮುಗಿಲ್‌ಪೇಟೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17sugarcane

ಬೈಪಾಸ್‌ ರಸ್ತೆ ನಿರ್ಮಾಣ: ಸುಗಮ ಸಂಚಾರಕ್ಕೆ ಕ್ಷಣಗಣನೆ

16school

ಫಲಿತಾಂಶ ಸುಧಾರಣೆಗೆ ಹೊಸ ಯೋಜನೆ

24problems

ದುಃಖಕ್ಕೆ ದುಶ್ಚಟಗಳು ಪರಿಹಾರವಲ್ಲ

23bus

ಸಂಚಾರಿ ವಾಹನದಲ್ಲಿ ಶಸ್ತ್ರ ಚಿಕಿತ್ಸೆ ತರಬೇತಿ!

20road

ಇಕ್ಕಟ್ಟಾದ ರಸ್ತೆಯಲ್ಲಿ ಕಗ್ಗಂಟಾದ ಸಂಚಾರ

MUST WATCH

udayavani youtube

ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಬೇಕಾಗಿದೆ : ಆರ್. ಅಶೋಕ್

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

ಹೊಸ ಸೇರ್ಪಡೆ

ಮೈಸೂರು ಆರ್ಟಿಸ್ಟ್‌ ಅಸೋಸಿಯೇಷನ್‌ನಿಂದ ಸಾಮೂಹಿಕ ನಾಡಗೀತೆ

ಅನಂತಸ್ವಾಮಿ ಗೀತೆಯನ್ನೇ ನಾಡಗೀತೆಯಾಗಿ ಘೋಷಿಸಿ

20lake

ಇನ್ನೂ ತುಂಬಿಲ್ಲ ನಿಡಶೇಸಿ ಕೆರೆಯಂಗಳ

Tesla’s market cap crosses $1 trillion

ಟೆಸ್ಲಾ ಮಾರುಕಟ್ಟೆ ಮೌಲ್ಯ 1ಲಕ್ಷ ಕೋಟಿ ರೂ. ದಾಟಿದೆ..!

111111111

ನವೆಂಬರ್ ನಲ್ಲಿ ತೆರೆಯ ಮೇಲೆ ಮೂಡಿ ಬರಲಿದೆ ‘ಟಾಮ್ ಅಂಡ್ ಜೆರ್ರಿ’

siddaramaiah

ಜನತಾ ನ್ಯಾಯಾಲಯದ ಮುಂದೆ ಚರ್ಚೆಗೆ ಭಯವೇಕೆ : ಸಿಎಂಗೆ ಸಿದ್ದರಾಮಯ್ಯ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.