ಅಧಿಕಾರಿ ವರ್ಗಾವಣೆಗೆ ಎಬಿವಿಪಿ ಆಗ್ರಹ

ಬಸ್‌ ಚಾಲಕ ಏಕಾಏಕಿ ವಿದ್ಯಾರ್ಥಿಗಳ ಮೈಮೇಲೆ ಬಸ್‌ ಹಾಯಿಸಲು ಪ್ರಯತ್ನಿಸಿರುವುದು ಯಾವ ನ್ಯಾಯ

Team Udayavani, Oct 29, 2021, 8:37 PM IST

ಅಧಿಕಾರಿ ವರ್ಗಾವಣೆಗೆ ಎಬಿವಿಪಿ ಆಗ್ರಹ

ಬೈಲಹೊಂಗಲ: ಪಟ್ಟಣದ ಕೇಂದ್ರ ಬಸ್‌ ನಿಲ್ದಾಣದ ಟ್ರಾಫಿಕ್‌ ಇನ್ಸ್‌ಪೆಕ್ಟರ್‌ ಬಿ.ಜಿ.ಪುಡಲಕಟ್ಟಿ ಅವರು ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ
ಎಂದು ಆರೋಪಿಸಿ, ಕೂಡಲೇ ಅವರನ್ನು ವರ್ಗಾವಣೆ ಮಾಡಬೇಕೆಂದು ಎಂದು ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಗುರುವಾರ ಬಸ್‌ ನಿಲ್ದಾಣದ ಮುಂಭಾಗದ ಗೇಟ್‌ನಲ್ಲಿ ಸುಮಾರು ಎರಡೂವರೆ ಗಂಟೆಗಳ ಕಾಲ ಬಸ್‌ ಹೊರಗೆ ಬಿಡದೆ ಪ್ರತಿಭಟಿಸಿ, ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಕಿತ್ತೂರ ಚೆನ್ನಮ್ಮ ಸಮಾಧಿ  ಬಳಿ ನೂರಾರು ಎಬಿವಿಪಿ ಕಾರ್ಯಕರ್ತರು ಜಮಾವಣೆಗೊಂಡು ಮೆರವಣಿಗೆ ಮೂಲಕ ಕೇಂದ್ರ ಬಸ್‌ ನಿಲ್ದಾಣಕ್ಕೆ ಆಗಮಿಸಿ ಗೇಟ್‌ನಲ್ಲಿ ಕುಳಿತು ಪ್ರತಿಭಟಿಸಿದರು. ವಿದ್ಯಾರ್ಥಿಗಳ ಜೊತೆ ಚೆಲ್ಲಾಟವಾಡುತ್ತಿರುವ ಅಧಿ ಕಾರಿಗಳ ವಿರುದ್ದ ಘೋಷಣೆ ಕೂಗಿ, ಜಿಲ್ಲಾ ಸಾರಿಗೆ ಘಟಕದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಮಸ್ಯೆಯನ್ನು ಇತ್ಯರ್ಥಗೊಳಿಸಬೇಕೆಂದು ಪಟ್ಟು ಹಿಡಿದರು.

ಪ್ರತಿಭಟನಾ ಸ್ಥಳಕ್ಕಾಗಮಿಸಿದ ಸಾರಿಗೆ ಘಟಕದ ವ್ಯವಸ್ಥಾಪಕ ಚೇತನ ಸಾಣಿಕೊಪ್ಪ ಪ್ರತಿಭಟನಾಕಾರರ ಮನವೊಲಿಸಲು ಯತ್ನಿಸಿದರೂ ಸಹ ವಿದ್ಯಾರ್ಥಿಗಳು ಮನವಿಗೆ ಸ್ಪಂದಿಸದೆ ಹೋರಾಟ ಮುಂದುವರೆಸಿದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಚಿತ್ರನಟ ಶಿವರಂಜನ್‌ ಬೊಳನ್ನವರ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾನೂನಿನ ಅಡಿಯಲ್ಲಿ ಹೋರಾಟ ಮಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದ್ದು, ಕಳೆದ ಎರಡು ದಿನಗಳ ಹಿಂದೆ ಎಬಿವಿಪಿ ಜಿಲ್ಲಾ ಸಹಸಂಚಾಲಕ ಅಪ್ಪಣ್ಣ ಹಡಪದ ಇವರು ಕೇಂದ್ರ ಬಸ್‌ ನಿಲ್ದಾಣದ ಆವರಣದಲ್ಲಿ ಸಾರಿಗೆ ಘಟಕದ ಟ್ರಾಫಿಕ್‌ ಇನ್ಸ್‌ಪೆಕ್ಟರ್‌ ಬಿ.ಜಿ.ಪು ಡಕಲಕಟ್ಟಿ ಅವರಿಗೆ ಬಸ್ಸಿನ ಅನಾನುಕೂಲತೆ ಕುರಿತು ವಿಚಾರಿಸಿದಾಗ ಸಾರಿಗೆ ಬಸ್‌ ಚಾಲಕ ಏಕಾಏಕಿ ವಿದ್ಯಾರ್ಥಿಗಳ ಮೈಮೇಲೆ ಬಸ್‌ ಹಾಯಿಸಲು ಪ್ರಯತ್ನಿಸಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.

ವಿದ್ಯಾರ್ಥಿ ಮುಖಂಡನ ಮೇಲೆ ವಿನಾಕಾರಣ ಸುಳ್ಳು ಆರೋಪ ಹೊರಿಸಿ ಪೊಲೀಸರಿಗೆ ದೂರು ನೀಡಿದ್ದು ಸರಿಯಾದ ಕ್ರಮವಲ್ಲ. ಪೊಲೀಸರು ಕೂಡ ವಿದ್ಯಾರ್ಥಿಗಳ ಸಮಸ್ಯೆಯನ್ನು ಆಲಿಸದೆ, ಆತನನ್ನು ಪೊಲೀಸ್‌ ಠಾಣೆಗೆ ಕರೆದುಕೊಂಡು ಹೋಗಿ ಸುಮಾರು ಎಂಟು ಗಂಟೆ ಕಾಲ ಠಾಣೆಯಲ್ಲಿ ಕುಳ್ಳಿರಿಸಿ ಪ್ರತಿಭಟನೆ ಹತ್ತಿಕ್ಕುವ ಪ್ರಯತ್ನ ಮಾಡಿದ್ದು ಸರಿಯಲ್ಲ. ಟ್ರಾಫಿಕ್‌ ಇನ್ಸ್‌ಪೆಕ್ಟರ್‌ರನ್ನು 8 ದಿನಗಳ ಒಳಗಾಗಿ ವರ್ಗಾವಣೆ ಮಾಡದಿದ್ದರೆ ಕನ್ನಡ ಪರ ಸಂಘಟನೆಗಳು ಎಬಿವಿಪಿಗೆ ಬೆಂಬಲ ವ್ಯಕ್ತಪಡಿಸಿ ಬೀದಿಗಿಳಿದು ಉಗ್ರ ಹೋರಾಟ ಮಾಡುವ ಎಚ್ಚರಿಕೆ ನೀಡಿದರು.

ಕರ್ನಾಟಕ ನವ ನಿರ್ಮಾಣ ಪಡೆ ಜಿಲ್ಲಾ ಉಪಾಧ್ಯಕ್ಷ ಮಹಾಂತೇಶ ತುರಮರಿ, ಕರವೇ ಜಿಲ್ಲಾ ಸಂಚಾಲಕ ಶಿವಾನಂದ ಕೋಲಕಾರ ಮಾತನಾಡಿ, ಎಬಿವಿಪಿ ಬೇಡಿಕೆ ನ್ಯಾಯಸಮ್ಮತವಾಗಿದ್ದು ಕೂಡಲೇ ಅವರ ಬೇಡಿಕೆಯನ್ನು ಈಡೇರಿಸಬೇಕು. ತಪ್ಪಿತಸ್ಥ ಅಧಿಕಾರಿ ಪುಡಕಲಟ್ಟಿಯವರನ್ನು ವರ್ಗಾವಣೆ ಮಾಡಬೇಕೆಂದು ಒತ್ತಾಯಿಸಿದರು.
ಜಿಲ್ಲಾ ಸಹ ಸಂಚಾಲಕ ಅಪ್ಪಣ್ಣ ಹಡಪದ, ಸಿದ್ದಾರೂಡ ಹೊಂಡಪ್ಪನ್ನವರ ಮಾತನಾಡಿ, ಎಬಿವಿಪಿ ಕಾರ್ಯಕರ್ತರ ಬೇಡಿಕೆ ಈಡೇರಿಸದಿದ್ದರೆ ರಾಜ್ಯಾದ್ಯಂತ ಹೋರಾಟ
ಮಾಡುವುದಾಗಿ ಎಚ್ಚರಿಕೆ ನೀಡಿದರು.

ಸಾರಿಗೆ ಘಟಕ ವ್ಯವಸ್ಥಾಪಕ ಚೇತನ್‌ ಸಾಣಿಕೊಪ್ಪ ಮಾತನಾಡಿ, ಎಬಿವಿಪಿ ಕಾರ್ಯಕರ್ತರ ಬೇಡಿಕೆಯನ್ನು ಆದಷ್ಟು ಬೇಗ ಇತ್ಯರ್ಥಪಡಿಸಿ, ಟ್ರಾಫಿಕ್‌ ಇನ್ಸ್‌ಪೆಕ್ಟರ್‌ ವರ್ಗಾವಣೆ ಕುರಿತು ಮೇಲಾಧಿ ಕಾರಿಗಳ ಗಮನಕ್ಕೆ ತರಲಾಗುವುದು ಎಂದರು. ಮುಖಂಡರು ಭರವಸೆ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದರು. ರಫೀಕ್‌ ಬಡೇಘರ್‌, ಶ್ರವಣ ಭಜಂತ್ರಿ, ಕಾರ್ತಿಕ ಗುಂಡ್ಲೂರ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.