Udayavni Special

ಲಾಕ್‌ಡೌನ್‌ ಸಡಿಲಿಕೆ ದುರ್ಬಳಕೆಯಾದ್ರೆ ಬಿಗಿ ಕ್ರಮ


Team Udayavani, May 6, 2020, 2:19 PM IST

ಲಾಕ್‌ಡೌನ್‌ ಸಡಿಲಿಕೆ ದುರ್ಬಳಕೆಯಾದ್ರೆ ಬಿಗಿ ಕ್ರಮ

ಸಾಂದರ್ಭಿಕ ಚಿತ್ರ

ಬಾಗಲಕೋಟೆ: ಕೋವಿಡ್ 19 ವೈರಸ್‌ ನಿಯಂತ್ರಣಕ್ಕಾಗಿ ಹೇರಲಾಗಿರುವ ಲಾಕ್‌ ಡೌನ್‌ದಿಂದ ಸದ್ಯ ಕೆಲವು ಸಡಿಲಿಕೆ ನೀಡಲಾಗಿದೆ. ಈ ಸಡಿಲಿಕೆ ದುರ್ಬಳಕೆ ಮಾಡಿಕೊಂಡರೆ ಮತ್ತೆ ಬಿಗಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಬೆಳಗಾವಿ ವಲಯದ ಐಜಿಪಿ ರಾಘವೇಂದ್ರ ಸುಹಾಸ್‌ ಎಚ್ಚರಿಕೆ ನೀಡಿದರು.

ಜಿಲ್ಲಾ ಕೋವಿಡ್‌-19 ಆಸ್ಪತ್ರೆ ಆವರಣದಲ್ಲಿ ಕೋವಿಡ್ 19 ಸೋಂಕಿನಿಂದ ಗುಣಮುಖರಾಗಿ ಹೊರಬಂದ ಇಬ್ಬರು ಪೊಲೀಸ್‌ ಸಿಬ್ಬಂದಿಯನ್ನು ಸ್ವಾಗತಿಸಿ, ಕ್ವಾರಂಟೈನ್‌ಗೆ ಕಳುಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಮುಧೋಳದ ನಾಲ್ವರು ಪೊಲೀಸ್‌ ಸಿಬ್ಬಂದಿಗೆ ಈ ಸೋಂಕು ತಗುಲಿದ್ದು, ಅದರಲ್ಲಿ ಮೂವರು ಗುಣಮುಖರಾಗಿದ್ದಾರೆ. ಇಂದು ಇಬ್ಬರನ್ನು ಬಿಡುಗಡೆಗೊಳಿಸಲಾಗಿದೆ. ಕೋವಿಡ್ 19 ಮುಕ್ತರಾಗಿ ಹೊರಬಂದ ಪೊಲೀಸ್‌ ಸಿಬ್ಬಂದಿಯನ್ನು ನೋಡಿ ಸಂತೋಷವಾಯಿತು. ಗುಣಮುಖರಾಗುವ ಜತೆಗೆ ಫಿಟ್‌ನೆಸ್‌ ಜತೆಗೆ ಹೊರ ಬಂದಿದ್ದಾರೆ ಎಂದರು.

ಸಿಬ್ಬಂದಿಗೆ ಸೋಂಕು ತಗುಲಿದಾಗ ಆಸ್ಪತ್ರೆಗೆ ಹೊರಟಿದ್ದ ಅವರ ಮುಖದಲ್ಲಿ ಭಾವನಾತ್ಮಕವಾಗಿ ದುಃಖಪಟ್ಟಿದ್ದರು. ಅವರಿಗೂ ಪತ್ನಿ, ಚಿಕ್ಕ ಚಿಕ್ಕ ಮಕ್ಕಳಿದ್ದಾರೆ ಎಂಬ ಭಾವುಕತೆಯಲ್ಲಿದ್ದರು. ಬಾಗಲಕೋಟೆಯ ಕೋವಿಡ್‌ ಆಸ್ಪತ್ರೆಯ ಸಿಬ್ಬಂದಿವೈದ್ಯರು ಉತ್ತಮ ಚಿಕಿತ್ಸೆ ನೀಡಿದ್ದು, ಅವರೆಲ್ಲ ಬೇಗ ಗುಣಮುಖರಾಗಿ ಹೊರಬಂದಿದ್ದಾರೆ ಎಂದು ಹೇಳಿದರು.

ನಾವು ಜನಸೇವೆ ಮಾಡಲು ಯಾವಾಗಲೂ ಫಿಟ್‌ನೆಸ್‌ ಜತೆಗೆ ಹುಮ್ಮಸ್ಸಿನೊಂದಿಗೆ ಇರುತ್ತೇವೆ. ನಾವು ಶ್ರದ್ದೆಯಿಂದ ಕೆಲಸ ಮಾಡುತ್ತೇವೆ. ಜನರು ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಜನರನ್ನು ನೋಡಿಕೊಳ್ಳಬೇಕಾದ ಪೊಲೀಸರಿಗೆ, ಇಂತಹ ಸ್ಥಿತಿ ಬರುವುದಿಲ್ಲ. ಲಾಕ್‌ಡೌನ್‌ ಈವರೆಗೆ ಕಠಿಣವಾಗಿತ್ತು. ಸದ್ಯ ಸಡಿಲಿಕೆಯಾಗಿದೆ. ಜನರು ಸಾಮಾಜಿಕ ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಿಯೇ ಹೊರ ಬರಬೇಕು. ಇದನ್ನು ಉಲ್ಲಂಘಿಸಿದರೆ, ಲಾಕ್‌ಡೌನ್‌ ಮತ್ತೆ ಕಠಿಣವಾಗುತ್ತದೆ. ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಆಗಾಗ ಕೈ ತೊಳೆದುಕೊಳ್ಳಬೇಕು ಎಂದು ತಿಳಿಸಿದರು.

ಸಿಬ್ಬಂದಿ ಕುರಿತು ಎಚ್ಚರಿಕೆ: ಕೋವಿಡ್ 19 ನಿಯಂತ್ರಣಕ್ಕಾಗಿ ವಾರಿಯರ್ಸ್‌ ಕೆಲಸ ಮಾಡುತ್ತಿರುವ ಪೊಲೀಸ್‌ ಸಿಬ್ಬಂದಿ ಆರೋಗ್ಯದ ಕುರಿತು ಎಚ್ಚರಿಕೆ ವಹಿಸಲಾಗಿದೆ. ಪ್ರತಿಯೊಬ್ಬರಿಗೂ ಮಾಸ್ಕ್ ನೀಡಿದ್ದು, ಎಲ್ಲ ಠಾಣೆ, ವಸತಿಗೃಹಗಳಿಗೆ ರಾಸಾಯನಿಕ ಸಿಂಪಡಣೆ ಮಾಡಲಾಗುತ್ತಿದೆ. ಅಲ್ಲದೇ ರೆಗ್ಯೂಲರ್‌ ಕೆಲಸ ಕಡಿಮೆ ಮಾಡಿದ್ದು, ಲಾಕ್‌ ಡೌನ್‌ ವೇಳೆ ಜನರ ಸುರಕ್ಷತೆ ಕುರಿತು ಹೆಚ್ಚು ಕಾಳಜಿ ವಹಿಸುವ ಕೆಲಸ ಮಾಡುತ್ತಿದ್ದೇವೆ. ಅಲ್ಲದೇ ಕಂಟೈನ್‌ಮೆಂಟ್‌ ಝೋನ್‌ನಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ರೋಗ ನಿರೋಧಕ ಶಕ್ತಿ ಹೆಚ್ಚಳವಾಗುವ ಊಟದ ವ್ಯವಸ್ಥೆ ಮಾಡಿದ್ದು, ಕೆಲವು ದಿನ ಮನೆಯಿಂದ ಬಂದು ಕೆಲಸ ನಿರ್ವಹಿಸದೇ ಪ್ರತ್ಯೇಕವಾಗಿ ವಾಸಿಸಲು ಸೂಚಿಸಲಾಗಿದೆ ಎಂದು ಐಜಿಪಿ ರಾಘವೇಂದ್ರ ಸುಹಾಸ್‌ ಹೇಳಿದರು.

ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ|ಕೆ.ರಾಜೇಂದ್ರ, ಎಸ್ಪಿ ಲೋಕೇಶ ಜಗಲಾಸರ ಇದ್ದರು.

ಟಾಪ್ ನ್ಯೂಸ್

Singhu border murder- Accused Nihang Saravjeet Singh sent to 7-day judicial custody

ಸಿಂಘು ಗಡಿ ಹತ್ಯೆ ಪ್ರಕರಣ:- ಆರೋಪಿ ನಿಹಾಂಗ್‌ ಸರ್ವಜೀತ್ ಗೆ 7 ದಿನ ಪೊಲೀಸ್‌ ಕಸ್ಟಡಿ

joshi

ನಾವು ಮುಸ್ಲಿಂ ವಿರೋಧಿಗಳಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ನಾವು ಮುಸ್ಲಿಂ ವಿರೋಧಿ ಅಲ್ಲ: ಕೇಂದ್ರ ಸಚಿವ ಜೋಶಿ

ನಾವು ಮುಸ್ಲಿಂ ವಿರೋಧಿ ಅಲ್ಲ: ಕೇಂದ್ರ ಸಚಿವ ಜೋಶಿ

ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಮಾಚಲಾಗಿದೆ, ಅವರಿಗೆ ನ್ಯಾಯ ಒದಗಿಸಬೇಕು; ಶಾ

ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಮಾಚಲಾಗಿದೆ, ಅವರಿಗೆ ನ್ಯಾಯ ಒದಗಿಸಬೇಕು; ಶಾ

ಕ್ಯಾಚ್ ಆಫ್ ದಿ ಸೀಸನ್, ಪವರ್ ಪ್ಲೇಯರ್, ಗೇಮ್ ಚೇಂಜರ್ ಪ್ರಶಸ್ತಿ ಯಾರಿಗೆ? ಇಲ್ಲಿದೆ ಪಟ್ಟಿ

ಕ್ಯಾಚ್ ಆಫ್ ದಿ ಸೀಸನ್, ಪವರ್ ಪ್ಲೇಯರ್, ಗೇಮ್ ಚೇಂಜರ್ ಪ್ರಶಸ್ತಿ ಯಾರಿಗೆ? ಇಲ್ಲಿದೆ ಪಟ್ಟಿ

b-c-nagesh

1 ರಿಂದ 5ರ ವರೆಗೆ ಶಾಲೆ ಆರಂಭಕ್ಕೆ ಸರ್ವ ಸಿದ್ದತೆ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್

20

ಶೆರ್ಲಿನ್ ದೂರು: ರಾಜ್ ಕುಂದ್ರಾ ಹಾಗೂ ಶಿಲ್ಪಾ ಶೆಟ್ಟಿಗೆ ಬಂಧನದ ಭೀತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bagalakote news

42 ಟನ್‌ ಅಕ್ರಮ ಪಡಿತರ ಅಕ್ಕಿ ವಶ

Channamma VV

ಚನ್ನಮ್ಮ ವಿವಿ ಸ್ನಾತಕೋತ್ತರ ಕೇಂದ್ರಕಗ್ಕೆ ಭೂಮಿ ಕೊಡಿ

dvSVD

ತಂದೆ-ತಾಯಿ ಸುಸಂಸ್ಕೃತ ಸಮಾಜದ ನಿರ್ಮಾಪಕರು

fghfdghdtyh

ಐಪಿಎಲ್ ಬೆಟ್ಟಿಂಗ್‌ಗೆ ಸಾಲ : ಹಣ್ಣಿನ ವ್ಯಾಪಾರಿ ಆತ್ಮಹತ್ಯೆ

xfgdtre

ಖಾಸಗೀಕರಣದಿಂದ ಉದ್ಯೋಗ ಹಾನಿ: ಜಬ್ಟಾರ್‌

MUST WATCH

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

ಹೊಸ ಸೇರ್ಪಡೆ

Singhu border murder- Accused Nihang Saravjeet Singh sent to 7-day judicial custody

ಸಿಂಘು ಗಡಿ ಹತ್ಯೆ ಪ್ರಕರಣ:- ಆರೋಪಿ ನಿಹಾಂಗ್‌ ಸರ್ವಜೀತ್ ಗೆ 7 ದಿನ ಪೊಲೀಸ್‌ ಕಸ್ಟಡಿ

joshi

ನಾವು ಮುಸ್ಲಿಂ ವಿರೋಧಿಗಳಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

DEMAND FOR PURE WATER

ಶುದ್ಧ ಕುಡಿವ ನೀರಿನ ಘಟಕ ದುರಸ್ತಿಗೆ ಗ್ರಾಮಸ್ಥರ ಒತ್ತಾಯ

ನಾವು ಮುಸ್ಲಿಂ ವಿರೋಧಿ ಅಲ್ಲ: ಕೇಂದ್ರ ಸಚಿವ ಜೋಶಿ

ನಾವು ಮುಸ್ಲಿಂ ವಿರೋಧಿ ಅಲ್ಲ: ಕೇಂದ್ರ ಸಚಿವ ಜೋಶಿ

1-yy

ವಾಲ್ಮೀಕಿ ಸಮಾಜದ ಮೀಸಲಾತಿ ಶೇ.7.5ಕ್ಕೆ ಹೆಚ್ಚಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.