ನಾಲ್ಕೈದು ವರ್ಷದಲ್ಲಿ ಆಲಮಟ್ಟಿ 524.256ಗೆ ಎತ್ತರ  

ಯುಕೆಪಿ ರಾಷ್ಟ್ರೀಯ ಯೋಜನೆ ಘೋಷಣೆ; ಪ್ರಧಾನಿ ಕೇಂದ್ರ ಸಚಿವರಿಗೆ ಮನವಿ

Team Udayavani, Aug 9, 2019, 7:00 PM IST

ಬಾಗಲಕೋಟೆ : ಬಹು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಆಲಮಟ್ಟಿ ಜಲಾಶಯವನ್ನು ಈಗಿರುವ 519.6೦ ಮೀಟರ್‌ನಿಂದ 524.256 ಮೀಟರ್‌ಗೆ ಎಚ್ಚರಿಸಲು ಲಕ್ಷಾಂತರ ಕೋಟಿ ಅನುದಾನ ಬೇಕಾಗುತ್ತದೆ. ಹೀಗಾಗಿ ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಪ್ರಧಾನಿ ಹಾಗೂ ಕೇಂದ್ರ ಜಲ ಸಂಪನ್ಮೂಲ ಸಚಿವರಿಗೆ ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಜಿಲ್ಲೆಯ ಮೂರು ನದಿಗಳಿಂದ ಪ್ರವಾಹಕ್ಕೆ ಒಳಗಾದ ಗ್ರಾಮಗಳ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಮಧ್ಯಾಹ್ನ ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಆಲಮಟ್ಟಿ ಜಲಾಶಯ ಎತ್ತರಿಸಲು 2೦1೦ರಲ್ಲೇ ಕೃಷ್ಣಾ ನ್ಯಾಯಾಧೀಕರಣ ಅನುಮತಿ ನೀಡಿದೆ. ಆದರೆ, ಕಳೆದ ಐದಾರು ವರ್ಷಗಳಿಂದ ಸರ್ಕಾರ ಈ ಯೋಜನೆಯನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿದ್ದರಿಂದ ಇದು ಕಾರ್ಯಗತವಾಗಿಲ್ಲ. ಜಲಾಶಯ ಎತ್ತರಿಸಿದಾಗ ಇನ್ನೂ 22 ಹಳ್ಳಿಗಳು ಮುಳುಗಡೆಯಾಗಲಿದ್ದು, 1.26 ಲಕ್ಷ ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕಾಗುತ್ತದೆ. ಇದಕ್ಕೆ ಲಕ್ಷಾಂತರ ಕೋಟಿ ಅನುದಾನ ಬೇಕು. ಹೀಗಾಗಿ ಈ ಯೋಜನೆ ಪೂರ್ಣಗೊಳಿಸಲು, ರಾಜ್ಯದ ಬಿಜೆಪಿ ಸರ್ಕಾರ ಸಂಕಲ್ಪ ಮಾಡಿದ್ದು, ಅದಕ್ಕಾಗಿ ಕೇಂದ್ರದ ನೆರವು ಕೋರಲಾಗಿದೆ. ಕೇಂದ್ರದಿಂದ ನೆರವು ಕೊಡಲು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಬೇಕು ಎಂದು ಇಚೆಗೆ ದೆಹಲಿಗೆ ತೆರಳಿದ್ದ ವೇಳೆ ಮನವಿ ಮಾಡಿದ್ದಾಗಿ ತಿಳಿಸಿದರು.

ನಾಲ್ಕೈದು ವರ್ಷದಲ್ಲಿ ಪೂರ್ಣ :
ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತದ ಎಲ್ಲ ನೀರಾವರಿ ಯೋಜನೆ, 22 ಗ್ರಾಮಗಳ ಸ್ಥಳಾಂತರ ಹಾಗೂ ಭೂಸ್ವಾಧೀನ ಕಾರ್ಯವನ್ನು ನಾಲ್ಕೈದು ವರ್ಷದಲ್ಲಿ ಪೂರ್ಣಗೊಳಿಸಲಾಗುವುದು. ನೀರಾವರಿಗೆ ನಮ್ಮ ಸರ್ಕಾರ ಮೊದಲ ಆದ್ಯತೆ ನೀಡಿದ್ದು, ತ್ವರಿತವಾಗಿ ಕೆಲಸ ಮಾಡಲಾಗುವುದು ಎಂದು ಹೇಳಿದರು.

 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಬೆಂಗಳೂರು: ಆಶ್ರಯ ಮನೆ ನಿರ್ಮಾಣ ಅಕ್ರಮದ ಬಗ್ಗೆ ತನಿಖೆಗೆ ರಾಜ್ಯ ಸರಕಾರ ಆರಂಭಿಸಿರುವ ವಿಜಿಲ್‌ ಮೊಬೈಲ್‌ ಆ್ಯಪ್‌ನ ಗೊಂದಲ ಇನ್ನೂ ನಿವಾರಣೆ ಆಗಿಲ್ಲ. ಆ್ಯಪ್‌...

  • ಬೆಂಗಳೂರು: ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಸಹಾಯಾನುದಾನ ಮತ್ತು ವಂತಿಗೆ ಹಾಗೂ ತೆರಿಗೆ ಪಾಲಿನ ಕಡಿತದ ಪರಿಣಾಮ 2020-21 ನೇ ಸಾಲಿನ ಬಜೆಟ್‌ ಮೇಲೆ ಪರಿಣಾಮ ಬೀರಲಿದ್ದು...

  • ಹುಬ್ಬಳ್ಳಿ: ಮಹದಾಯಿ ಕುರಿತು ಕೇಂದ್ರದಿಂದ ಅಧಿಸೂಚನೆ ಹೊರಡಿಸುವುದು ವಿಶೇಷವಾಗಿ ಇಬ್ಬರು ಸಚಿವರಿಗೆ ಪ್ರತಿಷ್ಠೆಯಾಗಿತ್ತು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ,...

  • ಕಾರವಾರ: ಕೊರೊನಾ ವೈರಸ್‌ ಕಾರಣಕ್ಕೆ ಜಪಾನ್‌ನ ಯೊಕೊಹಾಮಾದಲ್ಲಿ ಡೈಮಂಡ್‌ ಪ್ರಿನ್ಸಸ್‌ ಎಂಬ ಕ್ರೂಸ್‌ ಹಡಗಿನಲ್ಲಿ ಬಂಧಿಯಾಗಿದ್ದ ಕಾರವಾರ ಮೂಲದ ಅಭಿಷೇಕ್‌...

  • ಮುದಗಲ್ಲ (ರಾಯಚೂರು): ಚೀನಾದಲ್ಲಿ ಮಾರಣಹೋಮ ನಡೆಸಿರುವ ಕೊರೊನಾ ವೈರಸ್‌ ಪರಿಣಾಮ ಇಲ್ಲಿನ ಕಲ್ಲು ಗಣಿಗಾರಿಕೆ ಮೇಲೂ ಆಗಿದೆ. ಕೊರೊನಾ ವೈರಸ್‌ ಪರಿಣಾಮ ಚೀನಾ ಸೇರಿ...

ಹೊಸ ಸೇರ್ಪಡೆ