ಅಂಬೇಡ್ಕರ್‌ ಜಯಂತಿ ಅರ್ಥಪೂರ್ಣ ಆಚರಣೆ

ಮೆರವಣಿಗೆಯಲ್ಲಿ ಜಾನಪದ ಕಲಾತಂಡಗಳಿಗೆ ಆಹ್ವಾನ

Team Udayavani, Mar 27, 2022, 12:50 PM IST

10

ಬಾಗಲಕೋಟೆ: ಜಿಲ್ಲೆಯಲ್ಲಿ ಏ.5ರಂದು ಆಚರಿಸಲ್ಪಡುವ ಡಾ| ಬಾಬು ಜಗಜೀವನರಾಂ ಅವರ 115ನೇ ಜಯಂತಿ ಹಾಗೂ ಏ.14ರಂದು ಆಚರಿಸಲ್ಪಡುವ ಡಾ|ಬಿ.ಆರ್‌. ಅಂಬೇಡ್ಕರ್‌ 131ನೇ ಜಯಂತಿ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ| ಕೆ.ರಾಜೇಂದ್ರ ಹೇಳಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜರುಗಿದ ಡಾ|ಬಾಬು ಜಗಜೀವನರಾಂ ಹಾಗೂ ಡಾ|ಬಿ.ಆರ್‌. ಅಂಬೇಡ್ಕರ್‌ ಜಯಂತಿ ಆಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಜಗಜೀವನರಾಂ ಜಯಂತಿಯನ್ನು ನವನಗರದಲ್ಲಿರುವ ಜಗಜೀವನರಾಂ ಭವನದಲ್ಲಿ ಹಾಗೂ ಅಂಬೇಡ್ಕರ ಜಯಂತಿ ನವನಗರದ ಅಂಬೇಡ್ಕರ್‌ ಭವನದಲ್ಲಿ ಆಚರಿಸಲು ನಿರ್ಧರಿಸಲಾಯಿತು.

ಆಯಾ ಜಯಂತಿ ದಿನ ಬೆಳಗ್ಗೆ ಭಾವಚಿತ್ರಗಳ ಮೆರವಣಿಗೆ ನಡೆಸಲಾಗುತ್ತಿದೆ. ಮೆರವಣಿಗೆಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲು ಅಧಿ ಕಾರಿಗಳಿಗೆ ಸೂಚಿಸಿದರು. ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾತಂಡಗಳನ್ನು ಆಹ್ವಾನಿಸಲು ತಿಳಿಸಲಾಯಿತು. ಜಗಜೀವನರಾಂ ಮತ್ತು ಅಂಬೇಡ್ಕರ್‌ ಕುರಿತು ಉಪನ್ಯಾಸ ನೀಡಲು ಉತ್ತಮ ಉಪನ್ಯಾಸಕರನ್ನು ಆಹ್ವಾನಿಸಲು ತಿಳಿಸಿದರು.

ಶಿಷ್ಟಾಚಾರದ ಪ್ರಕಾರ ಆಮಂತ್ರಣ ಪತ್ರಿಕೆ, ವೇದಿಕೆ ನಿರ್ಮಾಣ ಸೇರಿದಂತೆ ಇತರೆ ಕಾರ್ಯಗಳನ್ನು ಅಚ್ಚುಕಟ್ಟಾಗಿ ಮಾಡಬೇಕು. ವಿವಿಧ ಇಲಾಖೆಯ ಅ ಧಿಕಾರಿಗಳು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಹಾಜರಿರಲು ತಿಳಿಸಿದರು. ಇದೇ ಸಂದರ್ಭದಲ್ಲಿ ಸಾಮಾಜಿಕ ಕಾರ್ಯದಲ್ಲಿ ಉತ್ತಮವಾಗಿ ಸೇವೆ ಸಲ್ಲಿಸಿದ ಸಾಧಕರಿಗೆ ಸನ್ಮಾನಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯ ಎಲ್ಲ ತಾಲೂಕು ಕಚೇರಿ, ಶಾಲಾ-ಕಾಲೇಜು, ಗ್ರಾಮ ಪಂಚಾಯತಿ ಹಾಗೂ ಇತರೆ ಕಚೇರಿಗಳಲ್ಲಿ ಡಾ| ಬಾಬು ಜಗಜೀವನರಾಂ ಹಾಗೂ ಡಾ| ಬಿ.ಆರ್‌.ಅಂಬೇಡ್ಕರ್‌ ಜಯಂತಿ ಕಡ್ಡಾಯವಾಗಿ ಆಚರಿಸಲು ನಿರ್ದೇಶನ ನೀಡುವಂತೆ ಆಯಾ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಲು ತಿಳಿಸಿದರು.

ಜಿಪಂ ಸಿಇಒ ಟಿ.ಭೂಬಾಲನ್‌, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಸಮುದಾಯದ ಮುಖಂಡರಾದ ಅಶೋಕ ನಾರಾಯಣ, ಹನಮಂತ ಚಿಮ್ಮಲಗಿ, ಎಸ್‌.ಡಿ. ಚಿಕ್ಕಲಕಿ, ಎ.ಎಸ್‌.ಚಂದಾವನಿ, ವೈ.ಜಿ. ತಿಮ್ಮಾಪುರ, ಚಂದ್ರಶೇಖರ ಹಾದಿಮನಿ, ವೈ.ಸಿ. ಕಾಂಬಳೆ, ಯಲ್ಲಪ್ಪ ಸನಕ್ಯಾನವರ, ನಿಂಗರಾಜ ಮಬ್ರೂಮಕರ, ಗುರುಶಾಂತಪ್ಪ ಮದಿನಕರ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.