ಅಮೀನಗಡ: ಗೆಳೆಯರ ಬಳಗದಿಂದ ಪಕ್ಷಿಗಳಿಗೆ ಆಹಾರ-ನೀರು

Team Udayavani, Mar 12, 2024, 11:17 AM IST

ಅಮೀನಗಡ: ಗೆಳೆಯರ ಬಳಗದಿಂದ ಪಕ್ಷಿಗಳಿಗೆ ಆಹಾರ-ನೀರು

ಉದಯವಾಣಿ ಸಮಾಚಾರ
ಅಮೀನಗಡ: ಪಕ್ಷಿಗಳಿಗೆ ಆಹಾರ, ನೀರು ಪೂರೈಸುವ ಮೂಲಕ ಗೆಳೆಯರ ಬಳಗ ಮಾನವೀಯತೆ ಮೆರೆದಿದೆ. ಹೌದು. ತಾಪಮಾನ ದಿನೇ ದಿನೆ ಹೆಚ್ಚಾಗುತ್ತಿದ್ದು, ಬಿಸಿಲಿನ ಬೇಗೆಯಿಂದ ಪಕ್ಷಿಗಳು ತತ್ತರಿಸುತ್ತಿವೆ. ಇದನ್ನು ಮನಗೊಂಡ ಪಟ್ಟಣದ ಗೆಳೆಯರ ಬಳಗ ಸ್ವಯಂ ಪ್ರೇರಣೆಯಿಂದ ಪಟ್ಟಣದ ರಾಜ್ಯ ಹೆದ್ದಾರಿ ಪಕ್ಕದಲ್ಲಿರುವ ಹಾದಿ ಬಸವೇಶ್ವರ ದೇವಸ್ಥಾನದಿಂದ, ಸಾಯಿ ಶಾಲೆಯವರೆಗೆ 100ಕ್ಕೂ ಹೆಚ್ಚು ಗಿಡಗಳಲ್ಲಿ ಪಕ್ಷಿಗಳಿಗೆ ಆಹಾರ, ನೀರು ಪೂರೈಸುವ ಕಾರ್ಯ ಮಾಡುತ್ತಿದೆ. ಗೆಳೆಯರ ಬಳಗದ ಈ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.

ಪಟ್ಟಣದ ಗೆಳೆಯರ ಬಳಗ ಸೇರಿಕೊಂಡು ಸ್ಥಳಿಯ ಅಂಗಡಿಗಳಿಗೆ ಭೇಟಿ ನೀಡಿ, ಬಳಕೆಗೆ ಬಾರದ ಬಾಟಲ್‌ಗ‌ಳನ್ನು ಸಂಗ್ರಹಿಸಿ ಅವುಗಳನ್ನು ಎರಡು ತುಂಡುಗಳಾಗಿ ಮಾಡಿ, ತಮ್ಮ ತಮ್ಮ  ಮನೆಗಳಿಂದ ಅಕ್ಕಿ ಮತ್ತು ಜೋಳವನ್ನು ತಂದು ಎರಡನ್ನು ಕೂಡಿಸಿ ಅವುಗಳನ್ನು ಸಂಗ್ರಹಿಸಿ, ಒಂದು ಭಾಗದಲ್ಲಿ ಅಕ್ಕಿ ಮತ್ತು ಜೋಳ, ಮತ್ತೊಂದು ಭಾಗದಲ್ಲಿ ನೀರನ್ನು ಹಾಕಿ, ತಂತಿಯ ಮೂಲಕ ಗಿಡಗಳಿಗೆ ಕಟ್ಟುತ್ತಿದ್ದಾರೆ.

ಪಟ್ಟಣದ ಯುವಕರಾದ ನವೀನ ಪಲ್ಲಕ್ಕಿ, ಬಾಲು ಬಿ, ಹುಲ್ಲಪ್ಪ ಭಜಂತ್ರಿ, ಮುತ್ತು ನರಿ, ಸಂಗು ಬೇನಾಳ, ಮುತ್ತು ಬಿ., ಸಚಿನ
ಶಿವಮೂರ್ತಿಮಠ, ಬಸು ಗೌಡರ ಅವರನ್ನು ಒಳಗೊಂಡ ಗೆಳೆಯರ ಬಳಗ, ಪಕ್ಷಿಗಳ ಆಕ್ರಂದನ ಹಾಗೂ ವನ್ಯ ಜೀವಿಗಳ ನೋವಿಗೆ
ಸ್ಪಂದಿಸುತ್ತಿದೆ. ಎರಡು ದಿನಕೊಮ್ಮೆ ಗಿಡಗಳಿಗೆ ಕಟ್ಟಿರುವ ಬಾಟಲ್‌ಗ‌ಳಿಗೆ ಅಕ್ಕಿ, ಜೋಳ ಹಾಗೂ ನೀರನ್ನು ಹಾಕುವ ಯೋಜನೆ ಮಾಡಿ, ಪಕ್ಷಿಗಳ ದಾಹ ಇಂಗಿಸುವ ಮಾನವೀಯ ಕಾರ್ಯ ಮಾಡುತ್ತಿದ್ದಾರೆ.

ಯುವಕರ ಕಾರ್ಯ ಮಾದರಿ: ಆಧುನಿಕ ತಂತ್ರಜ್ಞಾನದ ಕಾಲಮಾನದಲ್ಲಿ ಪಕ್ಷಿಗಳ ಸಂಕುಲ ಅಳಿವಿನಂಚಿನಲ್ಲಿದೆ. ಪಕ್ಷಿಗಳ
ಸಂಕುಲ ಉಳಿಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಯುವಕರ ನಡೆ ಇತರರಿಗೆ ಮಾದರಿಯಾಗಿದೆ. ಇದೇ ರೀತಿಯ ಹವ್ಯಾಸವನ್ನು ಎಲ್ಲರೂ ಬೆಳೆಸಿಕೊಂಡರೆ ಪಕ್ಷಿ ಸಂಕುಲ ರಕ್ಷಿಸಬಹುದು ಎಂದು ಗೆಳೆಯರ ಬಳಗದ ಕಾರ್ಯಕ್ಕೆ ಪ್ರಜ್ಞಾವಂತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

*ಎಚ್‌.ಎಚ್‌.ಬೇಪಾರಿ

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.