ಮಕ್ಕಳ ಹಕ್ಕುಗಳ ರಕ್ಷಣೆಗೆ ಕಠಿಣ ಕ್ರಮ: ವನಿತಾ ತೊರವಿ


Team Udayavani, Dec 23, 2018, 4:20 PM IST

23-december-21.gif

ಬಾಗಲಕೋಟೆ: ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಂದು ಇಲಾಖೆಯ ಜವಾಬ್ದಾರಿ ಮತ್ತು ಕರ್ತವ್ಯ. ಈ ನಿಟ್ಟಿನಲ್ಲಿ ನಿರ್ಲಕ್ಷ್ಯ  ವಹಿಸುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಆಯೋಗ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ವನಿತಾ ತೊರವಿ ಹೇಳಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳ ಹಕ್ಕುಗಳ ರಕ್ಷಣೆಗೆ ವಿಜಯಪುರ, ಬಾಗಲಕೋಟೆ ಸೇರಿದಂತೆ ಉತ್ತರಕರ್ನಾಟಕದ ಹಲವು ಜಿಲ್ಲೆಗಳಿಗೆ ಆದ್ಯತೆ ನೀಡಲಾಗಿದೆ. ಜಿಲ್ಲೆಯಲ್ಲಿ ಬಾಲ್ಯ ವಿವಾಹ ಮತ್ತು ಬಾಲ ಕಾರ್ಮಿಕ ಪದ್ಧತಿ ಇಂದಿಗೂ ಜೀವಂತವಾಗಿದೆ. ಈ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಗಳು ಜವಾಬ್ದಾರಿಯಿಂದ ಕೆಲಸ ನಿರ್ವಹಿಸಲು ನಿರ್ದೇಶನ ನೀಡಲಾಗಿದೆ ಎಂದರು.

ಮಕ್ಕಳಿಂದಲೇ ಹಕ್ಕು ರಕ್ಷಣೆಗೆ ಸಿನಿಮಾ ಪ್ರದರ್ಶನ: ಸಮಾಜಕ್ಕೆ ಬಾಲ್ಯ ವಿವಾಹ ಒಂದು ಪಿಡುಗು ಆಗಿದೆ. ಇದನ್ನು ಮಕ್ಕಳಿಂದಲೇ ತಡೆಗಟ್ಟಲು ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಬಾಲ್ಯ ವಿವಾಹದ ದುಷ್ಪರಿಣಾಮ ಬೀರುವ ಸಂದಿಗ್ಧ ಎಂಬ ಸಿನೆಮಾ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಜ. 4ಮತ್ತು 6ರಂದು ಜಿಲ್ಲೆಯ 14 ಚಿತ್ರ ಮಂದಿರಗಳಲ್ಲಿ 8ರಿಂದ 10ನೇ ತರಗತಿ ಮಕ್ಕಳಿಗೆ ಚಿತ್ರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗುವುದು. ವಿಜಯಪುರ ಜಿಲ್ಲೆಯಲ್ಲಿ 56 ಸಾವಿರ ಮಕ್ಕಳಿಗೆ ಈ ಚಿತ್ರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. ಜಿಲ್ಲೆಯಲ್ಲೂ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳ 8ರಿಂದ 10ನೇ ತರಗತಿ ಮಕ್ಕಳಿಗೆ ಈ ಚಿತ್ರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಐದು ಅಂಶಗಳ ತರಬೇತಿ: ಹುಟ್ಟಿದ ಪ್ರತಿಯೊಂದು ಮಗುವಿಗೂ ಜನನ ಪ್ರಮಾಣ ಪತ್ರ ಕಡ್ಡಾಯವಾಗಿ ನೀಡಬೇಕು, ಪ್ರತಿಯೊಂದು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಕ್ಕಳ ಗ್ರಾಮಸಭೆ ನಡೆಸಬೇಕು. ಆಯಾ ಗ್ರಾ.ಪಂ.ಗಳಲ್ಲಿ ಮಕ್ಕಳ ರಕ್ಷಣಾ ಸಮಿತಿ ರಚನೆ ಮಾಡಬೇಕು, ಮಕ್ಕಳ ಮಾರಾಟ-ಸಾಗಣೆ ತಡೆಗೆ ಗ್ರಾಮಗಳಲ್ಲಿ ಸಮಿತಿ ರಚನೆ, ಕಿಶೋರಿ ಸಂಘಗಳನ್ನು ಶಾಲೆಗಳಲ್ಲಿ ರಚನೆ ಮಾಡುವುದು ಸೇರಿದಂತೆ ಐದು ಅಂಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಎಲ್ಲ ಇಲಾಖೆಯಗಳ ಅಧಿಕಾರಿಗಳಿಗೆ ಆಯೋಗದಿಂದ ತರಬೇತಿ ನೀಡಲಾಗುತ್ತಿದೆ. ತರಬೇತಿಯ ಬಳಿಕ ಯಾವ ಗ್ರಾ.ಪಂ, ಅಧಿಕಾರಿಗಳು ಪಾಲನೆ ಮಾಡಿದ್ದಾರೆ ಎಂಬುದನ್ನೂ ಪರಿಶೀಲನೆ ನಡೆಸಲಾಗುತ್ತದೆ ಎಂದರು. ಬಾಲ್ಯ ವಿವಾಹ ತಡೆಗೆ ಕ್ರಮ: ಜಿಲ್ಲೆಯಲ್ಲಿ ಬಾಲ್ಯ ವಿವಾಹ ನಡೆಯುತ್ತಿರುವುದು ನಿತ್ಯ ಕಂಡು ಬರುತ್ತಿವೆ. ಶುಕ್ರವಾರವೇ ಬಾಗಲಕೋಟೆ ಜಿಲ್ಲೆಯಲ್ಲಿ ಒಂದು ಬಾಲ್ಯ ವಿವಾಹ ನಡೆದ ಕುರಿತು ಗಮನಕ್ಕೆ ಬಂದಿದೆ. ಇದನ್ನು ತಡೆಯುವುದು ಒಂದು ಇಲಾಖೆಯ ಕೆಲಸವಲ್ಲ. ಹಲವು ಇಲಾಖೆಗಳ ಜವಾಬ್ದಾರಿ ಇದೆ. ಮಕ್ಕಳ ರಕ್ಷಣಾ ಸಮಿತಿಯಿಂದ ಪೊಲೀಸ್‌ ಇಲಾಖೆಗೆ ಶಿಫಾರಸ್ಸು ಮಾಡುವ ಪ್ರಕರಣಗಳಿಗೆ ಕಡ್ಡಾಯವಾಗಿ ಎಫ್‌ಐಆರ್‌ ದಾಖಲಿಸಬೇಕು. ಬಾಲ್ಯ ವಿವಾಹಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಒಂದೆರಡು ಪ್ರಕರಣಗಳಲ್ಲಿ ಕ್ರಮ ಕೈಗೊಂಡರೆ ಜನರು ಜಾಗೃತರಾಗುತ್ತಾರೆ. ಈ ನಿಟ್ಟಿನಲ್ಲಿ ಸರಿಯಾಗಿ ಕೆಲಸ ಆಗುತ್ತಿಲ್ಲ ಎಂಬ ದೂರುಗಳಿವೆ. ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗುವುದು ಎಂದು ಹೇಳಿದರು.

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ವೈ. ಮರಿಸ್ವಾಮಿ, ಆನಂದ ಲೋಬೋ, ರೂಪಾ ನಾಯಕ, ರಾಘವೇಂದ್ರ ಭಟ್‌, ಆನಂದ ಗೌಡರ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

kannada news films

ಬಿಡುಗಡೆಗೆ ರೆಡಿಯಾಗಿವೆ ಸಾಲು ಸಾಲು ಸಿನಿಮಾಗಳು…

ಪೆಗಾಸಸ್ ಗೂಢಚರ್ಯೆ; ಸ್ವತಂತ್ರ ತನಿಖೆ ನಡೆಸಲು ತಜ್ಞರ ಸಮಿತಿ ರಚಿಸಿದ ಸುಪ್ರೀಂಕೋರ್ಟ್

ಪೆಗಾಸಸ್ ಗೂಢಚರ್ಯೆ; ಸ್ವತಂತ್ರ ತನಿಖೆ ನಡೆಸಲು ತಜ್ಞರ ಸಮಿತಿ ರಚಿಸಿದ ಸುಪ್ರೀಂಕೋರ್ಟ್

kotigobba 3

ಸಲಗ, ಕೋಟಿಗೊಬ್ಬ-3 ಸಕ್ಸಸ್‌ ಸಂಭ್ರಮ

ಮಕ್ಕಳಿಗೆ ಲಸಿಕೆ ಸುರಕ್ಷಿತವೇ? ಅನುಮಾನಕ್ಕೆ ಪರಿಹಾರ

ಮಕ್ಕಳಿಗೆ ಲಸಿಕೆ ಸುರಕ್ಷಿತವೇ? ಅನುಮಾನಕ್ಕೆ ಪರಿಹಾರ

ಕೋವಿಡ್ 19 ಪ್ರಕರಣಗಳ ಸಂಖ್ಯೆ ದಿಢೀರ್ ಹೆಚ್ಚಳ; ಬಂಗಾಳ ನಗರದಲ್ಲಿ ಲಾಕ್ ಡೌನ್ ಜಾರಿ

ಕೋವಿಡ್ 19 ಪ್ರಕರಣಗಳ ಸಂಖ್ಯೆ ದಿಢೀರ್ ಹೆಚ್ಚಳ; ಬಂಗಾಳ ನಗರದಲ್ಲಿ ಲಾಕ್ ಡೌನ್ ಜಾರಿ

ಕೆ.ಜಿ.ಎಫ್‌ ಬೆಡಗಿ ರವೀನಾಗೆ ಪಾರ್ಟಿ ಅಂದ್ರೆ ಅಗೋದಿಲ್ವಂತೆ!

ಕೆ.ಜಿ.ಎಫ್‌ ಬೆಡಗಿ ರವೀನಾಗೆ ಪಾರ್ಟಿ ಅಂದ್ರೆ ಅಗೋದಿಲ್ವಂತೆ!

ಅಂಜನಾದ್ರಿ ಸುತ್ತಮುತ್ತಲ ಬೆಟ್ಟಗಳಲ್ಲಿ ಶಿಲಾರೋಹಣ ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ 

ಅಂಜನಾದ್ರಿ ಸುತ್ತಮುತ್ತಲ ಬೆಟ್ಟಗಳಲ್ಲಿ ಶಿಲಾರೋಹಣ ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24problems

ದುಃಖಕ್ಕೆ ದುಶ್ಚಟಗಳು ಪರಿಹಾರವಲ್ಲ

23bus

ಸಂಚಾರಿ ವಾಹನದಲ್ಲಿ ಶಸ್ತ್ರ ಚಿಕಿತ್ಸೆ ತರಬೇತಿ!

20road

ಇಕ್ಕಟ್ಟಾದ ರಸ್ತೆಯಲ್ಲಿ ಕಗ್ಗಂಟಾದ ಸಂಚಾರ

19streetlight

ಗದ್ದನಕೇರಿ ಕ್ರಾಸ್‌ನಲ್ಲಿ ಕತ್ತಲು!

ಜಾತಿ-ಮೂಢನಂಬಿಕೆಗಳಿಂದ ದೂರವಿರಿ: ಸ್ವಾಮೀಜಿ

ಜಾತಿ-ಮೂಢನಂಬಿಕೆಗಳಿಂದ ದೂರವಿರಿ: ಸ್ವಾಮೀಜಿ

MUST WATCH

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

udayavani youtube

ಸಾಮಾಜಿಕ ಸಂದೇಶ ಹೊತ್ತು 3500 ಕಿ.ಮೀ ಸೈಕಲ್ ಪ್ರಯಾಣ!

ಹೊಸ ಸೇರ್ಪಡೆ

11kaluve

ಹೂಳು; ಕಾಲುವ್ಯಾಗ ನೀರು ಹೆಂಗ್‌ ಹರಿತಾದ್ರಿ?

10flood

ಬೀದರ ಈಗ ಪ್ರವಾಹ ಪೀಡಿತ ಜಿಲ್ಲೆ!

ಕಾಪು ಪುರಸಭೆ ವ್ಯಾಪ್ತಿಯಲ್ಲಿ ಎಲ್‌ಇಡಿ ಲೈಟ್ ಅಳವಡಿಕೆಗೆ ಪ್ರಾಯೋಗಿಕ ಚಾಲನೆ

ಕಾಪು ಪುರಸಭೆ ವ್ಯಾಪ್ತಿಯಲ್ಲಿ ಎಲ್‌ಇಡಿ ಲೈಟ್ ಅಳವಡಿಕೆಗೆ ಪ್ರಾಯೋಗಿಕ ಚಾಲನೆ

kannada news films

ಬಿಡುಗಡೆಗೆ ರೆಡಿಯಾಗಿವೆ ಸಾಲು ಸಾಲು ಸಿನಿಮಾಗಳು…

ಪೆಗಾಸಸ್ ಗೂಢಚರ್ಯೆ; ಸ್ವತಂತ್ರ ತನಿಖೆ ನಡೆಸಲು ತಜ್ಞರ ಸಮಿತಿ ರಚಿಸಿದ ಸುಪ್ರೀಂಕೋರ್ಟ್

ಪೆಗಾಸಸ್ ಗೂಢಚರ್ಯೆ; ಸ್ವತಂತ್ರ ತನಿಖೆ ನಡೆಸಲು ತಜ್ಞರ ಸಮಿತಿ ರಚಿಸಿದ ಸುಪ್ರೀಂಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.