ಬಾಗಲಕೋಟೆ-ಕುಡಚಿ ರೈಲು: ನಿರೀಕ್ಷೆ ಹುಸಿ!

ಜಿಲ್ಲೆಯಲ್ಲಿ ಪೂರ್ಣಗೊಳ್ಳಲು ಇನ್ನೂ 814.30 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕಿದೆ.

Team Udayavani, Feb 4, 2022, 4:52 PM IST

ಬಾಗಲಕೋಟೆ-ಕುಡಚಿ ರೈಲು: ನಿರೀಕ್ಷೆ ಹುಸಿ!

ಬಾಗಲಕೋಟೆ: ಬರೋಬ್ಬರಿ ಒಂದು ಶತಕಕ್ಕೂ ಹೆಚ್ಚು ವರ್ಷಗಳ ಬೇಡಿಕೆಯಾಗಿರುವ ಬಾಗಲಕೋಟೆ-ಕುಡಚಿ ರೈಲು ಮಾರ್ಗ ನಿರ್ಮಾಣ ಯೋಜನೆಗೆ ಹಿಡಿದ ಗ್ರಹಣ ಇನ್ನೂ ಬಿಟ್ಟಂತಿಲ್ಲ. ಹೌದು, ಕಳೆದ 12 ವರ್ಷಗಳಿಂದ ಈ ಯೋಜನೆ ಕುಟುಂತ್ತಲೇ ಸಾಗಿದೆ. ಕೇಂದ್ರ ಸರ್ಕಾರದ ಅನುದಾನ, ರಾಜ್ಯ ಸರ್ಕಾರದಿಂದ ಭೂಮಿ ಹಂಚಿಕೆ ಪ್ರಕ್ರಿಯೆ ಪೂರ್ಣಗೊಳ್ಳುತ್ತಲೇ ಇಲ್ಲ. ಕೇಂದ್ರದ ಬಜೆಟ್‌ನಲ್ಲಿ ಈ ಯೋಜನೆಗೆ ಅಗತ್ಯ ಅನುದಾನ ದೊರೆಯುತ್ತದೆ ಎಂಬ ಬಹು ನಿರೀಕ್ಷೆ ಮತ್ತೆ ಹುಸಿಯಾಗಿದೆ. ಪ್ರಸಕ್ತ ಬಜೆಟ್‌ನಲ್ಲಿ ಕನಿಷ್ಠ 500 ಕೋಟಿಯಾದರೂ ಕೇಂದ್ರ ಸರ್ಕಾರ ಕೊಡಲಿದೆ ಎಂಬ ಭರವಸೆ ಹುಸಿಯಾಗಿದ್ದು, ಯೋಜನೆ ಮತ್ತಷ್ಟು ವಿಳಂಬಗೊಳ್ಳುವ ಸಾಧ್ಯತೆ ಹೆಚ್ಚಿದೆ.

ಶತಕದ ಯೋಜನೆ: ಬಾಗಲಕೋಟೆ-ಕುಡಚಿ ರೈಲ್ವೆ ಮಾರ್ಗ ನಿರ್ಮಾಣದ ಬೇಡಿಕೆ ಇಂದು-ನಿನ್ನೆಯದ್ದಲ್ಲ. 1912ರಲ್ಲಿ ಬ್ರಿಟಿಷರ ಕಾಲದಲ್ಲಿಯೇ ಇದಕ್ಕೆ ಒಂದು ಬಾರಿ ಸಮೀಕ್ಷೆ ಕೂಡಾ ಆಗಿತ್ತು. ಕಾರಣಾಂತರಗಳಿಂದ ಈ ಯೋಜನೆ ಮುಂದೂಡುತ್ತಲೇ ಬಂದಿದ್ದು, ದಿ| ಜಾಫರ್‌ ಶರೀಫ್‌ ಅವರು ರೈಲ್ವೆ ಸಚಿವರು, ಸಿದ್ದು ನ್ಯಾಮಗೌಡ ಅವರು ಕೇಂದ್ರದ ಕಲ್ಲಿದ್ದಲು ಸಚಿವರಾಗಿದ್ದ ವೇಳೆ ಈ ಯೋಜನೆಗೆ ಮತ್ತಷ್ಟು ಬೇಡಿಕೆ ಹೆಚ್ಚಿತು. ಒಟ್ಟಾರೆ, ಈ ಯೋಜನೆಗೆ ಅನುಮೋದನೆ ದೊರೆತಿದ್ದು, 2010ರಲ್ಲಿ ಮಮತಾ ಬ್ಯಾನರ್ಜಿ ರೈಲ್ವೆ ಸಚಿವರಾಗಿದ್ದ ವೇಳೆ. ಆಗ ಈ ಯೋಜನೆಗೆ ಬೇಕಾಗಿದ್ದು ಕೇವಲ 816 ಕೋಟಿ ಮಾತ್ರ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ 1 ಸಾವಿರ ಕೋಟಿ ಅನುದಾನದೊಳಗೆ ಈ ಯೋಜನೆ ಪೂರ್ಣಗೊಳ್ಳುತ್ತಿತ್ತು.

ಯಡಿಯೂರಪ್ಪ ಅವರು ಸಿಎಂ ಆಗಿದ್ದ ವೇಳೆ 2009ರಲ್ಲಿ ಹೊಸ ಘೋಷಣೆ ಮಾಡಿ, ರಾಜ್ಯದ ರೈಲ್ವೆ ಯೋಜನೆಗಳಿಗೆ ಭೂಮಿ ಸ್ವಾಧೀನಪಡಿಸಿಕೊಂಡು, ರೈಲ್ವೆ ಇಲಾಖೆಗೆ ನೀಡಲಾಗುವುದು. ಕೇಂದ್ರ ಸರ್ಕಾರ, ಕೇವಲ ರೈಲ್ವೆ ಮಾರ್ಗ ನಿರ್ಮಾಣ ಮಾಡಿಕೊಡಲಿ ಎಂಬ ಯೋಜನೆ ಜಾರಿಗೊಳಿಸಿದರು. ಹೀಗಾಗಿ ರಾಜ್ಯದ ಯಾವುದೇ ರೈಲ್ವೆ ಯೋಜನೆಗೆ ರಾಜ್ಯ ಸರ್ಕಾರ ಭೂಮಿ ನೀಡಿದರೆ, ಕೇಂದ್ರ ಸರ್ಕಾರ ಮಾರ್ಗ ನಿರ್ಮಾಣಕ್ಕೆ ಅನುದಾನ ಕೊಡಬೇಕು.

141 ಕಿ.ಮೀ ಉದ್ದ: ಬಾಗಲಕೋಟೆ-ಕುಡಚಿ ರೈಲ್ವೆ ಮಾರ್ಗ 141 ಕಿ.ಮೀ ಉದ್ದವಿದ್ದು, ಇದರಲ್ಲಿ ಬಾಗಲಕೋಟೆ ಉಪ ವಿಭಾಗ ವ್ಯಾಪ್ತಿಯಲ್ಲಿ ಭೂಸ್ವಾಧೀನ ಪೂರ್ಣಗೊಳ್ಳುವ ಜತೆಗೆ ಮಾರ್ಗ ನಿರ್ಮಾಣ ಕೂಡ ಆಗಿದೆ. ಬಾಗಲಕೋಟೆಯಿಂದ ಖಜ್ಜಿಡೋಣಿವರೆಗೆ 33 ಕಿ.ಮೀ ಮಾರ್ಗದಲ್ಲಿ ಟ್ರೈಲ್‌ ರನ್‌ ಮಾದರಿಯಲ್ಲಿ ರೈಲ್ವೆ ಬಸ್‌ ಕೂಡ ಓಡಾಡಿದೆ.

ಇದೀಗ ಅದು ಸ್ಥಗಿತಗೊಂಡಿದ್ದು, ಗೂಡ್ಸ ರೈಲುಗಳು ನಿತ್ಯ ಎರಡು ರೇಕ್‌ ಸಾಗಿಸುತ್ತಿವೆ. ಸಿಮೆಂಟ್‌, ಸಕ್ಕರೆ, ಸುಣ್ಣದ ಕಲ್ಲು ಹೀಗೆ ವಿವಿಧ ಸರಕು-ಸಾಗಣೆ ಮಾಡುತ್ತಿದ್ದು, ಇದರಿಂದ ಇಲಾಖೆಗೆ ನಿತ್ಯವೂ 1 ಕೋಟಿ ಆದಾಯ ಬರುತ್ತಿದೆ ಎನ್ನಲಾಗಿದೆ.

ಇನ್ನೂ ಬೇಕು 814 ಎಕರೆ: ಬಾಗಲಕೋಟೆ ಉಪ ವಿಭಾಗದಲ್ಲಿ 580 ಎಕರೆ ಸ್ವಾಧೀನ ಮಾಡಿಕೊಂಡು ಮಾರ್ಗ ನಿರ್ಮಾಣ ಮಾಡಿದ್ದು, ಇದಕ್ಕಾಗಿ ಸುಮಾರು 700 ಕೋಟಿಯಷ್ಟು ಅನುದಾನ ಖರ್ಚು ಮಾಡಲಾಗಿದೆ. ಇನ್ನು ಜಮಖಂಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಒಟ್ಟು 1323 ಎಕರೆ 09 ಗುಂಟೆ ಭೂಮಿ ಅಗತ್ಯವಿದೆ. ಅದರಲ್ಲಿ 508.10 ಎಕರೆ ಸ್ವಾಧೀನ ಮಾಡಿಕೊಂಡಿದ್ದು ಇದಕ್ಕಾಗಿ 113.30 ಕೋಟಿ ಪರಿಹಾರ ರೈತರಿಗೆ ವಿತರಣೆ ಮಾಡಲಾಗಿದೆ.

ಈ ಯೋಜನೆ, ಬಾಗಲಕೋಟೆ ಜಿಲ್ಲೆಯಲ್ಲಿ ಪೂರ್ಣಗೊಳ್ಳಲು ಇನ್ನೂ 814.30 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕಿದೆ. ಈ ಪ್ರಕ್ರಿಯೆಗೆ ಹೊಸ ಭೂಸ್ವಾಧೀನ ಕಾಯಿದೆಯಡಿ ಸುಮಾರು 115 ಕೋಟಿ ಅನುದಾನದ ಅಗತ್ಯವಿದೆ. ರಾಜ್ಯ ಸರ್ಕಾರ ಈ ಅನುದಾನ ನೀಡಿದರೆ, ಭೂಸ್ವಾಧೀನ ಪ್ರಕ್ರಿಯೆ ಶೀಘ್ರವಾಗಿ ಪೂರ್ಣಗೊಳ್ಳಲಿದೆ. ಆದರೆ, ಅನುದಾನ ಕೊರತೆಯಿಂದ ಭೂಸ್ವಾಧೀನ ನಡೆಯುತ್ತಿಲ್ಲವೆಂದು ರೈಲ್ವೆ ಹೋರಾಟ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕುತುಬುದ್ದೀನ್‌ ಖಾಜಿ ಅವರ ಪ್ರಬಲ ಆರೋಪವಾಗಿದೆ.

ಪಾಳು ಬಿದ್ದ ರೈಲು ನಿಲ್ದಾಣಗಳು ಬಾಗಲಕೋಟೆ-ಕುಡಚಿ ರೈಲ್ವೆ ಮಾರ್ಗದಡಿ ಖಜ್ಜಿಡೋಣಿವರೆಗೆ ಒಟ್ಟು ಸಾವಿರಾರು ಕೋಟಿ ಖರ್ಚು ಮಾಡಿ ಐದು ರೈಲು ನಿಲ್ದಾಣ ನಿರ್ಮಾಣ ಮಾಡಲಾಗಿದೆ. ನವನಗರ, ಸೂಳಿಕೇರಿ, ಕೆರಕಲಮಟ್ಟಿ, ಶೆಲ್ಲಿಕೇರಿ ಹಾಗೂ ಖಜ್ಜಿಡೋಣಿ ರೈಲ್ವೆ ನಿಲ್ದಾಣಗಳು ಬಳಕೆ ಇಲ್ಲದೇ ಪಾಳು ಬಿದ್ದಿದ್ದು, ಕಾನೂನುಬಾಹಿರ ಚಟುವಟಿಕೆಗಳ ಕೇಂದ್ರಗಳಾಗಿ ಪರಿವರ್ತನೆಯಾಗಿವೆ. ಪ್ರತಿಯೊಂದು ರೈಲು ನಿಲ್ದಾಣದಲ್ಲಿದ್ದ ಕಟ್ಟಡಗಳು ಬಿರುಕು ಬಿಟ್ಟಿದ್ದು, ಕೆಲವೆಡೆ ಹಾಕಿರುವ ಸ್ಟೀಲ್‌ ಮತ್ತು ಕಬ್ಬಿಣದ ಸಾಮಗ್ರಿ ತುಕ್ಕು ಹಿಡಿದು ಹಾಳಾಗಿವೆ.

ಪ್ರಸ್ತುಕ ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಈ ಮಾರ್ಗಕ್ಕೆ ಕೇವಲ 50 ಕೋಟಿ ಅನುದಾನ ನೀಡುವ ಮೂಲಕ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ. ಕೇವಲ 816 ಕೋಟಿಯಲ್ಲಿ ಮುಗಿಯಬೇಕಿದ್ದ ಈ ಯೋಜನೆಗೆ ಈಗ ಕನಿಷ್ಠ 3 ಸಾವಿರ ಕೋಟಿ ಬೇಕಾಗುತ್ತದೆ. ಜಿಲ್ಲಾಡಳಿತ ಭೂಸ್ವಾಧೀನ ಪೂರ್ಣಗೊಂಡಿದೆ ಎಂದು ಹೇಳುತ್ತದೆ, ರೈಲ್ವೆ ಇಲಾಖೆ ಭೂಮಿಯೇ ಹಸ್ತಾಂತರಿಸಿಲ್ಲ ಎಂದು ಹೇಳುತ್ತಿದೆ. ಅಲ್ಲದೇ ಈ ಯೋಜನೆ ಕಳೆದ 12 ವರ್ಷಗಳಿಂದ ವಿಳಂಬವಾಗಲು ಈ ಭಾಗದ ಸಂಸದರು, ಶಾಸಕರು, ಜನಪ್ರತಿನಿಧಿಗಳ ನಿರ್ಲಕ್ಷ್ಯವೇ ಕಾರಣ. ಕೂಡಲೇ ಭೂ ಸ್ವಾಧೀನಕ್ಕೆ ಅಗತ್ಯವಾದ 115 ಕೋಟಿ ಹಣವನ್ನು ರಾಜ್ಯ ಸರ್ಕಾರ ಹಾಗೂ ಮಾರ್ಗ ನಿರ್ಮಾಣಕ್ಕೆ ಬೇಕಾದ ಅನುವಾನವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಬೇಕು. ಕುತುಬುದ್ದೀನ್‌ ಖಾಜಿ, ರಾಜ್ಯಾಧ್ಯಕ್ಷ, ರೈಲ್ವೆ ಅಭಿವೃದ್ಧಿ ಹೋರಾಟ ಸಮಿತಿ

*ಶ್ರೀಶೈಲ ಕೆ.ಬಿರಾದಾರ

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.