ಬಾಗಲಕೋಟೆ: ಜಿಲ್ಲಾ ನ್ಯಾಯಾಲಯಕ್ಕೆ 2 ಎಕರೆ ಭೂಮಿ- ದೇಶಪಾಂಡೆ

ಎಲ್‌ಐಸಿ ಕೇಸ್‌ಗಳು ಬಹಳಷ್ಟು ಇದ್ದು, ಅತಿಹೆಚ್ಚು ಪ್ರಕರಣ ಇತ್ಯರ್ಥಪಡಿಸಲಾಗಿದೆ

Team Udayavani, Jun 2, 2023, 10:15 AM IST

ಬಾಗಲಕೋಟೆ: ಜಿಲ್ಲಾ ನ್ಯಾಯಾಲಯಕ್ಕೆ 2 ಎಕರೆ ಭೂಮಿ- ದೇಶಪಾಂಡೆ

ಬಾಗಲಕೋಟೆ: ಇಲ್ಲಿನ ಬಾಗಲಕೋಟೆ ಜಿಲ್ಲಾ ನ್ಯಾಯಾಲಯ ವಿಸ್ತರಣೆಗೆ ಹೊಸ ಕಟ್ಟಡಗಳ ಅಗತ್ಯವಿದ್ದು, ಅದಕ್ಕಾಗಿ ಬಿಟಿಡಿಎದಿಂದ 2 ಎಕರೆ 13 ಗುಂಟೆ ಜಾಗೆ ಪಡೆಯಲಾಗಿದೆ. ಇದಕ್ಕೆ ಸರ್ಕಾರದಿಂದ ಅನುದಾನ ಪಡೆಯುವುದು ಮಾತ್ರ ಬಾಕಿ ಇದೆ.

ನನ್ನ ಅವಧಿಯಲ್ಲಿ ಜಿಲ್ಲಾ ನ್ಯಾಯಾಲಯಕ್ಕೆ ಭೂಮಿ ಪಡೆದಿರುವುದು ಖುಷಿ ತಂದಿದೆ. ಅಲ್ಲದೇ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸಿದ 2 ವರ್ಷಗಳ ಸೇವಾ ಅವಧಿ ತೃಪ್ತಿ ತಂದಿದೆ ಎಂದು ಸೇವಾ ನಿವೃತ್ತಿ ಹೊಂದಿದ ಪ್ರಧಾನ ಜಿಲ್ಲಾ ಮತ್ತು ಸತ್ಯ ನ್ಯಾಯಾಧೀಶ ಜಿ.ಎಸ್‌. ದೇಶಪಾಂಡೆ ಹೇಳಿದರು.

ನವನಗರದ ಜಿಲ್ಲಾ ನ್ಯಾಯಾಲಯದಲ್ಲಿ ವಕೀಲರ ಸಂಘದಿಂದ ಹಮ್ಮಿಕೊಂಡಿದ್ದ ಸನ್ಮಾನ, ಬೀಳ್ಕೊಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ 2 ವರ್ಷ 2 ತಿಂಗಳುಗಳ ಕಾಲ ಸೇವೆ ಸಲ್ಲಿಸಿದ್ದೇನೆ. ನಮ್ಮ ತಂದೆ ಪ್ರಾಥಮಿಕ ಶಾಲಾ ಶಿಕ್ಷಣರಾಗಿದ್ದರು. ಮೂಲತಃ ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿ ಕನ್ನಡ ಮಾಧ್ಯಮದಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣ ಮುಗಿಸಿದ್ದು, ಉನ್ನತ ಶಿಕ್ಷಣಕ್ಕಾಗಿ ಬೆಂಗಳೂರಿಗೆ ಹೋಗಿರುವುದಾಗಿ ತಿಳಿಸಿದರು.

ಬೆಂಗಳೂರಿನಲ್ಲಿ ಎಲ್‌ಎಲ್‌ಬಿ ವಿದ್ಯಾರ್ಥಿ ಆಗಿರುವಾಗಲೇ ಕೋರ್ಟನಲ್ಲಿ ವಕೀಲರು ವಾದ ಮಂಡನೆ ಮಾಡುವುದನ್ನು ಕೇಳುತ್ತಿದ್ದೆ. ನಂತರ ಜ್ಯೂನಿಯರ್‌ ವಕೀಲರಾಗಿ ಕೆಲಸ ಮಾಡಿರುವುದಾಗಿ ತಿಳಿಸಿದರು.

ಕೋರ್ಟ್‌ನಲ್ಲಿ ಕೇಸ್‌ಗಳಿಗೆ ಒಳ್ಳೆಯ ತೀರ್ಪು ನೀಡಬೇಕಾದರೆ ವಕೀಲರ ಪಾತ್ರ ಮುಖ್ಯವಾಗಿರುತ್ತದೆ. ಬಾಗಲಕೋಟೆ ಜಿಲ್ಲೆಗೆ
ಆಗಮಿಸಿದಾಗ ಎಲ್‌ಐಸಿ ಕೇಸ್‌ಗಳು ಬಹಳಷ್ಟು ಇದ್ದು, ಅತಿಹೆಚ್ಚು ಪ್ರಕರಣ ಇತ್ಯರ್ಥಪಡಿಸಲಾಗಿದೆ ಎಂದರು.

ನಮ್ಮ ಅಧಿಕಾರದ ಅವಧಿಯಲ್ಲಿ ಜಿಲ್ಲಾ ನ್ಯಾಯಾಲಯಕ್ಕೆ 2.13 ಎಕರೆ ಜಾಗವನ್ನು ಬಿಟಿಡಿಎದಿಂದ ಪಡೆಯಲಾಗಿದೆ. ಕೋರ್ಟ್‌
ಆವರಣದಲ್ಲಿ ಹೆಚ್ಚುವರಿ ಕಟ್ಟಡ ನಿರ್ಮಾಣಕ್ಕೆ ಅನುಮತಿ ಪಡೆಯಲಾಗಿದ್ದು, ಅನುದಾನ ಬರುವುದಷ್ಟೇ ಬಾಕಿ ಇರುತ್ತದೆ. ಉತ್ತಮವಾಗಿ ಸೇವೆ ಮಾಡಲು ಎಲ್ಲ ವಕೀಲರು ಸಹಕಾರ ನೀಡಿದ್ದು, ಅವರಿಗೆ ಧನ್ಯವಾದ ತಿಳಿಸಿದರು.

ನೂತನವಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಅಧಿಕಾರ ವಹಿಸಿಕೊಂಡಿರುವ ವಿಜಯ ನೇರಳೆ ಮಾತನಾಡಿ, ಈಗಾಗಲೇ ಮೂರು ಜಿಲ್ಲೆಗಳಲ್ಲಿ ಸೇವೆ ಸಲ್ಲಿಸಿ ಬಾಗಲಕೋಟೆಗೆ ಬಂದಿದ್ದು, ಹಿಂದೆ ನೀಡಿದ ಸಹಕಾರವನ್ನು ತಮಗೂ ನೀಡಲು
ತಿಳಿಸಿದರು.

ಹೆಚ್ಚುವರಿ ಪ್ರಧಾನ ಜಿಲ್ಲಾ ನ್ಯಾಯಾಧೀಶ ಜಿ.ಎ. ಮೂಲಿಮನಿ, 1ನೇ ಹೆಚ್ಚುವರಿ ಹಿರಿಯ ದಿವಾನಿ ನ್ಯಾಯಾದೀಶೆ ಹೇಮಾ ಪಸ್ತಾಪುರ, 2ನೇ ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಧೀಶ ಮಹೇಶ ಪಾಟೀಲ, ದಿವಾಣಿ ನ್ಯಾಯಾಧೀಶ ಮುರುಗೇಂದ್ರ ಮಾತನಾಡಿದರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ವಿ.ಪಿ.ಪೂಜಾರ, ಸೇರಿದಂತೆ ಜಿಲ್ಲಾ ನ್ಯಾಯಾಲಯದ
ನ್ಯಾಯಾದೀಶರು, ವಕೀಲರು ಉಪಸ್ಥಿತರಿದ್ದರು. ಕುಂಬಾರ ವಕೀಲರು ಪರಿಚಯಿಸಿದರು. ವಕೀಲರ ಸಂಘದ ಕಾರ್ಯದರ್ಶಿ ಹಾವರಗಿ ಸ್ವಾಗತಿಸಿದರು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.