ಕೋವಿಡ್ ಪತ್ತೆಗೆ ಪಿಸಿಆರ್‌ ಯಂತ್ರ ನೀಡಿದ ವೈದ್ಯ

Team Udayavani, Apr 13, 2020, 1:32 PM IST

13-April-15

ಬಾಗಲಕೋಟೆ: ನಗರದ ಖಾಸಗಿ ವೈದ್ಯ ಡಾ| ಅರುಣ ಮಿಷ್ಕಿನ್‌ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ| ಪ್ರಕಾಶ ಬಿರಾದಾರ ಅವರಿಗೆ ಪಿಸಿಆರ್‌ ಯಂತ್ರ ಹಸ್ತಾಂತರಿಸಿದರು.

ಬಾಗಲಕೋಟೆ: ಜಿಲ್ಲೆಯಲ್ಲಿಯೇ ಕೋವಿಡ್ ವೈರಸ್‌ ಪತ್ತೆಗಾಗಿ ನಗರದ ಖಾಸಗಿ ವೈದ್ಯರೊಬ್ಬರು ತಮ್ಮ ಆಸ್ಪತ್ರೆಯ ಪಿಸಿಆರ್‌ ಯಂತ್ರವನ್ನು ಜಿಲ್ಲಾಡಳಿತಕ್ಕೆ ತಾತ್ಕಾಲಿಕವಾಗಿ ದೇಣಿಗೆ ನೀಡಿದ್ದಾರೆ.

ನಗರದ ಮಿಸ್ಕಿನ್‌ ಲ್ಯಾಬ್‌ನ ಮುಖ್ಯಸ್ಥ ಡಾ| ಅರುಣ ಮಿಷ್ಕಿನ್‌ ಅವರು ತಮ್ಮ ಲ್ಯಾಬ್‌ನಲ್ಲಿದ್ದ 7.50 ಲಕ್ಷ ಮೊತ್ತದ ಪಿಸಿಆರ್‌ (ಪ್ರಾಥಮಿಕ ರೋಗ ಪತ್ತೆ ಯಂತ್ರ) ಮಸೀನ್‌ ಅನ್ನು ಡಿಸಿಎಂ ಗೋವಿಂದ ಕಾರಜೋಳ ಸಮ್ಮುಖದಲ್ಲಿ ರವಿವಾರ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ| ಪ್ರಕಾಶ ಬಿರಾದಾರ ಅವರಿಗೆ ಹಸ್ತಾಂತರಿಸಿದರು.

ಕೋವಿಡ್ ವೈರಸ್‌ ಪತ್ತೆ ಮಾಡಲು ಶಂಕಿತರ ಗಂಟಲು ದ್ರವ ಪರೀಕ್ಷೆಗೆ ಈ ಯಂತ್ರ ಬಳಸಲಾಗುತ್ತದೆ. ಈ ಪಿಸಿಆರ್‌ ಯಂತ್ರವನ್ನು ಟಿಬಿ ರೋಗಿಗಳಿಗಾಗಿ ಉಪಯೋಗಿಸಲಾಗುತ್ತಿತ್ತು. ಸಧ್ಯ ಇದನ್ನು ಜಿಲ್ಲಾ ಆಸ್ಪತ್ರೆಯಲ್ಲಿ ಶಂಕಿತರ ಗಂಟಲು ದ್ರವ ಮಾದರಿ ಪರೀಕ್ಷೆ ಮಾಡಿ, ನಗೆಟಿವ್‌ ಬಂದರೆ ಮುಂದಿನ ಪರೀಕ್ಷೆ ಮಾಡುವುದಿಲ್ಲ. ಒಂದು ವೇಳೆ ಸ್ಥಳೀಯ ಪರೀಕ್ಷೆಯಲ್ಲಿ ಪಾಜಿಟಿವ್‌ ಕಂಡು ಬಂದರೆ, ಮತ್ತೂಮ್ಮೆ ಪರೀಕ್ಷೆಗೆ ಶಂಕಿತರ ಗಂಟಲು ದ್ರವ ಬೆಂಗಳೂರಿಗೆ ಕಳುಹಿಸಲಾಗುತ್ತದೆ.

ಪ್ರತಿದಿನ ಜಿಲ್ಲಾ ಆರೋಗ್ಯ ಇಲಾಖೆಯ ನಾಲ್ಕು ವಾಹನಗಳು, ಶಂಕಿತರ ಗಂಟಲು ದ್ರವ ಮಾದರಿಯನ್ನು ವಾಹನದಲ್ಲಿ ತೆಗೆದುಕೊಂಡು ಬೆಂಗಳೂರಿಗೆ ಹೋಗುತ್ತಿದ್ದವು. ಈ ಯಂತ್ರವನ್ನು ತಾತ್ಕಾಲಿಕ ದೇಣಿಗೆ ನೀಡಿದ್ದರಿಂದ ಸ್ಥಳೀಯವಾಗಿಯೇ ತಪಾಸಣೆಗೆ ಅನುಕೂಲವಾಗಲಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದರು.

ತಾತ್ಕಾಲಿಕ ದೇಣಿಗೆ: ನಮ್ಮ ಲ್ಯಾಬ್‌ನಲ್ಲಿ ಟಿಬಿ ರೋಗ ಪತ್ತೆಗೆ ಈ ಯಂತ್ರ ಬಳಸುತ್ತಿದ್ದೇವು. ಸದ್ಯ ಕೋವಿಡ್ ವೈರಸ್‌ ಎಲ್ಲೆಡೆ ಹಬ್ಬುತ್ತಿದ್ದು, ಸ್ಥಳೀಯವಾಗಿ ರೋಗ ಪತ್ತೆಗೆ ಲ್ಯಾಬ್‌ ಅಥವಾ ಯಂತ್ರವಿಲ್ಲ. ಇದು ರೋಗಿಗಳ ತಪಾಸಣೆಗೆ ಸಹಕಾರಿಯಾಗಲಿದೆ. ಕೊರೊನಾ ಭೀತಿ ದಿನಗಳು ಮುಗಿಯುವವರೆಗೂ ಈ ಯಂತ್ರವನ್ನು ಜಿಲ್ಲಾಡಳಿತಕ್ಕೆ ನೀಡಿರುವುದಾಗಿ ಡಾ| ಅರುಣ ಮಿಸ್ಕಿನ್‌ ಉದಯವಾಣಿಗೆ ತಿಳಿಸಿದರು.

ಕಿಟ್‌ ಬಂದ ಬಳಿಕ ಪರೀಕ್ಷೆ: ಖಾಸಗಿ ವೈದ್ಯರು ನೀಡಿರುವ ಪಿಸಿಆರ್‌ ಯಂತ್ರದಿಂದ ಶಂಕಿತ ರೋಗಿಯ ಗಂಟಲು ದ್ರವ ಸ್ಥಳೀಯವಾಗಿ ತಪಾಸಣೆ ಮಾಡಲು ಸಹಕಾರಿಯಾಗುತ್ತದೆ. ಆದರೆ, ಇದಕ್ಕೆ ಪ್ರತ್ಯೇಕ ಕಿಟ್‌ಗಳು ಬೇಕಾಗುತ್ತದೆ. ರಾಜ್ಯ ಸರ್ಕಾರ, ಎಲ್ಲ ಜಿಲ್ಲೆಗಳಿಗೂ ಕೋವಿಡ್ ರೋಗ ಪತ್ತೆಯ ಪ್ರತ್ಯೇಕ ಕಿಟ್‌ ಜಿಲ್ಲೆಗೆ ಕಳುಹಿಸಲಿದ್ದು, ಆ ಬಳಿಕ ಈ ಯಂತ್ರದ ಮೂಲಕ ಕೊರೊನಾ ಪರೀಕ್ಷೆ ನಡೆಸಲಾಗುವುದು ಎಂದು ಡಿಎಚ್‌ಒ ಡಾ| ಅನಂತ ದೇಸಾಯಿ ತಿಳಿಸಿದರು.

ಟಾಪ್ ನ್ಯೂಸ್

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.