ಬಾಗಲಕೋಟೆ: ಬರಿದಾಗುತ್ತಿದೆ ಕೃಷ್ಣೆ; ಭೀಕರ ಬರದ ಆತಂಕ


Team Udayavani, Mar 18, 2024, 6:11 PM IST

ಬಾಗಲಕೋಟೆ: ಬರಿದಾಗುತ್ತಿದೆ ಕೃಷ್ಣೆ; ಭೀಕರ ಬರದ ಆತಂಕ

ಉದಯವಾಣಿ ಸಮಾಚಾರ
ರಬಕವಿ-ಬನಹಟ್ಟಿ: ತಾಲೂಕಿಗೆ ಕೃಷಾ ನದಿ ಹಾಗೂ ಘಟಪ್ರಭಾ ನದಿ ಪ್ರಮುಖ ನೀರಿನ ಜಲ ಮೂಲಗಳಾಗಿದ್ದು, ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಇಳಿಮುಖವಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿ ಮಾಡಿದೆ. ಈ ಭಾಗದ ಜಮಖಂಡಿ ರಬಕವಿ, ಬನಹಟ್ಟಿ, ತೇರದಾಳ, ಹಾರುಗೇರಿ ಅಥಣಿ ಹಾಗೂ ಬೆಳಗಾವಿ ಬಾಗಲಕೋಟೆ ಜಿಲ್ಲೆಯ ಪ್ರಮುಖ ನಗರ ಹಾಗೂ
ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಹಾಹಾಕಾರ ಆರಂಭವಾಗುವ ಸಂಭವವಿದೆ.

ಏಪ್ರಿಲ್‌ ಎರಡನೇ ವಾರದವೆಗೆ ನೀರು ಸಾಕಾಗಬಹುದು  ಎಂಬುದು ಅಧಿಕಾರಿಗಳ ಅಂಬೋಣ. ಅಲ್ಲದೇ ಬಿಸಿಲಿನ ತಾಪಮಾನ, ನೀರಿನ ಮಟ್ಟದಲ್ಲಿ ಕುಸಿತ, ಸರಿಯಾದ ಮಳೆಯಾಗದಿರುವ ಹಿನ್ನೆಲೆಯಲ್ಲಿ ಮುಂದಿನ ಎರಡುವರೆ ತಿಂಗಳುಗಳ ಕಾಲ ನೀರಿನ
ಸಮಸ್ಯೆ ಉಲ್ಬಣವಾಗುವ ಸಾಧ್ಯತೆ ಹೆಚ್ಚಾಗಿದೆ. ಜಲಮೂಲಗಳಾದ ಕೆರೆ, ಕೊಳವೆಬಾವಿ, ಬೋರ್‌ ವೆಲ್‌ಗ‌ಳು ಬತ್ತುವ ಆತಂಕ ಎದುರಾಗಿದೆ.

ತಾಲೂಕಿನ ಹಿಪ್ಪರಗಿ ಜಲಾಶಯ ಒಟ್ಟು 6ಟಿಎಂಸಿ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಸದ್ಯ2.03 ಟಿಎಂಸಿ ನೀರು
ಮಾತ್ರ ಸಂಗ್ರಹವಿದ್ದು, ಅಧಿಕಾರಿಗಳ ಪ್ರಕಾರ ಪ್ರತಿ ತಿಂಗಳಿಗೆ 1 ಟಿಎಂಸಿಯಷ್ಟು ನೀರು  ಹಿಪ್ಪರಗಿ ಜಲಾಶಯದಿಂದ ಬಳಕೆಯಾಗುತ್ತಿದೆ. ಆದರೆ ಬಿಸಿಲಿನ ತಾಪಮಾನ ಹಾಗೂ ಜಲಾಶಯದ ಮುಂದಿನ ಭಾಗಕ್ಕೆ ಕುಡಿಯುವ ನೀರು ಹಾಗೂ ಜನ ಜಾನುವಾರುಗಳಿಗೆ ನೀರು ಒದಗಿಸಬೇಕಾಗುವ ಕಾರಣ 2 ಟಿಂಸಿ ಒಂದು ತಿಂಗಳಿಗೂ ಸಾಲುವುದಿಲ್ಲ. ಹಿಪ್ಪರಗಿ ಜಲಾಶಯದ ಮುಂಭಾಗ ಸಂಪೂರ್ಣವಾಗಿ ಖಾಲಿಯಾಗಿರುವುದರಿಂದ ಭೀಕರ ಜಲಕ್ಷಾಮದ ಭೀತಿ ಎದುರಾಗಿದೆ.

ತಾಲೂಕಿನ ಅವಳಿ ನಗರಗಳಲ್ಲಿ ಉಂಟಾಗುತಿದ್ದ ನೀರಿನ ಭವಣೆ ಸದ್ಯಕ್ಕೆ ಕಂಡುಬರುತ್ತಿಲ್ಲ. ಆದರೂ ಮುಂದಿನ
ದಿನಮಾನಗಳಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ. ನಗರದ ಎಲ್ಲ ವಾರ್ಡ್‌ಗಳಲ್ಲಿ ನಗರಸಭೆ ವತಿಯಿಂದ ಕೃಷ್ಣಾ ನದಿಯಿಂದ ಜಾಕ್‌ವೆಲ್‌ ಮೂಲಕ ನೀರಿನ ವ್ಯವಸ್ಥೆ ಮಾಡುತ್ತಿದ್ದು, ಅಲ್ಲದೇ ಪ್ರತಿ ವಾರ್ಡ್‌ಗಳಲ್ಲಿ ಕೊಳವೆ ಬಾವಿ ಕೊರೆಸಿದ್ದು ಅವುಗಳ ಮೂಲಕ ನೀರು ಪೂರೈಸುವ ಸಲುವಾಗಿ ಅಗತ್ಯ ಕ್ರಮ ತೆಗೆದುಕೊಂಡಿದೆ. ಅಲ್ಲದೇ ನಗರಸಭೆ ವ್ಯಾಪ್ತಿಯ 85 ಖಾಸಗಿ ಕೊಳವೆ ಬಾವಿ ಗುರುತಿಸಲಾಗಿದೆ. ಆ ಕೊಳವೆ ಬಾವಿಗಳ ಮಾಲೀಕರೊಂದಿಗೆ ಒಡಂಬಡಿಕೆ ಮಾಡಿಕೊಂಡು ನೀರು ಪೂರೈಸಿದ ಕೊಳವೆ ಬಾವಿಗಳ ಮಾಲೀಕರ ವಿದ್ಯುತ್‌ ಬಿಲ್‌ ನ್ನು ನಗರಸಭೆಯಿಂದ ಪಾವತಿಸಿ ಬೇಸಿಗೆ ನಿಭಾಯಿಸಲು ಅಧಿಕಾರಿಗಳು ಸಿದ್ಧತೆ
ಮಾಡಿಕೊಂಡಿದ್ದಾರೆ.

ತೇರದಾಳ ಹಾಗೂ ಮಹಾಲಿಂಗಪುರ ಪುರಸಭೆ ಬರ ಎದುರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ತೆಗೆದುಕೊಳ್ಳಬೇಕಾಗಿದೆ. ಗ್ರಾಮೀಣ
ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದ್ದು, ಆ ನಿಟ್ಟಿನಲ್ಲಿ ಕೊಳವೆ ಬಾವಿ, ಕೆರೆ ಇತರೆ ಸಂಪನ್ಮೂಲ ಬಳಸಿಕೊಂಡು ನೀರಿನ ವ್ಯವಸ್ಥೆ ಮಾಡಲು ತಾಲೂಕು ಆಡಳಿತ ಸಿದ್ಧತೆ ಮಾಡಿಕೊಂಡಿದೆ

ರಬಕವಿ ಬನಹಟ್ಟಿ ನಗರಸಭೆಯ ವ್ಯಾಪ್ತಿಯಲ್ಲಿ ಈಗಾಗಲೇ 338 ಕೊಳವೆ ಬಾವಿಗಳಿವೆ. ಅದರಲ್ಲಿ 326 ಕಾರ್ಯ ಮಾಡುತ್ತಿವೆ. ಉಳಿದ ಕೊಳವೆ ಬಾವಿಗಳ ದುರಸ್ತಿ ಕಾರ್ಯ ಕೈಗೊಳ್ಳಲಾಗುವುದು. 13 ತೆರೆದ ಬಾವಿಗಳು ಇದ್ದು, ಅವುಗಳನ್ನು ಕೂಡಾ ಸ್ವತ್ಛಗೊಳಿಸಿ ನೀರು ಪೂರೈಕೆಗೆ ಬಳಸಿಕೊಳ್ಳಲಾಗುವುದು ಮತ್ತು 85 ಖಾಸಗಿ ಕೊಳವೆ ಬಾವಿ ಗುರುತಿಸಲಾಗಿದೆ.ಕೊಳವೆ ಬಾವಿಗಳ ಮಾಲೀಕರೊಂದಿಗೆ ಒಡಂಬಡಿಕೆ ಮಾಡಿಕೊಂಡು ನೀರು ಪೂರೈಸಿದ ಕೊಳವೆ ಬಾವಿಗಳ ಮಾಲೀಕರ ವಿದ್ಯುತ್‌ ಬಿಲ್‌ನ್ನು ನಗರಸಭೆಯಿಂದ ಪಾವತಿಸಲಾಗುವುದು.
*ಜಗದೀಶ ಈಟಿ, ಪೌರಾಯುಕ್ತರು, ನಗರಸಭೆ, ರಬಕವಿ-ಬನಹಟ್ಟಿ

ತಾಲೂಕಿನಲ್ಲಿ ಸದ್ಯ ಸುಮಾರು ಒಂದುವರೆ ತಿಂಗಳ ಕಾಲ ನೀರಿನ ಸಮಸ್ಯೆ ಇಲ್ಲ., ಈ ಕುರಿತು ನದಿ ನೀರು ಬತ್ತಿ ಸಮಸ್ಯೆ ಆಗುವ ಮೊದಲು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗುವುದು. ಆ ನಿಟ್ಟಿನಲ್ಲಿ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲು ಈಗಾಗಲೇ ಟೆಂಡರ್‌ ಕರೆಯಲಾಗಿದೆ. ಎಲ್ಲಿ ಸಮಸ್ಯೆ ಆಗುತ್ತದೆಯೋ ಅಲ್ಲಲ್ಲಿ ನಿವಾರಣೆಗೆ ತಾಲೂಕು ಆಡಳಿತ ಸಜ್ಜಾಗಿದೆ.
*ಗಿರೀಶ ಸ್ವಾದಿ ತಹಶೀಲ್ದಾರ್‌,
ರಬಕವಿ-ಬನಹಟ್ಟಿ

ಬರ ಎದುರಿಸುವ ನಿಟ್ಟಿನಲ್ಲಿ ಈಗಾಲೇ ಟಾಸ್ಕ್ ಪೋರ್ಸ್‌ ಸಮಿತಿ ಸಭೆ ನಡೆದಿದ್ದು, ಯಾವ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇದುರಾಗುತ್ತದೆ ಎಂಬುದರ ಬಗ್ಗೆ ಪಟ್ಟಿ ಮಾಡಲಾಗಿದೆ. ಮೊದಲು ಬೋರವೆಲ್‌ಗ‌ಳ ಮೂಲಕ ನೀರು ಪೂರೈಕೆಗೆ ಕ್ರಮ ತೆಗೆದುಕೊಳ್ಳುತ್ತೇವೆ. ಬರ ಪರಸ್ಥಿತಿ ಹೆಚ್ಚಾದಲ್ಲಿ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಲು ಸಿದ್ಧರಿದ್ದು, ಈ ಕುರಿತು ಟೆಂಡರ್‌
ಕರೆಯಲಾಗಿದೆ. ಒಟ್ಟಾರೆ ಈ ಕುರಿತು ಅಗತ್ಯ ಕ್ರಮ ತೆಗೆದುಕೊಂಡು, ನೀರಿನ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳುತ್ತೇವೆ.
*ಸಿದ್ದಪ್ಪ ಪಟ್ಟಿಹಾಳ, ಕಾರ್ಯನಿರ್ವಹಣಾಧಿಕಾರಿ, ತಾಪಂ, ರಬಕವಿ-ಬನಹಟ್ಟಿ

*ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.