ಗಿಡಗಂಟಿ ಹಚ್ಚಿ ವ್ಯಕ್ತಿಯಿಂದ ರಸ್ತೆ ಬಂದ್‌

Team Udayavani, Jan 6, 2019, 9:37 AM IST

6-january-16.jpg

ಬನಹಟ್ಟಿ: ಖಾಸಗಿ ಜಾಗೆಯಲ್ಲಿ ಮನೆಗಳನ್ನು ನಿರ್ಮಿಸಿದ್ದಾರೆಂದು ಆಕ್ರೋಶಗೊಂಡು ಆಶ್ರಯ ಮನೆಗಳಿಗೆ ತೆರಳುವ ರಸ್ತೆ ಮಧ್ಯ ಗಿಡಗಂಟಿಗಳನ್ನು ಹಚ್ಚಿದರ ಪರಿಣಾಮ 50ಕ್ಕೂ ಅಧಿಕ ಕುಟುಂಬಗಳ ಸಂಚಾರಕ್ಕೆ ತೊಂದರೆ ಉಂಟಾದ ಘಟನೆ ಜಗದಾಳ ಗ್ರಾಮದಲ್ಲಿ ನಡೆದಿದೆ.

ರಬಕವಿ-ಬನಹಟ್ಟಿ ತಾಲೂಕಿನ ಜಗದಾಳ ಗ್ರಾಮದ ದುರ್ಗಾದೇವಿ ಆಶ್ರಯ ಮನೆಗಳನ್ನು ಸ್ಥಳೀಯ ಗ್ರಾಮ ಪಂಚಾಯತ 1998 ರ ಅವಧಿಯಲ್ಲಿಯೇ ನಿರ್ಮಾಣ ಮಾಡಿತ್ತು. 200 ಮನೆಗಳನ್ನು ನಿರ್ಮಿಸಿರುವ ಗ್ರಾಮ ಪಂಚಾಯ್ತಿಯು 50 ಕ್ಕೂ ಅಧಿಕ ಮನೆಗಳನ್ನು ಖಾಸಗಿ ಭೂಮಿಯನ್ನು ಕಬಳಿಸಿ ನಿರ್ಮಿಸಿದ್ದಾರೆಂದು ಹೊಸೂರ(ಹಳೆಮನಿ) ಕುಟುಂಬವು ಆರೋಪ ಮಾಡುತ್ತಲೇ ಬಂದಿತ್ತು. ಶನಿವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ದಿಢೀರನೆ ರಸ್ತೆ ಮಧ್ಯ ಬೇಲಿ, ಗಿಡಗಂಟಿಗಳನ್ನು ಹಾಕುವ ಮೂಲಕ ಅಲ್ಲಿನ 50 ಕುಟುಂಬಗಳಿಗೆ ಸಂಚಾರ ಸಂಪೂರ್ಣ ಬಂದ್‌ ಆಗಿತ್ತು.

ಕೆಲ ರೋಗಿಗಳು ಚಿಕಿತ್ಸೆಗೆಂದು ತೆರಳಲು ತೀವ್ರ ಪರದಾಡಿದರೆ, ಮಹಿಳೆಯರು ಮಕ್ಕಳು ಸೇರಿದಂತೆ ನೂರಾರು ಜನರು ಶೌಚಕ್ಕೂ ಸಹಿತ ಹೋಗಿಲ್ಲ. ದಿನಂಪ್ರತಿ ಉದ್ಯೋಗಕ್ಕೆ ಹೋಗದಿದ್ದರೆ ಕುಟುಂಬ ನಿರ್ವಹಣೆ ತೊಂದರೆ ಕಾರಣ ಯಾರೂ ಉದ್ಯೋಗಕ್ಕೆ ತೆರಳದೆ ರಸ್ತೆ ಮನೆಯಲ್ಲಿಯೇ ಖಾಲಿ ಕುಳಿತುಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿತ್ತು. ಬಹುತೇಕ ಗೃಹ ಬಂಧನದಂತೆ ಅಲ್ಲಿ ಭಾಸವಾಗುತ್ತಿತ್ತು.

ಸಂಜೆ ಸ್ಥಳಕ್ಕೆ ಆಗಮಿಸಿದ ಜಗದಾಳ ಅಭಿವೃದ್ಧಿ ಅಧಿಕಾರಿ ಬಸವರಾಜ ಮುನವಳ್ಳಿ ಪರಿಶೀಲನೆ ನಡೆಸಿ ರಸ್ತೆ ಸಂಚಾರಕ್ಕೆ ಹಾಕಿದ್ದ ಬೇಲಿ ತೆಗೆಸುವುದಾಗಿ ಭರವಸೆ ನೀಡಿದರಾದರೂ ಬೇಲಿ ಇನ್ನೂ ತೆಗೆಯದ ಕಾರಣ ಅಲ್ಲಿನ ಕುಟುಂಬಗಳು ಮಾತ್ರ ಹೊರಬರದಂತ ಸ್ಥಿತಿ ಎದುರಾಗಿದೆ.

ಯಾವುದೇ ಸಮಸ್ಯೆಯಿದ್ದರೂ ಕಾನೂನಿನ ಮೂಲಕ ಪರಿಹಾರ ಕಾಣಬೇಕು. ಬದಲಾಗಿ ಸಾರ್ವಜನಿಕರಿಗೆ ತೊಂದರೆ ಕೊಡುವಂತ ಕಾರ್ಯದಲ್ಲಿ ತೊಡಗಿದರೆ ಅಂಥವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಮುನವಳ್ಳಿ ಹೇಳಿದರು.

ಬೇಜವಾಬ್ದಾರಿಯಾಗಿ ಕಾನೂನು ಮೀರಿ ಮಾಡಿರುವ ಕೆಲಸ. ರಸ್ತೆ ಮೇಲೆ ಗಿಡಗಂಟಿ ಹಚ್ಚಿ ರಸ್ತೆ ಬಂದ್‌ ಮಾಡಿರುವುದು ಅಮಾನವೀಯ ಕೆಲಸ. ಅವರ ಸಮಸ್ಯೆ ಏನಿದ್ದರೂ ಸಂಬಂಧಿಸಿದ ಇಲಾಖೆಗಳಿಗೆ ತಿಳಿಸಲು ಅದನ್ನು ಬಿಟ್ಟು ಬಡಕುಟುಂಬಗಳಿಗೆ ತೊಂದರೆ ಕೊಡುವುದು ತಪ್ಪು.
. ಬಸವರಾಜ ಮುನವಳ್ಳಿ, 
ಅಭಿವೃದ್ಧಿ ಅಧಿಕಾರಿ, ಗ್ರಾಪಂ ಜಗದಾಳ 

‘ಕಾರಣವಿಲ್ಲದೆ ಒಮ್ಮೆಲೆ ರಸ್ತೆ ಮೇಲೆ ಗಿಡಗಂಟಿ ಹಚ್ಚಿ, ರಸ್ತೆ ಬಂದ್‌ ಮಾಡಿದ್ದಾರೆ. ಸುಮಾರು 10 ಗಂಟೆಗಳ ಕಾಲ ನಾವು ಬಂಧನದಲ್ಲಿದ್ದಂತಾಗಿತ್ತು.
. ಮಲ್ಲಿಕಾರ್ಜುನ ಮಾಳಿ

ಟಾಪ್ ನ್ಯೂಸ್

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.