ಒಂದೇ ದಿನ ಮೂರು ಕೆರೆ ತುಂಬಿಸಲು ಆರಂಭ

•ಮುಚಖಂಡಿ ಕೆರೆ-ಶಿರೂರಿನ ಜೋಡಿ ಕೆರೆಗೆ ಹಿನ್ನೀರು•ಮೂರು ತಿಂಗಳಲ್ಲಿ ತುಂಬಿಸುವ ಗುರಿ

Team Udayavani, Jul 17, 2019, 9:51 AM IST

bk-tdy-1..

ಬಾಗಲಕೋಟೆ: ಐತಿಹಾಸಿಕ ಮುಚಖಂಡಿ ಕೆರೆ ತುಂಬಿಸುವ ಕಾರ್ಯ ಆರಂಭಿಸಲಾಗಿದ್ದು, ಆಲಮಟ್ಟಿ ಜಲಾಶಯದ ಹಿನ್ನೀರು ಕೆರೆ ಸೇರುತ್ತಿದೆ.

ಬಾಗಲಕೋಟೆ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಕೃಷ್ಣೆಗೆ ಅಪಾರ ನೀರು ಹರಿದು ಬರುತ್ತಿದ್ದು, ಆಲಮಟ್ಟಿ ಜಲಾಶಯದ ಹಿನ್ನೀರು ಏರುತ್ತಿದೆ. ಹಿನ್ನೀರನ್ನು ಕೆರೆಗಳಿಗೆ ತುಂಬಿಸಲು ಸಣ್ಣ ನೀರಾವರಿ ಇಲಾಖೆ ಮಂಗಳವಾರದಿಂದ ಆರಂಭಿಸಿದೆ.

ನಗರ ಹೊರವಲಯದ ಐತಿಹಾಸಿಕ ಮುಚಖಂಡಿ ಕೆರೆಗೆ ನಿತ್ಯ 250 ಎಚ್ಪಿ ಸಾಮರ್ಥ್ಯದ 2 ಪಂಪಸೆಟ್‌ಗಳಿಂದ ಹಿನ್ನೀರು ಪಂಪಿಂಗ್‌ ಮಾಡಿ, 4.5 ಕಿ.ಮೀ ದೂರದ ಮುಚಖಂಡಿ ಕೆರೆಗೆ ತುಂಬಿಸಲಾಗುತ್ತಿದೆ. ಕಾರ್ಯಕ್ಕೆ ಎಪಿಎಂಸಿ ಮಾಜಿ ಅಧ್ಯಕ್ಷ ಪ್ರಭುಸ್ವಾಮಿ ಸರಗಣಾಚಾರಿ ಜಾಕ್‌ವೆಲ್ನಲ್ಲಿ ವಿದ್ಯುತ್‌ ಪಂಪಸೆಟ್‌ಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.

ಒಟ್ಟು 721 ಎಕರೆ ವಿಸ್ತಾರ ಹೊಂದಿರುವ, 480 ಹೆಕ್ಟೇರ್‌ ಭೂಮಿಗೆ ನೀರಾವರಿ ಒದಗಿಸುವ ಮುಚಖಂಡಿ ಕೆರೆ, 1882ರಲ್ಲಿ ಬ್ರಿಟಿರು ನಿರ್ಮಿಸಿದ್ದಾರೆ. ಈ ಕೆರೆ ತುಂಬಿಸಲು 2015-16ನೇ ಸಾಲಿನಲ್ಲಿ 12.40 ಕೋಟಿ ವೆಚ್ಚದ ಯೋಜನೆಗೆ ಸರ್ಕಾರ ಅನುಮೋದನೆ ನೀಡಿತ್ತು. ಕಾಮಗಾರಿ ಪೂರ್ಣಗೊಂಡು, ಕೆರೆ ತುಂಬಿಸಲು 2017ರಲ್ಲಿ ಆರಂಭಿಸಲಾಗಿತ್ತು.

ಎರಡು ವರ್ಷಗಳಿಂದ ಕೆರೆ ತುಂಬಿಸಲು ಆರಂಭಿಸಿದರೂ ಕೆರೆಯಲ್ಲಿನ ಅತಿಯಾದ ಹೂಳು, ಸಮರ್ಪಕ ನಿರ್ವಹಣೆಯ ಕೊರತೆಯಿಂದ ಒಂದು ಬಾರಿಯೂ ಕೆರೆ ಪೂರ್ಣ ತುಂಬಿಸಲು ಆಗಿಲ್ಲ. 58 ಎಂಸಿಎಫ್‌ಟಿ (ಅರ್ಧ ಟಿಎಂಸಿ ಅಡಿ) ನೀರು ಸಂಗ್ರಹ ಸಾಮರ್ಥ್ಯ ಮುಚಖಂಡಿ ಕೆರೆ ಹೊಂದಿದ್ದು, ಕೃತಕವಾಗಿ ನೀರು ತುಂಬಿಸುವ ಪ್ರಯತ್ನ ಅಷ್ಟು ಸುಲಭವಾಗಿ ಫಲಿಸಲ್ಲ ಎಂಬ ಮಾತು ಹಲವರಿಂದ ಕೇಳಿ ಬಂದಿದೆ. ಆದರೆ, ಕನಿಷ್ಠ ಪಕ್ಷ 12.40 ಕೋಟಿ ಖರ್ಚು ಮಾಡಿ, ಅರ್ಧ ಮಟ್ಟಿಗಾದರೂ ಕೆರೆ ತುಂಬಿಸಿದರೆ, ನವನಗರ ಹಾಗೂ ಸುತ್ತಲಿನ 9ರಿಂದ 11 ಹಳ್ಳಿಗಳಲ್ಲಿ ಅಂತರ್‌ಜಲ ಮಟ್ಟ ಹೆಚ್ಚುತ್ತದೆ ಎಂಬುದು ತಜ್ಞರ ಅಭಿಪ್ರಾಯ.

ಸದ್ಯಕ್ಕೆ ಮುಚಖಂಡಿ ಕೆರೆಗೆ ಅಳವಡಿಸಿರುವ ಪೈಪ್‌ಲೈನ್‌ಗಳನ್ನು ಬೃಹತ್‌ ಗಾತ್ರದ ಪೈಪ್‌ ಅಳವಡಿಸಿ, ಕೆರೆ ತುಂಬಿಸಬೇಕು. ಇದೊಂದು ದೊಡ್ಡ ಕೆರೆಯಾಗಿದ್ದು, ಈಗ ಅಳವಡಿಸಿರುವ ಪೈಪ್‌ ಚಿಕ್ಕದಾಗಿವೆ. ಹೀಗಾಗಿ ದೊಡ್ಡ ಪೈಪ್‌ ಅಳವಡಿಸಲು ಬಾಗಲಕೋಟೆ ಶಾಸಕ ಡಾ|ವೀರಣ್ಣ ಚರಂತಿಮಠ, ಸಣ್ಣ ನೀರಾವರಿ ಇಲಾಖೆ ಮೂಲಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಆದರೆ, ಸರ್ಕಾರ ಈ ಪ್ರಸ್ತಾವನೆಗೆ ಒಪ್ಪಿಗೆ ನೀಡಿಲ್ಲ. ಹೀಗಾಗಿ ಸಧ್ಯ ಈಗಿರುವ ವ್ಯವಸ್ಥೆಯಲ್ಲೇ ಕೆರೆ ತುಂಬಿಸಲು ಸಣ್ಣ ನೀರಾವರಿ ಇಲಾಖೆ ಆರಂಭಿಸಿದೆ.

ಶಿರೂರ ಜೋಡಿ ಕೆರೆ ತುಂಬಿಸಲೂ ಆರಂಭ: ತಾಲೂಕಿನ ಶಿರೂರ ಗ್ರಾಮದ ಜೋಡಿ ಕೆರೆ ತುಂಬಿಸಲು 2017ರಲ್ಲಿ 2.50 ಕೋಟಿ ವೆಚ್ಚದಲ್ಲಿ ಕೈಗೊಂಡ ಕೆರೆ ತುಂಬುವ ಯೋಜನೆಗೆ ಪ್ರಸಕ್ತ ವರ್ಷ ಹಿನ್ನೀರು ತುಂಬಿಸಲು ಮಂಗಳವಾರ ಚಾಲನೆ ನೀಡಲಾಯಿತು. ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಸೋಮಶೇಖರ ಸಾವನ್‌, ಜೆಇ ಲಮಾಣಿ ಮುಂತಾದವರು ಶಿರೂರ ಕೆರೆ ತುಂಬಿಸುವ ಯೋಜನೆ ನಿರ್ವಹಣೆ ಪರಿಶೀಲಿಸಿದರು. ಐತಿಹಾಸಿಕ ಮುಚಖಂಡಿ ಕೆರೆ ಹಾಗೂ ಶಿರೂರ ಜೋಡಿ ಕೆರೆ ತುಂಬಿಸಲು ಕಳೆದ ವರ್ಷ ವಿಳಂಬ ಮಾಡಿರುವ ಕುರಿತು ಹಾಗೂ ಈ ಬಾರಿ ನಿಗದಿತ ಸಮಯಕ್ಕೆ ಆರಂಭಿಸುತ್ತಾರಾ? ಎಂಬ ವಿಷಯದ ಕುರಿತು ಉದಯವಾಣಿ ಕಳೆದ ಜು.12ರಂದು ಏರಿದ ಹಿನ್ನೀರು; ಕೆರೆ ತುಂಬಿಸೋದು ಯಾವಾಗ? ಎಂಬ ವಿಶೇಷ ವರದಿ ಪ್ರಕಟಿಸಿತ್ತು.

ಟಾಪ್ ನ್ಯೂಸ್

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.