ರೈತರ ಕಷ್ಟಗಳಿಗೆ ಸೈಕಲ್‌ ಎಡೆಕುಂಟಿ ಪರಿಹಾರ

Team Udayavani, Jun 26, 2021, 9:56 AM IST

ರೈತರ ಕಷ್ಟಗಳಿಗೆ ಸೈಕಲ್‌ ಎಡೆಕುಂಟಿ ಪರಿಹಾರ

ಲೋಕಾಪುರ: ಬಾಡಿಗೆ ಎತ್ತುಗಳನ್ನು ಪಡೆದು ಹಾಗೂ ಕೃಷಿ ಕೂಲಿ ಕಾರ್ಮಿಕರಿಗೆ ದಿನಗೂಲಿ ನೀಡಿ ಎಡೆ ಕುಂಟೆ ಹೊಡೆಯುವುದು ಬಡ ಹಾಗೂ ಸಣ್ಣ ರೈತರಿಗೆ ಕಷ್ಟಕರವಾಗಿತ್ತು, ಇಂತಹ ರೈತರ ಕಷ್ಟಗಳಿಗೆ ಸೈಕಲ್‌ ಎಡೆಕುಂಟಿ ಪರಿಹಾರವಾಗಿದೆ ಎಂದು ಲೋಕಾಪುರ ರೈತ ಸಂಪರ್ಕ ಅಧಿಕಾರಿ ಲಕ್ಷ್ಮೀ ತೇಲಿ ಹೇಳಿದರು.

ಕಿಲ್ಲಾ ಹೊಸಕೊಟಿ ಗ್ರಾಮದ ರೈತ ಇಸ್ಮಾಯಿಲ್‌ ಮುಜಾವರ ಹೊಲಕ್ಕೆ ಕ್ಷೇತ್ರ ಭೇಟಿ ನೀಡಿ ತೊಗರಿ ಬಿತ್ತನೆ ಹಾಗೂ ಹೆಸರು ಬೆಳೆಯಲ್ಲಿ ಸೈಕಲ್‌ ಎಡೆಕುಂಟಿ ಮೂಲಕ ಕಸ ತೆಗೆಯುವ ಯಂತ್ರ ವೀಕ್ಷಿಸಿ ಮಾತನಾಡಿದ ಅವರು, ಮುಂಗಾರು ಹಂಗಾಮಿನ ಕಳೆ ಮತ್ತು ಕಸ ತೆಗೆಯಲು ಕೂಲಿ ಕಾರ್ಮಿಕರಕೊರತೆ ಹಿನ್ನಲೆಯಲ್ಲಿ ರೈತರು ಸೈಕಲ್‌ ಗಾಲಿ ಎಡೆಕುಂಟಿಗೆ ಮೊರೆ ಹೋಗುತ್ತಿದ್ದಾರೆ. ಇದು ಸರಳ ಮತ್ತು ಸುಲಭ ವಿಧಾನವಾಗಿದೆ ಎಂದರು.

ಸರಿಯಾದ ಸಮಯಕ್ಕೆ ಹೊಲ ಗದ್ದೆಗಳಲ್ಲಿ ಕೂಲಿ ಆಳುಗಳು ಸಿಗುವುದಿಲ್ಲ. ಈ ಹಿನ್ನೆಲೆಯಲ್ಲಿ ಸರಕಾರ ನೂತನ ತಂತ್ರಜ್ಞಾನ ಬಳಸಿ ಸೈಕಲ್ ಎಡೆಕುಂಟಿಯನ್ನು ಹೊರತಂದಿದ್ದು, ಈ ಸೈಕಲ್‌ ಎಡೆಕುಂಟೆಗಳಿಗೆ ಹೆಚ್ಚಿನ ಬೇಡಿಕೆಗಳು ಬರುತ್ತಿವೆ. ಇದನ್ನು ಬಳಸಿ ಹೊಲದಲ್ಲಿ ಬೆಳಗಳ ನಡುವೆ ಇರುವ ಕಳೆಯನ್ನು ಕಸವನ್ನು ತೆಗೆಯಬಹುದು. ಈ ಸೈಕಲ್‌ ಕುಂಟೆ ಹಗುರವಾಗಿದ್ದು ಒಬ್ಬರೇ ಇದನ್ನು ನಿರ್ವಹಿಸಲು ಸಾಧ್ಯವಿದೆ. ಸರಳವಾಗಿ ಮತ್ತು ಸುಲಭವಾಗಿ ಕಳೆ ತೆಗೆಬಹುದಾಗಿದೆ ಎಂದರು.

ರೈತ ಮಾತನಾಡಿ ಇಸ್ಮಾಯಲ್‌ ಮುಜವಾರ ಮಾತನಾಡಿ, ಎತ್ತುಗಳನ್ನುಬಳಸಿ ಎಡೆಕುಂಟೆ ಹೊಡೆಯಲುಮೂರ್‍ನಾಲ್ಕು ಕೃಷಿ ಕೂಲಿಕಾರ್ಮಿಕರು ಬೇಕಾಗುತ್ತಿತ್ತು. ದುಬಾರಿ ವೆಚ್ಚ ಭರಿಸುವುದು ಅನಿವಾರ್ಯವಾಗಿತ್ತು. ಕೂಲಿ ದರ ಗಗನಕ್ಕೇರಿದೆ. ಮತ್ತೂಂದೆಡೆ ಕೃಷಿ ಚಟುವಟಿಕೆಗಳಿಗೆ ಕೂಲಿ ಕಾರ್ಮಿಕರನ್ನು ಹುಡುಕುವುದು ಹರಸಾಹಸವಾಗಿದೆ. ಬಾಡಿಗೆ ಎತ್ತುಗಳನ್ನು ಪಡೆದು ಕೃಷಿ ಕೂಲಿಕಾರ್ಮಿಕರಿಗೆ ದಿನಗೂಲಿ ನೀಡಿ ಎಡಕುಂಟೆ ಹೊಡೆಯುವುದು ಬಡ ಮತ್ತು ಸಣ್ಣ ರೈತರಿಗೆ ಕಷ್ಟಕರವಾಗಿತ್ತು. ಇಂತಹ ರೈತರ ಕಷ್ಟಗಳಿಗೆ ಸೈಕಲ್‌ ಎಡಕುಂಟೆ ಪರಿಹಾರವಾಗಿದೆ. ಕೃಷಿ ಇಲಾಖೆಯಲ್ಲಿ ಸರಕಾರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಎಡೆಕುಂಟೆ ಸೈಕಲ್‌ ವಿತರಿಸಬೇಕೆಂದು ಒತ್ತಾಯಿಸಿದರು.

ಕೃಷಿ ಇಲಾಖೆ ಸಿಬ್ಬಂದಿ ಪವಿತ್ರಾ ಹಂಪನ್ನವರ, ತೊಯಿದ್‌ ಮುಜಾವರ ಇತರರು ಇದ್ದರು.

ಟಾಪ್ ನ್ಯೂಸ್

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.