ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ

ಬಾಗಲಕೋಟೆ ಬಿಜೆಪಿಯ ಗಂಡುಮೆಟ್ಟಿನ ನೆಲ

Team Udayavani, May 29, 2022, 3:50 PM IST

21

ಬಾಗಲಕೋಟೆ: ಜಿಲ್ಲೆಯಲ್ಲಿ ಬಿಜೆಪಿ ಪಕ್ಷ ಬೇರು ಮಟ್ಟದಲ್ಲಿ ಬಲಿಷ್ಠವಾಗಿದೆ. ಹೀಗಾಗಿ ಬಾಗಲಕೋಟೆ ಜಿಲ್ಲೆಯನ್ನು ಬಿಜೆಪಿಯ ಗಂಡುಮೆಟ್ಟಿನ ನೆಲವಾಗಿದೆ ಎಂದು ಸಂಸದ ಪಿ.ಸಿ. ಗದ್ದಿಗೌಡರ ಹೇಳಿದರು.

ನಗರದ ಬಿವಿವಿ ಸಂಘದ ನೂತನ ಸಭಾ ಭವನದಲ್ಲಿ ವಿಧಾನ ಪರಿಷತ್‌ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪ್ರಚಾರದ ಪೂರ್ವಭಾವಿ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿದರು.

ಕಳೆದ ಎಂಟು ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಜನಪರ ಆಡಳಿತ ನೀಡುತ್ತಿದ್ದಾರೆ. ಬಿಜೆಪಿ ಸರ್ಕಾರದ ಸಾಧನೆಗಳೇ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದರು. ದೇಶದ ಜನರ ಕಲ್ಯಾಣಕ್ಕಾಗಿ ಅನೇಕ ಜನಪರ ಕಾರ್ಯಕ್ರಮಗಳನ್ನು ಪ್ರಧಾನಿಯವರು ಹಾಕಿದ್ದು ಅವುಗಳು ಅನುಷ್ಠಾನಕ್ಕೆ ಕೂಡ ಬಂದಿದೆ. ತಮ್ಮದೇ ಆದ ವಿಶೇಷ ಆಡಳಿತದಂದ ಜಗತ್ತು ಮೆಚ್ಚಿದ ನಾಯಕನಾಗಿ ಮೋದಿಯವರು ಹೊರಹೊಮ್ಮುತ್ತಿದ್ದು ಮೋದಿಯವರ ಆಡಳಿತ ಮೆಚ್ಚಿ ಮತದಾರರು, ವಿಧಾನ ಪರಿಷತ್‌ ಚುನಾವಣೆಯಲ್ಲಿ ಬಿಜೆಪಿಯ ಅರುಣ ಶಹಾಪುರ, ಹನಮಂತ ನಿರಾಣಿಯವರು ಗೆಲ್ಲುತ್ತಾರೆ ಎಂದರು.

ಜಿಲ್ಲೆಯ ಬಿಜೆಪಿಯ ಗಂಡುಮೆಟ್ಟಿನ ಜಿಲ್ಲೆಯಾಗಿದ್ದು ಬಾಗಲಕೋಟೆ ಮತಕ್ಷೇತ್ರದ ಶಾಸಕ ವೀರಣ್ಣ ಚರಂತಿಮಠವರು ಕ್ರಿಯಾಶೀಲರಾಗಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ವಿಧಾನ ಪರಿಷತ್‌ ಸದಸ್ಯ ಪಿ.ಎಚ್‌. ಪೂಜಾರ ಅವರು ಕೂಡ ಕೆಲಸ ಮಾಡುತ್ತಿದ್ದು ರಾಜ್ಯಾಧ್ಯಕ್ಷರು ಹಾಕಿಕೊಟ್ಟ ಕಾರ್ಯಕ್ರಮಗಳನ್ನು ಜಿಲ್ಲಾಧ್ಯಕ್ಷರಾದಿಯಾಗಿ ಎಲ್ಲ ಪದಾಧಿಕಾರಿಗಳು ಸಂಘಟನೆಯಲ್ಲಿ ತೊಡಗಿಕೊಂಡಿದ್ದರಿಂದ ಬಿಜೆಪಿ ಗಟ್ಟಿಯಾಗಿದೆ ಎಂದು ಹೇಳಿದರು.

ಶಾಸಕ ಡಾ| ವೀರಣ್ಣ ಚರಂತಿ ಮಠ ಮಾತನಾಡಿ, ಬಿಜೆಪಿಯ ಅಭ್ಯರ್ಥಿಗಳಾದ ಅರುಣ ಶಹಾಪುರ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಿದ್ದಾರೆ. ಇನ್ನೂ ಪದವೀಧರರ ಸಮಸ್ಯೆಗಳನ್ನು ಅರಿತುಕೊಂಡುಅವುಗಳಿಗೆ ಪರಿಹಾರ ಕಂಡುಕೊಳ್ಳಲು ಕೆಲಸ ಮಾಡಿದ ಹನಮಂತ ನಿರಾಣಿಯವರು ಪುನರಾಯ್ಕೆಯಾಗುವುದು ನಿಶ್ಚಿತ ಎಂದರು.

ಪದವೀಧರರು ಹಾಗೂ ಶಿಕ್ಷಕರು ಮತ ಚಲಾಯಿಸುವಾಗ ಜಾಗೃತಿಯಿಂದ ಮತ ಹಾಕಬೇಕು. ಗ್ರಾಮೀಣ ಮತ್ತು ನಗರ ಮಟ್ಟದಲ್ಲಿ ಬಿಜೆಪಿ ಕಾರ್ಯಕರ್ತರು ಎಲ್ಲೆಲ್ಲಿ ಬೂತ್‌ಗಳನ್ನು ಮಾಡಿರುತ್ತಾರೆ ಅಲ್ಲಿಗೆ ಮತದಾರರನ್ನು ಕರೆದುಕೊಂಡು ಹೋಗಿ ಮತ ಹಾಕಲು ಕೆಲಸ ಮಾಡಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳೇ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರೀರಕ್ಷೆ ಎಂದು ತಿಳಿಸಿದರು.

ವಿಧಾನ ಪರಿಷತ್‌ ಸದಸ್ಯ ಪಿ.ಎಚ್‌. ಪೂಜಾರ ಮಾತನಾಡಿ, ಬೆಳಗಾವಿ, ವಿಜಯಪುರ, ಬಾಗಲಕೋಟೆ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಪ್ರತಿ ಕಾರ್ಯಕರ್ತರು ಪರಿಶ್ರಮ ಹಾಕಬೇಕು. ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಇರುವ ಮತದಾರನ್ನು ಪಕ್ಷದ ಕಾರ್ಯಕರ್ತರು ಭೇಟಿಯಾಗಿ ಪಕ್ಷದ ಅಭ್ಯರ್ಥಿಗಳಿಗೆ ಮತ ಹಾಕುವಂತೆ ಮನವಿ ಮಾಡಬೇಕು ಎಂದು ಕೋರಿದರು.

ಶಿಕ್ಷಕರ ಮತಕ್ಷೇತ್ರದಿಂದ ಸ್ಪರ್ಧೆ ಮಾಡಿರುವ ಅರುಣ್‌ ಶಹಾಪುರ, ಪದವೀಧರರ ಮತಕ್ಷೇತ್ರದಿಂದ ಸ್ಪರ್ಧೆ ಮಾಡಿರುವ ಹಣಮಂತ ನಿರಾಣಿಯವರು ಉತ್ತಮ ಕೆಲಸ ಮಾಡಿದ್ದಾರೆ. ವಿಧಾನಪರಿಷತ್‌ನಲ್ಲಿ ಸಮಸ್ಯೆಗಳ ಬಗ್ಗೆ ಗಮನ ಸೆಳೆದಿದ್ದಾರೆ. ಹೀಗಾಗಿ ಅವರ ಗೆಲುವು ನಿಶ್ಚಿತ ಎಂದರು.

ವಿಧಾನ ಪರಿಷತ್‌ ಮಾಜಿ ಸದಸ್ಯ ನಾರಾಯಣಸಾ ಬಾಂಡಗೆ, ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ, ಬಿಟಿಡಿಎ ಮಾಜಿ ಸಭಾಪತಿ ಜಿ.ಎನ್‌.ಪಾಟೀಲ, ಉಪಾಧ್ಯಕ್ಷ ಅಶೋಕ ಲಿಂಬಾವಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ, ಬೆಳಗಾವಿ ಸಹ ಪ್ರಭಾರಿ ಬಸವರಾಜ ಯಂಕಂಚಿ, ಬುಡಾ ಅಧ್ಯಕ್ಷ ಬಸಲಿಂಗಪ್ಪ ನಾವಲಗಿ, ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ, ಉಪಾಧ್ಯಕ್ಷ ಬಸವರಾಜ ಅವರಾದಿ, ಬಾಗಲಕೋಟೆ ಕ್ಷೇತ್ರದ ಗ್ರಾಮೀಣ ಘಟಕದ ಅಧ್ಯಕ್ಷ ಸುರೇಶ ಕೊಣ್ಣೂರ, ಮುದೇನೂರ, ಬಿಟಿಡಿಎ ಸದಸ್ಯ ಶಿವಾನಂದ ಟವಳಿ, ಸಂಗಣ್ಣ ಕಲಾದಗಿ, ನಗರ ಮಂಡಲ ಮಾಧ್ಯಮ ಸಂಚಾಲಕ ರಾಜು ಗಾಣಿಗೇರ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ವಿಶ್ವಾಸಮತ…ಮಹಾರಾಷ್ಟ್ರ ಗವರ್ನರ್ ಆದೇಶದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಶಿವಸೇನೆ

ವಿಶ್ವಾಸಮತ…ಮಹಾರಾಷ್ಟ್ರ ಗವರ್ನರ್ ಆದೇಶದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಶಿವಸೇನೆ

ಬಹುಭಾಷಾ ಸ್ಟಾರ್ ನಟಿ ಮೀನಾ ಪತಿ ವಿದ್ಯಾಸಾಗರ್ ನಿಧನ; ಗಣ್ಯರ ಸಂತಾಪ

ಬಹುಭಾಷಾ ಸ್ಟಾರ್ ನಟಿ ಮೀನಾ ಪತಿ ವಿದ್ಯಾಸಾಗರ್ ನಿಧನ; ಗಣ್ಯರ ಸಂತಾಪ

Update: ರಾಜಸ್ಥಾನ ಶಿರಚ್ಛೇದ ಪ್ರಕರಣ-ಕರ್ಫ್ಯೂ ಜಾರಿ, ಆರೋಪಿಗಳ ಬಂಧನ; ಎನ್ ಐಎ ತನಿಖೆ

Update: ರಾಜಸ್ಥಾನ ಶಿರಚ್ಛೇದ ಪ್ರಕರಣ-ಕರ್ಫ್ಯೂ ಜಾರಿ, ಆರೋಪಿಗಳ ಬಂಧನ; ಎನ್ ಐಎ ತನಿಖೆ

news banahatti

ಬನಹಟ್ಟಿಯಲ್ಲಿ ಉಡುಪು ಕಳ್ಳತನ: ವಿಚಿತ್ರ ವ್ಯಕ್ತಿ ಆಕಾರ ನೋಡಿ ಬೆಚ್ಚಿ ಬಿದ್ದ ಜನತೆ..!

news belagavi

ಬೆಳಗಾವಿಯಲ್ಲಿ ಬೆಳ್ಳಂಬೆಳಗ್ಗೆ 26 ರೌಡಿಗಳ ಮನೆಗಳ ಮೇಲೆ ದಾಳಿ

thumb 1 earth

ಕರಾವಳಿ: ಭವಿಷ್ಯದಲ್ಲಿ 5 ತೀವ್ರತೆಯ ಭೂಕಂಪ ಸಾಧ್ಯತೆ

thumb 3 bank

ಶೀಘ್ರ ಸರಕಾರಿ ಬ್ಯಾಂಕ್‌ ಪೂರ್ಣ ಖಾಸಗೀಕರಣ? ಪಿಎಸ್‌ಬಿಗಳಿಂದ ನಿರ್ಗಮಿಸಲು ಸರಕಾರ ಸಿದ್ಧತೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

news banahatti

ಬನಹಟ್ಟಿಯಲ್ಲಿ ಉಡುಪು ಕಳ್ಳತನ: ವಿಚಿತ್ರ ವ್ಯಕ್ತಿ ಆಕಾರ ನೋಡಿ ಬೆಚ್ಚಿ ಬಿದ್ದ ಜನತೆ..!

ಬೀದಿಗೆ ಬಿದ್ದಿದ್ದ ಸಿದ್ದು ಬಾದಾಮಿಗೆ ಕರೆ ತಂದಿದ್ದು ನಾನೇ: ಸಿ.ಎಂ. ಇಬ್ರಾಹಿಂ

ಬೀದಿಗೆ ಬಿದ್ದಿದ್ದ ಸಿದ್ದು ಬಾದಾಮಿಗೆ ಕರೆ ತಂದಿದ್ದು ನಾನೇ: ಸಿ.ಎಂ. ಇಬ್ರಾಹಿಂ

ಗ್ರಾಮೀಣ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ: ಶಾಸಕ ಸಿದ್ದು ಸವದಿ

ಗ್ರಾಮೀಣ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ: ಶಾಸಕ ಸಿದ್ದು ಸವದಿ

6 ವರ್ಷದಿಂದ ಸಂಬಳವೇ ಇಲ್ಲ: ಮನನೊಂದು ತಾ.ಪಂ ಕಚೇರಿಯಲ್ಲೇ ನೇಣಿಗೆ  ಶರಣಾದ ಗುತ್ತಿಗೆ ನೌಕರ

6 ವರ್ಷದಿಂದ ಸಂಬಳವೇ ಇಲ್ಲ: ಮನನೊಂದು ತಾ.ಪಂ ಕಚೇರಿಯಲ್ಲೇ ನೇಣಿಗೆ ಶರಣಾದ ಗುತ್ತಿಗೆ ನೌಕರ

18

ಅಗ್ನಿಪಥ ವಿರೋಧಿಸಿ ಕಾಂಗ್ರೆಸ್‌ ಪ್ರತಿಭಟನೆ

MUST WATCH

udayavani youtube

ಚಿತ್ರದುರ್ಗದ ಕೋಟೆ ಗೋಡೆ ಏರಿದ ಮಂಗಳೂರು ಪೊಲೀಸ್‌ ಕಮಿಷನರ್‌!

udayavani youtube

ತಂದೆ ಮೇಣದ ಪ್ರತಿಮೆ ಮುಂದೆ ಹಸೆಮಣೆಯೇರಿದ ಮಗಳು

udayavani youtube

ಸುಳ್ಯ – ಮಡಿಕೇರಿ ಭಾಗದಲ್ಲಿ ಮತ್ತೆ ಕಂಪಿಸಿದ ಭೂಮಿ : ಆತಂಕದಲ್ಲಿ ಜನತೆ

udayavani youtube

ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ : ಸುಟ್ಟು ಕರಕಲಾಯ್ತು ಮನೆ

udayavani youtube

ಭಾಗಮಂಡಲ ಸೇರಿದಂತೆ ವಿವಿಧ ಕಡೆ ಭೂಮಿ ಕಂಪಿಸಿದ ಅನುಭವ

ಹೊಸ ಸೇರ್ಪಡೆ

3

ಜಕ್ರಿಬೆಟ್ಟು ಜಲ ಶುದ್ಧೀಕರಣ ಘಟಕ: ಸುತ್ತಲೂ ಬೆಳೆದು ನಿಂತ ಪೊದೆ  

ವಿಶ್ವಾಸಮತ…ಮಹಾರಾಷ್ಟ್ರ ಗವರ್ನರ್ ಆದೇಶದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಶಿವಸೇನೆ

ವಿಶ್ವಾಸಮತ…ಮಹಾರಾಷ್ಟ್ರ ಗವರ್ನರ್ ಆದೇಶದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಶಿವಸೇನೆ

1-df-df-g

2

ಸೌಕರ್ಯದ ನಿರೀಕ್ಷೆಯಲ್ಲಿ ಹಾರಾಡಿ ಶಾಲೆ

ಜೂ.29ರಂದು ಉದಯವಾಣಿ ಫೇಸ್ ಬುಕ್ ಲೈವ್ ನಲ್ಲಿ ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್ ಸಿನಿ ತಂಡ

ಜೂ.29ರಂದು ಉದಯವಾಣಿ ಫೇಸ್ ಬುಕ್ ಲೈವ್ ನಲ್ಲಿ ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್ ಸಿನಿ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.