ಅನಾಥ ಬಾಲಕಿಗೆ ಬಾಯಕ್ಕನ ಕೈ ತುತ್ತು

•ಬಾಲ ಮಂದಿರಕ್ಕೆ ದಿಢೀರ್‌ ಭೇಟಿ•ಬಿಕ್ಕಿ ಬಿಕ್ಕಿ ಅತ್ತ ಮಕ್ಕಳ ಕಂಡು ಕಣ್ಣೀರು ಹಾಕಿದ ಅಧ್ಯಕ್ಷೆ

Team Udayavani, Jul 3, 2019, 9:37 AM IST

bk-tdy-1..

ಬಾಗಲಕೋಟೆ: ನವನಗರದ ಸರ್ಕಾರಿ ಬಾಲ ಮಂದಿರಕ್ಕೆ ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದರು.

ಬಾಗಲಕೋಟೆ: ಜಿಲ್ಲಾ ಪಂಚಾಯತ್‌ ಅಧ್ಯಕ್ಷೆಯಾದ ಬಳಿಕ ಇದೇ ಮೊದಲ ಬಾರಿಗೆ ನವನಗರದ ಸರ್ಕಾರಿ ಬಾಲ ಮಂದಿರಕ್ಕೆ ಮಂಗಳವಾರ ದಿಢೀರ್‌ ಭೇಟಿ ನೀಡಿದ ಬಾಯಕ್ಕ ಮೇಟಿ, ಮಕ್ಕಳ ಸಮಸ್ಯೆ ಕಂಡು ದಂಗಾದರು. ಬಿಕ್ಕಿ ಬಿಕ್ಕ ಅಳುತ್ತಿದ್ದ ಮಕ್ಕಳ ಕಂಡು, ತಾವೂ ಅತ್ತರು. ಅನಾಥ ಬಾಲಕಿಯ ಆಶೆಯಂತೆ ಕೈತುತ್ತು ತಿನಿಸಿ ಬೆನ್ನು ತಟ್ಟಿದರು.

ಹೌದು, ನವನಗರದ ಎಪಿಎಂಸಿ ಕ್ರಾಸ್‌ ಬಳಿ ಇರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧೀನದ ಬಾಲ ಮಂದಿರಕ್ಕೆ ಭೇಟಿ ನೀಡಿದರು. ಮೊದಲು ಅಡುಗೆ ತಯಾರಿಕೆ ಕೋಣೆಗೆ ತೆರಳಿ, ಅಲ್ಲಿನ ಅವ್ಯವಸ್ಥೆ ಕಂಡು, ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು. ಇರುವೆ ಹತ್ತಿದ ಬೆಲ್ಲ, ನಿನ್ನೆ ರಾತ್ರಿ ಮಾಡಿದ್ದ ಪಲ್ಯವನ್ನು ಬ್ರಿಜ್‌ನಲ್ಲಿಟ್ಟು, ಮರು ದಿನ ಕೊಡುವ ಪದ್ಧತಿ ನೋಡಿ, ಅಡುಗೆ ಸಿಬ್ಬಂದಿಗೆ ಎಚ್ಚರಿಕೆ ನೀಡಿದರು.

ಅಪ್ಪಿಕೊಂಡು ಕಣ್ಣೀರು ಹಾಕಿದರು: ಬಾಲ ಮಂದಿರದ ಎಲ್ಲ ಕೋಣೆ ಪರಿಶೀಲಿಸಿದ ಬಳಿಕ, ಮಕ್ಕಳು ಇರುವ ಕೊಠಡಿಗೆ ಹೋದರು. ಈ ವೇಳೆ ತಂದೆ-ತಾಯಿ ಇಲ್ಲದ ಬಾಲಕಿಯೊಬ್ಬಳು, ಇವರನ್ನು ಕಂಡೊಡನೆ ಬಿಕ್ಕಿ ಬಿಕ್ಕಿ ಅಳಲಾರಂಭಿಸಿದಳು. ಆ ಬಾಲಕಿಯನ್ನು ಅಪ್ಪಿಕೊಂಡು, ಸಂತೈಸಿದ ಅವರು, ಬಾಲಕಿಯ ಸಮಸ್ಯೆ ಕೇಳಿದರು. ತಂದೆ-ತಾಯಿ ಇಲ್ಲದ ಆ ಬಾಲಕಿ, ಬಾಲ್ಯ ವಿವಾಹಕ್ಕೆ ಒಳಗಾಗಿದ್ದಾಳೆ. ಹೀಗಾಗಿ ಅವಳನ್ನು ಬಾಲ ಮಂದಿರಕ್ಕೆ ಸೇರಿಸಿದ್ದು, ತನ್ನ ಸಮಸ್ಯೆ ಹೇಳಿಕೊಂಡು ಅತ್ತಳು. ಬಾಲಕಿಯ ಸಮಸ್ಯೆ ಕಂಡು, ತಾನೂ ಕಣ್ಣೀರು ಹಾಕಿದ ಬಾಯಕ್ಕ ಮೇಟಿ, ಬಳಿಕ ಬಾಲಕಿಯ ಆಶೆಯಂತೆ ತಮ್ಮ ಕೈಯಾರೆ ಊಟ ಮಾಡಿಸಿ ಸಾಂತ್ವನ ಹೇಳಿದರು.

ತಂದೆ-ತಾಯಿ ಮಾಡಿದ ತಪ್ಪಿಗೆ ನಮಗೆ ಶಿಕ್ಷೆ: ಬಾಲಕಿಯರನ್ನು ಒಂದೆಡೆ ಕರೆದು, ಅವರ ಸಮಸ್ಯೆ ಕೇಳಿದ ಅವರು, ತಂದೆ-ತಾಯಿ ನಮಗೆ ಬಾಲ್ಯ ವಿವಾಹ ಮಾಡುತ್ತಿದ್ದರು. ಆ ವೇಳೆ ಅಧಿಕಾರಿಗಳು ನಮ್ಮನ್ನು ಇಲ್ಲಿಗೆ ಕರೆದು ತಂದು ಬಿಟ್ಟಿದ್ದಾರೆ. ಹಾಕಿಕೊಳ್ಳಲು ಬಟ್ಟೆ ಇಲ್ಲ, ತಿಂಗಳ ಸಮಸ್ಯೆಯಾದರೆ ಪ್ಯಾಡ್‌ ಕೊಡಲ್ಲ. ಅಪ್ಪ-ಅವ್ವ ಮಾಡಿದ ತಪ್ಪಿಗೆ ನಮಗೆ ಶಿಕ್ಷೆ ಕೊಡಲಾಗುತ್ತಿದೆ. ನಾವೇನು ತಪ್ಪು ಮಾಡಿದ್ದೇವೆ. ಎಲ್ಲ ಪ್ರಕ್ರಿಯೆ ಮುಗಿಸಿ, ಮರಳಿ ಮನೆಗೆ ಹೋಗಲು ಒಂದು ತಿಂಗಳು ಬೇಕಾಗುತ್ತದೆ ಎಂದು ಇಲ್ಲಿನ ಸಿಬ್ಬಂದಿ ಹೇಳುತ್ತಾರೆ. ಅಲ್ಲಿಯ ವರೆಗೆ ನಮ್ಮ ಶಿಕ್ಷಣ ಕುಂಠಿತಗೊಳ್ಳುತ್ತದೆ ಎಂದು ಹಲವು ಬಾಲಕಿಯರು ಕಣ್ಣೀರು ಹಾಕಿದರು.

ಸರಿಯಾಗಿ ಸೌಲಭ್ಯ ಕೊಡಲು ಸೂಚನೆ: ಬಾಲಕ ಬಾಲ ಮಂದಿರ ಮತ್ತು ಬಾಲಕಿಯರ ಬಾಲ ಮಂದಿರ ಎರಡೂ ಕಡೆ ಪರಿಶೀಲನೆಯ ಬಳಿಕ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕನ್ನು ಕರೆಸಿ, ಇಲ್ಲಿನ ಮಕ್ಕಳಿಗೆ ಸರ್ಕಾರದಿಂದ ಬರುವ ಎಲ್ಲ ಸೌಲಭ್ಯ ಕಲ್ಪಿಸಬೇಕು. ನಿತ್ಯ ಹೊಸ ತರಕಾರಿಯಿಂದ ಹೊಸದಾಗಿ ಅಡುಗೆ ಮಾಡಿ ಬಡಿಸಬೇಕು. ರಾತ್ರಿ ಮಾಡಿದ ಪಲ್ಲೆಯನ್ನು ಬೆಳಿಗ್ಗೆ ಕೊಡುತ್ತಿದ್ದಾರೆ. ಈ ಕುರಿತು ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.