ಮಾ.20ರವರೆಗೆ ಕಾಲುವೆ ನೀರು


Team Udayavani, Nov 18, 2019, 10:58 AM IST

bk-tdy-2

ಆಲಮಟ್ಟಿ: ಕೃಷ್ಣಾ ಮೇಲ್ದಂಡೆ ಯೋಜನೆಯ ಹಿಂಗಾರುಹಂಗಾಮಿಗೆ 2019 ಡಿಸೆಂಬರ್‌ 1ರಿಂದ 2020ರ  ಮಾರ್ಚ್‌ 20ರ ವರೆಗೆ ವಾರಾಬಂದಿ ಪದ್ಧತಿ ಅನುಸರಿಸಿ ಎಲ್ಲ ಕಾಲುವೆಗಳಿಗೆ ನೀರು ಹರಿಸಲು ಕೃಷ್ಣಾ ಮೇಲ್ದಂಡೆ ಯೋಜನೆ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.

ರವಿವಾರ ಸಂಜೆ ಆಲಮಟ್ಟಿ ಕೃಷ್ಣಾಭಾಗ್ಯಜಲನಿಗಮದ ವ್ಯವಸ್ಥಾಪಕ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ನಡೆದನೀರಾವರಿ ಸಲಹಾ ಸಮಿತಿ ಸಭೆ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. 2020ರ ವರೆಗೆ ಕೃಷ್ಣಾ ಮೇಲ್ದಂಡೆ ಯೋಜನೆಯ ಎಲ್ಲ ಕಾಲುವೆಗಳ ಕೊನೆಯ ಅಂಚಿನವರೆಗೆ ನೀರು ಹರಿಸಲು ಪೊಲೀಸರ ನೆರವಿನೊಂದಿಗೆ ದಿನದ 24 ಗಂಟೆಗಳ ಕಾಲ ಗಸ್ತು ಮಾಡಿ ಕಾಲುವೆಗಳ ಮೇಲ್ಭಾಗದಲ್ಲಿ ನೀರೆತ್ತುವ ಪಂಪ್‌ಸೆಟ್‌ ಹಾಗೂ ಡೀಸೆಲ್‌ ಎಂಜಿನ್‌ಗಳನ್ನು ವಶಪಡಿಸಿಕೊಂಡು ಸಂಬಂಧಿಸಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಕಾಲುವೆಗಳಿಗೆ ಹಾನಿ, ಕಾಲುವೆಗಳ ಗೇಟುಗಳಿಗೆಹಾನಿ, ಎಸ್ಕೇಪ್‌ ಗೇಟುಗಳನ್ನೆತ್ತಿ ಹಳ್ಳಕ್ಕೆ ನೀರು ಬಿಡುವವರಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ಇನ್ನು 4 ಜಿಲ್ಲೆಗಳ ಪೊಲೀಸ್‌ ವರಿಷ್ಠಾ ಧಿಕಾರಿಗಳಿಗೆ ಇಲಾಖೆ ವತಿಯಿಂದ ಪತ್ರಬರೆದು ಪೊಲೀಸರ ನೆರವು ಪಡೆದು ಎಲ್ಲ ಕಾಲುವೆಗಳ ಕೊನೆಯಂಚಿನ ರೈತರ ಜಮೀನಿಗೆ ನೀರು ಹರಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು.

ನ.17ರಂದು ಆಲಮಟ್ಟಿ ಲಾಲ್‌ಬಹದ್ದೂರ್‌ ಶಾಸ್ತ್ರಿ ಹಾಗೂ ನಾರಾಯಣಪುರದ ಬಸವಸಾಗರ ಜಲಾಶಯಗಳಲ್ಲಿ ಸೇರಿ ಒಟ್ಟು 122.795 ಟಿಎಂಸಿ ಅಡಿ ನೀರು ಬಳಸಿಕೊಳ್ಳಬಹುದಾಗಿದ್ದು, ಇದರಲ್ಲಿ 14ದಿನ ಚಾಲು ಹಾಗೂ 8 ದಿನ ಬಂದ್‌ ಪದ್ಧತಿ ಅನುಸರಿಸಲಾಗುವುದು. ಈಗ ಇನ್ನೂ 5 ಸಾವಿರ ಕ್ಯೂಸೆಕ್‌ ನೀರು ಒಳಹರಿವಿದೆ, ಲಭ್ಯವಿರುವ ನೀರಿನಲ್ಲಿ ನ.21ರ ವರೆಗೆ ಕಾಲುವೆಗಳಿಗೆ ನೀರು ಹರಿಸಿ ನಂತರ ಹತ್ತು ದಿನಗಳ ಕಾಲ ನೀರು ಸ್ಥಗಿತಗೊಳಿಸಿ ಮಾರ್ಚ್‌ 20ರವರೆಗೆ ಕಾಲುವೆಗಳ ಮೂಲಕ ರೈತರ ಜಮೀನಿಗೆ ನೀರು ಹರಿಸಲಾಗುವುದು ಎಂದರು.

2019ರ ನ. 21ರಿಂದ 2020ರ ಜೂನ್‌ ಅಂತ್ಯದವರೆಗೆ ಫಲಾನುಭವಿ ಜಿಲ್ಲೆಗಳಿಗೆ ಕುಡಿಯುವ ನೀರು, ಭಾಷ್ಪೀಭವನ, ಕೈಗಾರಿಕೆ, ಕೆರೆ ಹಾಗೂ ಬಾಂದಾರ ತುಂಬಲು ಹಾಗೂ ಬೇಸಿಗೆಯಲ್ಲಿ ನೀರಿಗೆ ತೊಂದರೆಯಾಗದಂತೆ ಒಟ್ಟು ಎರಡೂ ಜಲಾಶಯಗಳಲ್ಲಿ 38.80 ಟಿಎಂಸಿ ಅಡಿ ನೀರು ಸಂಗ್ರಹಿಸಿಕೊಂಡು ಉಳಿದ 79.20 ಟಿಎಂಸಿ ಅಡಿ ನೀರು ರೈತರ ಜಮೀನಿಗೆ ಉಣಿಸಲು ಕ್ರಮ ವಹಿಸುವಂತೆ ತಿಳಿಸಲಾಗಿದೆ ಎಂದರು.

ಸಿಎಂ ನೇತೃತ್ವದಲ್ಲಿ ಸಭೆ: ಅಖಂಡ ವಿಜಯಪುರ ಜಿಲ್ಲೆಯನ್ನು ಸಮಗ್ರ ನೀರಾವರಿಗೆ ಒಳಪಡಿಸಲು ಹಾಗೂ ಕಚೇರಿಗಳ ಸ್ಥಳಾಂತರ, ಕಾಲುವೆಗಳ ಸಮಸ್ಯೆ, ಸಿಬ್ಬಂದಿ, ಕೆರೆ, ಬಾಂದಾರ ತುಂಬುವುದು ಸೇರಿದಂತೆ ಅವಳಿ ಜಿಲ್ಲೆಗಳ ಸಮಸ್ಯೆ ನಿವಾರಣೆಗೆ 2020ರ ಜನವರಿ ತಿಂಗಳಲ್ಲಿ ಸಭೆ ನಡೆಸಲಾಗುವುದು. ರೈತರಲ್ಲಿ ನೀರು ಬಳಸಿಕೊಳ್ಳುವ ಬಗ್ಗೆ ಜಾಗೃತಿಯೂ ಅತೀ ಅವಶ್ಯವಿದೆ ಇದರಿಂದ ನೀರು ಪೋಲಾಗುವುದನ್ನು ತಡೆಗಟ್ಟಲು ಸಾಧ್ಯ ಎಂದರು. ಈ ಸಂದರ್ಭದಲ್ಲಿ ವಿಜಯಪುರ ನಗರ ಶಾಸಕ ಬಸವನಗೌಡ ಪಾಟೀಲ ಯತ್ನಾಳ ಇದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.