ಸರಿಯಾದ ಸಮಯಕ್ಕೆ ಕಚೇರಿಯಲ್ಲಿರದಿದ್ರೆ ಕೇಸ್‌

 ಅಧಿಕಾರಿಗಳಿಗೆ ಲೋಕಾಯುಕ್ತ ಎಸ್ಪಿ ಹದ್ದಣ್ಣವರ ಖಡಕ್‌ ಎಚ್ಚರಿಕೆ

Team Udayavani, Jun 9, 2022, 11:16 AM IST

7

ಹುನಗುಂದ: ತಾಲೂಕಿನ ವಿವಿಧ ಇಲಾಖೆ ಬಹುತೇಕ ಅಧಿಕಾರಿಗಳು ಸರಿಯಾದ ಸಮಯಕ್ಕೆ ಕಚೇರಿಯಲ್ಲಿ ಇರುವುದು ಕಡ್ಡಾಯ. ಒಂದು ವೇಳೆ ಇರದಿದ್ದರೇ ಅಂತಹ ಕಚೇರಿಗೆ ಅನಿರೀಕ್ಷಿತ ಭೇಟಿ ನೀಡಿ ಆ ಅಧಿಕಾರಿ ಮೇಲೆ ಕ್ರಿಮಿನಲ್‌ ಪ್ರಕರಣ ದಾಖಲಿಸುವುದಾಗಿ ಲೋಕಾಯುಕ್ತ ಎಸ್ಪಿ ಅನಿತಾ ಹದ್ದಣ್ಣವರ ಖಡಕ್‌ ಎಚ್ಚರಿಕೆ ನೀಡಿದರು.

ಪಟ್ಟಣದ ತಾಪಂಗೆ ಬುಧವಾರ ಲೋಕಾಯುಕ್ತ ಎಸ್ಪಿ ಅನಿತಾ ಹದ್ದಣ್ಣವರ ನೇತೃತ್ವದ ತಂಡ ಭೇಟಿ ನೀಡಿ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಸಭೆ ನಡೆಸಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ನಿತ್ಯ ಕಚೇರಿಗೂ ಬರದೇ, ಸಾರ್ವಜನಿಕರ ಸಂಪರ್ಕಕ್ಕೂ ಸಿಗದೇ ಕೆಲವು ಅಧಿಕಾರಿಗಳು ಸತಾಯಿಸುತ್ತಿದ್ದಾರೆ ಎನ್ನುವ ಸುದ್ದಿ ಕೇಳಿ ಅವರು ಕೆಂಡಾಮಂಡಲವಾದರು. ಸರ್ಕಾರದ ಅನೇಕ ಯೋಜನೆಗಳು ಕೆಲಸವಾಗದೇ ಬಿಲ್‌ ಆಗಿರುವ ಸಾಕಷ್ಟು ದೂರುಗಳು ನಮ್ಮ ಇಲಾಖೆಗೆ ಬಂದಿವೆ. ಪ್ರತಿಯೊಂದು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಚಿಕಿತ್ಸೆ-ಸೌಲಭ್ಯಗಳು ಸಿಗುತ್ತಿವೆಯೇ ಎನ್ನುವುದನ್ನು ನಾವು ಪರಿಶೀಲಿಸುತ್ತೇವೆ ಎಂದರು.

ಬಾಗಲಕೋಟೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಸಿಎಜಿಎ ಆಡಿಟ್‌ ಆಯಿತು. ಅದರಲ್ಲಿ 9 ಜಿಲ್ಲೆಗಳ ಮೇಲೆ ಕೇಸ್‌ ದಾಖಲಾಗಿದೆ. ಅದರಲ್ಲಿ ವಿಜಯಪುರ ಜಿಲ್ಲೆಯೂ ಇದೆ. ಕೇಸ್‌ ಆಗಿರುವ ಜಿಲ್ಲೆ ಹೊರತುಪಡಿಸಿ ಉಳಿದ ಜಿಲ್ಲೆಗಳ ಖಾತ್ರಿ ಯೋಜನೆ ಕಾಮಗಾರಿ ಪರಿಶೀಲಿಸಲು ಸರ್ಕಾರ ಲೋಕಾಯುಕ್ತ ಇಲಾಖೆಗೆ ಅಧಿಕಾರ ನೀಡಿದೆ. 2012ರ ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿ ಪರಿಶೀಲನೆ ಕೂಡಾ ಸದ್ಯದಲ್ಲೇ ಪರಿಶೀಲಿಸುತ್ತಿದ್ದೇವೆ. ಪಿಡಿಒಗಳು ಎನ್‌ಆರ್‌ಇಜಿಎ ಕಾಮಗಾರಿಗಳ ಮಾಹಿತಿ ನೀಡಲು ಹಿಂದೇಟು ಹಾಕುತ್ತಿದ್ದಾರೆ. ಹಿಂದಿನ ಅಧಿಕಾರಿ ಕಾಮಗಾರಿ ಬಗ್ಗೆ ಮಾಹಿತಿ ನೀಡಲು ಹಿಂದೇಟು ಹಾಕಿದ್ದಲ್ಲಿ ಸದ್ಯ ಇರುವ ಪಿಡಿಒ ಮೇಲೆ ಕ್ರಿಮಿನಲ್‌ ಪ್ರಕರಣ ದಾಖಲಾಗುತ್ತೆ. ವಿವಿಧ ಇಲಾಖೆಗಳ ಕಾರ್ಯ ಚಟುವಟಕೆಗಳ ಮೇಲೆ ಲೋಕಾಯುಕ್ತರ ಹದ್ದಿನ ಕಣ್ಣು ಇರುತ್ತದೆ ಎಂದರು.

ಅಮರಾವತಿ ಗ್ರಾಪಂ ಅವ್ಯವಹಾರ ತನಿಖೆ: ಅಮರಾವತಿ ಗ್ರಾಪಂ 14ನೇ ಹಣಕಾಸಿನಲ್ಲಿ ಅವ್ಯವಹಾರವಾಗಿದೆ ಎಂದು ತಾಪಂ-ಜಿಪಂ ಹಾಗೂ ಗ್ರಾಮೀಣ ಪಂಚಾಯತ್‌ ರಾಜ್ಯ ಇಲಾಖೆಗೆ ದೂರು ಸಲ್ಲಿಸಿದರೂ ತನಿಖೆ ಮಾಡುತ್ತಿಲ್ಲ. ಸೂಕ್ತ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಗ್ರಾಮೀಣ ಪಂಚಾಯತ್‌ ರಾಜ್ಯ ಇಲಾಖೆ ಆಪ್ತ ಕಾರ್ಯದರ್ಶಿ, ಜಿಪಂ ಸಿಇಒ, ತಾಪಂ ಇಒ ಅವರಿಗೆ ಸೂಚಿಸಿದರೂ ತನಿಖೆ ವರದಿ ನೀಡುತ್ತಿಲ್ಲ ಎಂದು ತಿಮ್ಮಾಪುರ ಗ್ರಾಮದ ಬಸಯ್ಯ ಹಿರೇಮಠ ಲೋಕಾಯುಕ್ತರ ಮುಂದೆ ಆರೋಪಿಸಿದರು. ಆಗ ಈ ಕುರಿತು ಇಒ ಸಿ.ಬಿ. ಮೇಗೇರಿ ಕಾಟಾಚಾರದ ಉತ್ತರ ನೀಡುತ್ತಿದ್ದಂತೆ ಲೋಕಾಯುಕ್ತ ಎಸ್ಪಿ ಅನಿತಾ ಹದ್ದಣ್ಣವರ ಅದರ ಕುರಿತು ನಾವೇ ವಿಶೇಷ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದರು.

ಎಂಜಿಎನ್‌ಆರ್‌ಇಜಿಎ ಮಾಹಿತಿ ನೀಡಿಲ್ಲ: ಲೋಕಾಯುಕ್ತ ಇಲಾಖೆಯಿಂದ ತಾಲೂಕಿನ 10 ಗ್ರಾಪಂಗಳ ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿಗಳ ಮಾಹಿತಿ ನೀಡುವಂತೆ ಸೂಚಿಸಿದ್ದರೂ ಇಲ್ಲಿವರೆಗೂ ನೀಡಿಲ್ಲ. ಅಂತಹ ಅಧಿ ಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸುವ ಮೂಲಕ ಕ್ರಿಮಿನಲ್‌ ಕೇಸ್‌ ದಾಖಲಿಸಲಾಗುವುದು ಎಂದ ಲೋಕಾಯುಕ್ತರು, ಹೆಣ್ಣು ಮಕ್ಕಳ ರಕ್ಷಣೆಗಾಗಿ ಸರ್ಕಾರ ಪ್ರತಿಯೊಂದು ಶಾಲೆಯಲ್ಲಿ ಕರಾಟೆ ಶಿಕ್ಷಣ ನೀಡುವ ವ್ಯವಸ್ಥೆ ಮಾಡಿದ್ದು, ಸಮಾಜ ಕಲ್ಯಾಣ ಇಲಾಖೆ ಮುತುವರ್ಜಿ ವಹಿಸಬೇಕು ಎಂದರು.

ಕೆರೆ ಒತ್ತುವರೆ ಬಗ್ಗೆ ಗಮನ ಹರಿಸಿ: ಹಿರೇಮಾಗಿ ಗ್ರಾಪಂ ವ್ಯಾಪ್ತಿಯಲ್ಲಿ 8 ಕೆರೆಗಳಿದ್ದು, 72 ಎಕರೆ ಕೆರೆ ತೋರಿಸಸಲಾಗುತ್ತಿದೆ. ಅಲ್ಲಿ ಕೆರೆಯೇ ಇಲ್ಲ. ಕೆರೆ ಅತಿಕ್ರಮಣ ಮಾಡಿಕೊಂಡು ಹೊಲ ಮಾಡಿಕೊಂಡಿದ್ದಾರೆ. ಕೆರೆ ಹೂಳು ಬೇರೆಡೆ ಮಾರಾಟ ಮಾಡಿದ್ದಾರೆ. ಕೆರೆ ಇರುವ ಸ್ಥಳದಲ್ಲಿಯೇ ಶಾಲೆ ಕಟ್ಟಿಕೊಂಡಿದ್ದಾರೆ. ಸಾರ್ವಜನಿಕರು ಮತ್ತು ಸರ್ಕಾರದಿಂದಲೂ ಕೆರೆಗಳು ಒತ್ತುವರಿಯಾಗಿದೆ ಎಂದು ಜನರು ಆರೋಪಿಸಿದರು. ಹುನಗುಂದ-ಇಳಕಲ್ಲ ಅವಳಿ ತಾಲೂಕಿನ ಸಾರ್ವಜನಿಕರಿಂದ 12 ದೂರು ಅರ್ಜಿ ಸ್ವೀಕರಿಸಿ ಶೀಘ್ರ ತನಿಖೆ ಕೈಗೊಂಡು ಇತ್ಯರ್ಥಪಡಿಸುವುದಾಗಿ ಲೋಕಾಯುಕ್ತರು ತಿಳಿಸಿದರು.

ಈ ವೇಳೆ ಲೋಕಾಯುಕ್ತ ಡಿವೈಎಸ್ಪಿ ಎಸ್‌.ಎಂ. ರಾಗಿ, ಬಾಗಲಕೋಟೆ ಲೋಕಾಯುಕ್ತ ಪೊಲೀಸ್‌ ಇನ್‌ ಸ್ಪೆಕ್ಟರ್‌ ಎಂ.ಟಿ. ನಾಯಕ, ಲೋಕಾಯುಕ್ತ ಸಿಬ್ಬಂದಿ ಬಿ.ಎಂ. ದೇಸಾಯಿ, ಶಂಕರ ಬಳಬಟ್ಟಿ, ಇಳಕಲ್ಲ ತಾಪಂ ಇಒ ಸಿದ್ದಪ್ಪ ಪಟ್ಟಿಹಾಳ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.