ಮನೆ ಮನೆಯಲ್ಲೂ ಸ್ವಾತಂತ್ರ್ಯೋತ್ಸವ ಆಚರಣೆ

ಹರ್‌ ಘರ್‌ ತಿರಂಗಾ ಅಭಿಯಾನ ಯಶಸ್ವಿಗೊಳಿಸಿ; ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸೇವೆ ಸಲ್ಲಿಸಿದವರಿಗೆ ಸನ್ಮಾನ

Team Udayavani, Jul 31, 2022, 4:56 PM IST

17

ಬಾಗಲಕೋಟೆ: ದೇಶದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ ಹಿನ್ನೆಲೆಯಲ್ಲಿ ಆ. 13ರಿಂದ 15ರವರೆಗೆ ದೇಶಾದ್ಯಂತ ಸ್ವಾತಂತ್ರ್ಯದ ಸಂಭ್ರಮವನ್ನು ವೈವಿಧ್ಯಮಯ ಮತ್ತು ವರ್ಣರಂಜಿತವಾಗಿ ಆಚರಿಸಲು ಹರ ಘರ ತಿರಂಗಾ ಎಂಬ ಘೋಷ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಜಿಲ್ಲೆಯ ಮನೆ ಮನೆಯಲ್ಲೂ ತ್ರಿವರ್ಣ ರಾಷ್ಟ್ರ ಧ್ವಜ ಹಾರಿಸುವ ಮೂಲಕ ಜಿಲ್ಲೆಯ ಜನತೆ ತಮ್ಮ ರಾಷ್ಟ್ರ ಪ್ರೇಮ ಅಭಿವ್ಯಕ್ತಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಸ್ವಾತಂತ್ರ್ಯೋತ್ಸವ ಆಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಈ ಬಾರಿಯ ಸ್ವಾತಂತ್ರ್ಯೋತ್ಸವವು 75ರ ಅಮೃತ ಮಹೋತ್ಸವವಾಗಿರುವುದರಿಂದ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಇದಕ್ಕಾಗಿ ದೇಶದ ಎಲ್ಲ ರಾಜ್ಯ ಜಿಲ್ಲೆಗಳಲ್ಲೂ ಹರ ಘರ ತಿರಂಗಾ ಅಭಿಯಾನ ಹಮ್ಮಿಕೊಳ್ಳಲಾಗಿರುತ್ತದೆ. ಹರ ಘರ ತಿರಂಗಾ ಅಭಿಯಾನದಡಿ ಬಾಗಲಕೋಟೆ ಜಿಲ್ಲೆಯ 195 ಗ್ರಾಪಂಗಳಿಗೆ ಪ್ರತಿ ಗ್ರಾಮ ಪಂಚಾಯಿತಿಗೆ 450 ರಾಷ್ಟ್ರ ಧ್ವಜ ನೀಡಲಾಗಿರುತ್ತದೆ. ಗ್ರಾಮೀಣ ಭಾಗದಲ್ಲಿ ಆಯಾ ಗ್ರಾಮ ಪಂಚಾಯಿತಿ 20 ರೂ. ಪಾವತಿಸಿ ಧ್ವಜ ಪಡೆದುಕೊಳ್ಳಬಹುದಾಗಿರುತ್ತದೆ ಎಂದರು.

ಕನ್ನಡ ಮತ್ತು ಸಂಸ್ಕೃತ ಇಲಾಖೆ ಕೇಂದ್ರ ಕಚೇರಿಯಿಂದ ಬಾಗಲಕೋಟೆ ಜಿಲ್ಲಾಡಳಿತಕ್ಕೆ 20 ಸಾವಿರ ರಾಷ್ಟ್ರ ಧ್ವಜಗಳು ಪೂರೈಕೆಯಾಗಿರುತ್ತವೆ. ಈ ಧ್ವಜಗಳು ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಮಾತ್ರ ವಿತರಿಸಲಾಗುವುದು. ಪಪಂ, ಪುರಸಭೆ ಹಾಗೂ ನಗರ ಸಭೆಗಳಲ್ಲಿ 22 ರೂ. ಪ್ರತಿ ಧ್ವಜಕ್ಕೆ ಪಾವತಿಸಬೇಕಾಗಿರುತ್ತದೆ. ದಿ ಪ್ಲಾಗ್‌ ಕೋಡ್‌ ಆಫ್‌ ಇಂಡಿಯಾ (2021 ) ರ ತಿದ್ದುಪಡಿ ಹಿನ್ನೆಲೆಯಲ್ಲಿ ಧ್ವಜ ನಿಯಾಮಾನುಸಾರ ತಮ್ಮ ತಮ್ಮ ಮನೆಯ ಅಂಗಳದಲ್ಲಿ ಸ್ವಯಂ ಪ್ರೇರಣೆಯಿಂದ ಧ್ವಜವನ್ನು ಹಾರಿಸಿ ಹರ ಘರ ತಿರಂಗಾ ಅಭಿಯಾನ ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಧ್ವಜದ ನಿಯಾಮಾನುಸಾರ ಧ್ವಜವನ್ನು ಶೀಘ್ರಗತಿಯಲ್ಲಿ ಏರಿಸಬೇಕು ಮತ್ತು ಇಳಿಸುವಾಗ ನಿಧಾನಗತಿಯಲ್ಲಿ ಇಳಿಸಬೇಕು. ರಾಷ್ಟ್ರ ಧ್ವಜಕ್ಕೆ ಯಾವುದೇ ರೀತಿಯ ಬರಹ ಮಾತು ಕೃತ್ಯದ ಮೂಲಕ ಅಗೌರವ ತೋರುವ ರೀತಿಯಲ್ಲಿ ನಡೆದುಕೊಂಡರೆ ರಾಷ್ಟ್ರೀಯ ಗೌರವದ ಅವಮಾನ ವಿರೋಧ ಅಡಿಯಲ್ಲಿ ಶಿಕ್ಷೆಗೆ ಗುರಿಪಡಿಸಲಾಗುವುದರಿಂದ ಸಾರ್ವಜನಿಕರು ಸಂಘ ಸಂಸ್ಥೆಗಳು ಸ್ವಸಹಾಯ ಗುಂಪುಗಳು ಶಾಲಾ ಕಾಲೇಜು, ಎಲ್ಲಾ ರಾಷ್ಟ್ರಪ್ರೇಮ ಸಾರುವ ದೇಶಾಭಿಮಾನಿಗಳು ಈ ಅಭಿಯಾನವನ್ನು ಮುನ್ನೆಚ್ಚರಿಕೆಯಿಂದ ಯಶಸ್ವಿಗೊಳಿಸಬೇಕಾಗಿದೆ ಎಂದರು.

ಆ.15ರಂದು ಬೆಳಗ್ಗೆ 9ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ ನಡೆಯಲಿದ್ದು, ನಂತರ ಪಥ ಸಂಚಲನ ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸೇವೆ ಸಲ್ಲಿಸಿದವರಿಗೆ ಸನ್ಮಾನ ಸಮಾರಂಭ ಜರುಗಲಿವೆ. 75 ವರ್ಷದ ಅಮೃತ್‌ ಮಹೋತ್ಸವದ ಹಿನ್ನಲೆಯಲ್ಲಿ ಈ ಬಾರಿ ವೈವಿಧ್ಯಮಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಹೆಚ್ಚಿನ ಸಂಖ್ಯೆಯ ಸಾರ್ವಜನಿಕರು ದೇಶಾಭಿಮಾನಿಗಳು ಭಾಗವಹಿಸಬೇಕು ಎಂದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಯಪ್ರಕಾಶ ಹಕ್ಕರಕಿ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.