ಹುನಗುಂದದಲ್ಲಿ ಕಾಂಗ್ರೆಸ್‌-ಕಮಲ ಗಲಾಟೆ: ಕಾಶಪ್ಪನವರ ಕಾರು ಜಖಂ

Team Udayavani, Sep 7, 2018, 6:15 AM IST

ಹುನಗುಂದ: ಇಲ್ಲಿನ ಶತಮಾನ ಪೂರೈಸಿದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಪ್ರತಿಷ್ಠೆಯ ಕಣವಾಗಿದ್ದು, ಗುರುವಾರ ಮಧ್ಯಾಹ್ನ ತೀವ್ರ ಗಲಾಟೆಗೂ ಕಾರಣವಾಗಿದೆ.

ಹುನಗುಂದ ಪಿಕೆಪಿಎಸ್‌ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಗುರುವಾರ ಚುನಾವಣೆ ನಿಗದಿಯಾಗಿತ್ತು. 12 ಸದಸ್ಯ ಬಲದ ಪಿಕೆಪಿಎಸ್‌ಎನ್‌ನಲ್ಲಿ ಕಾಂಗ್ರೆಸ್‌ ಬೆಂಬಲಿತ 8 ಮಂದಿ ಹಾಗೂ ಬಿಜೆಪಿ ಬೆಂಬಲಿತ ನಾಲ್ವರು ನಿರ್ದೇಶಕರಿದ್ದಾರೆ. ಅದರಲ್ಲಿ ಬಿಜೆಪಿ ಬೆಂಬಲಿತ ಓರ್ವ ನಿರ್ದೇಶಕ,ಉಪಾಧ್ಯಕ್ಷರಾಗಲು ಕಾಂಗ್ರೆಸ್‌ ಬೆಂಬಲಿತ ನಿರ್ದೇಶಕರಿಗೆ ಬೆಂಬಲ ನೀಡುವ ಜತೆಗೆ, ಚುನಾವಣೆ ಪ್ರಕ್ರಿಯೆ ವೇಳೆ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಅವರ ಕಾರಿನಲ್ಲಿ ಆಗಮಿಸಿದ್ದರಿಂದ ಗಲಾಟೆ ತೀವ್ರಗೊಂಡಿತು.

ಕಾಂಗ್ರೆಸ್‌ ಬೆಂಬಲಿತ ನಿರ್ದೇಶಕರು, ಮಾಜಿ ಶಾಸಕರು ಪಿಕೆಪಿಎಸ್‌ ಕಚೇರಿ ಪ್ರವೇಶಿಸುವ ವೇಳೆ ಬಿಜೆಪಿಯ ಹಲವರು ಕಲ್ಲು ತೂರಿ, ಹಾಕಿ ಸ್ಟಿಕ್‌ ಮೂಲಕ ದಾಳಿ ಆರಂಭಿಸಿದರು. ಈ ವೇಳೆ, ಮಾಜಿ ಶಾಸಕ ಕಾಶಪ್ಪನವರ ಕೈಗೆ ಗಾಯವಾಗಿದೆ. ನಿರ್ದೇಶಕರಾದ ರವಿ ಹುಚನೂರ, ನೀಲಪ್ಪತಪೇಲಿ, ರಾಮನಗೌಡ ತಲೇಪಿ, ದೀಪಾ ಸುಂಕದ, ಮಹಾಂತೇಶ ಹೊಸೂರ ಗಾಯಗೊಂಡಿದ್ದಾರೆ.

ಘಟನೆಯಲ್ಲಿ ಕಾಂಗ್ರೆಸ್‌ನ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿದ್ದ ರವಿ ಹುಚನೂರ, ಮಹಾತೇಶ ಹೊಸೂರ ತೀವ್ರವಾಗಿ ಗಾಯ ಗೊಂಡಿದ್ದು,ಅವರನ್ನು ಬಾಗಲಕೋಟೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತರ ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯಲ್ಲಿ ವಿಜಯಾನಂದ ಕಾಶಪ್ಪನವರ ಕಾರನ್ನು ಜಖಂಗೊಳಿಸಲಾಗಿದೆ. ಇದೇ ವೇಳೆ, ಪೊಲೀಸ್‌ ಡಿಎಆರ್‌ನ ಎರಡು ವಾಹನಗಳಿಗೂಕಲ್ಲು ತೂರಾಟ ನಡೆಸಿದ್ದು, ಅವು ಜಖಂಗೊಂಡಿವೆ. ಈ ಘಟನೆ ಪಿಕೆಪಿಎಸ್‌ನ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದ್ದು, ಘಟನೆಯಲ್ಲಿ ಭಾಗಿಯಾದವರನ್ನು ಪರಿಶೀಲಿಸಿ ಬಂಧಿಸಲಾಗುತ್ತಿದೆ.ಗುರುವಾರ ರಾತ್ರಿವರೆಗೂ ಬಂಧನದ ಪ್ರಕ್ರಿಯೆ ನಡೆದಿತ್ತು. ಆದರೆ, ಎಷ್ಟು ಜನರನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಮೈಸೂರು/ ಬೆಂಗಳೂರು: ಪಾಕಿಸ್ಥಾನ ಪರ ಘೋಷಣೆ ಕೂಗಿದ ವಿದ್ಯಾರ್ಥಿನಿ ಅಮೂಲ್ಯಾ ಲಿಯೋನಾಗೆ ನಕ್ಸಲ್‌ ನಂಟು ಇರುವುದು ಸಾಬೀತಾ ಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ...

  • ಬೆಂಗಳೂರು: ಅನಕ್ಷರತೆ, ಬಡತನ, ಮೂಢನಂಬಿಕೆ, ಸಂಪ್ರದಾಯಗಳು,ಅರಿವಿನ ಕೊರತೆಯಿಂದಾಗಿ ರಾಜ್ಯದಲ್ಲಿ ಬಾಲ್ಯವಿವಾಹ ಹೆಚ್ಚುತ್ತಲೇ ಇದೆ. ಕಳೆದ ಐದು ವರ್ಷಗಳಲ್ಲಿ 453...

  • ಬೆಂಗಳೂರು: ಅಮೂಲ್ಯಾ ಹೇಳಿಕೆ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ "ಮುಸಲ್ಮಾನ್‌,ದಲಿತ,ಕಾಶ್ಮೀರಿ, ಟ್ರಾನ್ಸ್‌,ಆದಿವಾಸಿ-ಮುಕ್ತಿ, ಮುಕ್ತಿ, ಮುಕ್ತಿ, ಈ ಕೂಡಲೇ' ಎಂಬ...

  • ಬೆಂಗಳೂರು: ರಾಜ್ಯದ ಸರಕಾರಿ, ಖಾಸಗಿ ಅನುದಾನಿತ ಕಾಲೇಜುಗಳಲ್ಲಿ ವಿದೇಶೀ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ ಸಂದರ್ಭದಲ್ಲಿ ಹೆಚ್ಚು ನಿಗಾ ವಹಿಸಬೇಕು ಎಂದು ಕಾಲೇಜು...

  • ಬೆಂಗಳೂರು: ಗ್ರಾಮೀಣ ಭಾಗದ ಗ್ರಂಥಾಲಯಗಳಿಗೆ ಆಧುನಿಕ ಸ್ಪರ್ಶ ಕೊಟ್ಟು, ಅವುಗಳನ್ನು ಓದುಗ ಸ್ನೇಹಿ ಮತ್ತು ಜನಸ್ನೇಹಿ ಜ್ಞಾನ ಕೇಂದ್ರಗಳನ್ನಾಗಿ ಮಾಡಲು ಗ್ರಾಮೀಣಾಭಿವೃದ್ಧಿ...

ಹೊಸ ಸೇರ್ಪಡೆ