ರಾಜಕಾರಣದಲ್ಲಿ ಗಂಭೀರತೆ ಬರುವವರೆಗೆ ಕಾಂಗ್ರೆಸ್ ಸದೃಢವಾಗಲು ಸಾಧ್ಯವಿಲ್ಲ: ಉಮಾಶ್ರೀ

Team Udayavani, Nov 26, 2022, 10:10 PM IST

1-asdssads

ರಬಕವಿ-ಬನಹಟ್ಟಿ: ರಾಜಕಾರಣದಲ್ಲಿ ಗಂಭೀರತೆ ಬರುವವರೆಗೆ ಕಾಂಗ್ರೆಸ್ ಪಕ್ಷ ಸದೃಢವಾಗಲು ಸಾಧ್ಯವಾಗುವುದಿಲ್ಲ. ಆದ್ದರಿಂದ ನಾವು ಮೂಲಭೂತವಾಗಿ ಗಂಭೀರತೆಯಿಂದ ಪಕ್ಷದ ಅಭಿವೃದ್ಧಿಗಾಗಿ ಕರ್ತವ್ಯ ನಿರ್ವಹಿಸಬೇಕು ಅಂದಾಗ ಮಾತ್ರ ಯಶಸ್ವಿಯಾಗಲು ಸಾಧ್ಯ ಎಂದು ಮಾಜಿ ಸಚಿವೆ ಉಮಾಶ್ರೀ ಹೇಳಿದರು.

ಶನಿವಾರ ರಬಕವಿಯ ಶಿವದಾಸಿಮಯ್ಯ ಸಮುದಾಯ ಭವನದಲ್ಲಿ ಬಿಎಲ್‌ಓ-2 ಮತದಾರರ ಪಟ್ಟಿ ಪರಿಷ್ಕರಣಾ ತರಬೇತಿ ಶಿಬಿರದಲ್ಲಿ ಮಾತನಾಡಿ, ದೇಶ ಮತ್ತು ರಾಜ್ಯದಲ್ಲಿ ಜನ ವಿರೋಧಿ ಸರ್ಕಾರ ಆಡಳಿತ ನಡೆಸುತ್ತಿದೆ. ಜನರ ಬದುಕನ್ನು ನಿಸ್ತೇಜನ ಮಾಡುತ್ತಿವೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ, ವಿದ್ಯಾವಂತರ ಪರಿಸ್ಥಿತಿ ಕೆಟ್ಟದಾಗಿದೆ. ದೇಶ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ವಾಧಿಕಾರಿ ಸರ್ಕಾರ ನಡೆಸುತ್ತಿದೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಆಶಯಗಳು ನಿರ್ಣಾಮವಾಗುತ್ತಿದೆ. ಬಿಜೆಪಿ ಪಕ್ಷ ಮತದಾರರ ಪಟ್ಟಿಯಲ್ಲಿ ಬಹಳಷ್ಟು ಹೆಸರುಗಳನ್ನು ತೆಗೆದು ಹಾಕಿದೆ. ಆದ್ದರಿಂದ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಬಿಎಲ್‌ಓಗಳ ಜವಾಬ್ದಾರಿಗಳು ಮುಖ್ಯವಾಗಿವೆ ಎಂದು ಉಮಾಶ್ರೀ ತಿಳಿಸಿದರು.

ಇದೇ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ದಯಾನಂದ ಪಾಟೀಲ ಮಾತನಾಡಿ, ೨೦೨೩ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಬಿಎಲ್‌ಓ-2 ಕಾರ್ಯಕರ್ತರ ಜವಾಬ್ದಾರಿಗಳು ಅತಿ ಮುಖ್ಯವಾಗಿವೆ. ಕಾರ್ಯಕರ್ತರು ತಮ್ಮ ಜವಾಬ್ದಾರಿಗಳನ್ನು ಅರಿತುಕೊಂಡು ನಡೆಯಬೇಕಾಗಿದೆ ಎಂದು ತಿಳಿಸಿದರು.

ಮತದಾರರ ಪಟ್ಟಿಯನ್ನು ಪರಿಷ್ಕರಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸರ್ಕಾರಕ್ಕೆ ಸಮಾಂತರವಾಗಿ ಕರ್ತವ್ಯ ನಿರ್ವಹಿಸುತ್ತಾರೆ. ಮಹತ್ವದ ಕಾರ್ಯದಲ್ಲಿ ಪಕ್ಷದ ಕಾರ್ಯಕರ್ತರು ತಮ್ಮನ್ನು ತಾವು ತೊಡಗಿಸಿಕೊಳ್ಳಲಿದ್ದಾರೆ. ಮತದಾರರ ಪಟ್ಟಿಯಲ್ಲಿ ಆಕ್ರಮವನ್ನು ತಡೆಗಟ್ಟುವ ನಿಟ್ಟಿನಲ್ಲಿ ಬಿಎಲ್‌ಓಗಳಿಗೆ ಸಮಾನಂತರವಾಗಿ ಬಿಎಲ್‌ಓ ಗಳು ಕರ್ತವ್ಯ ನಿರ್ವಹಿಸುತ್ತಾರೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಈ ಕಾರ್ಯ ನಿರ್ವಹಿಸುತ್ತಿರುವುದು ಪಕ್ಷಕ್ಕೆ ಮಾತ್ರ ಅಲ್ಲ ದೇಶಕ್ಕೆ ಸಲ್ಲಿಸುವ ಬಹು ದೊಡ್ಡ ಸೇವೆಯಾಗಿದೆ ಎಂದು ದಯಾನಂದ ಪಾಟೀಲ ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ, ತೇರದಾಳ ಮತಕ್ಷೇತ್ರದ ಉಸ್ತುವಾರಿ ಬಸವರಾಜ ಶಿಗ್ಗಾಂವಿ ಮಾತನಾಡಿದರು. ವೇದಿಕೆಯ ಮೇಲೆ ಕಾಂಗ್ರೆಸ್ ಪಕ್ಷದ ಮುಖಂಡರಾದ ನಜೀರ್ ಕಂಗನೊಳ್ಳಿ, ಆನಂದ ಸಿಂಪಿ, ಮಲ್ಲಪ್ಪ ಸಿಂಗಾಡಿ ಇದ್ದರು.
ಲಕ್ಷ್ಮಣ ದೇಸಾರಟ್ಟಿ ಸ್ವಾಗತಿಸಿದರು. ಮಾರುತಿ ಸೋರಗಾವಿ ನಿರೂಪಿಸಿದರು. ಕಿರಣ ಕರಲಟ್ಟಿ ವಂದಿಸಿದರು.

ಕಾರ್ಯಕ್ರಮದಲ್ಲಿ ಸತ್ಯಪ್ಪ ಮಗದುಮ್, ಜಿನ್ನಪ್ಪ ಹೊಸೂರ, ವಿದ್ಯಾ ಬಿಳ್ಳೂರ, ಶಾಂತವೀರ ಬೀಳಗಿ, ರಮೇಶ ಸವದಿ, ಶ್ರೀಶೈಲ ಮೇಣಿ, ಪ್ರವೀಣ ಪೂಜಾರಿ, ಬಸವರಾಜ ದ್ಯಾವನ್ನವರ, ರಾಹುಲ ಕಲಾಲ, ಅಶೋಕ ಅಳಗೊಂಡ ಸೇರಿದಂತೆ ತೇರದಾಳ ಮತಕ್ಷೇತ್ರದ ಕಾರ್ಯಕರ್ತರು ಮತ್ತು ಬಿಎಲ್‌ಓ ಗಳು ಇದ್ದರು.

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.