ಬಾಳೆ ಬೆಳೆದವರ ಬದುಕಿಗೆ ಕೋವಿಡ್ 19 ಕಂಟಕ!

Team Udayavani, Apr 1, 2020, 3:55 PM IST

bk-tdy-1

ಬಾಗಲಕೋಟೆ: ಜಿಲ್ಲೆಯ ರೈತರು ಕಷ್ಟಪಟ್ಟು ದುಡಿದು ಇನ್ನೇನು ಹೊಟ್ಟೆತುಂಬ ಊಟ ಮಾಡಬೇಕೆನ್ನುವಷ್ಟರಲ್ಲಿ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬಂತೆ ಕೋವಿಡ್ 19 ಕಂಟಕವಾಗಿ ಕಾಡುತ್ತಿದೆ.

ಕಳೆದ ವರ್ಷ ಆಗಸ್ಟ್‌ನಲ್ಲಿ ಪ್ರವಾಹದಿಂದ ನಲುಗಿದ್ದ ಜಿಲ್ಲೆಯ ರೈತರು, ಇದೀಗ ಕೋವಿಡ್ 19 ವೈರಸ್‌ ಭೀತಿಯಿಂದ ಬೆಳೆದ ಬೆಳೆಗಳಿಗೆ ಮಾರುಕಟ್ಟೆ ಸಿಗದೇ ಕಂಗಾಲಾಗಿದ್ದಾರೆ.

ಜನರ ಕೈಗೆ ಸಿಗ್ತಿಲ್ಲ ; ರೈತರಿಗೆ ಮಾರಲು ಆಗ್ತಿಲ್ಲ : ಜನರಿಗೆ ತರಕಾರಿ, ಹಣ್ಣು ಎಲ್ಲವೂ ಬೇಕಿವೆ. ಆದರೆ, ಖರೀದಿ ಮಾಡಲು ಆಗುತ್ತಿಲ್ಲ. ಮಾರುಕಟ್ಟೆಗಳು ಸಂಪೂರ್ಣ ಬಂದ್‌ ಆಗಿವೆ. ಇನ್ನು ಕಷ್ಟಪಟ್ಟು ಬೆಳೆದ ರೈತರೂ ಮಾರಾಟ ಮಾಡಲು ಸಿದ್ಧರಿದ್ದಾರೆ. ಹಾಕಿರುವ ಹಣವಾದರೂ ಬರಲಿ ಎಂದು ತುಡಿಯುತ್ತಿದ್ದಾರೆ. ಆದರೆ, ಅವರಿಗೆ ಮಾರಾಟ ಮಾಡಲು ಆಗುತ್ತಿಲ್ಲ.

ಯಾವ ಬೆಳೆ ಎಷ್ಟು ?: ಜಿಲ್ಲೆಯಲ್ಲಿ 56,486.56 ಹೆಕ್ಟೇರ್‌ ಪ್ರದೇಶದಲ್ಲಿ ತರಕಾರಿ ಹಾಗೂ ವಿವಿಧ ಹಣ್ಣು ಬೆಳೆ ಬೆಳೆಯಲಾಗುತ್ತದೆ. 665.45 ಹೆಕ್ಟೇರ್‌ ಮಾವು, 1250 ಹೆಕ್ಟೇರ್‌ ಲಿಂಬೆ, 358.37 ಸಪೋಟ, 2911 ಹೆಕ್ಟೇರ್‌ ದಾಳಿಂಬೆ, 3165 ಹೆಕ್ಟೇರ್‌ ದ್ರಾಕ್ಷಿ, 520ರಿಂದ 700 ಹೆಕ್ಟೇರ್‌ ಕಲ್ಲಂಗಡಿ ಹೀಗೆ ವಿವಿಧ ಬೆಳೆ ಬೆಳೆಯಲಾಗಿದೆ. ತೋಟಗಾರಿಕೆ ಇಲಾಖೆಯ ಪ್ರಕಾರ 10233.31 ಹೆಕ್ಟೇರ್‌ ಪ್ರದೇಶದಲ್ಲಿ ವಿವಿಧ ಹಣ್ಣು ಬೆಳೆಯುತ್ತಿದ್ದು, ಇದರಿಂದ 2,18,596.78 ಮೆಟ್ರಿಕ್‌ ಟನ್‌ ಉತ್ಪಾದನೆಯಾಗುತ್ತದೆ. ಇದರಿಂದ 48047.22 ಲಕ್ಷ ವಾರ್ಷಿಕ ಮೌಲ್ಯದ ಹಣ್ಣು ಬೆಳೆ ಮಾರುಕಟ್ಟೆಗೆ ಬರುತ್ತಿತ್ತು. ಆದರೆ, ಈ ಬಾರಿ ಇಷ್ಟೊಂದು ಬೆಳೆ ಬೆಳೆದರೂ ಅದಕ್ಕೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗದ ಪರಿಸ್ಥಿತಿ ಬಂದೋದಗಿದೆ.

ಹಾಪ್‌ಕಾಮ್ಸ್‌ ಸಕ್ರಿಯವಾಗಲಿ: ರೈತರು ಬೆಳೆದ ಬೆಳೆಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಒದಗಿಸಲೆಂದೇ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಹಾಗೂ ಹಾಪ್‌ಕಾಮ್ಸ್‌ ಇವೆ. ಸರ್ಕಾರದ ಅಧೀನದಲ್ಲೇ ಬರುವ ಈ ಸಂಸ್ಥೆಗಳೂ, ಕೋವಿಡ್ 19  ಭೀತಿಗೆ ಯಾವುದೇ ಕಾರ್ಯ ಮಾಡದ ಅನಿವಾರ್ಯತೆಯಲ್ಲಿ ಸಿಲುಕಿವೆ. ಆದರೆ, ತಕ್ಷಣಕ್ಕೆ ಹಾನಿಯಾಗುವ ಬಾಳೆ, ಕಲ್ಲಂಗಡಿ, ಟೊಮ್ಯಾಟೋ, ಬದನೆಕಾಯಿ ಸಹಿತ ವಿವಿಧ ತರಕಾರಿ ಮಾರಾಟದ ವ್ಯವಸ್ಥೆಗೆ ಹಾಪ್‌ಕಾಮ್ಸ್‌ ಮೂಲಕ ವ್ಯವಸ್ಥೆ ಮಾಡಲು ಅವಕಾಶವಿದೆ.

ತೋಟಗಾರಿಕೆ ಬೆಳೆ ಬೆಳೆಯುವ ರೈತರು ತೀವ್ರ ಸಂಕಷ್ಟದಲ್ಲಿದ್ದೇವೆ. ಪ್ರವಾಹದಿಂದ ಚೇತರಿಸಿಕೊಳ್ಳಲಾಗದ ರೈತರು, ಈಗ ಮತ್ತೆ ಕೋವಿಡ್ 19 ಭೀತಿಯಿಂದ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಇಲ್ಲದೇ ಕಂಗಾಲಾಗಿದ್ದಾರೆ. ಹಣ್ಣು, ತರಕಾರಿ ಮಾರಾಟಕ್ಕೆ ಜಿಲ್ಲಾಡಳಿತ ಪರವಾನಿಗೆ ನೀಡಿದೆಯಾದರೂ, ಬೇರೆ ಬೇರೆ ಕಡೆ ಪೂರೈಕೆ ಮಾಡುವಷ್ಟು ವಿವಿಧ ಹಣ್ಣು ನಮ್ಮ ಜಿಲ್ಲೆಯಲ್ಲಿ ಬೆಳೆಯಲಾಗುತ್ತಿದೆ. ಹೀಗಾಗಿ ಎಲ್ಲೂ ಮಾರುಕಟ್ಟೆ ವ್ಯವಸ್ಥೆ ಇಲ್ಲ. ಕೊಪ್ಪಳದ ಮಾದರಿಯಂತೆ ಹಾಪ್‌ಕಾಮ್ಸ್‌ ನಮ್ಮ ನೆರವಿಗೆ ಬರಬೇಕು.  ಬಿ.ಎಂ. ದೇಸಾಯಿ, ಅಧ್ಯಕ್ಷ, ಕೃಷಿಕ ಸಮಾಜ, ಬಾಗಲಕೋಟೆ

ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.