ಕೋವಿಡ್ 19 ಹೊಡೆತಕ್ಕೆ ಗೈಡ್ಸ್‌ ಕಂಗಾಲು

Team Udayavani, Apr 3, 2020, 12:41 PM IST

ಕೋವಿಡ್ 19 ಹೊಡೆತಕ್ಕೆ ಗೈಡ್ಸ್‌ ಕಂಗಾಲು

ಸಾಂದರ್ಭಿಕ ಚಿತ್ರ

ಅಮೀನಗಡ: ಪ್ರವಾಸೋದ್ಯಮ ಅಭಿವೃದ್ಧಿ ಹೊಂದುವಲ್ಲಿ ಪ್ರಮುಖ ಪಾತ್ರ ವಹಿಸಲಿರುವ ಪ್ರವಾಸಿ ಮಾರ್ಗದರ್ಶಿಗಳಿಗೆ (ಗೈಡ್ಸ್‌) ಕೋವಿಡ್ 19 ದೊಡ್ಡ ಹೊಡೆತ ನೀಡಿದೆ. ಇತಿಹಾಸದ ಜ್ಞಾನ ಮತ್ತು ಮಾತನ್ನೇ ಬಂಡವಾಳವಾಗಿಸಿಕೊಂಡು ಸ್ವಾಭಿಮಾನದ ಜೀವನ ಸಾಗಿಸಲು ಗೈಡ್ಸ್‌ ವೃತ್ತಿಯನ್ನು ಆಯ್ಕೆ ಮಾಡಿಕೊಂಡು ಬದುಕು ಕಟ್ಟಿಕೊಂಡವರ ಬದುಕು ಆರ್ಥಿಕವಾಗಿ ಅತಂತ್ರವಾಗಿದೆ.

ಸಂಕಷ್ಟದಲ್ಲಿ ಗೈಡ್‌ಗಳು: ಪ್ರವಾಸಿ ತಾಣಗಳಲ್ಲಿ ಮೂಲಭೂತ ಸಮಸ್ಯೆಗಳಿಂದ ಬಾದಾಮಿ, ಪಟ್ಟದಕಲ್ಲ, ಐಹೊಳೆಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆ. ಇದರಿಂದ ಪ್ರವಾಸಿ ಮಾರ್ಗದರ್ಶಿಗಳ ಬದುಕು ನಡೆಯುವುದೇ ಕಷ್ಟವಾಗಿದೆ. ಇದರ ನಡುವೆ ಕಳೆದ ಆಗಸ್ಟ್‌ನಲ್ಲಿ ಮಲಪ್ರಭಾ ನದಿಯ ಪ್ರವಾಹದಿಂದ ಪ್ರವಾಸಿಗರ ಸಂಖ್ಯೆ ಬಹುತೇಕ ಕಡಿಮೆಯಾಗಿದೆ. ಈಗ ಕೋವಿಡ್ 19  ಭೀತಿಯಿಂದಾಗಿ ಸರ್ಕಾರ ಮುಂಜಾಗ್ರತ ಕ್ರಮವಾಗಿ ಪ್ರವಾಸೋದ್ಯಮಕ್ಕೆ ಸಂಪೂರ್ಣವಾಗಿ ನಿರ್ಬಂಧ ಹೇರಿದೆ. ಪ್ರವಾಸಿಗರ ಮೇಲೆ ಅವಲಂಬಿತವಾಗಿ ಬದುಕು ಕಟ್ಟಿಕೊಂಡ ಪ್ರವಾಸಿ ಮಾರ್ಗದರ್ಶಿಗಳ ಬದುಕು ಸಂಕಷ್ಟದಲ್ಲಿದ್ದಾರೆ.

ನಂಬಿದ ವೃತ್ತಿಗೂ ಕುತ್ತು: ವಿಶ್ವ ದರ್ಜೆಯ ಪ್ರವಾಸಿ ತಾಣ ಪಟ್ಟದಕಲ್ಲ, ವಿಶ್ವದ ಗಮನ ಸೆಳೆದ ಬಾದಾಮಿ ಪ್ರವಾಸಿ ತಾಣ, ಭಾರತೀಯ ದೇವಾಲಯಗಳ ತೊಟ್ಟಿಲು ಖ್ಯಾತಿಯ ಐಹೊಳೆಯ ರಾಷ್ಟ್ರೀಯ ಪ್ರವಾಸಿ ತಾಣಗಳ ವ್ಯಾಪ್ತಿಯಲ್ಲಿ ಸುಮಾರು 25 ಪ್ರವಾಸಿ ಮಾರ್ಗದರ್ಶಿಗಳು ಸೇವೆ ಸಲ್ಲಿಸುತ್ತಾರೆ. ಆದರೆ, ಪ್ರವಾಸಿ ಗೈಡ್‌ ಉದ್ಯೋಗವನ್ನು ನಂಬಿ ಬದುಕು ಕಟ್ಟಿಕೊಂಡ ಪ್ರವಾಸಿ ಮಾರ್ಗದರ್ಶಿಗಳಿಗೆ ಸತತ ಸಮಸ್ಯೆಗಳು ಕುಟುಂಬ ನಿರ್ವಹಣೆ ಮಾಡುವುದೇ ಕಷ್ಟವಾಗಿದೆ.

ಆರ್ಥಿಕ ಸಹಕಾರಕ್ಕೆ ಆಗ್ರಹ: ಪ್ರವಾಸಿ ಗೈಡ್‌ ಗಳಲ್ಲಿ ಬಹುತೇಕ ಜನ ಪ್ರವಾಸಿಗರ ಮೇಲೆ ಅವರ ಬದುಕು ನಿಂತಿದೆ. ದಿನನಿತ್ಯ ಬರುವ ಆದಾಯದಿಂದ ಅವರ ಕುಟುಂಬಗಳು ನಡೆಯುತ್ತಿವೆ. ಈ ಭಾಗದ ಪ್ರವಾಸಿ ತಾಣಗಳಲ್ಲಿ ಪ್ರವಾಸಿ ಫೀ ಹೆಚ್ಚಾಗಿ ನೀಡಿದರೂ ಕೂಡಾ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯವಿಲ್ಲ ಇದರಿಂದ ಪ್ರವಾಸಿಗರ ಸಂಖ್ಯೆ ಕಡಿಮೆ. ಇಂತಹ ಸಂದರ್ಭದಲ್ಲಿ ಪ್ರವಾಹ ಮತ್ತು ಕೋವಿಡ್ 19  ಭೀತಿಯಿಂದ ಗೈಡ್‌ಗಳ ಪರಿಸ್ಥಿತಿ ದುಸ್ತರವಾಗಿದೆ. ಪ್ರವಾಸಿ ಗೈಡ್‌ ಗಳಿಗೆ ಆರ್ಥಿಕವಾಗಿ ಸಹಕಾರ ನೀಡಬೇಕು ಎಂಬುದು ಪ್ರವಾಸಿ ಗೈಡ್‌ಗಳ ಆಗ್ರಹ.

ಪ್ರವಾಸಿ ತಾಣಗಳಲ್ಲಿ ಪ್ರವಾಸಿ ಗೈಡ್‌ಗಳು ಪ್ರವಾಸಿಗರಿಗೆ ಗೈಡ್‌ ಮಾಡುವ ಉದ್ಯೋಗ ಬಿಟ್ಟು ಬೇರೆ ಉದ್ಯೋಗ ಗೊತ್ತಿಲ್ಲ. ದಿನನಿತ್ಯ ಮಾಡುವ ಉದ್ಯೋಗದಿಂದ ನಮ್ಮ ಕುಟುಂಬಗಳು ನಡೆಯುತ್ತವೆ. ಈಗ ಕೊರೊನಾ ವೈರಸ್‌ ನಮ್ಮ ಜೀವನಕ್ಕೆ ಆರ್ಥಿಕವಾಗಿ ಹೊಡೆತ ಬಿದ್ದಿದೆ.  ಅಶೋಕ ಮಾಯಾಚಾರಿ, ರಮೇಶ ಭಜಂತ್ರಿ, ಜಗದೀಶ ಹೊಸಮನಿ, ಶಿವಾನಂದ ಹೂಗಾರ, ಪ್ರವಾಸಿ ಮಾರ್ಗದರ್ಶಿಗಳು

-ಎಚ್‌.ಎಚ್‌.ಬೇಪಾರಿ

ಟಾಪ್ ನ್ಯೂಸ್

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.