ಮುಂಬೈನಿಂದ ಆಗಮಿಸಿದ್ದ ಶುಶ್ರೂಷಕನಿಗೆ ಸೋಂಕು

Team Udayavani, May 17, 2020, 9:40 AM IST

ಮುಂಬೈನಿಂದ ಆಗಮಿಸಿದ್ದ ಶುಶ್ರೂಷಕನಿಗೆ ಸೋಂಕು

ಬಾಗಲಕೋಟೆ: ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್‌ನ ವ್ಯಕ್ತಿಯೊಬ್ಬರಿಗೆ ಕೋವಿಡ್‌ -19 ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 71ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ|ಕೆ. ರಾಜೇಂದ್ರ ತಿಳಿಸಿದ್ದಾರೆ.

ಮುಂಬೈನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಶುಶ್ರೂಷಕನಾಗಿ ಆಗಿ ಕೆಲಸ ಮಾಡುತ್ತಿದ್ದ 33 ವರ್ಷದ ಪುರುಷ ಪಿ-1063, ಕಳೆದ ಮೇ 12ರಂದು ಸ್ವಂತ ಊರು ಕುಳಗೇರಿ ಕ್ರಾಸ್‌ಗೆ ಬಂದಿದ್ದ. ಅಂದಿನಿಂದಲೇ ಸಾಂಸ್ಥಿಕ ಕ್ವಾರಂಟೈನ್‌ ಮಾಡಲಾಗಿತ್ತು. ಅಲ್ಲದೇ ವ್ಯಕ್ತಿಯ ಗಂಟಲು ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ವರದಿಯಲ್ಲಿ ಪಾಸಿಟಿವ್‌ ಬಂದಿದೆ. ಸದ್ಯ ಆತನನ್ನು ಜಿಲ್ಲಾ ಕೋವಿಡ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

111 ವರದಿ ನೆಗೆಟಿವ್‌: ಜಿಲ್ಲೆಯಿಂದ ಒಟ್ಟು 112 ಸ್ಯಾಂಪಲ್‌ಗ‌ಳನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ಪೈಕಿ 111 ಸ್ಯಾಂಪಲ್‌ಗ‌ಳ ವರದಿ ನೆಗೆಟಿವ್‌ ಬಂದಿದ್ದು, ಒಂದು ಮಾತ್ರ ಪಾಸಿಟಿವ್‌ ವರದಿಯಾಗಿದೆ. ಹೊಸದಾಗಿ 42 ಸ್ಯಾಂಪಲ್‌ಗ‌ಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದಿದ್ದಾರೆ.

ಜಿಲ್ಲೆಯಲ್ಲಿ ಸದ್ಯ 892 ಜನರನ್ನು ಪ್ರತ್ಯೇಕವಾಗಿ ನಿಗಾದಲ್ಲಿರಿಸಿದ್ದು, ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ 1251 ಜನರಿದ್ದಾರೆ. ಇಲ್ಲಿಯವರೆಗೆ ಒಟ್ಟು 4725 ಸ್ಯಾಂಪಲ್‌ ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 4597 ನೆಗೆಟಿವ್‌, 71 ಪಾಸಿಟಿವ್‌ ಹಾಗೂ ಓರ್ವ ವ್ಯಕ್ತಿ ಮೃತಟ್ಟಿದ್ದಾರೆಂದು ಹೇಳಿದ್ದಾರೆ. ಕೋವಿಡ್‌-19 ಸೋಂಕಿನಿಂದ ಒಟ್ಟು 27 ಜನ ಗುಣಮುಖರಾಗಿದ್ದು, ಜಿಲ್ಲಾಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. 43 ಜನ ಕೋವಿಡ್‌ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಒಂಭತ್ತು ಕಂಟೇನ್ಮೆಂಟ್‌ ಝೋನ್‌ಗಳಿದ್ದು, ಮುಧೋಳ ತಾಲೂಕಿನ ಮುಗಳಖೋಡ ಗ್ರಾಮ, ಜಮಖಂಡಿಯ ಹಾಗೂ ಬಾಗಲಕೋಟೆಯ ಕಂಟೇನ್ಮೆಂಟ್‌ ಝೋನ್‌ ತೆರವುಗೊಳಿಸಲಾಗಿದೆ ಎಂದಿದ್ದಾರೆ. ಒಟ್ಟು ಒಂಭತ್ತು ಸ್ಯಾಂಪಲ್‌ ಮಾತ್ರ ರಿಜೆಕ್ಟ್ ಆಗಿದ್ದು, 14 ದಿನಗಳ ಸಾಂಸ್ಥಿಕ ಕ್ವಾರಂಟೈನ್‌ನಿಂದ 288 ಜನರನ್ನು ಬಿಡುಗಡೆ ಮಾಡಿರುವುದಾಗಿ ಡಿಸಿ ತಿಳಿಸಿದ್ದಾರೆ.

ನವನಗರದ ಜಿಲ್ಲಾ ಕೋವಿಡ್‌ -19 ಆಸ್ಪತ್ರೆಯಲ್ಲಿ ಶನಿವಾರದಿಂದ ಕೋವಿಡ್‌ ಪರೀಕ್ಷೆ ಆರಂಭಿಸಲಾಗಿದೆ. ಕೋವಿಡ್‌ ಪರೀಕ್ಷೆ ಲ್ಯಾಬ್‌ನಲ್ಲಿ ಮೊದಲ ದಿನ 6 ಸ್ಯಾಂಪಲ್‌ಗ‌ಳ ಪರೀಕ್ಷೆ ಮಾಡಲಾಗಿದ್ದು, ಎಲ್ಲವೂ ನೆಗೆಟಿವ್‌ ಬಂದಿವೆ.  ಡಾ| ಕೆ.ರಾಜೇಂದ್ರ, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.