ಶಿರೂರ-ಮನ್ನಿಕಟ್ಟಿಯಲ್ಲಿ 2ನೇ ಅಲೆ ಉಲ್ಬಣ

ಎರಡೂ ಜನ ವಸತಿಗೆ 9 ಜನ ಎಂಬಿಬಿಎಸ್‌ ವೈದ್ಯರ ನೇಮಕ | ಶಾಸಕ ಚರಂತಿಮಠ ಭೇಟಿ

Team Udayavani, May 19, 2021, 2:27 PM IST

18 bgk-3a

ಬಾಗಲಕೋಟೆ: ಕೊರೊನಾ ಎರಡನೇ ಅಲೆ ಹಳ್ಳಿಗಳಿಗೂ ಹರಡುತ್ತಿರುವ ಹಿನ್ನೆ‌ಲೆಯಲ್ಲಿ ತಾಲೂಕಿನ ಶಿರೂರ ಪಟ್ಟಣ ಮತ್ತು ಮನ್ನಿಕಟ್ಟಿ ಗ್ರಾಮಗಳಿಗೆ ಶಾಸಕ ಡಾ|ವೀರಣ್ಣ ಚರಂತಿಮಠ, ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ|ಕೆ.ರಾಜೇಂದ್ರ, ಜಿಪಂ ಸಿಇಒ ಟಿ.ಭೂಬಾಲನ ಭೇಟಿ ನೀಡಿ ಗ್ರಾಮದ ಜನರ ಆರೋಗ್ಯ ವಿಚಾರಿಸಿ ಅವರಿಗೆ ಆತ್ಮಸ್ಥೈರ್ಯ ತುಂಬಿದರು.

ಮಂಗಳವಾರ ಭೇಟಿ ನೀಡಿದ ಶಾಸಕರು ಮತ್ತು ಅಧಿಕಾರಿಗಳು ಗ್ರಾಮಗಳಲ್ಲಿ ಸಂಚರಿಸಿ ಅಲ್ಲಿನ ಸ್ಥಿತಿಗತಿ ಪರಿಶೀಲಿಸಿದರು. ಕೋವಿಡ್‌ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದರು. ಸಂಚಾರದ ವೇಳೆಯಲ್ಲಿ ಕೊವಿಡ್‌ ಲಕ್ಷಣಗಳನ್ನು ಹೊಂದಿದವರಿಗೆ ಔಷಧ ಕಿಟ್‌ ವಿತರಿಸಿದರು. ಕೋವಿಡ್‌ ಹಳ್ಳಿಯ ಕಡೆಗೂ ಪಸರಿಸುತ್ತಿದ್ದು, ಕೊರೊನಾ ಕರ್ಫ್ಯೂ ಕಟ್ಟುನಿಟ್ಟಾಗಿ ಪಾಲಿಸಿದಲ್ಲಿ ಕೋವಿಡ್‌ ಸೋಂಕಿನ ಪ್ರಮಾಣ ಕಡಿಮೆ ಮಾಡಲು ಸಾಧ್ಯವಾಗುತ್ತದೆ. ಆದ್ದರಿಂದ ಅನಾವಶ್ಯಕವಾಗಿ ಮನೆಯಿಂದ ಹೊರಗಡೆ ಬರದಂತೆ ಶಾಸಕ ವೀರಣ್ಣ ಚರಂತಿಮಠ ಗ್ರಾಮಸ್ಥರಲ್ಲಿ ಮನವಿ ಮಾಡಿಕೊಂಡರು.

ಪಾಸಿಟಿವ್‌ ಕೇಸ್‌ಗಳು ದೃಢಪಟ್ಟವರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಸ್ಯಾಂಪಲ್‌ ತೆಗೆದುಕೊಂಡು ಪರೀಕ್ಷೆಗೆ ಕಳುಹಿಸುವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಿಗೆ ಸೂಚಿಸಿದರು. ಕೆಮ್ಮು, ನೆಗಡಿ, ಜ್ವರ ಇದ್ದವರು ತಕ್ಷಣ ಸರಕಾರಿ ಆಸ್ಪತ್ರೆಗಳಲ್ಲಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಗ್ರಾಮದ ಆರೋಗ್ಯದ ದೃಷ್ಟಿಯಿಂದ ಬಿವಿವಿ ಸಂಘದ ವೈದ್ಯಕೀಯ ಮಹಾವಿದ್ಯಾಲಯದಿಂದ 9 ಜನ ಎಂಬಿಬಿಎಸ್‌ ವೈದ್ಯರನ್ನು ಶಿರೂರ ಮತ್ತು ಮನ್ನಿಕೇರಿ ಗ್ರಾಮಗಳಿಗೆ ಕಳುಹಿಸಲಾಗುತ್ತಿದೆ ಎಂದು ತಿಳಿಸಿದರು.

ಎರಡು ಗ್ರಾಮಗಳಲ್ಲಿ ವೈದ್ಯರ ಜತೆ ಸ್ಥಳೀಯ ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಹಾಯಕರನ್ನು ನೀಡಿ ತಂಡಗಳನ್ನು ರಚಿಸಿ ಆರೋಗ್ಯ ತಪಾಸಣೆ ಕೈಗೊಳ್ಳಲು ಕ್ರಮ ವಹಿಸುವಂತೆ ತಾಲೂಕು ವೈದ್ಯಾಧಿ ಕಾರಿ ಡಾ|ಅರವಿಂದ ಪಟ್ಟಣಶೆಟ್ಟಿ ಅವರಿಗೆ ಸೂಚಿಸಿದರು. ಗ್ರಾಮದ ಜನರು ಜಾಗೃತಿಯಿಂದ ಇರಬೇಕು. ಪಾಸಿಟಿವ್‌ ದೃಢಪಟ್ಟವರನ್ನು ತಾಲೂಕಿನ ಕೋವಿಡ್‌ ಕೇರ್‌ ಸೆಂಟರ್‌ಗೆ ದಾಖಲಿಸಲು ತಿಳಿಸಿದರು.

ತಹಶೀಲ್ದಾರ್‌ ಗುರುಸಿದ್ದಯ್ಯ ಹಿರೇಮಠ, ತಾಲೂಕಾ ಆರೋಗ್ಯಾಧಿಕಾರಿ ಡಾ|ಅರವಿಂದ ಪಟ್ಟಣಶೆಟ್ಟಿ, ಹಿಂದುಳಿದ ವರ್ಗಗಳ ಕಲ್ಯಾಣಾಕಾರಿ ಹಾಗೂ ಕೋವಿಡ್‌ ನೋಡಲ್‌ ಅಧಿಕಾರಿ ಮಂಜುನಾಥ ಡೋಂಬರ, ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ| ವಿನೋದ ಹಾದಿಮನಿ, ಗ್ರಾಮ ಲೆಕ್ಕಾಧಿಕಾರಿ ಆನಂದ ಅಳ್ಳಿಗಿಡದ, ಶಿರೂರ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಐ.ಜಿ.ಕೊಣ್ಣೂರ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.