ದೇವರದಾಸಿಮಯ್ಯ ಹಟಗಾರ ಜಗದ್ಗುರುಗಳ ಸಂಭ್ರಮದ ಪುರಪ್ರವೇಶ

Team Udayavani, Feb 1, 2023, 7:22 PM IST

1-ssdsd

ರಬಕವಿ-ಬನಹಟ್ಟಿ: ಜೈ ಹಟಗಾರ ಜೈ ಜೈ ಹಟಗಾರ, ಚಿಕ್ಕರೇವಣಸಿದ್ಧ ಮಹಾರಾಜಕೀ ಜೈ, ದೇವರ ದಾಸಿಮಯ್ಯ ಮಹಾರಾಜಕೀ ಜೈ ಎಂಬ ಜಯಘೋಷಣೆಗಳ ಮಧ್ಯದಲ್ಲಿ ದೇವರದಾಸಿಮಯ್ಯ ಹಟಗಾರ ಜಗದ್ಗುರು ಪರಮಪೂಜ್ಯ ಚಿಕ್ಕರೇವಣಸಿದ್ಧ ಶಿವಶರಣರ ಪೀಠಾರೋಹಣ ಅಂಗವಾಗಿ ನೂತನ ಜಗದ್ಗುರುಗಳ ಪುರಪ್ರವೇಶ ಬುಧವಾರ ಸಂಭ್ರಮ ಸಡಗರದಿಂದ ನಡೆಯಿತು.

ಬೆಳಗ್ಗೆ 9.30 ಕ್ಕೆ ಕೆಎಚ್‌ಡಿಸಿ ಕಾಲೊನಿಯ ದೇವರ ದಾಸಿಮಯ್ಯ ದೇವಸ್ಥಾನದಿಂದ ಆರಂಭಗೊಂಡ ಪುರಪ್ರವೇಶದ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮಧ್ಯಾಹ್ನ 2 ಕ್ಕೆ ಎಸ್‌ಆರ್‌ಎ ಮೈದಾನದಲ್ಲಿ ಮುಕ್ತಾಯಗೊಂಡಿತು.

ಮೆರವಣಿಗೆ ಸಂಚರಿಸುವ ಬೀದಿಯು ರಂಗೋಲಿಯಿಂದ ಕಂಗೊಳಿಸುತ್ತಿತ್ತು. ಜಗದ್ಗುರುಗಳ ರಥಕ್ಕೆ ರಸ್ತೆಯ ಬದಿಗೆ ನಿಂತ ಭಕ್ತರು ಹೂಮಳೆ ಗೈದರು.

ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಆರತಿ ಮತ್ತು ಕುಂಭವನ್ನು ಹೊತ್ತುಕೊಂಡು ಪಂಚಾಕ್ಷರಿ ಮಂತ್ರವನ್ನು ಜಪಿಸುತ್ತ ಮೆರವಣಿಗೆಯಲ್ಲಿ ಸಾಗಿದರು.ಡೊಳ್ಳು ಕುಣಿತ, ಹಳಗೆ ಮೇಳ, ಗೊಂಬೆ ಕುಣಿತ, ಕರಡಿ ಮಜಲು, ಹಾಗೂ ಇನ್ನೀತರ ವಾದ್ಯ ಮೇಳಗಳು ಮೆರವಣಿಗೆಗೆ ಸಾಕಷ್ಟು ಮೆರಗನ್ನು ತಂದವು.

ಇಂಚಲದ ಶಿವಾನಂದ ಭಾರತ ಸ್ವಾಮೀಜಿ, ಆಳಂದದ ರೇವಣಸಿದ್ಧ ಶಿವಶರಣ ಮಂಟಪದ ಚನ್ನಬಸವ ಪಟ್ಟದದೇವರು, ಬ್ರಹ್ಮಾನಂದ ಆಶ್ರಮದ ಗುರುಸಿದ್ಧೇಶ್ವರರು, ಹಿರೇಮಠದ ಶರಣಬಸವ ಶಿವಾಚಾರ್ಯರು, ಮಹಾಲಿಂಗಪುರದ ಸಹಜಾನಂದ ಸ್ವಾಮೀಜಿ ಮತ್ತು ಶಾಸಕ ಸಿದ್ದ ಸವದಿ ಮೆರವಣಿಗೆಗೆ ಚಾಲನೆ ನೀಡಿದರು.

ಪೀಠಾರೋಹಣದ ಗೌರವಾಧ್ಯಕ್ಷ ಡಾ.ಎಂ.ಎಸ್.ದಡ್ಡೆನ್ನವರ ಮಾತನಾಡಿ, ಹಟಗಾರು ಜಗದ್ಗುರುಗಳ ಪೀಠ ಸ್ಥಾಪನೆ ಮತ್ತು ಜಗದ್ಗುರುಗಳ ನೇಮಕ ಹೋರಾಟ ಎರಡು ದಶಕಗಳ ಕಾಲದಿಂದ ನಡೆದಿತ್ತು. ಹಟಗಾರರ ಜಗದ್ಗುರುಗಳ ಪೀಠ ಸ್ಥಾಪನೆಯಿಂದಾಗಿ ಹಟಗಾರರು ಸಮಾಜದ ಮುಖ್ಯ ವಾಹಿನಿಗೆ ಬರುವಂತಾಗಿದೆ ಮತ್ತ ಸಮಾಜಕ್ಕೆ ಬಲ ಬಂದಂತಾಗಿದೆ.

ಪೀಠ ಸ್ಥಾಪನೆಯಿಂದ ಯುವಕರಿಗೆ ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಮಾರ್ಗದರ್ಶನ ಮಾಡಲು ಸಹಾಯವಾಗಿದೆ. ಯುವಕರು ಗುರು ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವುದರ ಜೊತೆಗೆ ಹಟಗಾರ ಸಮಾಜವನ್ನು ಬೆಳೆಸುವ ನಿಟ್ಟಿನಲ್ಲಿ ಸೂಕ್ತ ಚಿಂತನೆಗಳನ್ನು ಮಾಡಬೇಕು. ಹಟಗಾರ ಜಗದ್ಗುರುಗಳ ಪೀಠಾರೋಹಣಕ್ಕೆ ಅಪಾರ ಸಂಖ್ಯೆಯಲ್ಲಿ ಸಮಾಜದ ಬಾಂಧವರು ಆಗಮಿಸಿರುವುದು ಹೆಮ್ಮೆಯ ಸಂಗತಿಯಾಗಿದೆ.- ಡಾ.ಎಂ.ಎಸ್.ದಡ್ಡೆನ್ನವರ, ಪೀಠಾರೋಹಣದ ಗೌರವಾಧ್ಯಕ್ಷ

ರಾಜಶೇಖರ ಸೋರಗಾವಿ, ಶ್ರೀಶೈಲ ಧಬಾಡಿ, ಸೋಮು ಗೊಂಬಿ, ಆರ್.ಸಿ.ಘಾಳಿ, ಶ್ರೀಪಾದ ಬಾಣಕಾರ, ಶಂಕರ ಜಾಲಿಗಿಡದ, ಮಲ್ಲಿಕಾರ್ಜುನ ಬಾಣಕಾರ, ರಾಜಶೇಖರ ಮಾಲಾಪುರ, ಶ್ರೀಶೈಲ ಬೀಳಗಿ, ರಾಜು ಅಂಬಲಿ, ಚಂದ್ರಶೇಖರ ಶಿವಪೂಜಿ, ಡಾ.ಪಿ.ವಿ. ಪಟ್ಟಣ, ಎಂ.ಜಿ.ಕೆರೂರ, ಪಂಡಿತ ಪಟ್ಟಣ, ರಾಜೇಂದ್ರ ಭದ್ರನವರ, ಪ್ರಕಾಶ ಮಂಡಿ, ಬಸವರಾಜ ಜಾಡಗೌಡ, ಶಾಂತಾ ಸೋರಗಾವಿ, ಶಾಂತಾ ಮಂಡಿ, ಮಾಲಾ ಬಾವಲತ್ತಿ, ಹೇಮಲತಾ ಪಟ್ಟಣ ಸೇರಿದಂತೆ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಿಂದ ಮತ್ತು ನೆರೆಯ ಮಹಾರಾಷ್ಟ್ರದಿಂದ ಆಗಮಿಸಿದ ಹಟಗಾರ ಸಮಾಜದ ಪ್ರಮುಖರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು ಎಚ್ಚರವಹಿಸಲು ಅರಣ್ಯ ಅಧಿಕಾರಿಗಳ ಸೂಚನೆ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ: ಓರ್ವನ ಸೆರೆ, ಇನ್ನೋರ್ವ ಪರಾರಿ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ ಯತ್ನ: ಓರ್ವನ ಸೆರೆ, ಇನ್ನೋರ್ವ ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕ್ಷೇತ್ರದ ಅಭಿವೃದ್ದಿಗೆ ಸದಾ ಬದ್ಧನಾಗಿರುವೆ : ಶಾಸಕ ಸಿದ್ದು ಸವದಿ

ಕ್ಷೇತ್ರದ ಅಭಿವೃದ್ದಿಗೆ ಸದಾ ಬದ್ಧನಾಗಿರುವೆ : ಶಾಸಕ ಸಿದ್ದು ಸವದಿ

ಸಂಪೂರ್ಣ ಕೇಸರಿಮಯವಾದ ಮಹಾಲಿಂಗಪುರ…ಯುವಶಕ್ತಿ ಸಮಾಗಮ

ಸಂಪೂರ್ಣ ಕೇಸರಿಮಯವಾದ ಮಹಾಲಿಂಗಪುರ… ಯುವಶಕ್ತಿ ಸಮಾಗಮ

ಮತದಾನ ಸಂವಿಧಾನ ನೀಡಿದ ಅವಕಾಶ, ಒಂದು ಓಟಿನಲ್ಲಿ ಅಪಾರ ಶಕ್ತಿ ಅಡಗಿದೆ: ತೇಜಸ್ವಿ ಸೂರ್ಯ

ಮತದಾನ ಸಂವಿಧಾನ ನೀಡಿದ ಅವಕಾಶ, ಒಂದು ಓಟಿನಲ್ಲಿ ಅಪಾರ ಶಕ್ತಿ ಅಡಗಿದೆ: ತೇಜಸ್ವಿ ಸೂರ್ಯ

1-sdadsadasd

ಕನಸು ಹುಟ್ಟಿಸಿದ ಸಿದ್ದರಾಮಯ್ಯ ನಡೆ: ಬಾದಾಮಿಯಲ್ಲಿ ಕೈ ಕಾರ್ಯಕರ್ತರ ಒಗ್ಗಟ್ಟಿನ ಮಂತ್ರ

1-sadsadad

ನಾವು ಬಂಡುಕೋರರಲ್ಲ, ಬಿಜೆಪಿಯಲ್ಲೇ ಇದ್ದೇವೆ: ಟಿಕೆಟ್ ಕೇಳಿದ ರಾಜೇಂದ್ರ ಅಂಬಲಿ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.