ಸಾಹಿತ್ಯ ಓದುವ ಅಭಿರುಚಿ ಬೆಳೆಸಿ: ಸ್ವಾಮೀಜಿ

ಸಾಹಿತ್ಯದಿಂದ ಮನುಷ್ಯನ ಬುದ್ಧಿ ವಿಕಸನ ; ಯುವಕರಿಗೆ ಉತ್ತಮ ಮಾರ್ಗದರ್ಶನ ನೀಡಿ

Team Udayavani, Jun 13, 2022, 2:48 PM IST

14

ರಬಕವಿ-ಬನಹಟ್ಟಿ: ಒಳ್ಳೆಯ ಪುಸ್ತಕಗಳು ಮನುಷ್ಯನನ್ನು ಬದಲಾವಣೆ ಮಾಡುವ ಶಕ್ತಿ ಹೊಂದಿವೆ. ಇಂದು ಟ್ರ್ಯಾಕ್ಟರ್‌ ಸಾಹಿತ್ಯ ಯುವಕರ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕ ಹಾಗೂ ರಾಜ್ಯ ಘಟಕದವರು ಅಶ್ಲೀಲ ಹಾಡುಗಳನ್ನು ರಿಕಾರ್ಡ್‌ ಮಾಡುವ ಸ್ಟುಡಿಯೋಗಳ ವಿರುದ್ಧ ಧ್ವನಿ ಎತ್ತಬೇಕು. ಯುವಕರಿಗೆ ಮಾರ್ಗದರ್ಶನ ಮಾಡುವ ಒಳ್ಳೆಯ ಪುಸ್ತಕಗಳು ಓದುವ ಅಭಿರುಚಿ ಬೆಳೆಸುವಂತಿರಬೇಕು ಎಂದು ಚಿಮ್ಮಡ ವಿರಕ್ತಮಠದ ಶ್ರೀ ಪ್ರಭು ಸ್ವಾಮೀಜಿ ಹೇಳಿದರು.

ಚಿಮ್ಮಡ ವಿರಕ್ತಮಠದಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ಆಶ್ರಯದಲ್ಲಿ ಲಿಂಗೈಕ್ಯ ಶ್ರೀ ಪರಯ್ಯ ತೆಳಗಿನಮನಿ ಹಾಗೂ ಶ್ರೀಮತಿ ಭಾಗೀರಥಿ ತೆಳಗಿನಮನಿ ಸ್ಮರಣಾರ್ಥ ದತ್ತಿನಿಧಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಶ್ರೀ, ಪ್ರತಿ ತಿಂಗಳ ಪುಸ್ತಕಾವಲೋಕನದಲ್ಲಿ ನಮ್ಮ ಭಾಗದ ಸಾಹಿತ್ಯಕ್ಕೂ ಆದ್ಯತೆ ಇರಲಿ ಎಂದರು.

ಅಧ್ಯಕ್ಷತೆ ವಹಿಸಿದ್ದ ದತ್ತಿ ದಾನಿಗಳಾದ ಮಗಯ್ಯ ಸ್ವಾಮಿಗಳು ತೆಳಗಿನಮನಿ, ಸಾಹಿತ್ಯದಿಂದ ಮನುಷ್ಯನ ಬುದ್ಧಿ ವಿಕಾಸವಾಗುತ್ತದೆ. ಜನಪದ ಸಾಹಿತ್ಯ ಮನಸ್ಸಿಗೆ ಉಲ್ಲಾಸ ನೀಡುತ್ತದೆ ಎಂದು ಹೇಳಿದರು.

ಜನಪದ ಗೀತೆಗಳನ್ನು ಹಾಡಿ ರಂಜಿಸಿದರು. ಚಿಮ್ಮಡ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರಾದ ಶರಶ್ಚಂದ್ರ ಜಂಬಗಿ ಅವರು ದತ್ತಿನಿಧಿ ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ರಬಕವಿ-ಬನಹಟ್ಟಿ ತಾಲೂಕು ಕಸಾಪ ನಿರಂತರ ಕಾರ್ಯಕ್ರಮ ಆಯೋಜಿಸಿ ಕ್ರಿಯಾಶೀಲ ಪರಿಷತ್ತನ್ನಾಗಿ ಮಾಡುವಲ್ಲಿ ಶ್ರಮಿಸುತ್ತಿದೆ. ಜಾನಪದ ರತ್ನ, ಕವಿ ದಿ| ಅಪ್ಪಣ್ಣಪ್ಪ ಜಂಬಗಿ ದತ್ತಿನಿಧಿ ಕಾರ್ಯಕ್ರಮದಲ್ಲಿ ಜಾನಪದ ರಸೋತ್ಸವ ಆಯೋಜಿಸಲಾಗುವುದು ಎಂದರು.

ಎಸ್‌ಎಸ್‌ಎಲ್‌ಸಿಯಲ್ಲಿ ಗಮನಾರ್ಹ ಸಾಧನೆಗೈದ ಅಮೃತಾ ಜಾಡಗೌಡರ ಪಿಯುಸಿಯಲ್ಲಿ ಗಮನಾರ್ಹ ಸಾಧನೆಗೈದ ಭಾಗ್ಯಶ್ರೀ ತೆಳಗಿನಮನಿ, ಮಂಜುನಾಥ ಕರಡಿ ಅವರನ್ನು ಸನ್ಮಾನಿಸಲಾಯಿತು.

ಮಹಾಲಿಂಗಪುರ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಇಲಾಹಿ ಜಮಖಂಡಿ ಮಾತನಾಡಿ, ಗ್ರಾಮೀಣ ಭಾಗದಲ್ಲಿಯೂ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯಕ್ರಮ ಆಯೋಜಿಸುತ್ತಿರುವುದು ಶ್ಲಾಘನೀಯ ಎಂದರು.

ಚಿಮ್ಮಡ ಗ್ರಾಮದ ಗಣ್ಯರಾದ ಎಸ್‌ .ಎ. ಪಾಟೀಲ, ಮಹಾಲಿಂಗಪುರ ಕಸಾಪ ಅಧ್ಯಕ್ಷ ಬಸವರಾಜ ಮೇಟಿ ವೇದಿಕೆಯಲ್ಲಿದ್ದರು.

ರಬಕವಿ-ಬನಹಟ್ಟಿ ತಾಲೂಕು ಕಸಾಪ ಅಧ್ಯಕ್ಷ ಮ.ಕೃ. ಮೇಗಾಡಿ ಪ್ರಾಸ್ತಾವಿಕವಾಗಿ ಮಾತನಾಡಿ, ಕಸಾಪ ಕಾರ್ಯಗಳ ಯಶಸ್ವಿಗೆ ಪೂಜ್ಯರ, ಹಿರಿಯ ಸಾಹಿತಿಗಳ, ಮಾರ್ಗದರ್ಶನ ಪಡೆಯಲಾಗುತ್ತಿದೆ ಎಂದರು.

ದತ್ತಿನಿಧಿ, ಸಾಹಿತ್ಯ ಸಮ್ಮೇಳನ, ಪುಸ್ತಕ ಅವಲೋಕನ ಸೇರಿದಂತೆ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಗ್ರಾಮೀಣ ಭಾಗದಲ್ಲಿಯೂ ಸಾಹಿತ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.

ಕಾಡಪ್ಪ ಬೀಳಗಿ ಪ್ರಾರ್ಥಿಸಿದರು. ತೇರದಾಳ ವಲಯ ಕಸಾಪ ಅಧ್ಯಕ್ಷ ಗಂಗಾಧರ ಮೋಪಗಾರ ಸ್ವಾಗತಿಸಿದರು. ಕೆ.ಎಸ್‌. ರಂಗಸ್ವಾಮಿ ನಿರೂಪಿಸಿದರು. ಕಸಾಪ ಗೌರವ ಕಾರ್ಯದರ್ಶಿಗಳಾದ ಮಹೇಶ ಮನ್ನಯ್ಯನವರ ಮಠ ವಂದಿಸಿದರು.

ಚಿಮ್ಮಡ ಗ್ರಾಮದ ಗಣ್ಯರಾದ ಪಿ.ಆರ್‌. ಪಾಲಭಾವಿ, ಹಿರಿಯ ಸಾಹಿತಿಗಳಾದ ಜಿ.ಎಸ್‌. ವಡಗಾವಿ, ಎಸ್‌. ಆರ್‌ ರಾವಳ, ಸದಾಶಿವ ದೊಡ್ಡಪ್ಪಗೋಳ, ಜಿಲ್ಲಾ ಕಸಾಪ ಮಹಿಳಾ ಪ್ರತಿನಿಧಿ ದಾಕ್ಷಯಣಿ ಮಂಡಿ, ಎಸ್‌.ಎಂ. ಅಣ್ಣಿಗೇರಿ, ಶಂಕರ ಶಿರೋಳ, ಶ್ರೀಕಾಂತ ಚಿಂಚಖಂಡಿ, ಹನಿಫ್‌ ಚಿಕ್ಕೋಡಿ, ಬಸವಪ್ರಭು ತೆಳಗಿನಮನಿ ಇನ್ನಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.