Udayavni Special

“ಸಂಸ್ಕೃತಿ-ಪರಂಪರೆ ಮರೆಯಬೇಡಿ’


Team Udayavani, Feb 17, 2020, 1:47 PM IST

bk-tdy-2

ಬೀಳಗಿ: ಶೈಕ್ಷಣಿವಾಗಿ ಎತ್ತರಕ್ಕೆ ಬೆಳೆದರೂ ಕೂಡ, ಸಂಸ್ಕೃತಿ, ಪರಂಪರೆ ಮರೆಯಬಾರದು. ಅಕ್ಷರ ಜ್ಞಾನದ ಜತೆಗೆ ನೀತಿಯುತ ಶಿಕ್ಷಣ ಹಾಗೂ ಮಾನವೀಯ ಮೌಲ್ಯಗಳು ಮುಖ್ಯವಾಗಿದೆ ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಎಸ್‌.ಆರ್‌.ಪಾಟೀಲ ಹೇಳಿದರು.

ಸ್ಥಳೀಯ ಕೊರ್ತಿ ಪುನರ್ವಸತಿ ಕೇಂದ್ರದ ಜ್ಞಾನದೀಪ ಪಬ್ಲಿಕ್‌ ಶಾಲೆಯ 15 ನೇ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಗುರು-ಹಿರಿಯರನ್ನು ಹಾಗೂ ತಂದೆ-ತಾಯಿಯನ್ನು ಗೌರವಿಸುವ ಗುಣ ಮಕ್ಕಳಲ್ಲಿ ಬೆಳೆಸಬೇಕು. ಬಲಿಷ್ಠ ಭಾರತ ನಿರ್ಮಾಣಕ್ಕಾಗಿ ನಮ್ಮ ಮಕ್ಕಳು ಸತ್ಪ್ರಜೆಗಳಾಗಿ ಹೊರಹೊಮ್ಮುವುದು ಅಗತ್ಯವಿದೆ. ಜ್ಞಾನದೀಪ ಶಾಲೆಯು ಹೆಸರಿಗೆ ತಕ್ಕಂತೆ ಮಕ್ಕಳಲ್ಲಿ ಅಕ್ಷರ ಜ್ಞಾನ ಬಿತ್ತುವ ಕೆಲಸ ಮಾಡುತ್ತಿದೆ ಎಂದರು.

ಕೇವಲ ಒಂದೂವರೆ ದಶಕದಲ್ಲಿ ಈ ಸಂಸ್ಥೆಯ ಅಗಾಧ ಸಾಧನೆ ಮಾಡುವ ಮೂಲಕ, ನುರಿತ ಶಿಕ್ಷಕರನ್ನು ಹೊಂದಿರುವ ಈ ವಿದ್ಯಾ ಸಂಸ್ಥೆಯು ಮಕ್ಕಳ ಜ್ಞಾನದಾಹ ನೀಗಿಸುತ್ತಿರುವುದು ಶ್ಲಾಘನೀಯ. ಎಲ್ಲ ಕ್ಷೇತ್ರಗಳಿಗಿಂತ ಶೈಕ್ಷಣಿಕ ಕ್ಷೇತ್ರ ದೇಶ ಸೇವೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ಶಿಕ್ಷಣ ಸೇವೆಯೇ ದೇಶ ಸೇವೆಯಾಗಿದೆ. ಜವಾಬ್ದಾರಿಯುತ ನಾಗರಿಕರನ್ನು ತಯಾರು ಮಾಡಿ ಭವ್ಯ ಭಾರತ ನಿರ್ಮಿಸುವಲ್ಲಿ ಶಿಕ್ಷಕರ ಪಾತ್ರ ಹಿರಿದಾಗಿದೆ ಎಂದರು.

ಬಿಇಒ ಹನುಮಂತಗೌಡ ಮಿರ್ಜಿ ಮಾತನಾಡಿ, ಪ್ರತಿ ಮಗುವಿನಲ್ಲಿಯೂ ವಿಭಿನ್ನ ಪ್ರತಿಭೆಯಿರುತ್ತದೆ. ಪ್ರತಿಭೆಯನ್ನು ಗುರುತಿಸಿ ಪೋಷಿಸುವುದು ಅಗತ್ಯ. ಪಾಲಕರು-ಶಿಕ್ಷಕರು ಮಕ್ಕಳಿಗೆ ಯೋಗ್ಯ ತರಬೇತಿ ನೀಡಿದರೆ ಸ್ವೀಕರಿಸುವ ಶಕ್ತಿ ಮಕ್ಕಳಿಗಿದೆ ಎಂದರು. ತಮಿಳುನಾಡು ಯುನಿವರ್ಸಲ್‌ ವಿ.ವಿ.ಗೌರವ ಡಾಕ್ಟರೇಟ್‌ ಪದವಿ ಪುರಸ್ಕೃತೆ 2ನೇ ತರಗತಿ ವಿದ್ಯಾರ್ಥಿನಿ ಡಾ| ವೈದೃತಿ ಕೋರಿಶೆಟ್ಟಿ ನೆನಪಿನ ಭಂಡಾರ ಶಕ್ತಿಯ ಪ್ರದರ್ಶನ ಸಭಿಕರನ್ನು ಬೆರಗುಗೊಳಿಸಿತು.

ಹುಲಜಂತಿ ಪಟ್ಟದ ದೇವರು ಮಾಳಿಂಗರಾಯ ಮಹಾರಾಯ ಸಾನ್ನಿಧ್ಯ ಹಾಗೂ ಸಂಸ್ಥೆಯ ಅಧ್ಯಕ್ಷ ಬಸವರಾಜ ದೇವರಮನಿ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆ ಆಡಳಿತಾಧಿ ಕಾರಿ ವಿದ್ಯಾ ಹಂಚಾಟೆ, ಜಿಪಂ ಸದಸ್ಯ ಹನುಮಂತ ಕಾಖಂಡಕಿ, ಸುರೇಂದ್ರ ನಾಯಕ, ಈರಣ್ಣ ಗಿಡ್ಡಪ್ಪಗೋಳ, ಶಿಕ್ಷಣ ಸಂಯೋಜಕ ರಮೇಶ ವಡವಾಣಿ, ರಾಜು ನಾಯಕವಾಡಿ, ಬಿ.ಕೆ.ದೇಸಾಯಿ, ಪಪಂ ಸದಸ್ಯ ವಿಠಲ ಬಾಗೇವಾಡಿ, ಮುತ್ತು ಬೋರ್ಜಿ, ಸಂತೋಷ ನಿಂಬಾಳಕರ, ಅಜ್ಜು ಭಾಯಿಸರಕಾರ, ಸರಸ್ವತಿ ದೇವರಮನಿ, ಸಿದ್ದು ಗಿರಗಾಂವಿ, ನಿಂಗಪ್ಪ ಹೂಗಾರ, ಹನುಮಂತ ಜಲ್ಲಿ ಇತರರು ಇದ್ದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಆಸ್ಪತ್ರೆಯಲ್ಲಿ ಎಲ್ಲೆಂದರಲ್ಲಿ ಉಗಿದು ಪುಂಡಾಟ: ಮೂವರು ಪೊಲೀಸ್ ವಶಕ್ಕೆ

ಆಸ್ಪತ್ರೆಯಲ್ಲಿ ಎಲ್ಲೆಂದರಲ್ಲಿ ಉಗಿದು ಪುಂಡಾಟ: ಮೂವರು ಪೊಲೀಸ್ ವಶಕ್ಕೆ

ಏ.1ರಿಂದ ಜಾರಿ: ಸಂಸದರ ಸಂಬಳ ಕಡಿತ ತಿದ್ದುಪಡಿ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಕೋವಿಂದ್ ಅಂಕಿತ

ಏ.1ರಿಂದ ಜಾರಿ: ಸಂಸದರ ಸಂಬಳ ಕಡಿತ ತಿದ್ದುಪಡಿ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಕೋವಿಂದ್ ಅಂಕಿತ

ಫುಟ್ ಬಾಲ್ ವಿಶ್ವಕಪ್‌ಗಾಗಿ ರಷ್ಯಾ, ಕತಾರ್‌ನಿಂದ ಲಂಚ: ಅಮೆರಿಕ ಕಾನೂನು ಸಚಿವಾಲಯದ ಆರೋಪ

ಫುಟ್ ಬಾಲ್ ವಿಶ್ವಕಪ್‌ಗಾಗಿ ರಷ್ಯಾ, ಕತಾರ್‌ನಿಂದ ಲಂಚ: ಅಮೆರಿಕ ಕಾನೂನು ಸಚಿವಾಲಯದ ಆರೋಪ

ದೊಡ್ಡಬಳ್ಳಾಪುರ ಕೃಷಿ ಮಾರುಕಟ್ಟೆಗೆ ಸಚಿವ ಎಸ್ ಟಿ ಸೋಮಶೇಖರ್ ಭೇಟಿ

ದೊಡ್ಡಬಳ್ಳಾಪುರ ಕೃಷಿ ಮಾರುಕಟ್ಟೆಗೆ ಸಚಿವ ಎಸ್ ಟಿ ಸೋಮಶೇಖರ್ ಭೇಟಿ

Covid-19 ವೈರಸ್ ಬಗ್ಗೆ ಮುಚ್ಚಿಟ್ಟಿದ್ಯಾಕೆ, ವಿಶ್ವ ಆರೋಗ್ಯ ಸಂಸ್ಥೆ ಚೀನಾ ಪರ: ಟ್ರಂಪ್ ಕಿಡಿ

Covid-19 ವೈರಸ್ ಬಗ್ಗೆ ಮುಚ್ಚಿಟ್ಟಿದ್ಯಾಕೆ, ವಿಶ್ವ ಆರೋಗ್ಯ ಸಂಸ್ಥೆ ಚೀನಾ ಪರ: ಟ್ರಂಪ್ ಕಿಡಿ

whatsapp-message

ನಿಮ್ಮ ವಾಟ್ಸಾಪ್ ಸಂದೇಶಗಳ ಮೇಲೆ ಸರ್ಕಾರದ ಹದ್ದಿನಕಣ್ಣು ? ಪಿಐಬಿ ಹೇಳಿದ್ದೇನು ?

telangaana-baby-possitive

ತೆಲಂಗಾಣದಲ್ಲಿ 23 ದಿನಗಳ ಮಗುವನ್ನೂ ಕಾಡಿದ ಕೋವಿಡ್-19 ವೈರಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

07-April-40

ನಿಗದಿತ ದರಕ್ಕೆ ಮಾಂಸ ಮಾರಾಟ ಮಾಡಿ

07-April-38

1 ಲಕ್ಷ ಮಾಸ್ಕ್ ತಾಲೂಕಾಡಳಿತಕ್ಕೆ ಹಸ್ತಾಂತರ

07-April-36

ಭಗವಾನ್‌ ಮಹಾವೀರ-ಡಾ|ಜಗಜೀವನರಾಮ್‌ ಜಯಂತಿ

07-April-28

ಅಲೆಮಾರಿ ಕುಟುಂಬಗಳಿಗೆ ಆಹಾರ ಧಾನ್ಯ-ಮಾಸ್ಕ್ ವಿತರಣೆ

ಮತ್ತೆ ಇಬ್ಬರಿಗೆ ಕೋವಿಡ್-19 ಸೋಂಕು: ಬಾಗಲಕೋಟೆಯಲ್ಲಿ ಮುಂದುವರೆದ ಸೋಂಕಿತರ ಸಂಖ್ಯೆ

ಮತ್ತೆ ಇಬ್ಬರಿಗೆ ಕೋವಿಡ್-19 ಸೋಂಕು: ಬಾಗಲಕೋಟೆಯಲ್ಲಿ ಮುಂದುವರೆದ ಸೋಂಕಿತರ ಸಂಖ್ಯೆ

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ

08-April-6

ದಿನಬಳಕೆ ವಸ್ತುಗಳ ದರ ಹೆಚ್ಚಳಕ್ಕೆ ಹೈರಾಣಾದ ಸಾರ್ವಜನಿಕರು

ಉಸಿರುಗಟ್ಟಿಸುವ ರಕ್ಷಣಾ ಕವಚಗಳು

ಉಸಿರುಗಟ್ಟಿಸುವ ರಕ್ಷಣಾ ಕವಚಗಳು

08-April-5

ಅಭಿವೃದ್ಧಿಗೆ ಕೊರೊನಾ ಲಾಕ್‌ಡೌನ್‌ ಅಡ್ಡಿ

ಆಸ್ಪತ್ರೆಯಲ್ಲಿ ಎಲ್ಲೆಂದರಲ್ಲಿ ಉಗಿದು ಪುಂಡಾಟ: ಮೂವರು ಪೊಲೀಸ್ ವಶಕ್ಕೆ

ಆಸ್ಪತ್ರೆಯಲ್ಲಿ ಎಲ್ಲೆಂದರಲ್ಲಿ ಉಗಿದು ಪುಂಡಾಟ: ಮೂವರು ಪೊಲೀಸ್ ವಶಕ್ಕೆ

ಲಾಕ್‌ಡೌನ್‌: ಖನ್ನತೆಯಲ್ಲಿ ಟೆಕ್ಕಿಗಳೇ ಹೆಚ್ಚು!

ಲಾಕ್‌ಡೌನ್‌: ಖನ್ನತೆಯಲ್ಲಿ ಟೆಕ್ಕಿಗಳೇ ಹೆಚ್ಚು!