ಮುಚಖಂಡಿ ಕೆರೆ ಸುತ್ತಮುತ್ತ ಕುಡುಕರ ಸಾಮ್ರಾಜ್ಯ

Team Udayavani, Dec 20, 2019, 4:28 PM IST

bk-tdy-1

ಬಾಗಲಕೋಟೆ: ಐತಿಹಾಸಿಕ ಮುಚಖಂಡಿ ಸುಕ್ಷೇತ್ರ ವೀರಭದ್ರೇಶ್ವರ ದೇವಸ್ಥಾನ ಆವರಣಕ್ಕೆ ಹೊಂದಿಕೊಂಡಿರುವ ಬ್ರಿಟಿಷ್‌ ಕಾಲದ ಮುಚಖಂಡಿ ಕೆರೆಯು ಮದ್ಯವ್ಯಸನಿಗಳ ತಾಣವಾಗುತ್ತಿದೆ.

ಮುಚಖಂಡಿ ದೇವಸ್ಥಾನ ಮುಂದೆ ಹಾಯ್ದು ಹೋಗುವ ಬಾದಾಮಿ ರಸ್ತೆಯ ಪಕ್ಕದಲ್ಲಿರುವ ಅಯ್ಯಪ್ಪನ ದೇವಸ್ಥಾನ ಆವರಣ ಹಾಗೂ ತಾಂಡಾದ ದುರ್ಗಾದೇವಿ ಪಕ್ಕದಲ್ಲಿ ಹಾಯ್ದು ಹೋಗುವ ರಸ್ತೆಯಲ್ಲಿ ಕುಡುಕರು ಕುಡಿದು ರಸ್ತೆ ಪಕ್ಕದಲ್ಲೇ ಮದ್ಯ ಹಾಗೂ ಬಿಯರ್‌ ಬಾಟಲ್‌ಗ‌ಳನ್ನು ಬಿಸಾಕಿರುವುದು ಕಂಡು ಬರುತ್ತಿದೆ.ಮುಚಖಂಡಿ ಕೆರೆಗೆ ಆಲಮಟ್ಟಿ ಹಿನ್ನೀರನ್ನು ಪೈಪ್‌ಗ್ಳ ಮುಖಾಂತರ ನೀರು ಬಿಡುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಮುಚಖಂಡಿ ಕೆರೆ ವೀಕ್ಷಣೆಗೆ ಮತ್ತು ವೀರಭದ್ರೇಶ್ವರ ದೇವಸ್ಥಾನಕ್ಕೆ ಸಂಜೆ ಹೆಚ್ಚು ಜನ ಬರುವುದರಿಂದ ರಸ್ತೆ ಪಕ್ಕದಲ್ಲೇ ಕುಡುಕರು ಕುಳಿತು ಕುಡಿಯುವುದರಿಂದ ಸಾರ್ವಜನಿಕರು ಮುಜುಗರಕ್ಕೊಳಗಾಗುತ್ತಿದ್ದಾರೆ. ಅಲ್ಲದೇ ರಸ್ತೆ ಪಕ್ಕದಲ್ಲೇ ಕುಡಿದಿರುವ ಬಾಟಲ್‌ ಗಳನ್ನು, ಸೇದಿದ ಸಿಗರೇಟ್‌ ತುಂಡುಗಳನ್ನು ಎಸೆದು ಹೋಗುತ್ತಾರೆ.

ಮುಚಖಂಡಿ ದೇವಸ್ಥಾನ ಆವರಣ ಮತ್ತು ರಸ್ತೆ ಪಕ್ಕದಲ್ಲಿಯೇ ಕುಳಿತು ಕುಡಿಯುವುದರಿಂದ ಈ ರಸ್ತೆ ಮಾರ್ಗವಾಗಿ ಹೋಗುವ ಪ್ರಯಾಣಿಕರಿಗೂ ತೀವ್ರ ಮುಜುಗರವಾಗಿದೆ. ರಾತ್ರಿ 8 ಗಂಟೆಯಿಂದ ರಾತ್ರಿ 11 ಗಂಟೆವರೆಗೂ ಇದು ಕುಡುಕರ ಸಾಮ್ರಾಜ್ಯವಾಗಿ ಪರಿವರ್ತನೆಯಾಗಿರುತ್ತದೆ. ರಾತ್ರಿ ಸಮಯದಲ್ಲಿ ಈ ರಸ್ತೆಯ ಮೂಲಕ ಹಾಯ್ದು ಹೋಗುವ ಸವಾರರು, ಪ್ರಯಾಣಿಕರು ಕುಡುಕರ ದರ್ಶನ ಪಡೆದುಕೊಂಡೇ ಮನೆಗಳಿಗೆ ತೆರಳುವಂತಾಗಿದೆ. ಈ ಮಾರ್ಗವಾಗಿ ಮಹಿಳೆಯರು, ಮಕ್ಕಳು, ಕಾಲೇಜು ವಿದ್ಯಾರ್ಥಿಗಳು ಹೆಚ್ಚಾಗಿ ಓಡಾಡುತ್ತಿರುವುದರಿಂದ ಈ ಸನ್ನಿವೇಶಗಳನ್ನು ನೋಡಿಕೊಂಡೇ ಹೋಗಬೇಕು.

ಮುಚಖಂಡಿ ದೇವಸ್ಥಾನ ಆವರಣ ಮತ್ತು ಬಾದಾಮಿ ಬೈಪಾಸ್‌ ರಸ್ತೆ ಪಕ್ಕ ಕುಳಿತು ಮದ್ಯ ಸೇವಿಸುವವರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವದು. ಇಂದಿನಿಂದ ಗಸ್ತು ನಿಯೋಜಿಸಲಾಗುವುದು. -ಪ್ರಭಾಕರ ಧರ್ಮಟ್ಟಿ, ಸಿಪಿಐ, ಗ್ರಾಮೀಣ ಠಾಣೆ.

-ವಿಠ್ಠಲ ಮೂಲಿಮನಿ

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.