ಬೀಳಗಿ: ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದುಕೊಳ್ಳಲಿ-ರೇವಡಿಗಾರ

ಉನ್ನತ ಶಿಕ್ಷಣ ಪಡೆದುಕೊಂಡು ಉತ್ತಮ ಬದುಕು ಕಟ್ಟಿಕೊಳ್ಳಬೇಕು.

Team Udayavani, Jun 7, 2023, 6:35 PM IST

ಬೀಳಗಿ: ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದುಕೊಳ್ಳಲಿ-ರೇವಡಿಗಾರ

ಬೀಳಗಿ: ಪಟ್ಟಣದ ಶ್ರೀ ಸಿದ್ಧೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಹಾಗೂ ಪ್ರತಿಭಾ ಪುರಸ್ಕಾರ, ಪಠ್ಯ ಪುಸ್ತಕ ವಿತರಣೆ ಕಾರ್ಯಕ್ರಮ ಜರುಗಿತು.

ಸಿದ್ಧೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿ.ಜಿ. ರೇವಡಿಗಾರ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ದೊಡ್ಡ ಕನಸು ಇಟ್ಟುಕೊಂಡು ಓದಬೇಕು. ಅವಶ್ಯಕತೆ ಅರಿತುಕೊಂಡು ಮುನ್ನುಗ್ಗಬೇಕು ಎಂದರು.

ಕೋಶಾಧ್ಯಕ್ಷ ವೀರೇಂದ್ರ ಶೀಲವಂತ ಮಾತನಾಡಿ, ಮಾನವ ನಿಸರ್ಗದ ಜೊತೆಗೆ ಒಳ್ಳೆಯ ಒಡನಾಟ ಇಟ್ಟುಕೊಳ್ಳಬೇಕು. ಪರಿಸರ ಪ್ರೀತಿಸಬೇಕು. ಪ್ಲಾಸ್ಟಿಕ್‌ ಬಳಕೆ ಕಡಿಮೆ ಮಾಡಬೇಕು ಎಂದು ಹೇಳಿ, ಶೈಕ್ಷಣಿಕ ಬದುಕು ಸುಖಮಯವಾಗಲೆಂದು ಶುಭ ಹಾರೈಸಿದರು.

ಕನ್ನಡ ಜಾನಪದ ಪರಿಷತ್‌ ಜಿಲ್ಲಾಧ್ಯಕ್ಷ ಡಿ.ಎಂ. ಸಾವಕಾರ ಮಾತನಾಡಿ, ಶಿಕ್ಷಣ ಇಂದು ಪ್ರತಿಯೊಬ್ಬರಿಗೂ ಸಂಜೀವಿನಿಯಾಗಿದೆ. ವಿದ್ಯಾರ್ಥಿ ಗಳು ಉನ್ನತ ಶಿಕ್ಷಣ ಪಡೆದುಕೊಂಡು ಉತ್ತಮ ಬದುಕು ಕಟ್ಟಿಕೊಳ್ಳಬೇಕು. ಶಿಕ್ಷಕ ವೃತ್ತಿ ಶ್ರೇಷ್ಠವಾಗಿದ್ದು, ವಿದ್ಯಾರ್ಥಿಗಳಿಗೆ ವಿದ್ಯೆಯ ಜತೆಗೆ ಮಾನವೀಯ ಮೌಲ್ಯ ಕಲಿಸಿಕೊಡಬೇಕು ಎಂದರು.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶಾಲೆಗೆ ಪ್ರಥಮ ಸ್ಥಾನ ಪಡೆದ ಸೃಷ್ಟಿ ಮೂಲಿಮನಿ, ದ್ವಿತೀಯ ಸ್ಥಾನ ಪಡೆದ ಸಾನಿಯಾ ಗುಡಾಕ, ತೃತೀಯ ಸ್ಥಾನ ಪಡೆದ ರಕ್ಷಕ ಸಿಂಧೆ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಿಸಲಾಯಿತು.

ಸಿದ್ಧೇಶ್ವರ ರೈತ ಉತ್ಪಾದಕರ ಸಹಕಾರಿ ಸಂಘ ಆಶ್ರಯದಲ್ಲಿ ಪರಿಸರ ದಿನಾಚರಣೆ ಅಂಗವಾಗಿ ವಿದ್ಯಾ ಸಂಸ್ಥೆ ಆವರಣದಲ್ಲಿ ಸಸಿ ನೆಡಲಾಯಿತು. ನಿರ್ದೇಶಕ ಸೋಮಶೇಖರ ಶಹಾಪೂರ, ಪ್ರಾಚಾರ್ಯರಾದ ಈ. ರವೀಂದ್ರ ನಾಯಕ, ಪ್ರಾಥಮಿಕ ವಿಭಾಗದಮುಖ್ಯಗುರು ಎ. ಬಿ. ಹಿರೇಮಠ, ಉಪಪ್ರಾಚಾರ್ಯ ವಿ. ಎಸ್‌. ತಳಕೇರಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.