ಉದಾಸೀನತೆ ಮಾಡದೆ ಕಾನೂನು ಪಾಲಿಸಿ: ಡಾ| ಕೆ. ರಾಜೇಂದ್ರ

Team Udayavani, Mar 25, 2020, 3:58 PM IST

ತೇರದಾಳ: ಕೋವಿಡ್ 19 ಸೋಂಕು ತಡೆಗಟ್ಟಲು ಸರಕಾರ ಕಠಿಣ ಕ್ರಮ ಕೈಗೊಂಡಿದ್ದು, ಯಾರೂ ಉದಾಸೀನತೆ ಮಾಡದೆ ಕಾನೂನು ಪಾಲಿಸಬೇಕು. ಇಲ್ಲವಾದರೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ| ಕೆ. ರಾಜೇಂದ್ರ ಹೇಳಿದರು.

ಮಂಗಳವಾರ ಪಟ್ಟಣದ ಕೋವಿಡ್ 19 ಚೆಕ್‌ಪೋಸ್ಟ್‌ಗೆ ಭೇಟಿ ನೀಡಿ ಪರಿಶೀಲಿಸಿ ಅವರು ಮಾತನಾಡಿದರು. ಮಹಾಮಾರಿ ಕೋವಿಡ್ 19 ಪಸರಿಸದಂತೆ ಮಹಾರಾಷ್ಟ್ರದಿಂದ ಬರುವ ಎಲ್ಲ ಬಗೆಯ ವಾಹನ ತಡೆಗಟ್ಟಬೇಕು. ಮನೆಬಿಟ್ಟು ಯಾರೂ ಹೊರಬರಬಾರದು. ಎಲ್ಲರೂ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಉಪವಿಭಾಗಾಧಿಕಾರಿ ಡಾ| ಸಿದ್ದು ಹುಲ್ಲೊಳ್ಳಿ, ತಹಶೀಲ್ದಾರ್‌ ಪ್ರಶಾಂತ ಚನಗೊಂಡ, ಗ್ರೇಡ್‌ 2ತಹಶೀಲ್ದಾರ್‌ ಎಸ್‌.ಬಿ. ಕಾಂಬಳೆ, ಪುರಸಭೆ ಮುಖ್ಯಾಧಿಕಾರಿ ಐ.ಎಸ್‌. ದಡ್ಡಿ ಇತರರಿದ್ದರು. ಪಟ್ಟಣದಲ್ಲಿ ಎಲ್ಲ ಅಂಗಡಿ-ಮುಂಗಟ್ಟು ಮುಚ್ಚಿದ್ದು. ಮನೆಯಿಂದ ಹೊರಬಂದ ಜನರನ್ನು ಪೊಲೀಸರು ಮನೆಯೊಳಗಿರಲು ಸೂಚಿಸಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ