ಕೊಳೆರೋಗದ ಹೊಡೆತಕ್ಕೆ ನರಳಿದ ಈರುಳ್ಳಿ |ಟ್ರ್ಯಾಕ್ಟರ್‌ನಿಂದ ಬೆಳೆ ನಾಶಪಡಿಸುತ್ತಿರುವ ರೈತರು

ಉತ್ಪನ್ನ ಬರುವ ಮುಂಚೆಯೇ ರೈತರಿಗೆ ಕಣ್ಣೀರು ತರಿಸಿದ ಬೆಳೆ

Team Udayavani, Aug 12, 2021, 1:54 PM IST

fghtytr

ವರದಿ: ಚಂದ್ರಶೇಖರ ಹಡಪದ

ಕಲಾದಗಿ: ಮಳೆ ಸೇರಿದಂತೆ ಪ್ರವಾಹದ ಹೊಡೆತಕ್ಕೆ ರೈತರು ಅಕ್ಷರಶಃ ನಲುಗಿದ್ದಾರೆ. ಹೇಗೋ ಸಾಲ-ಸೂಲ ಮಾಡಿ ಅಲ್ಪ-ಸ್ವಲ್ಪ ಬೆಳೆ ಬೆಳೆದರೂ ಇದೀಗ ಬೆಳೆಗಳಿಗೆ ರೋಗ-ಕೀಟಬಾಧೆ ಕಾಡುತ್ತಿದ್ದು ಅನ್ನದಾತರಿಗೆ ನುಂಗಲಾರದ ತುತ್ತಾಗಿದೆ.

ರೋಗಬಾಧೆಗೆ ಬಲಿಯಾದ ಬೆಳೆಗಳಲ್ಲಿ ಈರುಳ್ಳಿ ಪ್ರಮುಖ ಬೆಳೆ. ಈರುಳ್ಳಿ ಕೊಳೆರೋಗದ ಹೊಡೆತಕ್ಕೆ ಸಿಕ್ಕು ಹಳದಿ ಬಣ್ಣಕ್ಕೆ ತಿರುಗಿ ಬಾಡುತ್ತಿದೆ. ಹೀಗಾಗಿ ಕಷ್ಟಪಟ್ಟು ರೈತರು ಬೆಳೆದ ಬೆಳೆ ಕಣ್ಣೆದುರೇ ಬಾಡುತ್ತಿರುವುದನ್ನು ಕಂಡು ರೈತ ನೇಗಿಲು ಹೊಡೆದು ಬೆಳೆಯನ್ನು ಮಣ್ಣಲ್ಲಿ ಮುಚ್ಚುತ್ತಿರುವುದು ರೈತನ ಅಸಹಾಯಕತೆಗೆ ಸಾಕ್ಷಿ. ಕಲಾದಗಿ ಹೋಬಳಿ ವ್ಯಾಪ್ತಿಯಲ್ಲಿ ರೈತರು ಹೆಚ್ಚಾಗಿ ಈರುಳ್ಳಿ ಬೆಳೆ ಬೆಳೆಯುತ್ತಾರೆ. ಮೇ ಕೊನೆ ವಾರ ಇಲ್ಲವೇ ಜೂನ್‌ ಮೊದಲೆರಡು ವಾರದಲ್ಲಿ ಬಿತ್ತನೆ ಮಾಡಿ ಹಗಲು-ರಾತ್ರಿ ಶ್ರಮಿಸುತ್ತ ಉತ್ತಮ ಇಳುವರಿ, ಬೆಲೆ ನಿರೀಕ್ಷೆಯಲ್ಲಿ ರೈತರಿದ್ದರು. ಆದರೆ ಇದೀಗ ಈರುಳ್ಳಿಗೆ ಕೊಳೆರೋಗ ಕಾಡುತ್ತಿದ್ದು, ಹೊಲದಲ್ಲಿ ಬೆಳೆ ಕೊಳೆಯುವುದನ್ನು ಕಂಡು ರೈತರು ಕಣ್ಣೀರು ಹಾಕುತ್ತಿದ್ದಾರೆ.

ಕೆಲ ರೈತರಂತೂ ಲಕ್ಷಾಂತರ ರೂ. ಖರ್ಚು ಮಾಡಿ ಹಗಲು-ರಾತ್ರಿ ಶ್ರಮಿಸಿ ಬೆಳೆದಿದ್ದ ಬೆಳೆ ನೇಗಿಲು ಹೊಡೆದು ಮಣ್ಣಲ್ಲಿ ಮುಚ್ಚುತ್ತಿರುವ ಉದಾಹರಣೆಗಳೂ ಕಣ್ಣೆದುರಿವೆ. ಸದ್ಯ ಕೆಲವು ರೈತರ ಈರುಳ್ಳಿ ಬೆಳೆ ಈ ಕೊಳೆರೋಗಕ್ಕೆ ಕೊಳೆಯುತ್ತಿದ್ದು, ಇನ್ನೂ ಕೆಲವರು ರೈತರ ಈರುಳ್ಳಿ ರೋಗ ತಗುಲುವ ಪ್ರಾರಂಭದ ಹಂತದಲ್ಲಿದೆ. ಈ ರೈತರು ತಮ್ಮ ಬೆಳೆ ಉಳಿಸಿಕೊಳ್ಳಲು ತೋಟಗಾರಿಕೆ ಇಲಾಖೆ ಅಧಿ ಕಾರಿಗಳ ಮಾರ್ಗದರ್ಶನ, ಸೂಕ್ತ ಔಷಧೋಪಚಾರದ ತಿಳಿವಳಿಕೆ ನೀಡಿದ್ದಲ್ಲಿ ರೈತರು ಬೆಳೆ ಉಳಿಸಿಕೊಳ್ಳಲು ಸಾಧ್ಯ ಎನ್ನುವುದು ಹಲವು ರೈತರ ಮಾತು.

ಕಲಾದಗಿ ಹೋಬಳಿಯಲ್ಲಿ ಒಟ್ಟು 2800 ಹೆಕ್ಟೇರ್‌ ಈರುಳ್ಳಿಯಲ್ಲಿ 750 ಹೆಕ್ಟೇರ್‌ ಈಗಾಗಲೇ ಕೊಳೆರೋಗದಿಂದ ಹಾನಿಯಾಗಿದೆ. ಇನ್ನಷ್ಟು ಬೆಳೆ ಕೊಳೆ ರೋಗಕ್ಕೆ ತುತ್ತಾಗುವ ಸಾಧ್ಯತೆ ಹೆಚ್ಚಾಗಿದ್ದು, ಅಧಿ ಕಾರಿಗಳು ಕೂಡಲೇ ರೈತ ಸಮುದಾಯಕ್ಕೆ ಔಷಧೋಪಚಾರದ ಅಗತ್ಯ ಮಾಹಿತಿ ನೀಡುವಂತೆ ಉದಗಟ್ಟಿ, ಶಾರದಾಳ, ಅಂಕಲಗಿ ಸೇರಿದಂತೆ ಹಲವು ಹಳ್ಳಿಗಳ ರೈತರು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.