ರೈತರ ಬಾಕಿ; ಆಕ್ಷೇಪಣೆ ಸಲ್ಲಿಸಲು ಏಳು ದಿನಗಳ ಅವಕಾಶ

ಜಮಖಂಡಿಯ ಉಪವಿಭಾಗಾಧಿಕಾರಿಗಳ ಖಾತೆಗೆ ಜನವರಿ 27ರಂದು ಹಣವನ್ನು ಠೇವಣಿ ಮಾಡಿದ್ದಾರೆ

Team Udayavani, Feb 18, 2022, 5:40 PM IST

ರೈತರ ಬಾಕಿ; ಆಕ್ಷೇಪಣೆ ಸಲ್ಲಿಸಲು ಏಳು ದಿನಗಳ ಅವಕಾಶ

ರಬಕವಿ-ಬನಹಟ್ಟಿ: ತೇರದಾಳದ ಸಕ್ಕರೆ ಕಾರ್ಖಾನೆಗೆ 2018-19 ರಲ್ಲಿ ಕಬ್ಬು ಪೂರೈಕೆ ಮಾಡಿದ 1628 ಜನ ರೈತರ ಒಟ್ಟು ಬಾಕಿ 19,54,66,660 ರೂ. ಹೊಂದಿದ ಪಟ್ಟಿಯನ್ನು ಕಾರ್ಖಾನೆಯ ಆಡಳಿತ ಮಂಡಳಿಯವರು ತಹಶೀಲ್ದಾರ್‌ ಕಾರ್ಯಾಲಯಕ್ಕೆ ಸಲ್ಲಿಸಿದ್ದಾರೆ.

ಈ ಪಟ್ಟಿಯನ್ನು ರಬಕವಿ ಬನಹಟ್ಟಿ ತಹಶೀಲ್ದಾರ್‌, ತೇರದಾಳದ ವಿಶೇಷ ತಹಶೀಲ್ದಾರ್‌ ಕಾರ್ಯಾಲಯ ಮತ್ತು ಸಾವರಿನ್‌ ಸಕ್ಕರೆ ಕಾರ್ಖಾನೆ ಆವರಣದಲ್ಲಿ ಲಗತ್ತಿಸಲಾಗಿದೆ. ಸಂಬಂಧಪಟ್ಟ ರೈತರು ಈ ಕುರಿತು ತಮ್ಮ ಬಾಕಿ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಏಳು ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ರಬಕವಿ ಬನಹಟ್ಟಿ ತಹಶೀಲ್ದಾರ್‌ ಸಂಜಯ ಇಂಗಳೆ ಹೇಳಿದರು.

ಸ್ಥಳೀಯ ರಬಕವಿ-ಬನಹಟ್ಟಿ ತಹಶೀಲ್ದಾರ್‌ ಕಾರ್ಯಾಲಯದಲ್ಲಿ ತೇರದಾಳದ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಕೆ ಮಾಡಿದ ರೈತರ ಸಭೆಯಲ್ಲಿ ಅವರು ಮಾತನಾಡಿದರು.

ಕಬ್ಬು ಪೂರೈಕೆ ಮಾಡಿದ ರೈತರು ಲಿಖೀತ ರೂಪದಲ್ಲಿ ಮತ್ತು ಅಗತ್ಯವಾದ ದಾಖಲೆಗಳ ಜತೆಗೆ ಫೆ. 18ರಿಂದ 24 ಸಂಜೆ 5.30ರೊಳಗಾಗಿ ಆಕ್ಷೇಪಣೆ ಸಲ್ಲಿಸಬಹುದಾಗಿದೆ. ನಂತರ ಬಂದ ಆಕ್ಷೇಪಣೆ ಪರಿಗಣಿಸಲಾಗುವುದಿಲ್ಲ. ಇನ್ನೂ ರೈತರ ಕಬ್ಬು ಕಟಾವು ಮತ್ತು ಸಾಗಾಣಿಕೆಗೆ ಸಂಬಂಧಪಟ್ಟಂತೆ 308 ಜನ ರೈತರ ರೂ. 51,33,216 ಬಿಡುಗಡೆ ಮಾಡಿದೆ. ಕಬ್ಬು ಪೂರೈಕೆ ಮಾಡಿದ ರೈತರಿಗೆ ಎಫ್‌ ಆರ್‌ ಪಿ ಬೆಲೆಯ ಪ್ರಕಾರ 2613 ರೂ. ನೀಡಲಾಗಿದ್ದು, ಇದರಲ್ಲಿ ಕಬ್ಬು
ಕಟಾವು ಮತ್ತು ಸಾಗಾಣಿಕೆಯ ಹಣ 613 ರೂ.ಕಡಿತಗೊಳಿಸಿ ಉಳಿದ ಹಣ ನೀಡಲಾಗುವುದು. ರೈತರ ಹಣವನ್ನು ಕರ್ನಾಟಕ ಅಪೆಕ್ಸ್‌ ಬ್ಯಾಂಕ್‌ನವರು ಜಮಖಂಡಿಯ ಉಪವಿಭಾಗಾಧಿಕಾರಿಗಳ ಖಾತೆಗೆ ಜನವರಿ 27ರಂದು ಹಣವನ್ನು ಠೇವಣಿ ಮಾಡಿದ್ದಾರೆ ಎಂದು ತಹಶೀಲ್ದಾರ್‌ ಸಂಜಯ ಇಂಗಳೆ ತಿಳಿಸಿದರು.

ರೈತ ಮುಖಂಡರು ಸರ್ಕಾರ ನಿಗದಿ ಮಾಡಿದ ಬೆಲೆಗೆ ಸಮ್ಮತಿ ಇಲ್ಲ. ನಾವು ಶೀಘ್ರ ಕಬ್ಬು ಪೂರೈಕೆ ಮಾಡಿದ ರೈತರ ಸಭೆ ಕರೆಯುತ್ತೇವೆ. ಅಲ್ಲಿ ಬಿಲ್‌ ಕುರಿತು ಚರ್ಚೆ ಮಾಡಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಪತ್ರಿಕೆಗೆ ತಿಳಿಸಿದರು. ಈಗಿರುವ ಕಬ್ಬಿನ್‌ ಬಿಲ್ಲನ್ನು ಪಡೆದುಕೊಂಡು ಮುಂದಿನ ಹಣಕ್ಕಾಗಿ ಮತ್ತು ಹಣದ ಮೇಲಿನ ಬಡ್ಡಿಗಾಗಿ ಮತ್ತೆ ನಾವು ಹೋರಾಟ ಮಾಡುತ್ತೇವೆ ಎಂದು ರೈತ ಸಂಘದ ಮುಖಂಡ ಬಂಡು ಪಕಾಲಿ ಪತ್ರಿಕೆಗೆ ತಿಳಿಸಿದರು.

ಮೂರು ವರ್ಷ ಹೋರಾಟದ ಫಲವಾಗಿ ಕಬ್ಬು ಪೂರೈಕೆ ಮಾಡಿದ ರೈತರಿಗೆ ನ್ಯಾಯ ಒದಗಿದಂತಾಗಿದೆ. ಸಕ್ಕರೆ ಕಾರ್ಖಾನೆಯು ಇನ್ನೂ ಹೆಚ್ಚಿನ ಬಿಲ್‌ ನೀಡಬೇಕಾಗಿದೆ ಎಂದು ರೈತ ಸಂಘದ ಮುಖಂಡ ಹೊನ್ನಪ್ಪ ಬಿರಡಿ ತಿಳಿಸಿದರು. ರೈತ ಮುಖಂಡ ಶ್ರೀಕಾಂತ ಘೂಳನ್ನವರ, ಶಿವಪ್ಪ ಹೋಟಕರ್‌, ಧರಿಗೌಡರ, ಭುಜಬಲಿ ಕೆಂಗಾಲಿ, ಯಲ್ಲಪ್ಪ ಮೂಸಿ, ಸರೇಶ ತೇಲಿ, ಮಹಾದೇವ ಬುಗಡಿ, ರಾಮಪ್ಪ ಹೊಸೂರ, ಭೀಮಶಿ ಕರಿಗೌಡರ, ಪರಪ್ಪ ಕಮಲದಿನ್ನಿ, ಬಾಹುಬಲಿ ನಂದಗಾವಿ ಇದ್ದರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.