ರೈತರು ಕೃಷಿ ಜತೆಗೆ ಉಪಕಸಬು ಮಾಡಿ: ಗದ್ದಿಗೌಡರ

ಸಬ್ಸಿಡಿ, ಗೊಬ್ಬರ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಇಂದು ಸಹಕಾರಿ ಸಂಘಗಳು ಮಾಡುತ್ತಿವೆ.

Team Udayavani, Feb 19, 2022, 4:40 PM IST

ರೈತರು ಕೃಷಿ ಜತೆಗೆ ಉಪಕಸಬು ಮಾಡಿ: ಗದ್ದಿಗೌಡರ

ಬಾದಾಮಿ: ಸಹಕಾರಿ ಸಂಘಗಳಿಂದ ಸಾಲ ಪಡೆದು ರೈತರು ಕೃಷಿಯ ಜತೆಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ಕುರಿ ಸಾಕಾಣಿಕೆ ಸೇರಿದಂತೆ ಉಪಕಸಬು ಮಾಡುವ ಮೂಲಕ ಆರ್ಥಿಕವಾಗಿ ಸಬಲರಾಗಬೇಕು. ಪಡೆದ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡಬೇಕು ಎಂದು ಲೋಕಸಭಾ ಸದಸ್ಯ ಪಿ.ಸಿ.ಗದ್ದಿಗೌಡರ ಹೇಳಿದರು.

ಕುಳಗೇರಿ ಕ್ರಾಸ್‌ನ ಓಜುಗ ಕಾಂಪ್ಲೆಕ್ಸ್‌ ನಲ್ಲಿ ನೂತನವಾಗಿ ಆರಂಭಗೊಂಡ ಶ್ರೀ ಗುರು ಸದಾಶಿವ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತದ 4ನೇ ಶಾಖೆಯ ಪ್ರಾರಂಭೋತ್ಸವ ಉದ್ಘಾಟಿಸಿ ಮಾತನಾಡಿದರು.

ರಾಜ್ಯ ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷ ಬಿ.ಎಚ್‌.ಕೃಷ್ಣರಡ್ಡಿ ಮಾತನಾಡಿ, ಗ್ರಾಮೀಣ ಪ್ರದೇಶದ ಜನರಿಗೆ ದೀರ್ಘಾವಧಿ  ಸಾಲ ನೀಡುವ ಕೆಲಸವನ್ನು ಇಂದು ಸಹಕಾರಿ ಸಂಘಗಳು ಮಾಡುತ್ತಿವೆ. ರೈತರಿಗೆ ಸಬ್ಸಿಡಿ, ಗೊಬ್ಬರ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಇಂದು ಸಹಕಾರಿ ಸಂಘಗಳು ಮಾಡುತ್ತಿವೆ. ಯುವಕರನ್ನು ಹೆಚ್ಚಾಗಿ ಸಹಕಾರಿ ಕ್ಷೇತ್ರಕ್ಕೆ ತರಬೇಕಿದೆ. ಕೂಲಿಕಾರರು, ರೈತರು, ಸಣ್ಣಪುಟ್ಟ ವ್ಯಾಪಾರಿಗಳು ಸಹಕಾರಿ ಸಂಘಗಳಿಂದ ಸಾಲ
ಪಡೆದು ಸದುಪಯೋಗ ‌ಪಡೆದುಕೊಳ್ಳಬೇಕೆಂದು ಕರೆ ನೀಡಿದರು.

ಬೈರನಹಟ್ಟಿ ವಿರಕ್ತಮಠದ ಶಾಂತಲಿಂಗ ಸ್ವಾಮೀಜಿ ಮತ್ತು ನರಸಾಪುರದ ಮರುಳಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಗುರು ಸದಾಶಿವ ಪತ್ತಿನ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ, ರಾಜ್ಯ ಪಿಕಾರ್ಡ್‌ ಬ್ಯಾಂಕ್‌ ಉಪಾಧ್ಯಕ್ಷ ಮಹಾಂತೇಶ ಮಮದಾಪುರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾಜಿ ಶಾಸಕ ಎಂ.ಕೆ.ಪಟ್ಟಣಶೆಟ್ಟಿ ಸದಾಶಿವ ಕ್ಯಾಶ್‌ ಸರ್ಟಿಫಿಕೇಟ್‌ ವಿತರಣೆ ಮಾಡಿ ಮಾತನಾಡಿದರು.

ಮಾಜಿ ಶಾಸಕ, ಸಹಕಾರಿ ಭಾರತಿ ಅಧ್ಯಕ್ಷ ರಾಜಶೇಖರ ಶೀಲವಂತರ ಮುದ್ದತಿ ಠೇವು ಸರ್ಟಿಫಿಕೇಟ್‌ ವಿತರಿಸುವರು. ಸೌಹಾರ್ದ ಸಹಕಾರಿ ಸಂಘದ ಉಪಾಧ್ಯಕ್ಷ ಜಗದೀಶ ಕವಟಗಿಮಠ, ಜಿಲ್ಲಾ ಬಿಜೆಪಿ ಅಧ್ಯಕ್ಷ ಶಾಂತಗೌಡ ಪಾಟೀಲ, ಉಪಾಧ್ಯಕ್ಷ ಬಸವರಾಜ ಪಾಟೀಲ (ನಸಬಿ) ಸೇರಿದಂತೆ ಸಲಹಾ ಸಮಿತಿ ಸದಸ್ಯರು, ನಿರ್ದೇಶಕರು ಹಾಜರಿದ್ದರು. ಮಾಜಿ ಶಾಸಕ ರಾಜಶೇಖರ ಶೀಲವಂತರ, ನಿವೃತ್ತ ಪ್ರಾಚಾರ್ಯ ಆರ್‌.ಬಿ.ಸಂಕದಾಳ, ನಿವೃತ್ತ ಉಪನ್ಯಾಸಕ ಜಿ.ಬಿ.ಶೀಲವಂತರ, ಕೆರೂರ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಸಿದ್ದಣ್ಣ ಕೊಣ್ಣೂರ, ನಿವೃತ್ತ ಶಿಕ್ಷಕರಾದ ಈಶ್ವರ ಕುಂಬಾರ, ಬಿ.ಕೆ.ಗಾಣಿಗೇರ, ನಿವೃತ್ತ ಯೋಧ ಶಿವಪ್ಪ ಓಜುಗ, ವೆಂಕಪ್ಪ ದ್ಯಾವನಗೌಡ್ರ ಅವರನ್ನು ಸನ್ಮಾನಿಸಲಾಯಿತು. ಪ್ರಧಾನ ವ್ಯವಸ್ಥಾಪಕ ಎ.ಪಿ.ಕಂಬಿ ಸ್ವಾಗತಿಸಿದರು.ಪ್ರೊ| ಜಿ.ಬಿ.ಶೀಲವಂತರ ಕಾರ್ಯಕ್ರಮ ನಿರೂಪಿಸಿದರು. ಭೀಮನಗೌಡ ಪಾಟೀಲ ವಂದಿಸಿದರು.

ಟಾಪ್ ನ್ಯೂಸ್

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.