ಸಸಾಲಟ್ಟಿ ಏತ ನೀರಾವರಿಗೆ ಕೊನೆಗೂ ಸಿಕ್ಕಿತು ಚಾಲನೆ

266 ಕೋಟಿ ರೂ. ಮೊತ್ತದ ಕಾಮಗಾರಿಗೆ ಟೆಂಡರ್‌

Team Udayavani, May 16, 2022, 2:39 PM IST

10

ತೇರದಾಳ: ಈ ಭಾಗದ ರೈತರ ಬಹುದಿನಗಳ ಬೇಡಿಕೆ ಸಸಾಲಟ್ಟಿ ಏತ ನೀರಾವರಿ ಯೋಜನೆಗೆ ರಾಜ್ಯ ಸರ್ಕಾರ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಅನುಮೋದನೆ ನೀಡುವ ಮೂಲಕ ರೈತರ ಮೊಗದಲ್ಲಿ ಸಂತಸದ ನಗೆ ಮೂಡುವಂತೆ ಮಾಡಿತ್ತು. ಈ ಯೋಜನೆಯ ಮುಂದುವರಿದ ಭಾಗವಾಗಿ ಮೊದಲ ಹಂತದ ಸ್ಕೀಂ ಒನ್‌ 266 ಕೋಟಿ ರೂ. ಮೊತ್ತದ ಕಾಮಗಾರಿಗೆ ನೀರಾವರಿ ಇಲಾಖೆ ಟೆಂಡರ್‌ ಕರೆದಿದ್ದು, ಶೀಘ್ರದಲ್ಲಿ ಕಾಮಗಾರಿಗೆ ವಿದ್ಯುಕ್ತ ಚಾಲನೆ ಸಿಗಲಿದೆ. ಇದರಿಂದ ರೈತರಲ್ಲಿ ಹೊಸ ಆಶಾಭಾವ ಮೂಡಿದಂತಾಗಿದೆ.

ಸಸಾಲಟ್ಟಿ ಏತ ನೀರಾವರಿಗೆ ಸಸಾಲಟ್ಟಿ ಶಿವಲಿಂಗೇಶ್ವರ ಏತ ನೀರಾವರಿ ಎಂದು ನಾಮಕರಣ ಮಾಡಲಾಗಿದ್ದು, ತೇರದಾಳ, ರಬಕವಿ-ಬನಹಟ್ಟಿ, ಜಮಖಂಡಿ ಹಾಗೂ ಮುಧೋಳ ತಾಲೂಕಿನ ಅಂದಾಜು 36 ಸಾವಿರಕ್ಕೂ ಅಧಿಕ ಹೆಕ್ಟೇರ್‌ ಪ್ರದೇಶದ, ರೈತರ ಭೂಮಿಗೆ ನೀರು ಹರಿಯಲಿದೆ. ತಾಲೂಕಿನ ಹಳಿಂಗಳಿ ಗ್ರಾಮದಲ್ಲಿರುವ ಜಿಲ್ಲೆಯ ಜೀವನಾಡಿ ಕೃಷ್ಣಾ ನದಿಯ ಮುಖಾಂತರ 12 ಕಿ.ಮೀ. ಲಿಫ್ಟ್‌ ಮೂಲಕ ಮಳೆಗಾಲದಲ್ಲಿ(ಮುಂಗಾರು) ಹರಿಯುವ ನೀರನ್ನು ಮಾತ್ರ ಎತ್ತುವ ಯೋಜನೆ ಇದಾಗಿದೆ.

ಈಗಾಗಲೇ ಹಳಿಂಗಳಿ ಗ್ರಾಮದಲ್ಲಿ ಜಾಕವೇಲ್‌ ನಿರ್ಮಾಣಕ್ಕೆ ಹಾಗೂ 110 ಕೆವಿ ವಿದ್ಯುತ್‌ ಘಟಕ ನಿರ್ಮಾಣಕ್ಕೆ ಬೇಕಾಗುವ ಅಂದಾಜು ನಾಲ್ಕು ಎಕರೆ ಭೂಮಿಯನ್ನು ನೀರಾವರಿ ಇಲಾಖೆ ಅಧಿಕಾರಿಗಳು ಶಾಸಕ ಸಿದ್ದು ಸವದಿ ನೇತೃತ್ವದಲ್ಲಿ ಗುರುತಿಸಿದ್ದಾರೆ. ಈಗಾಗಲೇ ಹಿರಣ್ಯಕೇಶಿ ನದಿಯಿಂದ ಹಿಡಕಲ್‌ ಜಲಾಶಯದಿಂದ ಘಟಪ್ರಭಾ ಎಡದಂಡೆ ಕಾಲುವೆ ಮುಖಾಂತರ ರೈತರ ಬೆಳೆಗಳಿಗೆ ನೀರು ಬಿಡಲಾಗುತ್ತಿದೆ. ಆದರೆ ಈ ನೀರು ರೈತರಿಗೆ ಸಾಕಾಗುತ್ತಿಲ್ಲ. ಕಾರಣ ಇನ್ನೂ ಹೆಚ್ಚುವರಿಯಾಗಿ 80 ಟಿಎಂಸಿಯಷ್ಟು ನೀರು ಬೇಕು.

ಆದರೆ, ಹಿಡಕಲ್‌ ಜಲಾಶಯ ಕೇವಲ 52 ಟಿಎಂಸಿ ಮಾತ್ರ ಸಂಗ್ರಹಣಾ ಸಾಮರ್ಥ್ಯ ಹೊಂದಿದೆ. ಹಿರಣ್ಯಕೇಶಿ ನದಿ ಮೇಲೆ ಅವಲಂಬಿತಗೊಂಡಿರುವ ಹಿಡಕಲ್‌ ಜಲಾಶಯದ ಪ್ರದೇಶಗಳಲ್ಲಿನ ರೈತರ ಜಮೀನುಗಳಿಗೆ ಮುಂಗಾರಿಗೆ ನೀರು ಸಾಕಾಗುತ್ತಿಲ್ಲ. ಇದರಿಂದ ನೀರಾವರಿ ತಜ್ಞ ರಾಮಪ್ರಸಾದ ಎಂಬುವವರು ಸರಕಾರಕ್ಕೆ ವರದಿ ಸಲ್ಲಿಸಿ ಕೃಷ್ಣಾ ನದಿಯಿಂದ ಮುಂಗಾರು ಸಂದರ್ಭದಲ್ಲಿ ಹರಿಯುವ ನೀರನ್ನು ಎತ್ತುವ ಮೂಲಕ ಯೋಜನೆ ರೂಪಿಸಿ ನೀರು ನೀಡಬಹುದು ಎಂದು ವರದಿಯಲ್ಲಿ ತಿಳಿಸಿದ್ದರು.

ಸಸಾಲಟ್ಟಿ ಶಿವಲಿಂಗೇಶ್ವರ ಏತ ನೀರಾವರಿ ಯೋಜನೆ ಅನುಷ್ಠಾನ ನನ್ನ ಕನಸಾಗಿತ್ತು. ಯೋಜನೆ ಅನುಷ್ಠಾನಕ್ಕೆ ಮುಖ್ಯಮಂತ್ರಿಗಳು ಹಾಗೂ ನೀರಾವರಿ ಸಚಿವರ ಮೇಲೆ ಸಾಕಷ್ಟು ಒತ್ತಡ ಹೇರಲಾಗಿತ್ತು. ಇದರಿಂದಾಗಿ ಯೋಜನೆಗೆ ಸರಕಾರ ಅನುಮೋದನೆ ನೀಡಿದೆ. ಮೊದಲ ಹಂತದ ಕಾಮಗಾರಿಗೆ ಟೆಂಡರ್‌ ಆಗಿದೆ. ಎರಡನೇ ಹಂತದ ಕಾಮಗಾರಿಗೂ ಶೀಘ್ರದಲ್ಲಿ ಅನುಮೋದನೆ ನೀಡಿ ಟೆಂಡರ್‌ ಪ್ರಕ್ರಿಯೆ ನಡೆಯಲಿದೆ. ಎರಡೂ ಹಂತದ ಕಾಮಗಾರಿಗೆ ಶೀಘ್ರದಲ್ಲಿ ಚಾಲನೆ ನೀಡಲಾಗುವುದು. ಸಿದ್ದು ಸವದಿ, ತೇರದಾಳ ಶಾಸಕ

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.