ಕೊನೆಗೂ ಸಿಕ್ತು ಯುವಕನ ಮೃತದೇಹ

Team Udayavani, Apr 9, 2019, 11:50 AM IST

bag-5
ಕಲಾದಗಿ: ರವಿವಾರ ಮೊಸಳೆ ದಾಳಿಗೊಳಗಾದ ಯುವಕ ಸಿದ್ರಾಮಪ್ಪ ಪೂಜಾರಿ (18) ಶವ ಬರೋಬ್ಬರಿ 30 ಗಂಟೆ ಕಾರ್ಯಾಚರಣೆ ಬಳಿಕ ಕೊನೆಗೂ ಸೋಮವಾರ ಸಂಜೆ 5.30 ಸುಮಾರಿಗೆ ನದಿಯಲ್ಲಿ ಪತ್ತೆಯಾಗಿದೆ.
ಘಟನಾ ಸ್ಥಳಕ್ಕೆ ಸೋಮವಾರ ಬೆಳಿಗ್ಗೆ ಬಾಗಲಕೋಟೆ ಜಿಲ್ಲಾಧಿಕಾರಿ ಆರ್‌. ರಾಮಚಂದ್ರನ್‌ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಶೋಧ ಕಾರ್ಯಾಚರಣೆಗೆ ಅವಶ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಂಡು ಕ್ಷಣ ಕ್ಷಣವೂ ಮಾಹಿತಿ ನೀಡಲು ಸೂಚನೆ ನೀಡಿದರು.
ನಂತರ ಶೋಧ ಕಾರ್ಯಾಚರಣೆ ತೀವ್ರಗೊಂಡಿತು. ಬಾಗಲಕೋಟೆ ಉಪವಿಭಾಗಾಧಿಕಾರಿ ಎಚ್‌. ಜಯಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು.
ಸ್ಥಳಕ್ಕೆ ಡಿಸಿ ಆಗಮಿಸುತ್ತಿದ್ದಂತೆ ಸಿದ್ರಾಮಪ್ಪನ ತಂದೆ ಛಭ್ಯಪ್ಪ ಪೂಜಾರಿ ಕಣ್ಣೀರಾದರು. ಬಿಕ್ಕಿ ಬಿಕ್ಕಿ ಅತ್ತರು. ನೋವು ತೋಡಿಕೊಂಡರು. ಮಗನ ಶವ ಹುಡಿಕಿಸಿಕೊಡುವಂತೆ ಗೋಗರೆದರು. ಜಿಲ್ಲಾಧಿಕಾರಿಗಳು ಛಭ್ಯಪ್ಪನನ್ನು ತಬ್ಬಿಕೊಂಡು ಸಾಂತ್ವನ ಹೇಳಿ ಸಮಾಧಾನ ಪಡಿಸಿದರು.
ಬಾಗಲಕೋಟೆ ತಹಶೀಲ್ದಾರ್‌ ಮೋಹನ ಬಿ.ನಾಗಠಾಣ, ಅರಣ್ಯ ಇಲಾಖಾ ಅಧಿಕಾರಿ ಎ.ಎಸ್‌.ನೇಗಿನಾಳ, ಪಿ.ಎಸ್‌.ಕೇಡಗಿ, ಅಗ್ನಿಶಾಮಕ ದಳದ ಅಧಿಕಾರಿಕಾರಿಗಳು, ಪೊಲೀಸ್‌ ಇಲಾಖಾ ಸಿಬ್ಬಂದಿ ಸ್ಥಳದಲ್ಲೇ ಬೀಡು ಬಿಟ್ಟು ಕಾರ್ಯಾಚರಣೆ ಕೈಗೊಂಡರು. 5ಕಿಲೋ ಮೀಟರ್‌ ದೂರದ ವಸ್ತುಗಳೂ ಸ್ಪಷ್ಟವಾಗಿ ಕಾಣಿಸಿಬಲ್ಲ ನ್ಯೂ ಟೆಕ್ನಾಲಾಜಿಯ ಟೆಲಿಸ್ಕೋಪ್‌, ನೀರಿನಲ್ಲಿ ಕ್ಯಾಮರಾ ಬಿಟ್ಟು, ಮೀನುಗಾರರ ಸಹಾಯದಿಂದ ತೆಪ್ಪದಲ್ಲಿ ಸಂಚರಿಸಿ, ಬೋಟ್‌ ಮೂಲಕ ಪಾತಾಳ ಗರಡಿ ಬಿಟ್ಟು, ತೆಪ್ಪದಲ್ಲಿ ಗಾಣ, ಮುಳ್ಳು ಕಂಟಿಗೆ ಗಾಣ ಸಿಕ್ಕಿಸಿ ನದಿ ಆಳದಲ್ಲಿ ಎಳೆದಾಡಿಸಿ ಪತ್ತೆ ಕಾರ್ಯ ಮಾಡಲಾಯಿತು.
ಅಗ್ನಿಶಾಮಕ ಅಧಿಕಾರಿ ವಿರುದ್ಧ ಆಕ್ರೋಶ ಘಟಪ್ರಭಾ ನದಿಯಲ್ಲಿ ಮೊಸಳೆ ದಾಳಿಗೆ ಯುವಕ ಬಲಿಯಾಗಿದ್ದು, ಕಂದಾಯ ಇಲಾಖಾ ಅಧಿಕಾರಿಗಳು, ಅರಣ್ಯ ಇಲಾಖಾ ಹಿರಿಯ ಅಧಿಕಾರಿಗಳು, ಪೊಲೀಸ್‌ ಇಲಾಖಾ ಅಧಿಕಾರಿಗಳು ರವಿವಾರ ಮಧ್ಯಾಹ್ನದಿಂದಲೇ ಸ್ಥಳದಲ್ಲಿದ್ದು, ಶವ ಪತ್ತೆ ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದರೆ, ಸ್ಥಳಕ್ಕೆ ಜಿಲ್ಲಾ ಧಿಕಾರಿ
ಬಂದು ಸೂಚನೆ ಕೊಟ್ಟ ಮೇಲೆ ಘಟನೆ ನಡೆದು 24ಗಂಟೆಗಳ ಮೇಲೆ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಎಚ್‌.ರಾಜು
ಆಗಮಿಸಿದ್ದಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಯಿತು.

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.