ಬಲದಂಡೆ ಕಾಲುವೆಗೆ ನೀರು ಹರಿಸಿ


Team Udayavani, Oct 12, 2018, 5:34 PM IST

12-october-25.gif

ಬಾಗಲಕೋಟೆ: ಘಟಪ್ರಭಾ ಬಲದಂಡೆ ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿ ಕೆರಕಲಮಟ್ಟಿ, ಕಗಲಗೊಂಬ, ಹೂಲಗೇರಿ, ಗಂಗನಬೂದಿಹಾಳ ಭಾಗದ ರೈತರು ಜಿಲ್ಲಾ ಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅವರಿಗೆ ಮನವಿ ಸಲ್ಲಿಸಿದರು.

ಮುಖಂಡ ಕೃಷ್ಣಗೌಡ ನಾಡಗೌಡರ ಮಾತನಾಡಿ, ನೀರಿಲ್ಲದೆ ಜನ-ಜಾನುವಾರುಗಳು ಪರಿತಪಿಸುವಂತಾಗಿದೆ. ಈ ಸಂಬಂಧ ಸಂಬಂಧಪಟ್ಟ ಅಧಿಕಾರಿಗಳಿಗೆ ಜನಪ್ರತಿನಿಧಿಗಳಿಗೆ ನೀರಿನ ಸಮಸ್ಯೆ ಬಗ್ಗೆ ಮನವಿ ಮಾಡಲಾಗಿದೆ. ಆದರೂ ನಿರಂತರವಾಗಿ ತಾರತಮ್ಯವಾಗುತ್ತಿದೆ. ಸಾವಿರಾರು ಕೋಟಿ ವೆಚ್ಚದಲ್ಲಿ ಕಾಲುವೆ ನಿರ್ಮಾಣಗೊಂಡರೂ ನೀರಾವರಿ ಸೌಲಭ್ಯ ಇಲ್ಲ. ಕಾಲುವೆ ನವೀಕರಣದಲ್ಲಿ ಅಕ್ರಮದ ಶಂಕೆ ಇದೆ. ಕಾಲುವೆಗಳು ದುಃಸ್ಥಿತಿಯಲ್ಲಿವೆ ಎಂದು ದೂರಿದರು.

ಕಳೆದ ಹತ್ತು ವರ್ಷದ ಹಿಂದೆ ಘಟಪ್ರಭಾ ನದಿಯ ಹಿಡಕಲ್‌ ಡ್ಯಾಂನಿಂದ ಕಾಲುವೆಗೆ ನಿರ್ಮಿಸಿದ್ದು, ಕೇವಲ 2ಬಾರಿ ಕಾಲುವೆ ನೀರು ಹರಿಸಲಾಗಿದೆ. ಈ ವರ್ಷವು ಡ್ಯಾಂ ಭರ್ತಿಯಾಗಿದೆ. ಮೇಲ್ಭಾಗದ ಕಾಲುವೆಗೆ ನೀರು ಬರುತ್ತದೆ. ಮೇಲ್ಭಾಗದ ರೈತರು ಕಾಲುವೆಗೆ ಅಡ್ಡಲಾಗಿ ಮಣ್ಣು ಕಲ್ಲುಗಳನ್ನು ತುಂಬಿದ್ದರ ಪರಿಣಾಮ ಕೆರಕಲಮಟ್ಟಿ, ಕಗಲಗೊಂಬ, ಹೂಲಗೇರಿ, ಕಟಗೇರಿ, ಜಲಗೇರಿ, ಗಂಗನಬೂದಿಹಾಳ ಗ್ರಾಮಗಳಿಗೆ ಘಟಪ್ರಭಾ ಬಲದಂಡೆ ಕಾಲುವೆಗೆ ನೀರು ಬರುತ್ತಿಲ್ಲ. ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಕನಿಷ್ಠ  ರಾಬಂದಿ ಮಾಡಬೇಕು ಎಂದು ಆಗ್ರಹಿಸಿದರು. ಅಧಿಕಾರಿಗಳು ಸಿಬ್ಬಂದಿ ಕೊರತೆ ಇದೆ ಎಂದು ಬೇಜವಾಬ್ದಾರಿ ಹೇಳಿಕೆ ನೀಡುತ್ತಾರೆ. ರೈತರಿಗೆ ಗೌರವ ನೀಡದೇ ಮಾತಾಡುತ್ತಾರೆ ಎಂದು ಆರೋಪಿಸಿದರು.

ಈಗಾಗಲೇ ಮಳೆ ಇಲ್ಲದೇ ಬೆಳೆಯಿಲ್ಲದೇ ರೈತರು ಕಂಗಾಲಾಗಿದ್ದಾರೆ. ಜನ, ಜಾನುವಾರುಗಳಿಗೆ ಸಮರ್ಪಕವಾದ ಕುಡಿಯಲು ನೀರು ಇಲ್ಲದೇ ಹಾಹಾಕಾರ ಎದ್ದಿದೆ. ಈ ಸಮಸ್ಯೆ ಪರಿಹಾರಕ್ಕೆ ಕಲಾದಗಿ ಲಿಫ್ಟ್‌ ಇರಿಗೇಶನ್‌ ಪ್ರಮುಖ ಪೈಪ್‌ಲೈನ್‌ ಬಂದಕೇರಿ ಗ್ರಾಮದ ಹತ್ತಿರ ಹಾದುಹೋಗಿದೆ. ಆ ಪೈಪ್‌ ಲೈನ್‌ನಿಂದ ತಾತ್ಪುರ್ತಿಕವಾಗಿ ಜನ, ಜಾನುವಾರುಗಳಿಗೆ ಕಾಲುವೆ ಮೂಲಕ ನೀರು ಒದಗಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಅಧುಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಬಾದಾಮಿ ತಾಲೂಕಿನ ಕೆರಕಲಮಟ್ಟಿ ಗ್ರಾಮದ ರೈತರಾದ ಶಿವು ಕಬಾಡದ, ಸಿದ್ದಣ್ಣ ಅಂಗಡಿ, ಹನಮಂತ ಪಾಟೀಲ, ಕೃಷ್ಣಾ ನಾಡಗೌಡ, ಶಿವಾನಂದ ಮಾಗಡಿ, ಎಚ್‌,ಆರ್‌. ಉಳ್ಳಾಗಡ್ಡಿ, ಎಸ್‌.ಬಿ.ದೋಣಿ, ಶಿವಾನಂದ ಉದಗಟ್ಟಿ, ಹನಮಂತಗೌಡ ಪಾಟೀಲ, ಶರಚಂದ್ರ ನಾಡಗೌಡ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.