ಘಟಪ್ರಭಾ ನದಿಗೆ ಹೆಚ್ಚಿದ ನೀರು: ಮೂರು ದಿನಗಳಿಂದ ಎರಡು ಸೇತುವೆ ಜಲಾವೃತ

ಢವಳೇಶ್ವರ ಸೇತುವೆ ಜಲಾವೃತಕ್ಕೆ ಕ್ಷಣಗಣನೆ

Team Udayavani, Jul 25, 2023, 7:46 PM IST

ಘಟಪ್ರಭಾ ನದಿಗೆ ಹೆಚ್ಚಿದ ನೀರು : ಮೂರು ದಿನಗಳಿಂದ ಎರಡು ಸೇತುವೆ ಜಲಾವೃತ

ಮಹಾಲಿಂಗಪುರ: ಮಹಾರಾಷ್ಟ್ರದಲ್ಲಿ ನಿರಂತರ ಮಳೆಯಿಂದಾಗಿ ಹಿರಣ್ಯಕೇಶಿ ನದಿಯು ತುಂಬಿ ಹರಿದು ಧೂಪದಾಳ ಜಲಾಶಯ ಮಾರ್ಗವಾಗಿ ಘಟಪ್ರಭಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವ ಕಾರಣ ಮೂರು ದಿನಗಳಿಂದ ಸಮೀಪದ ನಂದಗಾಂವ ಸೇತುವೆ ಹಾಗೂ ಅಕ್ಕಿಮರಡಿ ಮಿರ್ಜಿ ಹಳೆ ಸೇತುವೆ ಸಂಪೂರ್ಣ ಜಲಾವೃತವಾಗಿವೆ.

ಮಂಗಳವಾರ ಸಂಜೆ 6 ಗಂಟೆ ಮಾಹಿತಿಯಂತೆ ಮಾಹಿತಿಯಂತೆ ಹಿರಣ್ಯಕೇಶಿ ನದಿಯಿಂದ ದುಪದಾಳ ಜಲಾಶಯಕ್ಕೆ ಒಟ್ಟು 17800 ಕ್ಯೂಸೆಕ್ ನೀರಿನ ಒಳಹರಿವು ಇದ್ದು, ಇದರಲ್ಲಿ 14600 ಕ್ಯೂಸೆಕ್ ಘಟಪ್ರಭಾ ನದಿಗೆ, 800 ಜಿಆರ್‌ಬಿಸಿಗೆ, 2400 ಘಟಪ್ರಭಾ ಎಡದಂಡೆ ಕಾಲುವೆಗೆ ಸೇರಿದಂತೆ ಒಟ್ಟು 17800 ಕ್ಯೂಸೆಕ್ ನೀರನ್ನು ದುಪದಾಳ ಜಲಾಶಯದಿಂದ ಹೊರಕ್ಕೆ ಬಿಡಲಾಗುತ್ತಿದೆ. ಘಟಪ್ರಭಾ ನದಿಗೆ ಗೋಕಾಕ ಹತ್ತಿರ ಜೊತೆಗೆ ಬಳ್ಳಾರಿ ನಾಲಾ, ಮಾರ್ಕಂಡೆಯ ಉಪನದಿಗಳ ನೀರು ಮತ್ತು ಘಟಪ್ರಭಾ ಎಡದಂಡೆ ಕಾಲುವೆ ನೀರು ಸಹ ವಿವಿಧ ಗ್ರಾಮಗಳ
ಹಳ್ಳಗಳ ಮಾರ್ಗವಾಗಿ ಪುನ: ಘಟಪ್ರಭಾ ನದಿಗೆ ಸೇರುವದರಿಂದ ಢವಳೇಶ್ವರ ಸೇತುವೆ ಹತ್ತಿರ ಘಟಪ್ರಭಾ ನದಿಗೆ ಸುಮಾರು 17 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಹರಿದು ಬರುತ್ತಿರುವದರಿಂದ ಈ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.

ಢವಳೇಶ್ವರ ಸೇತುವೆ ಜಲಾವೃತವಾಗಲು ಕ್ಷಣಗಣನೆ : ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಢವಳೇಶ್ವರ ಮತ್ತು ಬಾಗಲಕೋಟೆ ಜಿಲ್ಲೆ ರಬಕವಿ ಬನಹಟ್ಟಿ ತಾಲೂಕಿನ ಢವಳೇಶ್ವರ ಗ್ರಾಮಗಳ ಗಡಿರೇಖೆಯಂತಿರುವ ಘಟಪ್ರಭಾ ನದಿಯ ಸೇತುವೆಯು ಜಲಾವೃತವಾಗಲು ಕೆಲವು ಇಂಚುಗಳು ಬಾಕಿ ಇರುವ ಕಾರಣ ಬಹುತೇಕ ಮಂಗಳವಾರ ರಾತ್ರಿ ಸೇತುವೆಯು ಜಲಾವೃತವಾಗಿ ಬುಧವಾರ ಮುಂಜಾನೆಯಿಂದ ಬಹುತೇಕ ಸೇತುವೆ ಮೇಲಿನ ಸಂಚಾರವು ಬಂದ್ ಆಗಲಿದೆ.

ಕಳೆದ ಮೂರು ದಿನಗಳಿಂದ ನಂದಗಾಂವ ಸೇತುವೆ ಜಲಾವೃತವಾದ ಕಾರಣ ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಅವರಾದಿ, ಯರಗುದ್ರಿ, ತಿಮ್ಮಾಪೂರ, ಅರಳಿಮಟ್ಟಿ, ವೆಂಕಟಾಪೂರ ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಈ ಗ್ರಾಮಕ್ಕೆ ಹೋಗುವವರು ಮತ್ತು ಮಹಾಲಿಂಗಪುರಕ್ಕೆ ಬರುವವರು ಢವಳೇಶ್ವರ ಸೇತುವೆಯ ಮಾರ್ಗವಾಗಿ ಹತ್ತಾರು ಕೀಮಿ ಸುತ್ತುವರೆದು ಸಂಚರಿಸುವಂತಾಗಿದೆ.

ಸಂಚಾರ ನಿಷೇಧ : ನಂದಗಾಂವ ಅವರಾದಿ ಸೇತುವೆಯು ಜಲಾವೃತವಾಗಿರುವ ಕಾರಣ ಮಹಾಲಿಂಗಪುರ ಪೊಲೀಸರು ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಸೇತುವೆ ಹತ್ತಿರ ಬ್ಯಾರಿಕೇಡ್ ಅಳವಡಿಸಿ ಸಂಚಾರವನ್ನು ಸಂಪೂರ್ಣ ನಿಷೇಧಿಸಿದ್ದಾರೆ.

ಟಾಪ್ ನ್ಯೂಸ್

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.