ಯುಕೆಪಿಗೆ 30 ಸಾವಿರ ಕೋಟಿ ಕೊಡಿ

Team Udayavani, Jan 29, 2020, 11:58 AM IST

bk-tdy-4

ಬಾಗಲಕೋಟೆ: ಕೃಷ್ಣಾ ಮೇಲ್ದಂಡೆ ಯೋಜನೆಗೆ ಪ್ರಸಕ್ತ ಬಜೆಟ್‌ನಲ್ಲಿ 30 ಸಾವಿರ ಕೋಟಿ ಅನುದಾನ ಮೀಸಲಿಡಬೇಕು ಎಂದು ಮುಳುಗಡೆ ಸಂತ್ರಸ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.

ನವನಗರದ ಜಿಲ್ಲಾಡಳಿತ ಕಚೇರಿ ಎದುರು ಕೃಷ್ಣಾ ಮೇಲ್ದಂಡೆ ಯೋಜನಾ ಬಾಧಿತ ಸಂತ್ರಸ್ತರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತ ಕಚೇರಿಯ ಎಸ್‌.ಎಸ್‌. ನಾಯ್ಕಲಮಠ ಅವರ ಮೂಲಕ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಮನವಿ  ಸಲ್ಲಿಸಿದರು.

ಸಂತ್ರಸ್ತ ಮುಖಂಡ ಪ್ರಕಾಶ ಅಂತರಗೊಂಡ ಮಾತನಾಡಿ, 524.26 ಮೀಟರ್‌ ಎತ್ತರಿಸಿದಾಗ 22 ಹಳ್ಳಿಗಳು ಮುಳುಗಡೆಯಾಗುತ್ತಿವೆ. ಈ ಗ್ರಾಮಗಳಿಗೆ ತಡೆಗೋಡೆ ನಿರ್ಮಿಸುವ ಯೋಜನೆ ಬಿಟ್ಟು ಇಂತಹ ಗ್ರಾಮಗಳನ್ನು ಸ್ಥಳಾಂತರಕ್ಕೆ ಮುಂದಾಗಬೇಕು. ಪುನರ್‌ವಸತಿ ಕೇಂದ್ರ ಮೂಲಭೂತ ಸೌಕರ್ಯ ಮತ್ತು ನವನಗರ ನಿರ್ಮಣಕ್ಕೆ ಭೂಮಿ ಕಳೆದುಕೊಂಡವರನ್ನು ಸಹ ಸಂತ್ರಸ್ತರೆಂದು ಪರಿಗಣಿಸಿ ಆಯಾ ಪುನರ್‌ವಸತಿ ಕೇಂದ್ರಗಳಲ್ಲಿ ಹಿನ್ನೀರಿನ ಸಂತ್ರಸ್ತತರಿಗೆ ನೀಡಿದಂತೆ ನಿವೇಶನ ಮತ್ತು ವಾಣಿಜ್ಯ ನಿವೇಶನಗಳನ್ನು ನೋಡಬೇಕು. ಬಿನ್‌ ಶೇತ್ಕಿ ಜಮೀನನ್ನು ಯೋಜನೆಗಾಗಿ ಕಳೆದುಕೊಂಡು ಇಚ್ಚೆ ಪಟ್ಟಲ್ಲಿ ಪರಿಹಾರ ಬದಲಾಗಿ ಪರಿಹಾರ ಹಿಂಪಡೆದು, ಪುನರ್‌ವಸತಿ ಕೇಂದ್ರಗಳಲ್ಲಿ ನಿವೇಶನ ಒದಗಿಸಬೇಕು ಎಂದು ಒತ್ತಾಯಿಸಿದರು.

ಯೋಜನಾ ಬಾಧಿತ ಕುಟುಂಬದವರಿಗೆ ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣಕ್ಕೆ ತಗಲುವ ಶಿಕ್ಷಣ ಶುಲ್ಕ, ಊಟ, ವಸತಿ ನಿಲಯ ಶುಲ್ಕ ನೀಡಿ ಶಿಕ್ಷಣ ಭಾಗ್ಯ ಒದಗಿಸಬೇಕು. ಈಗಾಗಲೇ ಒಂದನೇ ಮತ್ತು ಎರಡನೇ ಹಂತದಲ್ಲಿ ಭೂಮಿ ಕಳೆದುಕೊಂಡವರಲ್ಲಿ ಶೇ. 80 ಜನ ಬೀದಿಪಾಲಾಗಿದ್ದಾರೆ. ಎಲ್ಲ ಪದವಿ ಶಿಕ್ಷಣ ವೃತ್ತಿಪರ ಶಿಕ್ಷಣ, ಉನ್ನತ ಶಿಕ್ಷಣದಲ್ಲಿ ಸಂತ್ರಸ್ತರ ಮಕ್ಕಳಿಗೆ ಹೆಚ್ಚುವರಿ ಪ್ರವೇಶ ಅವಕಾಶ ನೀಡುವ ಮೂಲಕ ಮೀಸಲಾತಿ ಒದಗಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

2015ರಲ್ಲಿ ಎಸ್‌.ಆರ್‌. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾರುಕಟ್ಟೆ ಬೆಲೆ ನಿರ್ಧರಣಾ ಸಮಿತಿ ರಚಿಸಿ ಸಂತ್ರಸ್ತರಿಗೆ ಯೋಗ್ಯ ಪರಿಹರ ನೀಡಬೇಕು. ಕಾನೂನಿನ ಪ್ರಕಾರ ಬೆಲೆ ನಿರ್ಧರಿಸಿದರೆ ಅವೈಜ್ಞಾನಿಕ ಮಾರ್ಗಸೂಚಿ ಬೆಲೆಗಳನ್ವಯ ನೊಂದಣಿಯಾದ ಬೆಲೆಗಳಿಂದ ಸಂತ್ರಸ್ತರಿಗೆ ಸರಿಯಾದ ಬೆಲೆ ಸಿಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದರು. ಆದರೆ, ಈಗ ಕಾನೂನಿನ ಪ್ರಕಾರ ಸಂತ್ರಸ್ತರು ಕಳೆದುಕೊಂಡ ಭೂಮಿಗಳಿಗೆ ಹಾಗೂ ಆಸ್ತಿಗಳಿಗೆ ಪರಿಹಾರ ಒದಗಿಸಲಾಗುವುದು ಎಂದು ಹೇಳುತ್ತಿದ್ದಾರೆ. ಕಾನೂನಿನ ರೀತಿಯಲ್ಲಿ ಪರಿಹಾರ ನೀಡಿದರೆ ರೈತರು ಮರಳಿ ಭೂಮಿಯನ್ನು ಕೊಂಡುಕೊಳ್ಳಲು ಆಗುವುದಿಲ್ಲ. ಮಾರುಕಟ್ಟೆ ಬೆಲೆ ನಿರ್ಧಾರ ಸಮಿತಿ ರಚಿಸಿ ಸಂತ್ರಸ್ತರಿಗೆ ಯೋಗ್ಯ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಮಲ್ಲಿಕಾರ್ಜುನ ಅಂಗಡಿ, ಕಿರಣ ಬಾಳಗೋಳ, ಸಿದ್ದು ಗಿರಗಾಂವಿ, ಬಸವರಾಜ ಮಲಕಗೊಂಡ, ಈಶ್ವರ ಕೋನಪ್ಪನವರ, ಹನಮಂತಗೌಡ ಪಾಟೀಲ, ರಾಜು ಕಾಖಂಡಕಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.