ಬಸವನಾಡಿಗಿಲ್ಲ ಸರ್ಕಾರದ ದೈವಸಂಕಲ್ಪ!

ಸರ್ಕಾರದ ವಿವಿಧ ಯೋಜನೆಗಳಡಿ ಮಾತ್ರ ಅನುದಾನ ನೀಡಿ ಅಭಿವೃದ್ಧಿಪಡಿಸಲಾಗಿದೆ

Team Udayavani, Feb 7, 2022, 6:27 PM IST

ಬಸವನಾಡಿಗಿಲ್ಲ ಸರ್ಕಾರದ ದೈವಸಂಕಲ್ಪ!

ಬಾಗಲಕೋಟೆ: ರಾಜ್ಯದ ಪ್ರಮುಖ ದೇವಾಲಯಗಳ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ದೈವಸಂಕಲ್ಪ ಎಂಬ ಹೊಸ ಯೋಜನೆ ರೂಪಿಸಿ, ಎ ದರ್ಜೆಯ ದೇವಾಲಯಗಳನ್ನು ಆಯ್ಕೆ ಮಾಡಿದೆ. ಆದರೆ, ಈ ದೇವಾಲಯಗಳ ಪಟ್ಟಿಯಲ್ಲಿ ಬಸವನಾಡಿನ ದೇವಾಲಯಗಳು ಸ್ಥಾನ ಪಡೆದಿಲ್ಲ.

ಹೌದು, ಜಿಲ್ಲೆಯಲ್ಲಿ ಸರ್ಕಾರದ ಮುಜರಾಯಿ ಇಲಾಖೆಯ ಅಧೀನದಲ್ಲಿ ಬರುವ ಬಿ ದರ್ಜೆಯ ಮೂರು ಹಾಗೂ ಸಿ ದರ್ಜೆಯ 1160 ಸೇರಿ ಒಟ್ಟು 1163 ದೇವಾಲಯಗಳಿವೆ. ಬಿ ದರ್ಜೆಯಲ್ಲಿ ಪ್ರಮುಖವಾಗಿ ಬಾದಾಮಿಯ ಬನಶಂಕರಿ ದೇವಾಲಯ (ಸದ್ಯ ವಿವಾದ ಕೋರ್ಟ್‌ನಲ್ಲಿದ್ದು, ಅದನ್ನೂ ಖಾಸಗಿ ಟ್ರಸ್ಟ್‌ನಿಂದ ನಿರ್ವಹಿಸಲಾಗುತ್ತಿದೆ), ಮುಚಖಂಡಿ ವೀರಭದ್ರೇಶ್ವರ ದೇವಾಲಯ ಹಾಗೂ ತಾಲೂಕಿನ ತುಳಸಿಗೇರಿಯ ಆಂಜನೆಯ ದೇವಾಲಯ ಸೇರಿ ಮೂರು ಬಿ ದರ್ಜೆಯಲ್ಲಿವೆ. ಇನ್ನು ಜಿಲ್ಲೆಯ 9 ತಾಲೂಕು, 602 ಗ್ರಾಮಗಳ ವ್ಯಾಪ್ತಿಯೂ ಸೇರಿದಂತೆ ಒಟ್ಟು 1160 ದೇವಾಲಯಗಳು, ಮುಜರಾಯಿ ಇಲಾಖೆಯ ಸಿ ದರ್ಜೆ ಮಾನ್ಯತೆಯಡಿ ಇವೆ.

ಏನಿದು ಹೊಸ ಯೋಜನೆ:
ರಾಜ್ಯದ ಮುಜರಾಯಿ ಇಲಾಖೆಯಡಿ ಬರುವ ಎ ದರ್ಜೆಯ ದೇವಾಲಯಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರ ದೈವ ಸಂಕಲ್ಪ ಹೆಸರಿನ ಹೊಸ ಯೋಜನೆ ರೂಪಿಸಿದೆ. ಈ ಯೋಜನೆಯಡಿ ರಾಜ್ಯದ 25 ದೇವಸ್ಥಾನ ಆಯ್ಕೆ ಮಾಡಿದ್ದು, ಪ್ರತಿಯೊಂದು ದೇವಸ್ಥಾನದ ಅಭಿವೃದ್ಧಿಗೆ ಒಟ್ಟಾರೆ 1143.61 ಲಕ್ಷ ಅನುದಾನವೂ ಬಿಡುಗಡೆ ಮಾಡಿದೆ.

ವಿಪರ್ಯಾಸ ಅಂದರೆ ರಾಜ್ಯ ಸರ್ಕಾರ, ದೈವ ಸಂಕಲ್ಪ ಯೋಜನೆಯಡಿ ಆಯ್ಕೆ ಮಾಡಿದ 25 ದೇವಸ್ಥಾನಗಳಲ್ಲಿ ಉತ್ತರಕರ್ನಾಟಕದ ಎರಡು ದೇವಸ್ಥಾನ ಮಾತ್ರ ಇವೆ. ಅದರಲ್ಲಿ ಬೆಳಗಾವಿ ಜಿಲ್ಲೆಯ ಸವದತ್ತಿಯ ಯಲ್ಲಮ್ಮ ದೇವಾಲಯ, ಕೊಪ್ಪಳದ ಹುಲಿಗೆಮ್ಮ ದೇವಾಲಯ ಮಾತ್ರ ಇವೆ. ಉಳಿದಂತೆ ದಕ್ಷಿಣ ಕರ್ನಾಟಕದ ದೇವಾಲಯಗಳೇ ಈ ಆಯ್ಕೆ ಪಟ್ಟಿಯಲ್ಲಿ ಸ್ಥಾನ ಪಡೆದಿವೆ.

ಅಭಿವೃದ್ಧಿ-ಮೇಲ್ದರ್ಜೆಗೇರಿಸಿ: ಜಿಲ್ಲೆಯಲ್ಲಿ ವಿಶ್ವಗುರು ಬಸವಣ್ಣನವರ ಐಕ್ಯ ಸ್ಥಳ ಕೂಡಲಸಂಗಮದ ಸಂಗಮೇಶ್ವರ ದೇವಾಲಯ, ಬೀಳಗಿ ತಾಲೂಕಿನ ಚಿಕ್ಕಸಂಗಮದ ಸಂಗಮೇಶ್ವರ ದೇವಾಲಯ, ಬಾದಾಮಿಯ ಬನಶಂಕರಿ, ತುಳಸಿಗೇರಿಯ ಆಂಜನೇಯ, ಮಹಾಲಿಂಗಪುರದ ಮಹಾಲಿಂಗೇಶ್ವರ, ತೇರದಾಳದ ಪ್ರಭುಲಿಂಗೇಶ್ವರ, ಖಾಜಿಬೀಳಗಿ, ಬೀಳಗಿಯ ಸಿದ್ದೇಶ್ವರ ದೇವಾಲಯ, ಬಾಗಲಕೋಟೆಯ ಮುಚಖಂಡಿ ದೇವಾಲಯ, ಶಿವಯೋಗ ಮಂದಿರ (ಖಾಸಗಿ), ಮಹಾಕೂಟದ ಮಹಾಕೂಟೇಶ್ವರ ಹೀಗೆ ಹಲವು ಪ್ರಸಿದ್ಧ ದೇವಾಲಯಗಳಿವೆ. ಆದರೆ, ಅವುಗಳು ಬಹುತೇಕ ಖಾಸಗಿ ಟ್ರಸ್ಟ್‌ನಡಿ ಕಾರ್ಯ ನಿರ್ವಹಿಸುತ್ತಿದ್ದು, ಕ್ಷೇತ್ರಾಭಿವೃದ್ಧಿ ನಿಧಿ, ಸರ್ಕಾರದ ವಿವಿಧ ಯೋಜನೆಗಳಡಿ ಮಾತ್ರ ಅನುದಾನ ನೀಡಿ ಅಭಿವೃದ್ಧಿಪಡಿಸಲಾಗಿದೆ.

ಆದರೆ, ಸರ್ಕಾರದ ಮುಜರಾಯಿ ಇಲಾಖೆಯಡಿ ಎ ದರ್ಜೆಯ ದೇವಸ್ಥಾನಗಳೇ ಜಿಲ್ಲೆಯಲ್ಲಿಲ್ಲ. ಜಿಲ್ಲೆಯ ಪ್ರಮುಖ ದೇವಾಲಯಗಳನ್ನು ಅಭಿವೃದ್ಧಿಪಡಿಸಿ, ಮೇಲ್ದರ್ಜೆಗೇರಿಸಬೇಕು. ಸದ್ಯ ಬಿ ದರ್ಜೆಯಲ್ಲಿ ಇರುವ ಮೂರು ದೇವಾಲಯಗಳನ್ನು ಎ ದರ್ಜೆಗೆ ಹಾಗೂ ಸಿ ದರ್ಜೆಯಲ್ಲಿ ಇರುವ 1160 ದೇವಾಲಯಗಳಿವೆ. ಸಿ ದರ್ಜೆ ಸಾವಿರಕ್ಕೂ ಹೆಚ್ಚು ದೇವಾಲಯಗಳಲ್ಲಿ ಕನಿಷ್ಠ 10ಕ್ಕೂ ಹೆಚ್ಚು ಪ್ರಮುಖ ದೇವಾಲಯ ಗುರುತಿಸಿ, ಅವುಗಳನ್ನು ಬಿ ದರ್ಜೆಗಾದರೂ ಮೇಲ್ದರ್ಜೆಗೇರಿಸಬೇಕೆಂಬ ಒತ್ತಾಯ ಕೇಳಿ ಬಂದಿದೆ.

ನಮ್ಮ ಜಿಲ್ಲೆಯ ಮುಚಖಂಡಿ
ವೀರಭದ್ರೇಶ್ವರ, ಬಾದಾಮಿಯ ಬನಶಂಕರಿ ದೇವಾಲಯ (ವ್ಯಾಜ್ಯ ಕೋರ್ಟ್‌ ನಲ್ಲಿದೆ) ಹಾಗೂ ತುಳಸಿಗೇರಿಯ ಆಂಜನೆಯ ದೇವಾಲಯ ಮುಜರಾಯಿ ಇಲಾಖೆಯ ಬಿ ದರ್ಜೆ ವ್ಯಾಪ್ತಿಯಲ್ಲಿವೆ. ಸಿ ದರ್ಜೆಯಲ್ಲಿ 1160 ದೇವಾಲಯಗಳಿವೆ. ರಾಜ್ಯ ಸರ್ಕಾರ ದೈವ ಸಂಕಲ್ಪ ಯೋಜನೆಯಡಿ ನಮ್ಮ ಜಿಲ್ಲೆಯ ದೇವಸ್ಥಾನಗಳು ಆಯ್ಕೆಯಾಗಿಲ್ಲ. ಎ ದರ್ಜೆಯ ದೇವಾಲಯ ಮಾತ್ರ ಆ ಯೋಜನೆಯಡಿ ಇವೆ.
∙ಮಹಾದೇವ ಮುರಗಿ, ಅಪರ ಜಿಲ್ಲಾಧಿಕಾರಿ
ಶ್ರೀಶೈಲ ಕೆ.ಬಿರಾದಾರ

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.