ಅಳಿವಿನಂಚಿನಲ್ಲಿ ಕೈ ಮಗ್ಗ ನೇಕಾರಿಕೆ: ಪ್ರೊ|ಚಂದ್ರಶೇಖರ

ಕೊರೊನಾ ಕಾಲಘಟ್ಟದಲ್ಲಿ ಬದುಕು ಅತಂತ್ರ

Team Udayavani, Apr 1, 2022, 12:31 PM IST

10

ಗುಳೇದಗುಡ್ಡ: ಪ್ರಾಚೀನ ಪರಂಪರೆ ಹೊಂದಿದ ನೇಕಾರಿಕೆ ವೃತ್ತಿಯೊಂದಿಗೆ ತನ್ನ ಸಂಸ್ಕೃತಿ ತಲೆಮಾರಿನಿಂದ ಪ್ರಸ್ತುತ ತಲೆಮಾರಿಗೆ ಬೆಳೆದುಕೊಂಡು ಬಂದಿದೆ. ಈಗ ಕೈ ಮಗ್ಗ ನೇಕಾರಿಕೆ ಅಳಿವಿನಂಚಿನಲ್ಲಿದೆ ಎಂದು ಪ್ರೊ| ಚಂದ್ರಶೇಖರ ಹೆಗಡೆ ಹೇಳಿದರು.

ಕುರುಹಿನಶೆಟ್ಟಿ ಮಂಗಲ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಜರುಗಿದ ದಿ. ವೀರಪ್ಪ ಬನ್ನಿ ಅವರ “ನೇಕಾರರ ಬದುಕಿನ ಸಾಂಸ್ಕೃತಿಕ ನೆಲೆಗಳು’ ವಿಷಯ ಕುರಿತು ದತ್ತಿ ಉಪನ್ಯಾಸ ನೀಡಿದರು.

ಸಿಂಧೂ ನಾಗರಿಕತೆಯಲ್ಲಿಯೂ ಹತ್ತಿಯಿಂದ ಬಟ್ಟೆ ತಯಾರಿಸಿದ ಅವಶೇಷಗಳಿವೆ. ಆ ಕಾಲದಲ್ಲಿಯೇ ನೇಕಾರಿಕೆ ಉಗಮವಾದದ್ದು ಇತಿಹಾಸ. ರಾಜ್ಯದಲ್ಲಿ 66 ಲಕ್ಷ ನೇಕಾರರು ಗುಳೇದಗುಡ್ಡ, ಇಳಕಲ್ಲ, ರಬಕವಿ-ಬನಹಟ್ಟಿ, ಗುಡೂರ, ಮಹಾಲಿಂಗಪುರ, ಸೇರಿದಂತೆ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿರುವುದು ಇಲ್ಲಿನ ನೇಕಾರಿಕೆ ಸಂಸ್ಕೃತಿ ಹಿರಿಮೆ ಹೇಳುತ್ತದೆ ಎಂದರು.

ದಿ. ಬಸವರಾಜ ಅಮರಣ್ಣ ಪಾಟೀಲರ ದತ್ತಿ ವಿಷಯ “ರಂಗಭೂಮಿಯ ವೈಭವ’ ಕುರಿತು ಎಚ್‌.ಟಿ. ರಂಗಾಪುರ ಮಾತನಾಡಿ, ಇಂದು ರಂಗಭೂಮಿಯಲ್ಲಿ ವೃತ್ತಿ ರಂಗಭೂಮಿ, ಹವ್ಯಾಸಿ ಮತ್ತು ಜಾನಪದ ರಂಗಭೂಮಿಯೆಂದು ಹಲವು ಪ್ರಕಾರಗಳಿದ್ದು, ಪ್ರೇಕ್ಷಕರ ಕೊರತೆ ಮತ್ತು ಹಣಕಾಸಿನ ಸಮಸ್ಯೆಯಿಂದ ನಾಟಕ ಕಂಪನಿಗಳು ಬಂದ್‌ ಆಗಿವೆ. ಕಲಾವಿದರ ಬದುಕು ಕೊರೊನಾ ಕಾಲಘಟ್ಟದಲ್ಲಿ ಬದುಕು ಅತಂತ್ರವಾಗಿದೆ ಎಂದರು.

ಹಿರಿಯ ಸಾಹಿತಿ ಮಲ್ಲಿಕಾರ್ಜುನ ಬನ್ನಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ದತ್ತಿ ಉಪನ್ಯಾಸ ಮಹತ್ವಪೂರ್ಣವಾಗಿದ್ದು ನೇಕಾರರ ಸಂಸ್ಕೃತಿ ಹಾಗೂ ರಂಗಭೂಮಿ ತಲ್ಲಣ ಚರ್ಚಿಸಲು ಉತ್ತಮ ವೇದಿಕೆಯಾಗಿದೆ ಎಂದರು. ಕುರುಹಿನಶೆಟ್ಟಿ ಯುವ ಕುಟುಂಬ ಹಾಗೂ ವಿವಿಧೋದ್ದೇಶಗಳ ಸಂಘದ ಉಪಾಧ್ಯಕ್ಷ ಸಂತೋಷ ನೇಮದಿ ಅಧ್ಯಕ್ಷತೆ ವಹಿಸಿದ್ದರು.

ಶ್ರೀ ಗುರುಸಿದ್ದೇಶ್ವರ ಬೃಹನ್ಮಠದ ಶ್ರೀ ಗುರುಬಸವ ದೇವರು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಇದೇ ಸಂದರ್ಭದಲ್ಲಿ ಪರಶುರಾಮ ಗಾಜಿಯವರು ತಮ್ಮ ತಂದೆಯವರ ಹೆಸರಲ್ಲಿ ದತ್ತಿ ನೀಡಲು ಒಪ್ಪಿಕೊಂಡಿದ್ದರಿಂದ ಅವರನ್ನು ಸನ್ಮಾನಿಸಲಾಯಿತು.

ಈ ವೇಳೆ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಡಾ| ಚಂದ್ರಶೇಖರ ಕಾಳನ್ನವರ, ಕೋಶಾಧ್ಯಕ್ಷ ಪ್ರೊ| ಸಿ.ಎಂ. ಜೋಶಿ, ರಂಗ ಕಲಾವಿದೆ ಪ್ರೇಮಾ ಗುಳೇದಗುಡ್ಡ(ಪಾಟೀಲ), ಬಾದಾಮಿ ತಾಲೂಕು ನಿಕಟಪೂರ್ವ ಅಧ್ಯಕ್ಷ ರವಿ ಕಂಗಳ, ಸಂಗಮೇಶ ಚಿಕ್ಕಾಡಿ, ತಾಲೂಕು ಕಸಾಪ ಅಧ್ಯಕ್ಷ ಡಾ| ಎಚ್‌. ಎಸ್‌. ಘಂಟಿ ಇತರರಿದ್ದರು

ಟಾಪ್ ನ್ಯೂಸ್

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.