ಇನ್ಫೋಸಿಸ್‌ನಿಂದ ಆಹಾರ ಧಾನ್ಯಗಳ ಕಿಟ್ ವಿತರಣೆ
Team Udayavani, Apr 13, 2020, 3:16 PM IST
ಹುಬ್ಬಳ್ಳಿ: ಸುಧಾಮೂರ್ತಿ ಅವರ ಇನ್ಫೋಸಿಸ್ ಪ್ರತಿಷ್ಠಾನ ನೀಡಿರುವ ಆಹಾರ ಧಾನ್ಯಗಳ ಕಿಟ್‌ಗಳನ್ನು ರವಿವಾರ ಕಾರ್ಮಿಕರಿಗೆ ವಿತರಿಸಲಾಯಿತು.
ಹುಬ್ಬಳ್ಳಿ: ಸುಧಾಮೂರ್ತಿ ಅವರ ಇನ್ಫೋಸಿಸ್ ಪ್ರತಿಷ್ಠಾನ ನೀಡಿರುವ ಆಹಾರ ಧಾನ್ಯಗಳ ಕಿಟ್‌ಗಳನ್ನು ಇಸ್ಕಾನ್ ಹಾಗೂ ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆಯ ಆಶ್ರಯದಲ್ಲಿ ರವಿವಾರ ಸುಮಾರು 220ಕ್ಕೂ ಹೆಚ್ಚು ಕಾರ್ಮಿಕರಿಗೆ ವಿತರಿಸಲಾಯಿತು.
ಅವಳಿ ನಗರದಲ್ಲಿನ ಕರ್ನಾಟಕ ರಾಜ್ಯ ಆಹಾರ ನಿಗಮ (ಕೆಎಸ್ ಸಿಎಫ್‌ಸಿ) 8 ಗೋದಾಮುಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 220ಕ್ಕೂ ಹೆಚ್ಚು ಕಾರ್ಮಿಕರು, ಲಾರಿ ಚಾಲಕರು, ಕ್ಲೀನರ್‌ಗಳಿಗೆ ಆಹಾರ ಇಲಾಖೆ ಜಂಟಿ ನಿರ್ದೇಶಕ ಸದಾಶಿವ ಮರ್ಜಿ, ಇಸ್ಕಾನ್‌ನ ಸಾಯಿನಾಥ್ ಅವರು 5 ಕೆಜಿ ಅಕ್ಕಿ, ಅಡುಗೆ ಎಣ್ಣೆ, ತೊಗರಿಬೇಳೆ ಸೇರಿದಂತೆ ಸುಮಾರು 17 ಆಹಾರ ಪದಾರ್ಥಗಳಿರುವ ಕಿಟ್ ವಿತರಿಸಿದರು.
ಕಲಘಟಗಿ ಜಾತ್ರೆಯಲ್ಲಿ ಲಾಕ್ ಡೌನ್‌ನಿಂದ ಸಂಕಷ್ಟ ಎದುರಿಸುತ್ತಿರುವ ವೃತ್ತಿ ನಾಟಕ ಕಂಪನಿ ಕಲಾವಿದರಿಗೂ ಆಹಾರ ಧಾನ್ಯದ ಕಿಟ್ ಪೂರೈಸಲು ವ್ಯವಸ್ಥೆ ಮಾಡಲಾಗಿದೆ.