ರೈಲಿಗಾಗಿ ಇಳಕಲ್ಲ ಜನ ಸಮಿತಿ ಮನವಿ

Team Udayavani, Jan 28, 2021, 2:30 PM IST

ilakalla  peoples request for train

ಬಾಗಲಕೋಟೆ: ಜಿಲ್ಲೆಯ ಇಳಕಲ್ಲ ನಗರದ ಮೂಲಕ ಹಾದು ಹೋಗುವ ರೈಲ್ವೆ ಮಾರ್ಗಗಳ ನಿರ್ಮಾಣಕ್ಕೆ ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ರೈಲಿಗಾಗಿ ಇಳಕಲ್ಲ ಜನ ಸಮಿತಿ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ. ಸಮಿತಿಯ ಪದಾಧಿಕಾರಿಗಳು ಬುಧವಾರ ಸಂಸದ ಪಿ.ಸಿ. ಗದ್ದಿಗೌಡರ ಅವರನ್ನು ಭೇಟಿ ಮಾಡಿ, ಮನವಿ ಸಲ್ಲಿಸಿದರು.

ಆಲಮಟ್ಟಿ- ಕೂಡಲಸಂಗಮ- ಹುನಗುಂದ- ಇಳಕಲ್‌- ಕೂಡ್ಲಿಗಿ- ಚಿತ್ರದುರ್ಗ, ಗದಗ- ನರೇಗಲ್‌- ಗಜೇಂದ್ರಗಡ- ಹನಮಸಾಗರ- ಇಳಕಲ್‌- ನಂದವಾಡಗಿ- ಹಟ್ಟಿ- ಕೃಷ್ಣಾ ನೂತನ ರೈಲು ಮಾರ್ಗಗಳನ್ನು 2021-22ನೇ ಸಾಲಿನ ರೈಲ್ವೆ ಮುಂಗಡ ಪತ್ರದಲ್ಲಿ ಘೋಷಿಸಿ ಅಗತ್ಯ ಅನುದಾನ ಒದಗಿಸಬೇಕು ಎಂದು ಆಗ್ರಹಿಸಿದರು.

ಬಾಗಲಕೋಟೆ ಜಿಲ್ಲೆಯಿಂದ ಗದಗ- ಗಜೇಂದ್ರಗಡ- ಇಳಕಲ್‌- ವಾಡಿ ಮಾರ್ಗವು ಕೈತಪ್ಪಿ ಹೋಗಿದೆ. ಇದರಿಂದ ಗದಗ ಜಿಲ್ಲೆಯ ನರೇಗಲ್‌, ಗಜೇಂದ್ರಗಡ, ಕೊಪ್ಪಳ ಜಿಲ್ಲೆಯ ಹನಮಸಾಗರ, ಬಾಗಲಕೋಟೆಯ ಇಳಕಲ್‌, ಕಂದಗಲ್‌, ನಂದವಾಡಗಿ ಹಾಗೂ ಸುತ್ತಮುತ್ತಲಿನ 15ಲಕ್ಷಕ್ಕೂ ಹೆಚ್ಚು ಜನರು ರೈಲ್ವೆ ಪ್ರಯಾಣ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಗದಗ- ಇಳಕಲ್‌- ಹಟ್ಟಿ- ಕೃಷ್ಣಾ ಹಾಗೂ ಆಲಮಟ್ಟಿ- ಹುನಗುಂದ- ಇಳಕಲ್‌- ಚಿತ್ರದುರ್ಗ ನೂತನ ರೈಲು ಮಾರ್ಗಗಳ ಸಮೀಕ್ಷೆ ಕಾರ್ಯ ಪೂರ್ಣಗೊಂಡಿದೆ. ಇದಕ್ಕೆ ರೈಲ್ವೆ ಮಂಡಳಿಯ ಅನುಮೋದನೆ ಬೇಕಾಗಿದೆ. ಈ ನಿಟ್ಟಿನಲ್ಲಿ ಸಂಸದರು ಈ ಭಾಗದ ಸರ್ವಾಂಗೀಣ ಪ್ರಗತಿಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಈ ಕಾಮಗಾರಿಗಳ ಜಾರಿಗಾಗಿ ಪ್ರಧಾನಿ ಮೋದಿ ಹಾಗೂ ರೈಲ್ವೆ ಸಚಿವರ ಮನವೊಲಿಸಬೇಕು ಎಂದು ಸಮಿತಿ ಪ್ರಮುಖರು ಒತ್ತಾಯಿಸಿದರು.

ಇದನ್ನೂ ಓದಿ:ರಾಜಕಾರಣ ಎಲ್ಲಿಗೆ ಹೋಗಿ ನಿಂತಿದೆ..? ನನ್ನ ಕಾಪಾಡುವಲ್ಲಿ ಯಡಿಯೂರಪ್ಪ ವಿಫಲ: ವಿಶ್ವನಾಥ್ ಬೇಸರ

ಈ ಭಾಗದಲ್ಲಿ ಆಗಲೇಬೇಕಾದ ಯೋಜನೆಗಳು ಆಗಿಲ್ಲ ಎಂಬ ನೋವಿದೆ. ಇದೀಗ ಇಳಕಲ್‌ ಮೂಲಕ ಹಾದು ಹೋಗುವ ನೂತನ ರೈಲು ಮಾರ್ಗ ಯೋಜನೆಗಳನ್ನು ಕೈಗೆತ್ತಿಕೊಳ್ಳುವಂತೆ ಕೋರಿ ರೈಲ್ವೆ ಮಂಡಳಿಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ಗದ್ದಿಗೌಡರ ಅವರು ತಿಳಿಸಿದರು. ಪ್ರಮುಖರಾದ ಎಂ.ವಿ. ಪಾಟೀಲ, ಕೇಶವ ಕಂದಿಕೊಂಡ, ನಾಗರಾಜ ಹೊಂಗಲ್‌, ಜಗದೀಶ ಸರಾಫ, ಮನೋಹರ ಬಡಿಗೇರ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.