ಕೋವಿಡ್ ಸಂಕಷ್ಟದಲ್ಲೂ ಅತಿಕ್ರಮಣ ಹೆಸರಲ್ಲಿ ತೊಂದರೆ

ನಗರಸಭೆ ವಿರುದ್ಧ ಆಕ್ರೋಶ­ !ತರಕಾರಿ ವ್ಯಾಪಾರಸ್ಥರು ಅಂಗಡಿ ಮುಂದೆ ಹಾಕಿದ್ದ ಶೆಡ್‌ ತೆರವು

Team Udayavani, May 16, 2021, 3:26 PM IST

15 bgk-5c

ಬಾಗಲಕೋಟೆ: ಕೊರೊನಾ 2ನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು, ಇದರಿಂದ ಜನರು ಸಾಕಷ್ಟು ಸಂಕಷ್ಟ ಎದುರಿಸುತ್ತಿದ್ದಾರೆ. ನಗರದಲ್ಲಿ ಸೋಂಕು ನಿಯಂತ್ರಣಕ್ಕೆ ಮುಂದಾಗಬೇಕಿದ್ದ ನಗರಸಭೆ ಅಧಿಕಾರಿಗಳು, ಜನರಿಗೆ ಮತ್ತಷ್ಟು ತೊಂದರೆ ಕೊಡುವ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ.

ಕಾಂಗ್ರೆಸ್‌ ಜಿಲ್ಲಾ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಮಾಧ್ಯಮ ವಕ್ತಾರ ನಾಗರಾಜ ಹದ್ಲಿ ಮಾತನಾಡಿ, ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ ಕಳೆದ ಒಂದು ಹಲವು ದಿನಗಳಿಂದ ಕೊರೊನಾ ಕರ್ಫ್ಯೂ ಹೇರಲಾಗಿದೆ. ಇಂತಹ ಸಂದರ್ಭದಲ್ಲಿ ಬಾಗಲಕೋಟೆಯ ನಗರಸಭೆಯ ಪೌರಾಯುಕ್ತರು ಮತ್ತು ಅಧಿಕಾರಿಗಳು ಕೊರೊನಾ ಸೋಂಕು ಹರಡುತ್ತಿರುವುದನ್ನು ತಡೆಗಟ್ಟುವಲ್ಲಿ ಕ್ರಮ ತೆಗೆದುಕೊಳ್ಳುವುದು ಬಿಟ್ಟು ಬಾಗಲಕೋಟೆ ತರಕಾರಿ ಮಾರುಕಟ್ಟೆಯಲ್ಲಿ ರಸ್ತೆ ಡಾಂಬರೀಕರಣ ಮಾಡುವ ನೆಪದಲ್ಲಿ ವ್ಯಾಪಾರಸ್ಥರು ತಮ್ಮ ಅಂಗಡಿಯ ಮೇಲೆ ಬಿಸಿಲಿನ ತಾಪಕ್ಕೆ ಮತ್ತು ಮಳೆನೀರು ಅಂಗಡಿ ಒಳಗೆ ಬರದ ಹಾಗೆ ರಕ್ಷಣೆಗೆ ಹಾಕಲಾಗಿರುವ ತಗಡು ತೆರವುಗೊಳಿಸುವ ಮೂಲಕ ವ್ಯಾಪಾರಸ್ಥರಿಗೆ, ಜನರಿಗೆ ಮತ್ತಷ್ಟು ತೊಂದರೆ ಕೊಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಬಾಗಲಕೋಟೆ ಜನತೆ ಮತ್ತು ವ್ಯಾಪಾರಸ್ಥರು ಈಗಲೇ ಕೊರೊನಾ ಸೋಂಕಿನಿಂದ ನಲುಗಿ ಕಂಗಾಲಾಗಿದ್ದಾರೆ. ಕಳೆದ ಒಂದು ತಿಂಗಳಿಂದ ವ್ಯಾಪಾರ-ವಹಿವಾಟು ಸ್ಥಗಿತವಾಗಿದೆ. ಎರಡು ಹೊತ್ತಿನ ಊಟಕ್ಕೂ ಪರದಾಡುತ್ತಿರುವ ಇಂತಹ ಸಮಯದಲ್ಲಿ ನಗರಸಭೆ ಅಧಿಕಾರಿಗಳಿಗೆ ಅಭಿವೃದ್ಧಿಯ ಹೆಸರಿನಲ್ಲಿ ಜನರಿಗೆ ತೊಂದರೆ ಕೊಡುತ್ತಿದ್ದಾರೆ. ಕನಿಷ್ಠ ಮಾನವೀಯತೆಯೂ ಇಲ್ಲದಂತೆ ವರ್ತಿಸುತ್ತಿರುವುದು ದುರ್ದೈವದ ಸಂಗತಿ ಎಂದು ಹೇಳಿದ್ದಾರೆ.

ಅಭಿವೃದ್ಧಿಗಾಗಿ ಮೀಸಲಿಟ್ಟ ಹಣ ವೆಂಟಿಲೆಟರ್‌ ಆಸ್ಪತ್ರೆಯಲ್ಲಿ ಬೆಡ್‌ ಹೆಚ್ಚಿಸುವುದಕ್ಕೆ ಆಕ್ಸಿಜನ್‌ ಖರೀದಿಸಲು ಉಪಯೋಗಿಸಬಹುದಿತ್ತು. ಅದನ್ನ ಬಿಟ್ಟು ಈ ಸಂಕಷ್ಟದ ಸಮಯದಲ್ಲಿ ಅಮಾನವಿಯವಾಗಿ ನಡೆದುಕೊಳ್ಳುತ್ತಿರುವುದು ಬೇಸರದ ಸಂಗತಿ. ಸಾರ್ವಜನಿಕರಿಗೆ-ವ್ಯಾಪಾರಸ್ಥರಿಗೆ ಸಾಂತ್ವನ ಧೈರ್ಯ ಹೇಳಬೇಕಾದ ಈ ಸಮಯದಲ್ಲಿ ನಗರಸಭೆ ಅಧಿಕಾರಿಗಳ ಈ ದುಂಡಾವರ್ತನೆ ಜಿಲ್ಲಾ ಕಾಂಗ್ರೆಸ್‌ ಘಟಕ ಖಂಡಿಸುತ್ತದೆ. ತಕ್ಷಣವೇ ಪೌರಾಯುಕ್ತ ಮತ್ತು ನಗರಸಭೆ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.