ಕಲಾಸೇವೆಗೆ ಸಂದ ಗೌರವ 

Team Udayavani, Dec 10, 2018, 4:52 PM IST

10-december-19.gif

ಬನಹಟ್ಟಿ: ಸಂಬಾಳ ವಾದನವನ್ನು ಉಸಿರಾಗಿಸಿಕೊಂಡಿರುವ ನಾವಲಗಿ ಗ್ರಾಮದ ಮಲ್ಲಪ್ಪ ಬಾಳಪ್ಪ ಹೂಗಾರ ಅವರಿಗೆ ರಾಜ್ಯ ಸರ್ಕಾರದ ಕೊಡಮಾಡುವ 2018ನೇ ಸಾಲಿನ ಪ್ರತಿಷ್ಠಿತ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಲಭಿಸಿದೆ. 47 ವರ್ಷಗಳಿಂದ ಸಂಬಾಳ ವಾದನದ ಕಲೆಯಲ್ಲಿ ತೊಡಗಿಸಿಕೊಂಡಿರುವ ಮಲ್ಲಪ್ಪ ಹೂಗಾರ ಅವರಿಗೆ ತಂದೆ ಬಾಳಪ್ಪ ಅವರಿಂದ ಬಳುವಳಿಯಾಗಿ ಬಂದ ಕಲೆಯನ್ನು ಈಗಲೂ ಮುಂದುವರಿಸಿಕೊಂಡು ಬರುವ ಜೊತೆಗೆ ಅದನ್ನು ಮುಂದಿನ ಪೀಳಿಗೆಗೆ ಕಲಿಸುತ್ತಿದ್ದಾರೆ.

ಹದಿನೈದನೇ ವಯಸ್ಸಿನಲ್ಲಿ ಸಂಬಾಳ ವಾದನ ನುಡಿಸಲು ಆರಂಭಿಸಿದ ಅವರು, ತಮ್ಮ 62 ವಯಸ್ಸಿನಲ್ಲಿ ಸಂಬಾಳವನ್ನು ಹೆಗಲಿಗೆ ಏರಿಸಿ ನುಡಿಸಲು ನಿಂತರೆ ಅದರಲ್ಲಿ ತಲ್ಲೀನರಾಗುತ್ತಾರೆ ಮತ್ತು ಕೇಳುಗರನ್ನು ಮಂತ್ರ ಮುಗ್ಧರನ್ನಾಗಿಸುತ್ತಾರೆ. ಈ ವಯಸ್ಸಿನಲ್ಲಿಯೂ ಅವರ ಸಾಂಬಳ ವಾದನ ಕೇಳಲು ಜನ ಸಾಗವೇ ಸೇರುತ್ತದೆ. ಸಂಬಾಳ ವಾದನವೇ ಅವರ ಉಸಿರು ಮತ್ತು ಬದುಕಾಗಿದೆ. ವರ್ಷದ ವಿವಿಧ ಕಡೆಗಳಲ್ಲಿ ಸಂಬಾಳ ವಾದನದ ಕಲೆ ಪ್ರದರ್ಶನ ಮಾಡುತ್ತಿದ್ದಾರೆ.

ಬನಹಟ್ಟಿಯಲ್ಲಿ 1980ರಲ್ಲಿ ನಡೆದ 9ನೇ ಅಖಿಲ ಭಾರತ ಕರ್ನಾಟಕ ಜಾನಪದ ಸಮ್ಮೇಳನ, ಮುಂಬೈನ ರವೀಂದ್ರ ನಾಟ್ಯ ಮಂದಿರದಲ್ಲಿ, ಕೇರಳದ ಕೊಚ್ಚಿ, ಶ್ರೀಶೈಲದ ಮಲ್ಲಿಕಾರ್ಜುನ ದೇವರ ಜಾತ್ರೆ, ಕರಾವಳಿ ಉತ್ಸವ, ಮೈಸೂರು ದಸರಾ, ನಾಡಿನ ಪ್ರಮುಖ ಉತ್ಸವ, ಅಖಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳ ಅಧ್ಯಕ್ಷರ ಮೆರವಣಿಗೆಯ ಸಂದರ್ಭದಲ್ಲಿ, ಕೃಷ್ಣ ದೇವರಾಯನ ಐದು ನೂರನೇ ವರ್ಷಚಾರಣೆ ಸಂದರ್ಭದಲ್ಲಿ ಕಲೆ ಪ್ರದರ್ಶನ ಮಾಡಿ ಮೆಚ್ಚುಗೆ ಪಡೆದಿದ್ದಾರೆ. 1986ರಲ್ಲಿ ದೆಹಲಿಯಲ್ಲಿ ನಡೆದ ಅಪನಾ ಉತ್ಸವ ಕಾರ್ಯಕ್ರಮದಲ್ಲಿ ಅಂದಿನ ರಾಷ್ಟ್ರಪತಿ ಡಾ| ಶಂಕರ ದಯಾಳ ಶರ್ಮಾ, ಮಾಜಿ ಪ್ರಧಾನಿ ರಾಜೀವ ಗಾಂಧಿ, ದಿ| ಪಿ.ವಿ. ನರಸಿಂಹರಾವ್‌, ಕಾಂಗ್ರೆಸ್‌ ಮುಖಂಡೆ ಸೋನಿಯಾ ಗಾಂಧಿ, ಮಾಜಿ ಮುಖ್ಯಮಂತ್ರಿಗಳಾದ ರಾಮಕೃಷ್ಣ ಹೆಗಡೆ, ಜಿ.ಎಚ್‌. ಪಟೇಲ ಸೇರಿದಂತೆ ಅನೇಕ ಪ್ರಮುಖ ರಾಜಕೀಯ ವ್ಯಕ್ತಿಗಳ ಎದುರು ಪ್ರದರ್ಶನ ಮಾಡಿ ಸೈ ಎನಿಸಿಕೊಂಡಿದ್ದಾರೆ.

ಗಾನಯೋಗಿ ಪುಟ್ಟರಾಜ ಗವಾಯಿಗಳು, ಇಂಚಲದ ಶಿವಾನಂದ ಭಾರತಿ, ಗದುಗಿನ ಲಿ| ತೋಂಟದ ಸಿದ್ಧಲಿಂಗ ಸ್ವಾಮೀಜಿ, ಧಾರವಾಡದ ಮೃತ್ಯುಂಜಯ ಸ್ವಾಮೀಜಿ, ಇಳಕಲ್‌ದ ಲಿ| ಡಾ| ವಿಜಯಮಹಾಂತೇಶ ಸ್ವಾಮೀಜಿ ಸೇರಿದಂತೆ ನಾಡಿನ ಹಲವಾರು ಸ್ವಾಮೀಜಿಗಳ ಮುಂದೆ ಪ್ರದರ್ಶನ ಮಾಡಿದ್ದಾರೆ. ಸಂಬಾಳ ವಾದನದ ಕಲೆ ಮೆಚ್ಚಿ ಸಂಬಾಳ ಭಾಸ್ಕರ ಮತ್ತು ಬ್ರಹ್ಮಶ್ರೀ ಪ್ರಶಸ್ತಿಗಳು ಬಂದಿವೆ. ಮಲ್ಲಪ್ಪ ಹೂಗಾರ ಅವರಿಗೆ ಪ್ರಶಸ್ತಿ ಬಂದಿರುವುದು ನಿಜಕ್ಕೂ ಪ್ರಶಸ್ತಿ ಮೌಲ್ಯ ಹೆಚ್ಚಾಗಿದೆ.

ಮನೆಯಲ್ಲಿಯ ಪರಂಪರೆಯನ್ನು ಮಲ್ಲಪ್ಪ ಮುಂದುವರಿಸಿಕೊಂಡು ಬಂದಿದ್ದಾರೆ. ಕಲೆಗಾಗಿ ತಮ್ಮ ಜೀವನ ಸಮರ್ಪಣೆ ಮಾಡಿಕೊಂಡಿದ್ದಾರೆ. ಬಡತನದಲ್ಲಿಯೇ ಸಂಬಾಳ ವಾದನ ನುಡಿಸುತ್ತ ಇಂದು ಸಂಬಾಳ ವಾದನದ ಕಲೆಯನ್ನು ಶ್ರೀಮಂತಗೊಳಿಸಿದ್ದಾರೆ. ಅವರೊಬ್ಬ ಸಂಬಾಳ ವಾದನದ ಶ್ರೇಷ್ಠ ಕಲಾವಿದರು.
 ಮಲ್ಲಪ್ಪ ಗಣಿ, ಜಾನಪದ ಕಲಾವಿದ

ಮಲ್ಲಪ್ಪ ಅವರು ನಾಡಿನ ಶ್ರೇಷ್ಠ ಸಂಬಾಳ ಕಲಾವಿದರಲ್ಲಿ ಒಬ್ಬರು, ಬಾಲ್ಯದಿಂದಲೇ ಸಂಬಾಳ ಕಲೆ ಕರಗತ ಮಾಡಿಕೊಂಡವರು. ನಾಡಿನ ಗ್ರಾಮ, ನಗರ, ಖಾಸಗಿ ಕಾರ್ಯಕ್ರಮ, ಜಿಲ್ಲಾ ಹಾಗೂ ರಾಜ್ಯ ಮಟ್ಟದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಅನೇಕ ವಿಮರ್ಶಕರು ಹಾಗೂ ಪ್ರೇಕ್ಷಕರ ಗಮನ ಸೆಳೆದಿದ್ದಾರೆ. ಅವರು ಎಲ್ಲ ತಾಳಗಳಲ್ಲಿ ಪ್ರವೀಣರಾಗಿದ್ದಾರೆ.
 ಸಿದ್ಧರಾಜ ಪೂಜಾರಿ, ಹಿರಿಯ ಸಾಹಿತಿ

ಪ್ರಶಸ್ತಿ ದೊರಕಿರುವುದು ಖುಷಿ ತಂದಿದೆ. ಕಲೆ ಮತ್ತು ಕಲಾವಿದರನ್ನು ಪ್ರೋತ್ಸಾಹಿಸುವ ಕಾರ್ಯವನ್ನು ಸರಕಾರ ಕೈಗೊಂಡರೆ ಕಲೆ ಮತ್ತು ಕಲಾವಿದರು ಇನ್ನಷ್ಟು ಶ್ರೀಮಂತರಾಗುತ್ತಾರೆ.
. ಮಲ್ಲಪ್ಪ ಬಾಳಪ್ಪ ಹೂಗಾರ
  ಪ್ರಶಸ್ತಿ ವಿಜೇತರು.

ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.