ಬುಡದಲ್ಲೇ ಇರುವ ಕಾಲುವೆಗೆ ಬರಲ್ಲ ನೀರು!

|16 ಸಾವಿರ ಹೆಕ್ಟೆರ್ ಗೆ ನೀರಾವರಿ ಆದ್ರೂ ಈ ಯೋಜನೆಯ ಮಧ್ಯೆ ಬರುವ 17 ವರ್ಷದ ಕಾಲುವೆಗೆ ನೀರಿಲ್ಲ

Team Udayavani, Mar 11, 2021, 9:28 PM IST

fghshrwqw

ಬಾಗಲಕೋಟೆ: ಜಿಲ್ಲೆಯ ಬಾದಾಮಿ ಮತ್ತು ಬೀಳಗಿ ಕ್ಷೇತ್ರಗಳ 16 ಸಾವಿರ ಹೆಕ್ಟೇರ್‌ ಭೂಮಿಗೆ ನೀರಾವರಿ ಕಲ್ಪಿಸುವ ಮಹತ್ವಾಕಾಂಕ್ಷಿ ಕೆರೂರ ಏತ ನೀರಾವರಿ ಯೋಜನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದ್ದು, ಈ ಎರಡೂ ಕ್ಷೇತ್ರಗಳ ರೈತರಿಗೆ ಖುಷಿ ತಂದಿದೆ. ಆದರೆ, ಈ ಯೋಜನೆಯಡಿ ಪೈಪ್‌ಲೈನ್‌ ಹಾದು ಹೋಗುವ ಮಾರ್ಗದಲ್ಲೇ 17 ವರ್ಷಗಳ ಹಿಂದೆಯೇ ನಿರ್ಮಿಸಿದ ಕಾಲುವೆಗಳಿಗೆ ನೀರು ಬರಲ್ಲ ಎಂಬ ವಿಷಯ ಬಹಿರಂಗಗೊಂಡಿದ್ದು, ರೈತರು ಬೇಸರ ಹೊರ ಹಾಕಿದ್ದಾರೆ.

ಈ ಯೋಜನೆಯಡಿ ಬಾದಾಮಿ ಕ್ಷೇತ್ರದ ಕೆರೂರ ಭಾಗದ 22 ಹಳ್ಳಿಗಳು ಹಾಗೂ ಬೀಳಗಿ ಕ್ಷೇತ್ರದ 9 ಹಳ್ಳಿಗಳ ರೈತರ ಭೂಮಿಗೆ ನೀರಾವರಿ ಒದಗಲಿದೆ. ಬೀಳಗಿ ಕ್ಷೇತ್ರ ವ್ಯಾಪ್ತಿಯ 10,100 ಎಕರೆ ಬಾದಾಮಿ ಕ್ಷೇತ್ರ ವ್ಯಾಪ್ತಿಯ 30 ಸಾವಿರ ಎಕರೆಗೆ ನೀರಾವರಿ ಕಲ್ಪಿಸಲು ಯೋಜನೆಯಡಿ ಡಿಪಿಆರ್‌ ಸಿದ್ಧಗೊಂಡಿದೆ. ಈ ಡಿಪಿಆರ್‌ ಸಿದ್ಧಪಡಿಸುವ ವೇಳೆ ಬೃಹತ್‌ ಪೈಪ್‌ಲೈನ್‌ ಹಾದು ಹೋಗುವ ಮಾರ್ಗದಲ್ಲೇ ಇರುವ ಘಟಪ್ರಭಾ ಬಲದಂಡೆ ಕಾಲುವೆಗೆ ನೀರು ಹರಿಸುವುದಿಲ್ಲ ಎಂಬುದು ಇದೀಗ ಸ್ಪಷ್ಟವಾಗಿದೆ. ಹೀಗಾಗಿ ಕಳೆದ 17 ವರ್ಷಗಳ ಹಿಂದೆಯೇ ನಿರ್ಮಾಣಗೊಂಡ ಕಾಲುವೆಗಳಿಗೆ ಈ ವರೆಗೆ ನೀರು ಹರಿದಿಲ್ಲ. ಹೀಗಾಗಿ ಕೆರೂರ ಏತ ನೀರಾವರಿ ಯೋಜನೆಯಡಿ ಹಾದು ಹೋಗುವ ಪೈಪ್‌ಲೈನ್‌ ಮಧ್ಯೆದಲ್ಲಿ ಬರುವ ಕಾಲುವೆಗಳಿಗೂ ನೀರು ಹರಿಸಬೇಕು ಎಂಬ ಒತ್ತಾಯ ಕೇಳಿ ಬಂದಿದೆ.

25 ಸಾವಿರ ಎಕರೆಗಿಲ್ಲ ನೀರು: ಕರ್ನಾಟಕ ನೀರಾವರಿ ನಿಗಮದಿಂದ ಘಟಪ್ರಭಾ ಬಲದಂಡೆ ಕಾಲುವೆಯಡಿ ಜಿಲ್ಲೆಯ ಲೋಕಾಪುರದಿಂದ ಹುನಗುಂದ ತಾಲೂಕಿನ ಕಮತಗಿ ವರೆಗೂ ಒಟ್ಟು 52 ಸಾವಿರ ಎಕರೆಗೆ  ನೀರಾವರಿ ಸೌಲಭ್ಯ ಕಲ್ಪಿಸಬೇಕು. ಇದಕ್ಕಾಗಿ 17 ವರ್ಷಗಳ ಹಿಂದೆಯೇ ಮುಖ್ಯ ಕಾಲುವೆ, ಉಪ ಕಾಲುವೆ ನಿರ್ಮಾಣಕ್ಕಾಗಿ ಸಾವಿರಾರು ಕೋಟಿ ಖರ್ಚು ಮಾಡಲಾಗಿದೆ. ಹಿಡಕಲ್‌ ಡ್ಯಾಂನಿಂದ ಜಿಎಲ್‌ಬಿಸಿ ಕಾಲುವೆಗೆ ನೀರು ಹರಿದಿದ್ದರೆ ಕಾಡರಗೊಪ್ಪ, ಕೆರಕಲಮಟ್ಟಿ, ಸೂಳಿಕೇರಿ, ಶಿರೂರ ಭಾಗದ ಪ್ರತಿಯೊಂದು ಹಳ್ಳಿಗೂ ನೀರಾವರಿ ಸೌಲಭ್ಯ ದೊರೆಯುತ್ತಿತ್ತು. ಆದರೆ, ಹಿಡಕಲ್‌ ಡ್ಯಾಂನಿಂದ ಆರಂಭಗೊಳ್ಳುವ ಜಿಎಲ್‌ಬಿಸಿ ಕಾಲುವೆಗೆ ಲೋಕಾಪುರ ವರೆಗೂ ಮಾತ್ರ ಸ್ವಲ್ಪ ಪ್ರಮಾಣದ ನೀರು ಬರುತ್ತಿದೆ. ಅದರ ಮುಂದೆ ಸುಮಾರು 92 ಕಿ.ಮೀ ವರೆಗೂ ಇರುವ ಕಾಲುವೆಗೆ ಒಮ್ಮೆಯೂ ನೀರು ಬಂದಿಲ್ಲ.

ಕಾಲುವೆಗೆ ಭೂಮಿಕೊಟ್ಟ ರೈತರು, ನೀರಿಗಾಗಿ ಕಾಯುತ್ತಲೇ ಇದ್ದಾರೆ. ಈ ಕಾಲುವೆಗೆ ನೀರು ಹರಿಸುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಗಂಭೀರ ಪ್ರಯತ್ನ ಮಾಡುತ್ತಿಲ್ಲ ಎಂಬ ಅಸಮಾಧಾನ ರೈತ ವಲಯದಿಂದ ಕೇಳಿ ಬರುತ್ತಿದೆ. ಹೊಸ ಕಾಮಗಾರಿಗೆ ಉತ್ಸಾಹ!: ಈ ಯೋಜನೆಯಡಿ ಆಲಮಟ್ಟಿ ಹಿನ್ನೀರು (2 ಟಿಎಂಸಿ ಅಡಿ) ಬಳಸಿಕೊಂಡು ನೀರಾವರಿ ಸೌಲಭ್ಯ ಕೊಡಲಿದೆ. ಹೆರಕಲ್‌ ಬಳಿ ಜಾಕ್‌ ವೆಲ್‌ ನಿರ್ಮಿಸಿ, ಅಲ್ಲಿಂದ ಪೈಪ್‌ಲೈನ್‌ ಮೂಲಕ ಕೆರೂರ ಭಾಗಕ್ಕೆ ನೀರು ಲಿಪ್ಟ್ ಮಾಡುವುದು. ಅಲ್ಲಿಂದ ಸೂಕ್ಷ್ಮ ನೀರಾವರಿ ಮೂಲಕ ರೈತರ ಭೂಮಿಗೆ ನೀರು ಕೊಡುವ ಉದ್ದೇಶ ಹೊಂದಲಾಗಿದೆ.

ಜಿಲ್ಲೆಯ ಮಟ್ಟಿಗೆ 525 ಕೋಟಿ ರೂ. ಮೊತ್ತದ ಬೃಹತ್‌ ಯೋಜನೆ ತರುವಲ್ಲಿ ಬಾದಾಮಿ ಕ್ಷೇತ್ರದ ಶಾಸಕ ಸಿದ್ದರಾಮಯ್ಯ ಅವರ ವಿಶೇಷ ಆಸಕ್ತಿ, ಸಚಿವ ಮುರುಗೇಶ ನಿರಾಣಿ ಅವರ ಪ್ರಯತ್ನಗಳೂ ಈ ಅನುದಾನ ತರುವಲ್ಲಿ ಪ್ರಮುಖವಾಗಿವೆ. ಆದರೆ, ಸದ್ಯ ನೀರಾವರಿ ಕಲ್ಪಿಸಲು ಉದ್ದೇಶಿಸಿರುವ ಗ್ರಾಮಗಳ ವ್ಯಾಪ್ತಿಯ ಎಂಎಲ್‌ಬಿಸಿ ಮತ್ತು ಜಿಎಲ್‌ಬಿಸಿ ಕಾಲುವೆಗಳಿವೆ. ಆ ಕಾಲುವೆಗಳಿಗೆ ನೀರು ಹರಿಸುವ ನಿಟ್ಟಿನಲ್ಲಿ ಗಂಭೀರ ಪ್ರಯತ್ನ ನಡೆಬೇಕು. ಕೇವಲ ಹೊಸ ಕಾಮಗಾರಿ ಕೈಗೊಂಡು, ಭೂಮಿಯೊಳಗೆ ಪೈಪ್‌ಲೈನ್‌ ಹಾಕಿದರೆ ಸಾಲದು. ಇಂತಹ ಕಾಮಗಾರಿಗೆ ಬಹುತೇಕ ಅಧಿಕಾರಿಗಳು ಅತ್ಯಂತ ಉತ್ಸಾಹ ಹೊಂದಿರುತ್ತಾರೆ.

ಕಾಮಗಾರಿ ಪೂರ್ಣಗೊಂಡ ಬಳಿಕ, ರೈತರ ಹೊಲಕ್ಕೆ ನೀರು ಕೊಡಲು ಉತ್ಸಾಹ, ಜವಾಬ್ದಾರಿ ತೋರುವುದಿಲ್ಲ. ಇದಕ್ಕೆ ಜಿಎಲ್‌ಬಿಸಿ, ಎಂಎಲ್‌ಬಿಸಿ ಹಾಗೂ ದೇಶದ ಅತಿದೊಡ್ಡ ಹನಿ ನೀರಾವರಿ ಯೋಜನೆಯಾದ ರಾಮಥಾಳ ಯೋಜನೆಗಳೇ ಸಾಕ್ಷಿಯಾಗಿವೆ.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.