Udayavni Special

ಕೋವಿಡ್ ಲಾಕ್‌ಡೌನ್‌ನಿಂದ ದರ್ಜಿಗಳ ಬದುಕು ಅತಂತ್ರ

ಲೋಕಾಪುರದಲ್ಲಿ 200 ದರ್ಜಿ ಕುಟುಂಬಗಳು ಉದ್ಯೋಗವಿಲ್ಲದೇ ಪರದಾಟ -ಸೌಲಭ್ಯ ನೀಡಲು ಸರ್ಕಾರಕ್ಕೆ ಆಗ್ರಹ

Team Udayavani, May 8, 2020, 5:07 PM IST

08-May-23

ಸಾಂದರ್ಭಿಕ ಚಿತ್ರ

ಲೋಕಾಪುರ: ಲಾಕ್‌ಡೌನ್‌ನಿಂದ ಗ್ರಾಮದ ಟೇಲರ್‌ (ದರ್ಜಿ) ಕುಟುಂಬಗಳು ಅತಂತ್ರ ಪರಿಸ್ಥಿಯನ್ನು ಎದುರಿಸುವಂತಾಗಿದೆ. ಪಾರಂಪರಿಕವಾಗಿ ಟೇಲರ್‌ ವೃತ್ತಿಯನ್ನು ಅವಲಂಬಿಸಿರುವ ಸಿಂಪಿಗ, ಕ್ಷತ್ರಿಯ, ಮುಸ್ಲಿಂ ಸಮಾಜದವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಲೋಕಾಪುರ ಗ್ರಾಮ ಹಾಗೂ ಸುತ್ತಲಿನ ಸುಮಾರು 200ಕ್ಕೂ ಹೆಚ್ಚು ಕುಟುಂಬ ಬಟ್ಟೆ ಹೊಲಿಯುವುದನ್ನೇ ಕಾಯಕ ಮಾಡಿಕೊಂಡಿದ್ದು, ಅವರಲ್ಲಿ ಬಹುತೇಕರು ತುತ್ತು ಅನ್ನಕ್ಕೂ ಪರದಾಡುವಂತಾಗಿದೆ.

ಗ್ರಾಮದಲ್ಲಿ ಕೆಲವರು ಬಾಡಿಗೆ ಕಟ್ಟಡದಲ್ಲಿ ಬಟ್ಟೆ ಅಂಗಡಿಗಳ ಮುಂದೆ ಹೊಲಿಗೆ ಕಾಯಕದಲ್ಲಿ ನಿರತರಾಗಿದ್ದರು. ಮಹಿಳೆಯರು ಮನೆಯಲ್ಲಿಯೆ ಹೊಲಿಗೆ ಮೂಲಕ ಮನೆಯ ಖರ್ಚು ನಿಭಾಯಿಸುತ್ತಿದ್ದರು. ಈಗ ಮನೆಯಿಂದ ಹೊರಗೆ ಬರದ ಸ್ಥಿತಿಯಿಂದಾಗಿ ಅಂಗಡಿ, ಮನೆ ಬಾಡಿಗೆ ಕಟ್ಟುವುದು ಹೇಗೆ ಎಂಬ ಚಿಂತೆಯಲ್ಲಿದ್ದಾರೆ. ಇನ್ನು ಹಳೆಯ ಬಟ್ಟೆಗಳನ್ನು ದುರಸ್ತಿ ಮಾಡಿಕೊಡುವ ಟೇಲರ್‌ ಗಳು ಜೀವನ ಸಾಗಿಸುವುದು ಕಷ್ಟವಾಗಿದೆ.

ಯುಗಾದಿ, ಬಸವ ಜಯಂತಿ, ರಂಜಾನ್‌ ಹಬ್ಬಗಳ ಆಚರಣೆ, ಮದುವೆ, ಶಾಲಾ ಮಕ್ಕಳ ಸಮವಸ್ತ್ರ, ಮತ್ತಿತರ ಶುಭ ಸಮಾರಂಭಗಳು ನಡೆಯುತ್ತಿದ್ದವು. ಈ ಅವಧಿಯಲ್ಲಿ ಬಟ್ಟೆ ಹೊಲಿಗೆಗೆ ಹೆಚ್ಚಿನ ಬೇಡಿಕೆ ಇರುತ್ತಿತ್ತು. ಈಗ ಯಾರು ಬರುತ್ತಿಲ್ಲ. ಹೀಗಾಗಿ ದುಡಿಮೆಯೇ ಇಲ್ಲದಂತಾಗಿದೆ. ಟೇಲರಿಂಗ್‌ಗೆ ಬೇಕಾಗುವ ದಾರ, ಕ್ಯಾನ್ವಾಸ್‌, ಬಟನ್‌, ಜಿಪ್‌, ಮತ್ತಿತರ ಸಾಮಗ್ರಿಗಳ ಅಂಗಡಿ ಮುಚ್ಚಿವೆ. ಇದು ವಹಿವಾಟಿಗೆ ತೊಂದರೆಯಾಗಿದೆ. ಸಂಘಟಿತ ವಲಯದ ಕಾರ್ಮಿಕರಿಗೆ ನೀಡುವ ಸೌಲಭ್ಯವನ್ನು ಸರ್ಕಾರ ನಮಗೂ ನೀಡಲಿ ಎಂಬುದು ಟೇಲರ್‌ಗಳ ಆಗ್ರಹವಾಗಿದೆ.

ಸುಮಾರು 18 ವರ್ಷಗಳಿಂದ ಟೇಲರ್‌ ವೃತ್ತಿ ಮಾಡುತ್ತಿದ್ದೇನೆ. ಈ ವೃತ್ತಿಯನ್ನೆ ಅವಲಂಬಿಸಿ ಅಂಗಡಿ, ಮನೆಗಳ ಬಾಡಿಗೆ ಕಟ್ಟುವುದು ಮತ್ತು ಜೀವನ ನಡೆಸುವುದು ಬಹಳ ಕಷ್ಟವಾಗಿದೆ. ಸಂಘಟಿತ ವಲಯದ ಕಾರ್ಮಿಕರಿಗೆ ನೀಡುವ ಸೌಲಭ್ಯವನ್ನು ಸರ್ಕಾರ ನಮಗೂ ನೀಡಬೇಕು.
ವಿಜಯಕುಮಾರ ಹಿರೇಮಠ,
ಟೇಲರ್‌

ಬಹಳ ಜನರು ಟೇಲರಿಂಗ್‌ ಉದ್ಯೋಗ ನಂಬಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಲಾಕ್‌ಡೌನ್‌ ಜಾರಿಯಾದಾಗಿನಿಂದ ಇಲ್ಲಿಯವರೆಗೆ ಯಾರೂ ಬಟ್ಟೆ ಹೊಲಿಸಲು ಬಂದಿಲ್ಲ. ಜೀವನ ನಿರ್ವಹಣೆಯೇ ಕಷ್ಟವಾಗಿದೆ. ಸರ್ಕಾರ ಟೇಲರಿಂಗ್‌ ಉದ್ಯೋಗದವರಿಗೆ ಸೂಕ್ತ ಪರಿಹಾರ ಘೋಷಣೆ ಮಾಡಿ ನೆರವಿಗೆ ಧಾವಿಸಬೇಕು.
ರಾಮಚಂದ್ರ ಘಾಟಗೆ,
ಅರುಣ ಟೇಲರ್‌ ಮಾಲೀಕ

ಟಾಪ್ ನ್ಯೂಸ್

‘ಹೇಳುವುದು ಆಚಾರ, ಮಾಡುವುದು ಅನಾಚಾರ’: ಬಿಜೆಪಿ ವಿರುದ್ಧ ಕಿಡಿಕಾರಿದ ಜೆಡಿಎಸ್

‘ಹೇಳುವುದು ಆಚಾರ, ಮಾಡುವುದು ಅನಾಚಾರ’: ಬಿಜೆಪಿ ವಿರುದ್ಧ ಕಿಡಿಕಾರಿದ ಜೆಡಿಎಸ್

ಮಂಗಳೂರಿನ ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ: ಸಂತ್ರಸ್ತೆ-ವಕೀಲರ ಆಡಿಯೋ ವೈರಲ್

ಮಂಗಳೂರಿನ ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ: ಸಂತ್ರಸ್ತೆ-ವಕೀಲರ ಆಡಿಯೋ ವೈರಲ್

d-k-shi

ಮೋದಿ ಹೆಬ್ಬೆಟ್ಟ್ ಗಿರಾಕಿ ಎಂದ ಕಾಂಗ್ರೆಸ್ ಟ್ವೀಟ್ ಗೆ ಡಿಕೆ ಶಿವಕುಮಾರ್ ವಿಷಾದ

ಲಖೀಂಪುರ ಖೇರಿ ಘಟನೆ: ಬಿಜೆಪಿ ನಾಯಕ ಸೇರಿ ನಾಲ್ಕು ಮಂದಿಯ ಬಂಧನ

ಲಖೀಂಪುರ ಖೇರಿ ಘಟನೆ: ಬಿಜೆಪಿ ನಾಯಕ ಸೇರಿ ನಾಲ್ಕು ಮಂದಿಯ ಬಂಧನ

gjhgfds

ಓಟಿಟಿಯಲ್ಲಿ ‘ಸಲಗ’ ದರ್ಶನವಿಲ್ಲ

rwytju11111111111

ಮಂಗಳವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಏರಿಕೆಯ ಮೆಟ್ಟಿಲು ಹತ್ತಿದ ಕಾಟನ್‌

ಏರಿಕೆಯ ಮೆಟ್ಟಿಲು ಹತ್ತಿದ ಕಾಟನ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನ್ನಡ ನಾಡು-ನುಡಿ ಅಭಿಮಾನ ಬೆಳೆಸಿಕೊಳ್ಳಿ; ಮಾಜಿ ಶಾಸಕ ರಾಜಶೇಖರ

ಕನ್ನಡ ನಾಡು-ನುಡಿ ಅಭಿಮಾನ ಬೆಳೆಸಿಕೊಳ್ಳಿ; ಮಾಜಿ ಶಾಸಕ ರಾಜಶೇಖರ

ಚಾಲುಕ್ಯರ ಶೈಲಿಯಲ್ಲಿ ಹೊಳೆಬಸವೇಶ್ವರ ದೇಗುಲ ನಿರ್ಮಾಣ

ಚಾಲುಕ್ಯರ ಶೈಲಿಯಲ್ಲಿ ಹೊಳೆಬಸವೇಶ್ವರ ದೇಗುಲ ನಿರ್ಮಾಣ

ರಾಷ್ಟ್ರೀಯ ಸ್ವಯಂ ಸೇವಕರ ಪಥ ಸಂಚಲನ

ರಾಷ್ಟ್ರೀಯ ಸ್ವಯಂ ಸೇವಕರ ಪಥ ಸಂಚಲನ

ಗುಳೇದಗುಡ್ಡ: ಕೆರೆಯಲ್ಲಿ ಮುಳುಗಿ ಮಹಿಳೆಯರಿಬ್ಬರ ಸಾವು

ಗುಳೇದಗುಡ್ಡ: ಕೆರೆಯಲ್ಲಿ ಮುಳುಗಿ ಮಹಿಳೆಯರಿಬ್ಬರ ಸಾವು

bagalakote news

42 ಟನ್‌ ಅಕ್ರಮ ಪಡಿತರ ಅಕ್ಕಿ ವಶ

MUST WATCH

udayavani youtube

ತೆರೆದ ಹೊಂಡದಲ್ಲಿ ಬಿದ್ದು ಸಾಯುತ್ತಿವೆ ಪ್ರಾಣಿಗಳು : ಕಣ್ಣು ಮುಚ್ಚಿ ಕುಳಿತ ನಗರ ಸಭೆ

udayavani youtube

ದುರಸ್ತಿಗೊಂಡು ಎರಡೇ ದಿನಕ್ಕೆ ಹಳೆ ಚಾಳಿಯನ್ನು ಮುಂದುವರಿಸಿದ ವಾಚ್ ಟವರ್

udayavani youtube

ಕೊನೆಗೂ ರಾಜ್ಯದಲ್ಲಿ 1 ರಿಂದ 5ನೇ ತರಗತಿ ಶಾಲೆ ಆರಂಭಕ್ಕೆ ಸರಕಾರದ ಗ್ರೀನ್ ಸಿಗ್ನಲ್

udayavani youtube

ಮಹಿಳೆಯರಿಗೆ ಉದ್ಯೋಗ ಕಲ್ಪಿಸಿದ ಯಶಸ್ವೀ ಮಹಿಳಾ ಉದ್ಯಮಿ

udayavani youtube

ಹಳೆ ದ್ವೇಷ : ICU ವಾರ್ಡ್ ನಲ್ಲೆ ನಡೆಯಿತು ಎರಡು ತಂಡಗಳ ಮಾರಾಮಾರಿ

ಹೊಸ ಸೇರ್ಪಡೆ

4

ಮೆರವಣಿಗೆಗೆ ತಡೆ; ಮುಸ್ಲಿಮರ ಆಕ್ರೋಶ

‘ಹೇಳುವುದು ಆಚಾರ, ಮಾಡುವುದು ಅನಾಚಾರ’: ಬಿಜೆಪಿ ವಿರುದ್ಧ ಕಿಡಿಕಾರಿದ ಜೆಡಿಎಸ್

‘ಹೇಳುವುದು ಆಚಾರ, ಮಾಡುವುದು ಅನಾಚಾರ’: ಬಿಜೆಪಿ ವಿರುದ್ಧ ಕಿಡಿಕಾರಿದ ಜೆಡಿಎಸ್

3

ನಿಯಮ ಪಾಲಿಸಿ ಜಾತ್ರೆ ನಡೆಸಿ

2

ಪುನರ್ವಸತಿ-ಕಾಳಜಿ ಕೇಂದ್ರ ಪ್ರಾರಂಭಕ್ಕೆ ಮನವಿ

ಮಂಗಳೂರಿನ ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ: ಸಂತ್ರಸ್ತೆ-ವಕೀಲರ ಆಡಿಯೋ ವೈರಲ್

ಮಂಗಳೂರಿನ ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ: ಸಂತ್ರಸ್ತೆ-ವಕೀಲರ ಆಡಿಯೋ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.