Mahalingpur ಮಹಾಲಿಂಗೇಶ್ವರ ಅದ್ದೂರಿ ರಥೋತ್ಸವ: ಲಕ್ಷಾಂತರ ಭಕ್ತರು ಭಾಗಿ


Team Udayavani, Sep 29, 2023, 11:23 PM IST

1-sadasd-a

ಮಹಾಲಿಂಗಪುರ : ಪಟ್ಟಣದ ಆರಾಧ್ಯ ದೈವ, ಪವಾಡ ಪುರುಷ ಮಹಾಲಿಂಗೇಶ್ವರ ಮಹಾಜಾತ್ರೆಯ ರಥೋತ್ಸವಕ್ಕೆ ಶುಕ್ರವಾರ ಸಂಜೆ ಅದ್ದೂರಿ ಚಾಲನೆ ದೊರೆಯಿತು. ವಿದ್ಯುತ್‌ದೀಪ ಹಾಗೂ ಬೃಹತ್ ಹೂಮಾಲೆ, ಕಬ್ಬು-ಬಾಳೆಗಡದಿಂದ ಅಲಂಕಾರಗೊಳಿಸಿದ್ದ ಮಹಾಲಿಂಗೇಶ್ವರ ರಥಕ್ಕೆ ಶ್ರೀಮಠದ ಪೀಠಾಧಿಪತಿ ಮಹಾಲಿಂಗೇಶ್ವರ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಜಿ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು.

ನೆರೆದಿದ್ದ ಸಾವಿರಾರು ಭಕ್ತಾದಿಗಳಿಂದ ಶ್ರೀಮಹಾಲಿಂಗೇಶ್ವರ ಮಹಾರಾಜಕಿ ಜೈ, ಚನ್ನಗಿರೇಶ್ವರ ಮಹಾರಾಜ ಕೀ ಜೈ ಎಂಬ ಜಯಘೋಷಗಳೊಂದಿಗೆ ಜಾತ್ರೆಯ ಪ್ರಥಮ ದಿನದ ತುಂಬಿದ ತೇರು ಭಕ್ತರ ಹರ್ಷೋದ್ಘಾರದ ನಡುವೆ ಅತ್ಯಂತ ಸಂಭ್ರಮ-ಸಡಗರದಿಂದ ಜರುಗಿತು. ಜಾತ್ರೆಯ ನಿಮಿತ್ಯ ಮಹಾಲಿಂಗೇಶ್ವರ ಗದ್ದುಗೆಗೆ ಮೂರು ಹೊತ್ತು ವಿಶೇಷ ಪೂಜೆ ಹಾಗೂ ಹೂವಿನ ಅಲಂಕಾರಗಳನ್ನು ಮಾಡಲಾಗಿತ್ತು.

ರಥೋತ್ಸವದ ಮುನ್ನ ಹರಿವಾಣ ಕಟ್ಟೆ ಲೂಟಿ
ತುಂಬಿದ ತೇರು ಸಾಗುವ ಮುನ್ನ ಮಹಾಲಿಂಗೇಶ್ವರ ದೇವಸ್ಥಾನದ ಪಾದಗಟ್ಟಿಯ ಮುಂದೆ ನಿರ್ಮಿಸಲಾದ ಹರಿವಾಣ ಕಟ್ಟೆಯ ಲೂಟಿ ಕಾರ್ಯಕ್ರಮ ಸಂಜೆ 7ಕ್ಕೆ ಜರುಗಿತು. ನೂರಾರು ರೈತರು ತಮ್ಮ ತಮ್ಮ ಜಮೀನುಗಳಲ್ಲಿ ಬೆಳೆದ ಗೋವಿನ ಜೋಳ, ಬಾಳೆಗಿಡ, ಕಬ್ಬು ಸೇರಿದಂತೆ ಹಲವು ತರಹದ ಬೆಳೆಗಳನ್ನು ತಂದು ಪಾದಗಟ್ಟೆಯ ಮುಂದಿನ ಹಂದರ ಮೇಲೆ ಹಾಕಿದ್ದರು. ಶಿವಯೋಗಿ ರಾಜೇಂದ್ರ ಮಹಾ ಸ್ವಾಮಿಜಿಯವರು ಪೂಜೆ ಮಾಡಿ, ಮಂಗಳಾರತಿ ಸಲ್ಲಿಸಿದ ನಂತರ ಸಂಪ್ರದಾಯದಂತೆ ಅಲ್ಲಿದ್ದ ಕಬ್ಬು, ತೇನೆ, ಇತ್ಯಾದಿಗಳನ್ನು ಅಲ್ಲಿ ಜಮಾಯಿಸಿದ ಸಾವಿರಾರು ಭಕ್ತರು, ನನಗೆ-ನಿನಗೆ ಎಂದು ಒಬ್ಬರ ಮೇಲೊಬ್ಬರು ಬೀಳುತ್ತಾ ಹರಿವಾನ ಕಟ್ಟೆಯಲ್ಲಿನ ಕಬ್ಬು, ಜೋಳದ ದಂಟುನ್ನು ದೋಚಿಕೊಂಡು ಹೋಗುವಲ್ಲಿ ಯಶಸ್ವಿಯಾದರು.

ಹರಿವಾಣ ಕಟ್ಟೆಯಿಂದ ದೋಚಿಕೊಂಡು ಹೋದ ಕಬ್ಬು, ಗೋವಿನ ಜೋಳದ ದಂಟನ್ನು ಮನೆ, ಅಂಗಡಿಗಳಲ್ಲಿ ಕಟ್ಟಿ, ಮುಂದಿನ ವರ್ಷದ ಜಾತ್ರೆಯವರೆಗೂ ಅದನ್ನು ಪೂಜಿಸಲಾಗುತ್ತದೆ. ಈ ರೀತಿಯ ಹರಿವಾಣ ಕಟ್ಟೆಯ ಪೂಜೆಯಿಂದ ರೈತರಿಗೆ ಹೊಲದಲ್ಲಿ, ಭಕ್ತರಿಗೆ ಮನೆಯಲ್ಲಿ ಅನ್ನದ ಕೊರತೆಯಾಗುವದಿಲ್ಲ ಎಂಬ ನಂಬಿಕೆ ಭಕ್ತರಲ್ಲಿದೆ.

ರಥೋತ್ಸವದ ಮೆರಗು
ರಥೋತ್ಸವದ ಮುಂದೆ ಕಂಡ್ಯಾಳ ಬಾಸಿಂಗ, ಉಚ್ಚಾಯಿ, ನಂದಿಕೋಲು, ಕರಡಿ ಮಜಲು, ಶಹನಾಯಿ, ಡೊಳ್ಳಿನ ಮೇಳದವರು ಸೇರಿದಂತೆ ಹಲವಾರು ಕಲಾವಿದರ ಮಂಗಳವಾದ್ಯಗಳು ರಥೋತ್ಸವದ ಮೆರಗನ್ನು ಮತ್ತಷ್ಟು ಹೆಚ್ಚಿಸಿದ್ದವು. ಶುಕ್ರವಾರ ಸಂಜೆ 7-30ಕ್ಕೆ ಪ್ರಾರಂಭವಾದ ತುಂಬಿದ ತೇರು ಮಹಾಲಿಂಗೇಶ್ವರ ದೇವಸ್ಥಾನದಿಂದ ನಡಚೌಕಿ ಮಾರ್ಗವಾಗಿ ರಾತ್ರಿಯಿಡಿ ಜರುಗಿ ಶನಿವಾರ ನಸುಕಿನ ಜಾವ ಚನ್ನಗಿರೇಶ್ವರ ದೇವಸ್ಥಾನ ತಲುಪಲಿದೆ.

ಆಹೋರಾತ್ರಿ ನಡೆಯುವ ರಥೋತ್ಸವನ್ನು ವಿಕ್ಷೀಸಲು ಬೆಳಗಾವಿ, ಬಿಜಾಪೂರ, ಬಾಗಲಕೋಟ, ಹುಬ್ಬಳ್ಳಿ, ದಾವಣಗೇರಿ, ಬೆಂಗಳೂರ ಸೇರಿದಂತೆ ರಾಜ್ಯ ಮತ್ತು ಹೊರ ರಾಜ್ಯಗಳಿಂದ ಭಕ್ತರು ಆಗಮಿಸಿ ಮಹಾಲಿಂಗೇಶ್ವರ ರಥೋತ್ಸವಕ್ಕೆ ಬೆಂಡು, ಬೆತ್ತಾಸು, ಉತ್ತತ್ತಿ ಹಾರಿಸಿ, ಕಾಯಿ-ಕರ್ಪೂರ ಅರ್ಪಣೆ ಮೂಲಕ ಪೂಜೆ ಸಲ್ಲಿಸಿದರು.

ಭಾರಿ ಜನಸಾಗರ
ಶಕ್ತಿಯೋಜನೆಯಡಿಯಲ್ಲಿ ಬಸ್ ಪ್ರಯಾಣ ಉಚಿತವಿದ್ದ ಕಾರಣ ಮಹಾಲಿಂಗೇಶ್ವರ ಮಹಾಜಾತ್ರೆಗೆ ಪರಸ್ಥಳಗಳಿಂದ ಲಕ್ಷಾಂತರ ಭಕ್ತರು ಆಗಮಿಸಿದ್ದರಿಂದ ಜಾತ್ರಾಮಹೋತ್ಸವದಲ್ಲಿ ಮಹಿಳೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಭರ್ಜರಿ ಮನರಂಜನೆ
ರಥೋತ್ಸವದ ನಿಮಿತ್ಯ ಪಟ್ಟಣದ ಎಲ್ಲ ರಸ್ತೆಗಳು ಜನ-ಜಂಗುಳಿಯಿಂದ ತುಂಬಿ ತುಳುಕುತ್ತಿದ್ದವು. ಜವಳಿಬಜಾರ, ಮಹಾಲಿಂಗೇಶ್ವರ ದೇವಸ್ಥಾನ, ಚನ್ನಗಿರೇಶ್ವರ ದೇವಸ್ಥಾನ, ಚನ್ನಮ್ಮ ವೃತ್ತ, ಅನ್ನಪೂರ್ಣೇಶ್ವರಿ ದೇವಸ್ಥಾನ, ಬುದ್ನಿ ಮಹಾಲಿಂಗೇಶ್ವರ ದೇವಸ್ಥಾನ ಸೇರಿದಂತೆ ಹಲವೆಡೆ ಬಯಲಾಟ, ಶ್ರೀಕೃಷ್ಣ ಪಾರಿಜಾತ, ಭಜನೆಗಳು, ರಸಮಂಜರಿ ಕಾರ್ಯಕ್ರಮಗಳು ರಾತ್ರಿಯಿಡಿ ನಡೆದವು. ಪಟ್ಟಣದ ಅಷ್ಟಗಿ ಚಿತ್ರಮಂದಿರದಲ್ಲಿ ಗಣೇಶ ಅಭಿನಯದ ಬಾನ ದಾರಿಯಲಿ, ಮಾರುತಿ ಸಿನಿಪ್ಲೇಕ್ಸ್ ನಲ್ಲಿ ಸ್ಕಂದ ಕನ್ನಡ ಚಲನಚಿತ್ರಗಳು ಹಾಗೂ ಕೆಎಲ್‌ಇ ಕಾಲೇಜು ಎದುರಿನ ಮೈದಾನದಲ್ಲಿ ಮಂಡಲಗೇರಿ ಸಿದ್ದಲಿಂಗೇಶ್ವರ ನಾಟ್ಯಸಂಘದಿಂದ ಎಲ್ಲಿ ಅದಿ ಮಲ್ಯಾ ನಾಟಕ ಪ್ರದರ್ಶನ, ಯಲ್ಲಮ್ಮ ಗುಡಿಯ ಮುಂದೆ ಹಿರಿಯ ಕಲಾವಿದ ಪಂಡಿತ ಬಡಿಗೇರ ಅವರ ಶ್ರೀಕೃಷ್ಣ ಪಾರಿಜಾತ ಬೈಲಾಟ ಪ್ರದರ್ಶನಗಳು ನಡೆದವು.

ಅನ್ನಸಂತರ್ಪಣೆ
ತುಂಬಿದ ತೇರಿನ ನಿಮಿತ್ಯ ಪರಸ್ಥಳದ ಭಕ್ತರಿಗಾಗಿ ಮಹಾಲಿಂಗೇಶ್ವರ ದೇವಾಲಯದಲ್ಲಿ ಶುಕ್ರವಾರ ನಸುಕಿನ ಜಾವದ ಉಪಹಾರ, ಮುಂಜಾನೆ 9ರಿಂದ ರಾತ್ರಿ 12 ವರೆಗೆ ಸಾವಿರಾರು ಮಂದಿಗೆ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.ಮರುತೇರಿನ ನಿಮಿತ್ಯ ರವಿವಾರವು ಸಹ ಚನ್ನಗೀರೇಶ್ವರ ದೇವಸ್ಥಾನದಲ್ಲಿ ಅನ್ನಪ್ರಸಾದ ಜರುಗಲಿದೆ.ಜಾತ್ರಾ ಕಮೀಟಿ ಹಿರಿಯರು ಮತ್ತು ದೇವಸ್ಥಾನದ ಸದ್ಭಕ್ತರು ಅನ್ನಪ್ರಸಾದ ವ್ಯವಸ್ಥೆಯ ಜವಾಬ್ದಾರಿಯನ್ನು ನಿಭಾಯಿಸಿದರು.

ಭಾವೈಕ್ಯತೆಯ ದೀಡ್ ನಮಸ್ಕಾರ
ಮಹಾಲಿಂಗೇಶ್ವರ ಮಹಾಜಾತ್ರೆಯ ನಿಮಿತ್ಯ ಮಹಾಲಿಂಗಪೂರ ಹಾಗೂ ಸುತ್ತ-ಮುತ್ತಲಿನ ಹಳ್ಳಿಗಳಿಂದ ಆಗಮಿಸಿದ್ದ ಭಕ್ತರು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಗುರುವಾರ ರಾತ್ರಿ 12 ರಿಂದ ಶುಕ್ರವಾರ ಸಂಜೆ 5ವರೆಗೂ ಮಕ್ಕಳು, ಮಹಿಳೆಯರು. ವಯಸ್ಕರು ಪವಿತ್ರ ಬಸವತೀರ್ಥ(ಅಪ್ಪನವರ ಭಾಂವಿ) ಯಿಂದ ಒದ್ದೆ ಬಟ್ಟೆಯಲ್ಲಿ ಶ್ರೀಮಠದವರೆಗೆ ದೀಡ ನಮಸ್ಕಾರ ಹಾಕುವುದರೊಂದಿಗೆ ತಮ್ಮ ತಮ್ಮ ಹರಕೆ ಸಲ್ಲಿಸಿದರು.

ರಾಶಿರಾಶಿ ಬಟ್ಟೆ
ದೀಡ ನಮಸ್ಕಾರ ಹಾಕಿ ಭಕ್ತರು ಬಿಟ್ಟಿರುವ ರಾಶಿರಾಶಿ ಬಟ್ಟೆಯನ್ನು ಪುರಸಭೆಯ ಸಿಬ್ಬಂದಿ ಹತ್ತಾರು ಕಸದ ವಾಹನಗಳಲ್ಲಿ ಹಾಕಿ, ದೇವಸ್ಥಾನವನ್ನು ಸ್ವ಼ಚ್ಛಗೊಳಿಸಿದರು. ಮುಸ್ಲಿಂ ಸಮುದಾಯದ ಪುರುಷ, ಮಹಿಳೆಯರು ಸಹ ದೀಡ ನಮಸ್ಕಾರ ಹಾಕುವ ಮೂಲಕ ಬೆಲ್ಲದ ನಾಡಿನ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದರು.

ಸೂಕ್ತ ಬಂದೋಬಸ್ತ್
ಮಹಾಲಿಂಗೇಶ್ವರ ಜನದಟ್ಟನೆಯ ಜಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಠಾಣಾಧಿಕಾರಿ ಪ್ರವೀಣ ಬೀಳಗಿ ಹಾಗೂ ರಬಕವಿ-ಬನಹಟ್ಟಿ ಸಿಪಿಐ, ಜಮಖಂಡಿ ಡಿವೈಎಸ್‌ಪಿ ಆಯಕಟ್ಟಿನ ಸ್ಥಳಗಳಲ್ಲಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಿದ್ದರು. ಜನದಟ್ಟನೆ ಕಡಿಮೆ ಮಾಡಲು ಸೂಕ್ತ-ಪಾರ್ಕಿಂಗ ವ್ಯವಸ್ಥೆ ಕಲ್ಪಿಸಿ, ರಥೋತ್ಸವ ನಿಮಿತ್ಯ ಕೆಲ ಮಾರ್ಗಗಳಲ್ಲಿ ವಾಹನ ಸಂಚಾರ ನಿಷೇಸಿ, ಸೂಕ್ತ ಬಂದೋಬಸ್ತ್ ಒದಗಿಸಿದ್ದರು.

ಕುಸ್ತಿ –ಮರು ರಥೋತ್ಸವ
ಸೆ.30ರ ಶನಿವಾರ ಮಧ್ಯಾಹ್ನ 3 ಕ್ಕೆ ಗೋಕಾಕ್ ರಸ್ತೆಯ ಸರ್ಕಾರಿ ಕಾಲೇಜಿನ ಗಾಂಧಿ ಕ್ರೀಡಾಂಗಣದಲ್ಲಿ ರಾಷ್ಟ್ರಮಟ್ಟದ ಜಂಗಿ ನಿಕಾಲಿ ಕುಸ್ತಿಗಳು ಜರುಗಲಿವೆ. ಮರುರಥೋತ್ಸವ ನಿಮಿತ್ಯ ಚನ್ನಗಿರಿ ಪರ್ವತದ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಮುಂಜಾನೆಯಿಂದ ರಾತ್ರಿವರೆಗೆ ಅನ್ನಸಂತರ್ಪಣೆ ನಡೆಯಲಿದೆ. ಶನಿವಾರ ಸಂಜೆ 7ಕ್ಕೆ ಚನ್ನಗಿರೇಶ್ವರ ದೇವಸ್ಥಾನದಿಂದ ಮರಳಿ ಮಹಾಲಿಂಗೇಶ್ವರ ದೇವಸ್ಥಾನದವರೆಗೆ ಮರುರಥೋತ್ಸವ ನಡೆಯಲಿದೆ. ಮರು ರಥೋತ್ಸವ ನಿಮಿತ್ಯ ಶನಿವಾರ ರಾತ್ರಿ ಯಲ್ಲನಗುಡಿ ಮುಂದೆ ಜಾನಪದ ಗಾಯಕ ರಮೇಶ ಸಬಕಾಳೆ ತಂಡದಿಂದ ಸಂಗೀತ ಸಂಜೆ ಕಾರ್ಯಕ್ರಮ ಜರುಗಲಿದೆ.

ಶುಕ್ರವಾರ ಮುಂಜಾನೆಯಿಂದ ಜಿಲ್ಲೆಯ ವಿವಿಧ ಪಕ್ಷದ ರಾಜಕಾರಣಿಗಳು, ಗಣ್ಯರು, ಪೂಜ್ಯರು ಸೇರಿದಂತೆ ಲಕ್ಷಾಂತರ ಜನರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿ ಮಹಾಲಿಂಗೇಶ್ವರ ದರ್ಶನ ಮತ್ತು ರಾತ್ರಿಯಿಡಿ ಜರುಗಿದ ರಥೋತ್ಸವ ದರ್ಶನ ಮಾಡಿದರು.

ಟಾಪ್ ನ್ಯೂಸ್

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.