ಮಿನಿವಿಧಾನಸೌಧ ಸ್ಥಳಾಂತರಕ್ಕೆ ಅನುಮತಿ

Team Udayavani, Jan 19, 2020, 12:30 PM IST

bk-tdy-2

ಬಾದಾಮಿ: ಯರಗೊಪ್ಪ ಕ್ರಾಸ್‌ನಲ್ಲಿರುವ ಮಿನಿ ವಿಧಾನಸೌಧ ಕಚೇರಿ ಸಾರ್ವಜನಿಕರಿಗೆ ದೂರವಾಗುತ್ತದೆ ಎಂಬ ಕಾರಣದಿಂದ ಹೊಸ ಮಿನಿ ವಿಧಾನಸೌಧ ಕಟ್ಟಡವನ್ನು ಬಸ್‌ ನಿಲ್ದಾಣದ ಎದುರು ನಿರ್ಮಾಣಕ್ಕೆ ಕಾರ್ಯ ಯೋಜನೆ ರೂಪಿಸಲಾಗಿತ್ತು.

ಆದರೆ, ಪುರಾತತ್ವ ಇಲಾಖೆ ಅನುಮತಿ ನೀಡದೇ ಇರುವ ಕಾರಣ ಹೊಸ ಮಿನಿವಿಧಾನಸೌಧ ಕಟ್ಟಡ ನೀರಾವರಿ ನಿಗಮದ ಸ್ಥಳಕ್ಕೆ ಸ್ಥಳಾಂತರಿಸಲು ಕಂದಾಯ ಇಲಾಖೆ ಅನುಮತಿ ನೀಡಿದೆ.

ಬಿ.ಬಿ.ಚಿಮ್ಮನಕಟ್ಟಿ ಶಾಸಕರಾಗಿದ್ದ ಸಂದರ್ಭದಲ್ಲಿ 2017ರಲ್ಲಿ ಹೊಸ ಮಿನಿ ವಿಧಾನಸೌಧ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ ಮಂಜೂರಿಯಾಗಿತ್ತು.

ಇದನ್ನು ಮೊದಲು ನಗರದ ಹೃದಯ ಭಾಗದಲ್ಲಿರುವ ಬಸ್‌ ನಿಲ್ದಾಣದ ಎದುರಿನ ಜಾಗದಲ್ಲಿ ನಿರ್ಮಿಸಲು ಯೋಜನೆ ರೂಪಿಸಲಾಗಿತ್ತು. ಐತಿಹಾಸಿಕ ಸ್ಥಳಗಳ ಸುತ್ತಮುತ್ತ ಬರುವುದರಿಂದ ಪುರಾತತ್ವ ಇಲಾಖೆ ಕಟ್ಟಡ ನಿರ್ಮಾಣಕ್ಕೆ ಅನುಮತಿ ಪಡೆಯಲು ಸೂಚಿಸಿತ್ತು. ಹಾಲಿ ಶಾಸಕಸಿದ್ದರಾಮಯ್ಯನವರು ಪತ್ರ ಬರೆದು ಅನುಮತಿ ನೀಡಲು ಮನವಿ ಸಲ್ಲಿಸಿದ್ದರೂ ಸಹಿತ ಅನುಮತಿ ನೀಡಲು ನಿರಾಕರಿಸಿದೆ.

ಇದಕ್ಕೆ ಪುರಾತತ್ವ ಇಲಾಖೆ ಅನುಮತಿ ಪಡೆದು ಕಾಮಗಾರಿ ಆರಂಭಿಸುವಂತೆಸೂಚನೆ ನೀಡಿತ್ತು. ಇದುವರೆಗೂ ಪುರಾತತ್ವ ಇಲಾಖೆ ಅನುಮತಿ ನೀಡದೇ ಇರುವ ಕಾರಣ ಹೊಸ ಮಿನಿವಿಧಾನಸೌಧ ಕಟ್ಟಡವನ್ನು ರಾಮದುರ್ಗ ರಸ್ತೆಯ ನೀರಾವರಿ ನಿಗಮದ ಸ್ಥಳಕ್ಕೆ ಶಿಫ್ಟ್‌ ಮಾಡಲು ಗಂಭೀರ ಚಿಂತನೆ ನಡೆಸಿ, ಪ್ರಸ್ತಾವಣೆಯನ್ನು ಕಂದಾಯ ಇಲಾಖೆಗೆ ಸಲ್ಲಿಸಿತ್ತು. ಕಂದಾಯ ಇಲಾಖೆ ಮತ್ತು ನೀರಾವರಿ ಇಲಾಖೆಯ ಹಂತದಲ್ಲಿ ಸ್ಥಳಾಂತರ ಕಾರ್ಯ ಚುರುಕಿನಿಂದ ನಡೆದು, ಈಗ ಜ.17 ರಂದು ಅನುಮತಿ ನೀಡಿದೆ.

ರಾಮದುರ್ಗ ರಸ್ತೆಯಲ್ಲಿರುವ ಹಾಲಿ ಮಲಪ್ರಭಾ ನೀರಾವರಿ ನಿಗಮದ(ಎಂ. ಎಲ್‌.ಬಿ.ಸಿ) ಕಟ್ಟಡದಲ್ಲಿನ ವಿಶಾಲವಾದ 3 ಎಕರೆ ಜಾಗದಲ್ಲಿ ಹೊಸ ಮಿನಿವಿಧಾನ ಸೌಧಕಚೇರಿ ಕಟ್ಟಡ ನಿರ್ಮಿಸಲು ಯೋಜನೆ ಮಾಡಲಾಗಿದೆ. ನೀರಾವರಿ ನಿಗಮದ ಹಳೆಯ ವಸತಿಗƒಹಗಳು ಮತ್ತು ಕಚೇರಿಯ ಒಟ್ಟು 3 ಎಕರೆ ಜಮೀನಿನಲ್ಲಿ ಹೊಸ ಕಟ್ಟಡನಿರ್ಮಾಣವಾಗಲಿದೆ.

ಹಾಲಿ ಇರುವ ಮಿನಿವಿಧಾನಸೌಧಕ್ಕೆ ಸರಕಾರಿ ಪದವಿ ಕಾಲೇಜು ಸ್ಥಳಾಂತರವಾಗಲಿದೆ. ಕೆಲವೇ ದಿನಗಳಲ್ಲಿ ಸಚಿವ ಸಂಪುಟ ಅನುಮತಿ ದೊರೆತ ನಂತರ ನೀರಾವರಿ ನಿಗಮದ ಕಚೇರಿಗಳನ್ನು ಬೇರೆಡೆಗೆ ಸ್ಥಳಾಂತರಿಸಿ, ಕಟ್ಟಡ ನಿರ್ಮಾಣ ಕಾಮಗಾರಿ ಆರಂಭವಾಗಲಿದೆ.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.