Election: ಪುರಸಭೆ 14ನೇ ವಾರ್ಡಿನ ಉಪಚುನಾವಣೆ… ಕಾಂಗ್ರೆಸ್ – ಬಿಜೆಪಿ ಮಧ್ಯೆ ನೇರ ಹಣಾಹಣಿ

ಮುಂಜಾನೆಯಿಂದ ಬಿರುಸಿನ ಮತದಾನ...

Team Udayavani, Dec 27, 2023, 12:38 PM IST

Election: ಪುರಸಭೆ 14ನೇ ವಾರ್ಡಿನ ಉಪಚುನಾವಣೆ… ಕಾಂಗ್ರೆಸ್ – ಬಿಜೆಪಿ ಮಧ್ಯೆ ನೇರ ಹಣಾಹಣಿ

ಮಹಾಲಿಂಗಪುರ: ಪಟ್ಟಣದ ಪುರಸಭೆ 14ನೇ ವಾರ್ಡಿನ ಉಪಚುನಾವಣೆಯ ಮತದಾನವು ಡಿ.27 ಬುಧವಾರ ಮುಂಜಾನೆ 7ರಿಂದ ಪ್ರಾರಂಭವಾಗಿದೆ. ಪಟ್ಟಣದ ಕೆಂಗೇರಿಮಡ್ಡಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸ್ಥಾಪಿಸಿದ ಮತಗಟ್ಟೆಯಲ್ಲಿ ಮತದಾನ ನಡೆಯುತ್ತಿದೆ.

ಮುಂಜಾನೆ 11ರವರೆಗೆ ಶೇ.35% ಮತದಾನ : ಮುಂಜಾನೆ 7 ರಿಂದ ಶಾಂತಿಯುತವಾಗಿ ಚುರುಕಿನಿಂದ ಮತದಾನ ನಡೆಯುತ್ತಿದೆ. ಮುಂಜಾನೆ 7 ರಿಂದ 11 ಗಂಟೆವರೆಗೆ ಶೇ.35 ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾಧಿಕಾರಿ ವ್ಹಿ.ಸಿ.ಬೆಳಗಲ್ ತಿಳಿಸಿದ್ದಾರೆ.

ಬಿಗಿಬಂದೋಬಸ್ತ್ : ಉಪ ಚುನಾವಣೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸ್ಥಳೀಯ ಠಾಣಾಧಿಕಾರಿ ಪ್ರವೀಣ್ ಬೀಳಗಿ ಅವರು 25 ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯನ್ನು ನೇಮಕಮಾಡಿ, ಮತಗಟ್ಟೆಯನ್ನು ಸಂಪರ್ಕಿಸುವ ಪ್ರತಿಯೊಂದು ರಸ್ತೆಗಳಲ್ಲಿ ಬ್ಯಾರಿಕೇಡ್ ಅಳವಡಿಸಿ ಸೂಕ್ತ ಬಂದೋಬಸ್ತ್ ಒದಗಿಸಿದ್ದಾರೆ.

ಕಣದಲ್ಲಿ 5 ಅಭ್ಯರ್ಥಿಗಳು :
14ನೇ ವಾರ್ಡಿನ ಉಪ ಚುನಾವಣೆಯ ಕಣದಲ್ಲಿ ಕಾಂಗ್ರೆಸ್ ಪಕ್ಷದಿಂದ ಅಬ್ದುಲ್ ಬಾಗವಾನ, ಬಿಜೆಪಿಯಿಂದ ಶ್ರೀಮಂತ ಹಳ್ಳಿ, ಪಕ್ಷೇತರ ಅಭ್ಯರ್ಥಿಗಳಾಗಿ ಬಸಪ್ಪ ಚಿಂಚಖಂಡಿ, ಮಹಾಂತೇಶ ಅವಟಗಿ, ರಮಜಾನ ಖಾಲೇಖಾನ(ಎಸ್‌ಡಿಪಿಆಯ್) ಸೇರಿದಂತೆ 5 ಅಭ್ಯರ್ಥಿಗಳು ಇದ್ದಾರೆ.

ಕಾಂಗ್ರೆಸ್-ಬಿಜೆಪಿ ಮಧ್ಯೆ ನೇರಹಣಾಹಣಿ :
ಕಣದಲ್ಲಿ 5 ಜನ ಅಭ್ಯರ್ಥಿಗಳಿದ್ದರು ಸಹ ಈ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ಮಧ್ಯೆ ನೇರ ಹಣಾಹಣಿ ಏರ್ಪಟ್ಟಿದೆ. ಉಭಯ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ಗೆಲುವಿಗಾಗಿ ಸಚಿವರು, ಶಾಸಕರು, ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ವಾರ್ಡಿನಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ಮತಗಟ್ಟೆಯ ನಿಷೇಧಿತ ಪ್ರದೇಶದ ಹೊರಗೆ ನಿಂತಿರುವ ಅಭ್ಯರ್ಥಿಗಳು ಮತದಾನಕ್ಕೆ ಬರುತ್ತಿರುವ ಸಾರ್ವಜನಿಕರಿಗೆ ಕೈ ಮುಗಿಯುತ್ತಾ ಅಂತಿಮವಾಗಿ ಮತದಾರರ ಮನ ಗೆಲ್ಲುವ ಕಸರತ್ತು ನಡೆಸುತ್ತಿದ್ದಾರೆ.

ಕಾಂಗ್ರೆಸ್ ಹುಮ್ಮಸ್ಸು :
ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್‌ರಜಾಕ್ ಬಾಗವಾನ ಅವರಿಗೆ ರಾಜಕೀಯ ಅನುಭವದ ಕೊರತೆಯ ನಡುವೆ 2018ರಲ್ಲಿ ಇದೇ ವಾರ್ಡಿನ ಸದಸ್ಯರಾಗಿ ಗೆದ್ದಿದ್ದ ಸಹೋದರ ಜಾವೇದ ಬಾಗವಾನ ಅವರ ಅಕಾಲಿನ ಸಾವಿನ ಅನುಕಂಪದ ಜೊತೆಗೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವದು, ವಾರ್ಡಿನಲ್ಲಿ ಅಲ್ಪಸಂಖ್ಯಾತ ಮತಗಳು ಹೆಚ್ಚಿರುವದು ಮತ್ತು ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು, ಪಕ್ಷದ ಮುಖಂಡರು ಪ್ರದರ್ಶಿಸಿದ ಒಗ್ಗಟ್ಟು ತಮ್ಮ ಗೆಲುವಿಗೆ ಕೈ ಹಿಡಿಯಲಿವೆ ಎಂಬ ಹುಮ್ಮಸ್ಸಿನಲ್ಲಿದ್ದಾರೆ.

ಬಿಜೆಪಿ ಲೆಕ್ಕಾಚಾರ :
ಬಿಜೆಪಿ ಅಭ್ಯರ್ಥಿ ಶ್ರೀಮಂತ ಹಳ್ಳಿಯವರಿಗೆ ಕ್ಷೇತ್ರದಲ್ಲಿ ಬಿಜೆಪಿ ಶಾಸಕರ ಬೆಂಬಲ ಇರುವದು, ಪಕ್ಷದ ವರ್ಚಸ್ಸು, ಹಿಂದೆ ಉಪಾಧ್ಯಕ್ಷರಾಗಿದ್ದ ವೇಳೆ ತಾವು ಮಾಡಿದ ಸಾಮಾಜಿಕ ಕೆಲಸಗಳು, ಬಿಜೆಪಿ ನಗರ ಘಟಕದ ಅಧ್ಯಕ್ಷರಾಗಿರುವದು, ರಾಜಕೀಯ ಅನುಭವ, ಪಕ್ಷದ ಮುಖಂಡರು ಕೈಗೊಂಡ ಸಂಘಟಿತ ಪ್ರಯತ್ನವು ತಮ್ಮ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂಬ ಲೆಕ್ಕಾಚಾರದಲ್ಲಿದ್ದಾರೆ.

ಪಕ್ಷೇತರರಿಂದ ಯಾರಿಗೆ ಲಾಭ? :
ಕಣದಲ್ಲಿ ಇರುವ ಮೂವರು ಪಕ್ಷೇತರ ಅಭ್ಯರ್ಥಿಗಳು ಬಿಜೆಪಿ ಕಾಂಗ್ರೆಸ್ ಪೈಪೋಟಿ ನಡುವೆ ಗೆಲುವು ಸಾಧಿಸುವದು ಅಸಾಧ್ಯ. ಆದರೆ ಈ ಮೂವರು ಅಭ್ಯರ್ಥಿಗಳ ಒಟ್ಟು ಮತವಿಭಜನೆಯ ಲಾಭ ಕಾಂಗ್ರೆಸ್-ಬಿಜೆಪಿ ಅಭ್ಯರ್ಥಿಗಳ ಸೋಲು ಗೆಲುವಿಗೆ ಕಾರಣವಾಗಲಿದೆ ಎಂಬುವದು ಮಾತ್ರ ಸತ್ಯ.

ರಾಷ್ಟ್ರೀಯ ಪಕ್ಷಗಳಿಗೆ ಪ್ರತಿಷ್ಠೆಯ ಕಣ! :
ಪುರಸಭೆಯಲ್ಲಿನ ಅಧಿಕಾರ ಗದ್ದುಗೆ ಉಳಿಸಿಕೊಳ್ಳಲು ಬಿಜೆಪಿಗೆ ಮತ್ತು ಅಧಿಕಾರದ ಚುಕ್ಕಾಣೆ ಹಿಡಿಯಲು ಕಾಂಗ್ರೆಸ್ ಪಕ್ಷಕ್ಕೆ ಈ ವಾರ್ಡಿನ ಗೆಲುವು ಅನಿವಾರ್ಯವಾಗಿದೆ. ಉಭಯ ಪಕ್ಷಗಳ ಅಭ್ಯರ್ಥಿಗಳು ಮತದಾರರ ಓಲೈಕೆಗಾಗಿ ಹಣ, ಹೆಂಡ, ಬಾಡೂಟಕ್ಕಾಗಿ ಹಣದ ಹೊಳೆಯನ್ನೇ ಹರಿಸಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಿಂದ ಕೇಳಿಬಂದಿವೆ. ಕೊನೆಯ ಕ್ಷಣದಲ್ಲಿ ಮತದಾರ ಪ್ರಭುಗಳು ಯಾರಿಗೆ ಜೈ? ಅನ್ನುತ್ತಾರೆ ಎಂಬುವದೇ ಕುತೂಹಲದ ಸಂಗತಿ.

3ನೇ ಉಪ ಚುನಾವಣೆ :
2018ರ ಚುನಾವಣೆಯಲ್ಲಿ ಈ ವಾರ್ಡ ಕಾಂಗ್ರೆಸ್ ಪಾಲಾಗಿತ್ತು. ಅಲ್ಲದೇ 2018ರಲ್ಲಿ ನಡೆದ ಪುರಸಭೆಯ ಸಾರ್ವತ್ರಿಕ ಚುನಾವಣೆಯ ನಂತರ ನಡೆಯುತ್ತಿರುವ ಸ್ಥಳೀಯ ಪುರಸಭೆಯ 3ನೇ ಉಪಚುನಾವಣೆ ಇದಾಗಿದ್ದು. ಹಿಂದೆ ವಾರ್ಡ ನಂಬರ 17 ಮತ್ತು 3ನೇ ವಾರ್ಡಿನ ಸದಸ್ಯರ ಅಕಾಲಿಕ ಮರಣದಿಂದಾಗಿ ಉಪಚುನಾವಣೆಗಳು ನಡೆದಿದ್ದವು. ಹಿಂದಿನ ಉಪಚುನಾವಣೆಗಳಲ್ಲಿ 17ನೇ ವಾರ್ಡಿನಲ್ಲಿ ಕಾಂಗ್ರೆಸ್, 3ನೇ ವಾರ್ಡಿನಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದರು. ಈಗ ನಡೆಯುತ್ತಿರುವ 14ನೇ ವಾರ್ಡಿನ ಉಪಚುನಾವಣೆಯಲ್ಲಿ ಯಾರಿಗೆ ವಿಜಯಮಾಲೆ ಎಂಬುದಕ್ಕೆ ಡಿ.30ರವರೆಗೆ ಕಾಯಬೇಕಾಗಿದೆ.

ಇದನ್ನೂ ಓದಿ: ಜನವರಿ 14ರಿಂದ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಮಣಿಪುರ To ಮುಂಬೈ ಭಾರತ್‌ ನ್ಯಾಯ ಯಾತ್ರೆ

ಟಾಪ್ ನ್ಯೂಸ್

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.